Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಯೋಹಾನನು 3:19 - ಕನ್ನಡ ಸತ್ಯವೇದವು C.L. Bible (BSI)

19 ಹೀಗೆ ನಾವು ಸತ್ಯಕ್ಕೆ ಸೇರಿದವರು ಎಂಬುದು ಮನದಟ್ಟಾಗುವುದಲ್ಲದೆ ದೇವರ ಮುಂದೆ ನಮ್ಮ ಮನಸ್ಸು ನೆಮ್ಮದಿಯಿಂದಿರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ನಾವು ಸತ್ಯಕ್ಕೆ ಸೇರಿದವರೆಂಬುದು ಇದರಿಂದಲೇ ನಮಗೆ ತಿಳಿಯುತ್ತದೆ, ನಮ್ಮ ಹೃದಯವು ದೇವರ ಸಮಕ್ಷಮದಲ್ಲಿ ದೋಷರಹಿತವಾಗಿರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ನಾವು ಸತ್ಯಕ್ಕೆ ಸೇರಿದವರೆಂಬದು ಇದರಿಂದಲೇ ನಮಗೆ ತಿಳಿಯುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19-20 ನಾವು ಸತ್ಯಮಾರ್ಗಕ್ಕೆ ಸೇರಿದವರೆಂಬುದನ್ನು ಈ ಮೂಲಕವಾಗಿಯೇ ತಿಳಿದುಕೊಳ್ಳುತ್ತೇವೆ. ನಮ್ಮ ಮನಸ್ಸಾಕ್ಷಿಯು ನಮ್ಮನ್ನು ತಪ್ಪಿತಸ್ಥರೆಂದು ಹೇಳಿದರೂ ನಾವು ದೇವರ ಎದುರಿನಲ್ಲಿ ಸಮಾಧಾನದಿಂದಿರಲು ಸಾಧ್ಯ. ಏಕೆಂದರೆ ನಮ್ಮ ಮನಸ್ಸಾಕ್ಷಿಗಿಂತ ದೇವರೇ ದೊಡ್ಡವನು. ಆತನಿಗೆ ಎಲ್ಲವೂ ತಿಳಿದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ದೇವರ ಸಮಕ್ಷಮದಲ್ಲಿ ನಾವು ನಮ್ಮ ಹೃದಯವನ್ನು ವಿಶ್ರಾಂತಿಗೊಳಿಸಿರುವುದರಿಂದ ನಾವು ಸತ್ಯಕ್ಕೆ ಸೇರಿದವರು ಎಂಬುದು ಇದರಿಂದಲೇ ನಮಗೆ ತಿಳಿಯುತ್ತದೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

19 ಅಸೆ ಅಮಿ ಖರ್‍ಯಾಕ್ ಮಿಳಲ್ಲೆ ಮನುನ್ ಹೆಚ್ಯಾನುಚ್ ಕಳುನ್ ಯೆತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಯೋಹಾನನು 3:19
15 ತಿಳಿವುಗಳ ಹೋಲಿಕೆ  

ಆದಕಾರಣ, ನಾವು ಕೆಟ್ಟ ಮನಸ್ಸಾಕ್ಷಿಯನ್ನು ತೊರೆದ ಹೃದಯದಿಂದಲೂ ಪುಣ್ಯಜಲದಿಂದ ತೊಳೆದ ದೇಹದಿಂದಲೂ ಕೂಡಿದವರಾಗಿ ಶುದ್ಧ ಅಂತರಂಗದಿಂದಲೂ ಪೂರ್ಣವಿಶ್ವಾಸದಿಂದಲೂ ದೇವರ ಬಳಿಗೆ ಸಾಗೋಣ.


ಪ್ರಿಯರೇ, ನಮ್ಮ ಮನಸ್ಸಾಕ್ಷಿ ನಮ್ಮನ್ನು ಖಂಡಿಸದಿದ್ದರೆ, ನಾವು ದೇವರ ಮುಂದೆ ಧೈರ್ಯದಿಂದಿರಲು ಸಾಧ್ಯವಾಗುತ್ತದೆ.


ಆ ಸತ್ಯಸಂಧತೆಯಿಂದ ಚಿರಶಾಂತಿ ಮತ್ತು ಸುಭದ್ರತೆ ಪರಿಣಮಿಸುವುದು.


ಪಿಲಾತನು, “ಹಾಗಾದರೆ ನೀನೊಬ್ಬ ಅರಸನೋ?’ ಎಂದು ಕೇಳಲು ಯೇಸು, “ ‘ಅರಸ’ ಎನ್ನುವುದು ನೀವು ಹೇಳುವ ಮಾತು. ಸತ್ಯವನ್ನು ಕುರಿತು ಸಾಕ್ಷಿ ಹೇಳುವುದು ನನ್ನ ಕೆಲಸ. ಅದಕ್ಕಾಗಿಯೇ ನಾನು ಹುಟ್ಟಿದುದು. ಅದಕ್ಕಾಗಿಯೇ ನಾನು ಜಗತ್ತಿಗೆ ಬಂದುದು. ಸತ್ಯಪರರೆಲ್ಲರೂ ನನ್ನ ಮಾತಿಗೆ ಕಿವಿಗೊಡುತ್ತಾರೆ,” ಎಂದು ಹೇಳಿದರು.


ನಮ್ಮಲ್ಲಿ ಪಾಪವಿಲ್ಲವೆಂದು ನಾವು ಹೇಳಿಕೊಂಡರೆ, ನಮ್ಮನ್ನು ನಾವೇ ವಂಚಿಸಿಕೊಳ್ಳುತ್ತೇವೆ ಮತ್ತು ಸತ್ಯವೆಂಬುದೇ ನಮ್ಮಲ್ಲಿ ಇರುವುದಿಲ್ಲ.


ಇದಕ್ಕಾಗಿಯೇ ಇಷ್ಟೆಲ್ಲಾ ಕಷ್ಟಕಾರ್ಪಣ್ಯಗಳನ್ನು ನಾಚಿಕೆಪಡದೆ ಅನುಭವಿಸುತ್ತಿದ್ದೇನೆ. ನಾನು ಯಾರಲ್ಲಿ ವಿಶ್ವಾಸವನ್ನಿಟ್ಟಿದ್ದೇನೆ ಎಂದು ಚೆನ್ನಾಗಿ ಬಲ್ಲೆ. ನನ್ನ ವಶಕ್ಕೆ ಒಪ್ಪಿಸಿರುವುದನ್ನು ಆ ದಿನದವರೆಗೂ ಕಾಪಾಡುವುದಕ್ಕೆ ಅವರು ಶಕ್ತರು. ಆದ್ದರಿಂದ ನಾನು ಪೂರ್ಣ ಭರವಸೆಯಿಂದ ಇದ್ದೇನೆ.


ದೇವರು ತಾವು ವಾಗ್ದಾನ ಮಾಡಿದ್ದನ್ನು ಖಂಡಿತವಾಗಿಯೂ ನೆರವೇರಿಸಬಲ್ಲರೆಂದು ದೃಢವಾಗಿ ನಂಬಿದನು.


ನಿಮ್ಮ ಈ ಪರಸ್ಪರ ಪ್ರೀತಿಯನ್ನು ಕಂಡು ನೀವು ನನ್ನ ಶಿಷ್ಯರೆಂದು ಜನರೆಲ್ಲರೂ ಅರಿತುಕೊಳ್ಳುವರು.


ನಾವು ನಮ್ಮ ಸಹೋದರರನ್ನು ಪ್ರೀತಿಸುವುದರಿಂದ ಸಾವಿನಿಂದ ಜೀವಕ್ಕೆ ಸಾಗಿದ್ದೇವೆಂದು ತಿಳಿದಿದ್ದೇವೆ. ಪ್ರೀತಿಸದೆ ಇರುವವನು ಸಾವಿನಲ್ಲೇ ನೆಲೆಸಿರುತ್ತಾನೆ.


ಇವರೆಲ್ಲರೂ ವಿಶ್ವಾಸವುಳ್ಳವರಾಗಿಯೇ ಮೃತರಾದರು. ದೇವರು ವಾಗ್ದಾನಮಾಡಿದವುಗಳನ್ನು ಪಡೆಯದಿದ್ದರೂ ಅವುಗಳನ್ನು ದೂರದಿಂದಲೇ ನೋಡಿ ಸ್ವಾಗತಿಸಿ ಸಂತೋಷಪಟ್ಟರು; ತಾವು ಜಗತ್ತಿನಲ್ಲಿ ಕೇವಲ ಪರದೇಶಿಗಳೂ ಪ್ರವಾಸಿಗರೂ ಎಂಬುದನ್ನು ಒಪ್ಪಿಕೊಂಡರು.


ಸಾವಾಗಲಿ ಜೀವವಾಗಲಿ, ದೇವದೂತರಾಗಲಿ ದುರಾತ್ಮರಾಗಲಿ, ಈಗಿನ ಸಂತತಿಗಳೇ ಆಗಲಿ, ಭವಿಷ್ಯದ ಆಗುಹೋಗುಗಳೇ ಆಗಲಿ, ಯಾವ ಶಕ್ತಿಗಳೇ ಆಗಲಿ ನಮ್ಮ ಪ್ರಭು ಯೇಸುಕ್ರಿಸ್ತರಲ್ಲಿ ತೋರಿಬಂದ ದೈವಪ್ರೀತಿಯಿಂದ ನಮ್ಮನ್ನು ಬೇರ್ಪಡಿಸಲಾರವು.


ನೀವು ಸತ್ಯವನ್ನು ಅರಿಯದವರೆಂದು ಭಾವಿಸಿ ನಾನು ಬರೆಯುತ್ತಿಲ್ಲ, ನೀವು ಸತ್ಯವನ್ನು ಅರಿತವರು; ಸತ್ಯದಿಂದ ಸುಳ್ಳು ಜನಿಸದೆಂಬುದನ್ನು ತಿಳಿದವರು. ಆದುದರಿಂದ ನಾನು ನಿಮಗೆ ಬರೆದಿದ್ದೇನೆ.


ಯಾವ ವಿಷಯದಲ್ಲಾದರೂ ನಮ್ಮ ಮನಸ್ಸಾಕ್ಷಿ ನಮ್ಮನ್ನು ಖಂಡಿಸಿದ್ದೇ ಆದರೆ ಎಲ್ಲವನ್ನೂ ಬಲ್ಲ ದೇವರು ನಮ್ಮ ಮನಸ್ಸಾಕ್ಷಿಗಿಂತಲೂ ದೊಡ್ಡವರೆಂಬುದು ನಮಗೆ ತಿಳಿದೇ ಇರುತ್ತದೆ.


ಈ ನಿನ್ನ ನಿಯಮಗಳ ಪಾಲನೆ I ನನ್ನ ಪಾಲಿಗದು ಸಂಭಾವನೆ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು