Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಯೋಹಾನನು 3:18 - ಕನ್ನಡ ಸತ್ಯವೇದವು C.L. Bible (BSI)

18 ಪ್ರಿಯಮಕ್ಕಳೇ, ನಾವು ಬರಿಯ ಮಾತಿನಿಂದಾಗಲಿ, ಬಾಯುಪಚಾರದಿಂದಾಗಲಿ, ಪ್ರೀತಿಸುವವರಾಗಿರಬಾರದು. ನಮ್ಮ ಪ್ರೀತಿ ಸತ್ಯದಲ್ಲೂ ಕೃತ್ಯದಲ್ಲೂ ವ್ಯಕ್ತವಾಗಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ನನ್ನ ಪ್ರಿಯ ಮಕ್ಕಳೇ, ನೀವು ಬರೀ ಮಾತಿನಿಂದಾಗಲಿ, ಬಾಯುಪಚಾರದಿಂದಾಗಲಿ, ಪ್ರೀತಿಸುವವರಾಗಿರದೆ ಕ್ರಿಯೆಗಳಿಂದಲೂ ಮತ್ತು ನಿಜ ಪ್ರೀತಿಯಿಂದ ಪ್ರೀತಿಸುವವರಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಪ್ರಿಯರಾದ ಮಕ್ಕಳೇ, ನಾವು ಬರೀಮಾತಿನಿಂದಾಗಲಿ ಬಾಯುಪಚಾರದಿಂದಾಗಲಿ ಪ್ರೀತಿಸುವವರಾಗಿರಬಾರದು; ನಿಮ್ಮ ಪ್ರೀತಿಯು ಕೃತ್ಯದಲ್ಲಿಯೂ ಸತ್ಯದಲ್ಲಿಯೂ ತೋರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ನನ್ನ ಮಕ್ಕಳೇ, ನಮ್ಮ ಪ್ರೀತಿಯು ಕೇವಲ ಶಬ್ಧಗಳಲ್ಲಿ ಮತ್ತು ಮಾತಿನಲ್ಲಿ ಇರಬಾರದು. ನಮ್ಮ ಪ್ರೀತಿಯು ನಿಜವಾದ ಪ್ರೀತಿಯಾಗಿರಬೇಕು. ನಾವು ಮಾಡುವ ಕಾರ್ಯಗಳಲ್ಲಿಯೇ ನಮ್ಮ ಪ್ರೀತಿಯನ್ನು ತೋರ್ಪಡಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ನನ್ನ ಪ್ರಿಯ ಮಕ್ಕಳೇ, ನೀವು ಬರೀಮಾತಿನಿಂದಾಗಲಿ, ಹೊಗಳಿಕೆಯ ಮಾತಿನಿಂದಾಗಲಿ ಪ್ರೀತಿಸುವವರಾಗಿರದೆ ಕ್ರಿಯೆಯಲ್ಲಿಯೂ ಸತ್ಯದಲ್ಲಿಯೂ ಪ್ರೀತಿಸುವವರಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

18 ಮಾಜ್ಯಾ ಪ್ರಿತಿಚ್ಯಾ ಪೊರಾನು, ತುಮಿ ಪ್ರೆಮಾಚ್ಯಾ ಗೊಸ್ಟಿಯಾತ್ನಿ ಅನಿ ಬೊಲ್ನ್ಯಾತ್ನಿ ರ್‍ಹಾಯ್ನಸ್ತಾನಾ, ಕಾಮಾನಿ ಅನಿ ಖರ್ಯಾನಿ ಪ್ರೆಮ್ ಕರ್ತಲೆ ಹೊವ್ನ್ ರ್‍ಹಾವ್ಚೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಯೋಹಾನನು 3:18
18 ತಿಳಿವುಗಳ ಹೋಲಿಕೆ  

ನಿಮ್ಮ ಪ್ರೀತಿ ನಿಷ್ಕಪಟವಾಗಿರಲಿ. ಕೆಟ್ಟದ್ದನ್ನು ದ್ವೇಷಿಸಿರಿ. ಒಳ್ಳೆಯದನ್ನು ಕೈಬಿಡದಿರಿ.


ಸತ್ಯಕ್ಕೆ ಶರಣಾಗಿ ಆತ್ಮಶುದ್ಧಿಹೊಂದಿರುವ ನೀವು ಸಹೋದರರನ್ನು ನಿಷ್ಕಪಟದಿಂದ ಪ್ರೀತಿಸಬಲ್ಲಿರಿ. ಎಂದೇ, ಒಬ್ಬರನ್ನೊಬ್ಬರು ಹೃತ್ಪೂರ್ವಕವಾಗಿಯೂ ಯಥಾರ್ಥವಾಗಿಯೂ ಪ್ರೀತಿಸಿರಿ.


ಸಹೋದರರೇ, ನೀವು ಮುಕ್ತ ಸ್ವತಂತ್ರ ಜೀವನವನ್ನು ನಡೆಸಬೇಕೆಂದು ದೇವರು ನಿಮ್ಮನ್ನು ಕರೆದಿದ್ದಾರೆ. ಆದರೆ, ಆ ಸ್ವಾತಂತ್ರ್ಯವನ್ನು ದೈಹಿಕ ಬಯಕೆಗಳಿಗೆ ಸಾಧನವಾಗಿ ಮಾಡಿಕೊಳ್ಳಬೇಡಿ. ಬದಲಾಗಿ, ನೀವು ಒಬ್ಬರಿಗೊಬ್ಬರು ಪ್ರೀತಿಯಿಂದ ಸೇವೆಮಾಡಿರಿ.


ಬದಲಾಗಿ, ಪ್ರೀತಿಯಿಂದ ಸತ್ಯವನ್ನೇ ನುಡಿಯುತ್ತೇವೆ. ಶಿರಸ್ಸಾದ ಕ್ರಿಸ್ತಯೇಸುವಿನ ಅನ್ಯೋನ್ಯತೆಯಲ್ಲಿ ಸರ್ವತೋಮುಖವಾಗಿ ಬೆಳೆಯುತ್ತೇವೆ.


ವಿಶ್ವಾಸಭರಿತವಾದ ನಿಮ್ಮ ಕಾರ್ಯವನ್ನೂ ಪ್ರೀತಿಪೂರಿತವಾದ ನಿಮ್ಮ ದುಡಿಮೆಯನ್ನೂ ಪ್ರಭು ಯೇಸುವಿನಲ್ಲಿ ನೀವಿಟ್ಟಿರುವ ಅಚಲ ನಿರೀಕ್ಷೆಯನ್ನೂ ತಂದೆಯಾದ ದೇವರ ಸನ್ನಿಧಿಯಲ್ಲಿ ಜ್ಞಾಪಿಸಿಕೊಳ್ಳುತ್ತೇವೆ.


ಪ್ರಿಯಮಕ್ಕಳೇ, ನೀವು ಪಾಪಮಾಡಬಾರದೆಂದೇ ನಾನಿದನ್ನು ನಿಮಗೆ ಬರೆಯುತ್ತಿದ್ದೇನೆ. ಒಂದು ವೇಳೆ ಯಾರಾದರೂ ಪಾಪಮಾಡಿದ್ದೇ ಆದರೆ ನಮ್ಮ ಪರವಾಗಿ ಪಿತನ ಬಳಿಯಲ್ಲಿ ಬಿನ್ನಯಿಸಲು ಒಬ್ಬರಿದ್ದಾರೆ. ಅವರೇ ಸತ್ಯಸ್ವರೂಪರಾದ ಯೇಸುಕ್ರಿಸ್ತರು.


ದೇವರಿಂದ ಆಯ್ಕೆಯಾದ ಶ್ರೀಮಾತೆಗೂ ಆಕೆಯ ಮಕ್ಕಳಿಗೂ - ಸಭಾಹಿರಿಯನಾದ ನಾನು ಬರೆಯುವ ಪತ್ರ.


ಪ್ರಶ್ನೆ ಕೇಳುವುದಕ್ಕೆ ಬರುವ ಜನರಂತೆ, ಅವರು ನಿನ್ನ ಬಳಿಗೆ ಬಂದು, ನನ್ನ ಭಕ್ತರಾಗಿ ನಿನ್ನ ಮುಂದೆ ಕೂತುಕೊಂಡು, ನಿನ್ನ ಮಾತುಗಳನ್ನು ಕೇಳುತ್ತಾರೆ; ಆದರೆ ಕೈಗೊಳ್ಳುವುದಿಲ್ಲ. ಬಾಯಿಂದ ಬಹು ಪ್ರೀತಿಯನ್ನು ತೋರಿಸುತ್ತಾರೆ; ಅವರ ಮನಸ್ಸಾದರೋ ತಾವು ದೋಚಿಕೊಂಡದ್ದರ ಮೇಲೆ ಇರುತ್ತದೆ.


ಇನ್ನೂ ಮೋಶೆಗೆ, “ಇಗೋ ಇಲ್ಲಿ ಸಮೀಪದಲ್ಲೇ ಒಂದು ಸ್ಥಳವಿದೇ. ನೀನು ಆ ಬಂಡೆಯ ಮೇಲೆ ನಿಂತಿರು.


ಸತ್ಯಸಂಧರಾಗಿ ಇವರು ನಿಮ್ಮ ಸೇವೆಗೆ ಮೀಸಲಾಗಬೇಕೆಂದು ನನ್ನನ್ನು ನಾನೇ ಮೀಸಲಾಗಿಸಿಕೊಂಡಿದ್ದೇನೆ.


ಪ್ರಿಯಮಕ್ಕಳೇ, ನಿಮ್ಮನ್ನು ಸನ್ಮಾರ್ಗದಿಂದ ತಪ್ಪಿಸುವುದಕ್ಕೆ ಯಾರಿಗೂ ಅವಕಾಶ ಕೊಡಬೇಡಿ. ಕ್ರಿಸ್ತಯೇಸು ಸತ್ಯಸ್ವರೂಪಿಯಾಗಿರುವಂತೆಯೇ ಸತ್ಯಕ್ಕನುಸಾರ ನಡೆಯುವ ಪ್ರತಿಯೊಬ್ಬನೂ ಸತ್ಯವಂತನೇ.


ಯಥಾರ್ಥ ಪ್ರೀತಿಗೆ ಪಾತ್ರನಾದ ಗಾಯನಿಗೆ - ಸಭೆಯ ಹಿರಿಯನಾದ ನಾನು ಬರೆಯುವ ಪತ್ರ:


ನಮ್ಮ ಜನರ ಮೇಲೆ ಅವನಿಗೆ ಪ್ರೀತಿ ಇದೆ; ಅಲ್ಲದೆ ನಮ್ಮ ಪ್ರಾರ್ಥನಾಮಂದಿರವನ್ನು ಕಟ್ಟಿಸಿಕೊಟ್ಟವನೂ ಅವನೇ,” ಎಂದು ಬಹಳವಾಗಿ ವಿನಂತಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು