Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಯೋಹಾನನು 3:20 - ಕನ್ನಡ ಸತ್ಯವೇದವು C.L. Bible (BSI)

20 ಯಾವ ವಿಷಯದಲ್ಲಾದರೂ ನಮ್ಮ ಮನಸ್ಸಾಕ್ಷಿ ನಮ್ಮನ್ನು ಖಂಡಿಸಿದ್ದೇ ಆದರೆ ಎಲ್ಲವನ್ನೂ ಬಲ್ಲ ದೇವರು ನಮ್ಮ ಮನಸ್ಸಾಕ್ಷಿಗಿಂತಲೂ ದೊಡ್ಡವರೆಂಬುದು ನಮಗೆ ತಿಳಿದೇ ಇರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಏಕೆಂದರೆ ನಮ್ಮ ಹೃದಯವು ಯಾವ ವಿಷಯದಲ್ಲಾದರು ನಮ್ಮನ್ನು ದೋಷಿಗಳೆಂದು ನಿರ್ಣಯಿಸಿದರೆ, ದೇವರು ನಮ್ಮ ಹೃದಯವನ್ನು ಬಲ್ಲವನಾಗಿರುವುದರಿಂದ ನಮ್ಮ ಹೃದಯವನ್ನು ಆತನಲ್ಲಿ ದೃಢಪಡಿಸಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಮತ್ತು ನಮ್ಮ ಹೃದಯವು ಯಾವ ವಿಷಯದಲ್ಲಿಯಾದರೂ ನಮ್ಮನ್ನು ದೋಷಿಗಳೆಂದು ನಿರ್ಣಯಿಸಿದರೂ ದೇವರು ನಮ್ಮ ಹೃದಯಕ್ಕಿಂತ ದೊಡ್ಡವನಾಗಿದ್ದು ಎಲ್ಲವನ್ನೂ ಬಲ್ಲವನಾಗಿದ್ದಾನೆಂದು ನಾವು ತಿಳಿದು ದೇವರ ಸಮಕ್ಷಮದಲ್ಲಿ ನಮ್ಮ ಹೃದಯವನ್ನು ಸಮಾಧಾನಪಡಿಸುವೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಏಕೆಂದರೆ ನಮ್ಮ ಹೃದಯವು ನಮ್ಮನ್ನು ಅಪರಾಧಿ ಎಂದು ಖಂಡಿಸುವಾಗಲೆಲ್ಲಾ, ನಮ್ಮ ಹೃದಯಕ್ಕಿಂತ ದೇವರು ದೊಡ್ಡವರಾಗಿದ್ದಾರೆಂತಲೂ ದೇವರು ಎಲ್ಲವನ್ನೂ ಬಲ್ಲವರಾಗಿದ್ದಾರೆಂತಲೂ ತಿಳಿದುಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

20 ಕಶ್ಯಾಕ್ ಮಟ್ಲ್ಯಾರ್, ಅಮ್ಚೊ ಭುತ್ತುರ್ಲೊ ಮನ್ ಸಗ್ಳ್ಯಾ ವಿಶಯಾತ್ನಿ ದೊಶಿ ಮನುನ್ ಕರ್ಲ್ಯಾರ್ ಅನಿ ದೆವ್ ಅಮ್ಚೊ ಮನ್ ವಳ್ಕಲ್ಲ್ಯಾ ವೈನಾ ಅಮ್ಚೊ ಮನ್ ತೊ ವಳಕ್ತಲ್ಯಾತ್ ಮೊಟೊ,ತೆಕಾ ಸಗ್ಳೆ ಗೊತ್ತ್ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಯೋಹಾನನು 3:20
23 ತಿಳಿವುಗಳ ಹೋಲಿಕೆ  

ಸರ್ವೇಶ್ವರನಾದ ನಾನು ಹೃದಯ ಪರಿಶೀಲಕ ಹೌದು, ಅಂತರಿಂದ್ರಿಯಗಳನ್ನು ಪರಿಶೋಧಿಸುವಾತ.


ನಾವು ಯಾರಿಗೆ ಲೆಕ್ಕ ಒಪ್ಪಿಸಬೇಕಾಗಿದೆಯೋ, ಅವರ ಕಣ್ಣಿಗೆ ಮುಚ್ಚುಮರೆಯಾದುದು ಯಾವುದೂ ಇಲ್ಲ. ಅವರ ದೃಷ್ಟಿಗೆ ಎಲ್ಲವೂ ಬಟ್ಟಬಯಲು.


ನನ್ನಲ್ಲಿ ದೋಷವಿದೆಯೆಂದು ನನ್ನ ಮನಸ್ಸಾಕ್ಷಿಗೆ ತೋರುವುದಿಲ್ಲ. ಆದರೂ ನಾನು ನಿರ್ದೋಷಿಯೆಂದು ಹೇಳುವಂತಿಲ್ಲ. ನನ್ನ ನ್ಯಾಯನಿರ್ಣಯ ಮಾಡುವವರು ಪ್ರಭುವೇ.


ಪ್ರಿಯಮಕ್ಕಳೇ, ನೀವಂತೂ ದೇವರಿಗೆ ಸೇರಿದವರು. ಲೋಕದಲ್ಲಿರುವ ದುರಾತ್ಮಕ್ಕಿಂತಲೂ ನಿಮ್ಮಲ್ಲಿರುವ ಆತ್ಮವು ಶ್ರೇಷ್ಠವಾದುದು. ಆದ್ದರಿಂದಲೇ ಆ ಕಪಟ ಪ್ರವಾದಿಗಳನ್ನು ಜಯಿಸಿದ್ದೀರಿ.


ನನ್ನ ಕಣ್ಣಿಗೆ ಬೀಳದಂತೆ ಯಾವನಾದರು ಗುಪ್ತಸ್ಥಳಗಳಲ್ಲಿ ಮರೆಮಾಚಿಕೊಳ್ಳಲು ಸಾಧ್ಯವೇ? ನಾನು ಭೂಮ್ಯಾಕಾಶಗಳಲ್ಲಿ ವ್ಯಾಪಿಸಿರುವವನಲ್ಲವೆ?


ಹೀಗೆ ನೀನು ನುಡಿದದ್ದು ಸರಿಯಲ್ಲವೆಂಬುದೇ ನನ್ನ ಉತ್ತರ; ದೇವರು ಮನುಷ್ಯರಿಗಿಂತ ದೊಡ್ಡವನು ಎಂಬುದೇ ಇದಕ್ಕೆ ಆಧಾರ.


ಮೂರನೇ ಬಾರಿಯೂ ಯೇಸು, “ಯೊವಾನ್ನನ ಮಗನಾದ ಸಿಮೋನನೇ, ನೀನು ನನ್ನನ್ನು ಪ್ರೀತಿಸುತ್ತೀಯಾ?” ಎಂದು ಕೇಳಿದರು. “ನೀನು ನನ್ನನ್ನು ಪ್ರೀತಿಸುತ್ತೀಯಾ?” ಎಂದು ಯೇಸು ಮೂರನೇ ಬಾರಿ ಕೇಳಿದ್ದನ್ನು ಕಂಡು ಪೇತ್ರನು ನೊಂದುಕೊಂಡನು. “ಪ್ರಭುವೇ, ನಿಮಗೆ ಎಲ್ಲವು ತಿಳಿದೇ ಇದೆ. ನಾನು ನಿಮ್ಮನ್ನು ಪ್ರೀತಿಸುತ್ತೇನೆ ಎಂದೂ ನಿಮಗೆ ತಿಳಿದಿದೆ,” ಎಂದು ಹೇಳಿದನು. ಅದಕ್ಕೆ ಯೇಸು, “ನನ್ನ ಕುರಿಗಳನ್ನು ಮೇಯಿಸು;


ಅವಳ ಮಕ್ಕಳನ್ನು ಸಂಹರಿಸದೆ ಬಿಡೆನು. ಹೃನ್ಮನಗಳನ್ನು ಪರಿಶೋಧಿಸುವಾತನು ನಾನೇ ಎಂದು ಎಲ್ಲ ಸಭೆಗಳಿಗೂ ಆಗ ಮನದಟ್ಟು ಆಗುವುದು; ನಿಮ್ಮಲ್ಲಿರುವ ಪ್ರತಿಯೊಬ್ಬನಿಗೂ ಅವನವನ ಕೃತ್ಯಗಳಿಗೆ ತಕ್ಕಂತೆ ಪ್ರತಿಫಲವನ್ನು ನೀಡುತ್ತೇನೆ.


ನಿನ್ನ ನೋಟಕೆ ಮರೆಯಾಗಿಲ್ಲ ನಮ್ಮ ಪಾಪದೋಷಗಳು I ನಿನ್ನ ಮುಖಕಾಂತಿಗೆ ಬಟ್ಟಬಯಲಾಗಿವೆ ಗುಪ್ತಾಪರಾಧಗಳು II


ಅಂಥವನು ಪತಿತ ಹಾಗೂ ಪಾಪಿಯೆಂದು ತಿಳಿ. ಅವನ ದುಷ್ಕೃತ್ಯಗಳೇ ಅವನ ಮೇಲೆ ತೀರ್ಪಿಡುತ್ತವೆ.


ನ್ಯಾಯನೀತಿಯನ್ನು ಬಿಡದೆ ಹಿಡಿವೆನು ಭದ್ರವಾಗಿ ನನ್ನ ಬಾಳಿನ ಯಾವ ದಿನದಂದೂ ನಿಂದಿಸಿದ್ದಿಲ್ಲ ನನ್ನ ಮನಸ್ಸಾಕ್ಷಿ.


ಇದನ್ನು ಕೇಳಿದ್ದೇ ಹಿರಿಯರಿಂದ ಹಿಡಿದು ಅವರೆಲ್ಲರೂ ಒಬ್ಬೊಬ್ಬರಾಗಿ ಅಲ್ಲಿಂದ ಕಾಲುಕಿತ್ತರು. ಕೊನೆಗೆ ಅಲ್ಲಿ ಉಳಿದವರೆಂದರೆ, ಯೇಸು ಮತ್ತು ನಿಂತುಕೊಂಡಿದ್ದ ಆ ಹೆಂಗಸು.


ದೇವರು ಅಬ್ರಹಾಮನಿಗೆ ವಾಗ್ದಾನ ಮಾಡಿದಾಗ ತಮ್ಮ ಮಾತನ್ನು ಈಡೇರಿಸುವುದಾಗಿ ಶಪಥಮಾಡಿದರು. ತಮಗಿಂತಲೂ ಮೇಲಾದವರಾರೂ ಇಲ್ಲವಾದ ಕಾರಣ ತಮ್ಮ ಸ್ವಂತ ಹೆಸರಿನಲ್ಲೇ ಶಪಥಮಾಡಿದರು.


ಇದನ್ನು ಕೇಳಿದ ಸಭಾಸದಸ್ಯರು ಕ್ರೋಧಭರಿತರಾಗಿ ಪ್ರೇಷಿತರನ್ನು ಕೊಲ್ಲಬೇಕೆಂದಿದ್ದರು.


ಹೀಗೆ ನಾವು ಸತ್ಯಕ್ಕೆ ಸೇರಿದವರು ಎಂಬುದು ಮನದಟ್ಟಾಗುವುದಲ್ಲದೆ ದೇವರ ಮುಂದೆ ನಮ್ಮ ಮನಸ್ಸು ನೆಮ್ಮದಿಯಿಂದಿರುತ್ತದೆ.


ಪ್ರಿಯರೇ, ನಮ್ಮ ಮನಸ್ಸಾಕ್ಷಿ ನಮ್ಮನ್ನು ಖಂಡಿಸದಿದ್ದರೆ, ನಾವು ದೇವರ ಮುಂದೆ ಧೈರ್ಯದಿಂದಿರಲು ಸಾಧ್ಯವಾಗುತ್ತದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು