Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಯೋಹಾನನು 3:24 - ಕನ್ನಡ ಸತ್ಯವೇದವು C.L. Bible (BSI)

24 ದೇವರ ಆಜ್ಞೆಯನ್ನು ಪಾಲಿಸುವವನು ಅವರಲ್ಲಿ ನೆಲೆಸಿರುತ್ತಾನೆ. ದೇವರೂ ಅವನಲ್ಲಿ ನೆಲೆಸಿರುತ್ತಾರೆ. ದೇವರು ನಮ್ಮಲ್ಲಿ ನೆಲೆಸಿದ್ದಾರೆಂದು ಅವರು ದಯಪಾಲಿಸುವ ಪವಿತ್ರಾತ್ಮರಿಂದಲೇ ತಿಳಿದುಕೊಳ್ಳುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಆತನ ಆಜ್ಞೆಗಳನ್ನು ಕೈಕೊಂಡು ನಡೆಯುವವನು ಆತನಲ್ಲಿ ನೆಲೆಗೊಂಡಿರುತ್ತಾನೆ ಮತ್ತು ದೇವರು ಆತನಲ್ಲಿ ನೆಲೆಗೊಂಡಿರುತ್ತಾನೆ. ಆತನು ಅವನಲ್ಲಿ ನೆಲೆಗೊಂಡಿರುತ್ತಾನೆ. ನಮ್ಮಲ್ಲಿ ನೆಲೆಗೊಂಡಿದ್ದಾನೆಂದು ಆತನು ನಮಗೆ ಅನುಗ್ರಹಿಸಿರುವ ಆತ್ಮನಿಂದ ನಾವು ಬಲ್ಲವರಾಗಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಆತನ ಆಜ್ಞೆಗಳನ್ನು ಕೈಕೊಂಡು ನಡೆಯುವವನು ಆತನಲ್ಲಿ ನೆಲೆಗೊಂಡಿರುತ್ತಾನೆ, ಆತನು ಇವನಲ್ಲಿ ನೆಲೆಗೊಂಡಿರುತ್ತಾನೆ. ನಮ್ಮಲ್ಲಿ ನೆಲೆಗೊಂಡಿದ್ದಾನೆಂದು ಆತನು ನಮಗೆ ಅನುಗ್ರಹಿಸಿದ ಆತ್ಮನಿಂದಲೇ ಬಲ್ಲೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ದೇವರ ಆಜ್ಞೆಗಳಿಗೆ ವಿಧೇಯನಾಗಿರುವವನು ದೇವರಲ್ಲಿ ನೆಲೆಸಿರುತ್ತಾನೆ ಮತ್ತು ದೇವರು ಆತನಲ್ಲಿ ನೆಲೆಸಿರುತ್ತಾನೆ. ದೇವರು ನಮ್ಮಲ್ಲಿ ನೆಲೆಸಿದ್ದಾನೆ ಎಂಬುದು ನಮಗೆ ಹೇಗೆ ತಿಳಿದದೆ? ದೇವರು ನಮಗೆ ದಯಪಾಲಿಸಿರುವ ಪವಿತ್ರಾತ್ಮನಿಂದಲೇ ನಮಗೆ ತಿಳಿದದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ದೇವರ ಆಜ್ಞೆಗಳನ್ನು ಕೈಗೊಂಡು ನಡೆಯುವವನು ದೇವರಲ್ಲಿ ವಾಸಮಾಡುತ್ತಾನೆ ಮತ್ತು ದೇವರು ಅವನಲ್ಲಿ ವಾಸಮಾಡುತ್ತಾರೆ. ದೇವರು ನಮ್ಮಲ್ಲಿ ವಾಸಮಾಡುತ್ತಾರೆಂದು ದೇವರು ನಮಗೆ ದಯಪಾಲಿಸಿದ ಆತ್ಮನಿಂದಲೇ ನಾವು ಬಲ್ಲೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

24 ದೆವಾಚಿ ಹುಕುಮಾ ಮಾನುನ್ ಘೆವ್ನ್ ಚಲ್ತಲೊ ದೆವಾಚ್ಯಾ ವಾಂಗ್ಡಾ ರ್‍ಹಾತಾ ಅನಿ ದೆವ್ ತೆಚ್ಯಾ ಭುತ್ತುರ್ ರ್‍ಹಾತಾ, ತೆನಿ ಅಮ್ಕಾ ದಿಲ್ಲ್ಯಾ ತ್ಯಾ ಪವಿತ್ರ್ ಆತ್ಮ್ಯಾಚ್ಯಾ ದೆನ್ಯಾ ವೈನಾ ದೆವ್ ಅಮ್ಚ್ಯಾ ವಾಂಗ್ಡಾ ಜಿವನ್ ಕರ್ತಾ ಮನ್ತಲೆ ಅಮ್ಕಾ ಕಳುನ್ ಯೆತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಯೋಹಾನನು 3:24
21 ತಿಳಿವುಗಳ ಹೋಲಿಕೆ  

ನೀವು ದೇವರ ಆಲಯವಾಗಿದ್ದೀರಿ. ದೇವರ ಆತ್ಮವು ನಿಮ್ಮಲ್ಲಿ ವಾಸಿಸುತ್ತದೆಂದು ನಿಮಗೆ ಚೆನ್ನಾಗಿ ತಿಳಿದಿದೆ.


ನಿನ್ನ ವಶಕ್ಕೆ ಕೊಡಲಾಗಿರುವ ಸದ್ಬೋಧನೆಯನ್ನು ನಮ್ಮಲ್ಲಿ ವಾಸಿಸುವ ಪವಿತ್ರಾತ್ಮರ ಸಹಾಯದಿಂದ ಸುರಕ್ಷಿತವಾಗಿಡು.


ತಾನು ದೇವರಲ್ಲಿ ನೆಲೆಸಿದ್ದೇನೆಂದು ಹೇಳುವವನು ಕ್ರಿಸ್ತಯೇಸು ಜೀವಿಸಿದಂತೆಯೇ ಜೀವಿಸಬೇಕು. ಇದರಿಂದಲೇ ನಾವು ದೇವರಲ್ಲಿ ನೆಲೆಗೊಂಡಿದ್ದೇವೆಂದು ತಿಳಿದುಕೊಳ್ಳುತ್ತೇವೆ.


ದೇವರು ನಿಮಗೆ ಅನುಗ್ರಹಿಸಿರುವ ಪವಿತ್ರಾತ್ಮರಿಗೆ ನಿಮ್ಮ ದೇಹ ಗರ್ಭಗುಡಿಯಾಗಿದೆ; ಆ ಪವಿತ್ರಾತ್ಮ ನಿಮ್ಮಲ್ಲಿ ವಾಸಮಾಡುತ್ತಿದ್ದಾರೆ ಎಂಬುದು ನಿಮಗೆ ಗೊತ್ತಿಲ್ಲವೇ? ನೀವು ನಿಮ್ಮ ಸ್ವಂತ ಸೊತ್ತಲ್ಲ.


ಪ್ರಿಯರೇ, ನಾವು ಒಬ್ಬರನ್ನೊಬ್ಬರು ಪ್ರೀತಿಸೋಣ. ಪ್ರೀತಿ ದೇವರಿಂದ ಉಗಮವಾದುದು. ಪ್ರೀತಿಸುವವನು ದೇವರ ಮಗನು. ಅವನು ದೇವರನ್ನು ಬಲ್ಲವನು.


ಪಿತನೇ, ಇವರೆಲ್ಲಾ ಒಂದಾಗಿರಲಿ. ನೀವು ನನ್ನಲ್ಲಿ, ನಾನು ನಿಮ್ಮಲ್ಲಿ ಇರುವಂತೆಯೇ ಇವರೂ ನಮ್ಮಲ್ಲಿ ಒಂದಾಗಿರಲಿ. ಹೀಗೆ, ನನ್ನನ್ನು ಕಳುಹಿಸಿದವರು ನೀವೇ ಎಂದು ಲೋಕವು ವಿಶ್ವಾಸಿಸುವಂತಾಗಲಿ.


ನಾವು ದೇವರ ಆಜ್ಞೆಗಳಿಗೆ ವಿಧೇಯರಾಗಿ ಅವರಿಗೆ ಮೆಚ್ಚುಗೆಯಾದವುಗಳನ್ನೇ ಮಾಡುವುದರಿಂದ ನಾವು ಕೋರುವುದೆಲ್ಲವನ್ನೂ ಅವರಿಂದ ಪಡೆಯುತ್ತೇವೆ.


ದೇವರ ಆಲಯಕ್ಕೂ ಕಲ್ಲಿನ ವಿಗ್ರಹಕ್ಕೂ ಎಲ್ಲಿಯ ಸಾಮ್ಯ? ನಾವಾದರೋ ಜೀವಂತ ದೇವರ ಮಂದಿರವಾಗಿದ್ದೇವೆ. ಇದನ್ನು ದೇವರೇ ಹೇಳಿದ್ದಾರೆ: “ನನ್ನ ಜನರಲ್ಲೇ ನಾ ಮನೆಮಾಡುವೆನು ಅವರ ನಡುವೆಯೇ ನಾ ತಿರುಗಾಡುವೆನು ಅವರಿಗೆ ನಾನೇ ದೇವರಾಗಿರುವೆನು ಅವರೆನಗೆ ಪ್ರಜೆಯಾಗಿರುವರು.”


ನಾನು ಹಾಗೆ ಮಾಡಿದ್ದೇ ಆದರೆ, ನನ್ನನ್ನು ನಂಬದೆಹೋದರೂ ನನ್ನ ಕಾರ್ಯಗಳನ್ನಾದರೂ ನಂಬಿರಿ. ಆಗ ಪಿತನು ನನ್ನಲ್ಲಿಯೂ ನಾನು ಪಿತನಲ್ಲಿಯೂ ಇರುವುದು ನಿಮಗೆ ಅರಿವಾಗುವುದು ಹಾಗೂ ಮನದಟ್ಟಾಗುವುದು,” ಎಂದರು.


ಸತ್ಯಸ್ವರೂಪಿಯಾದ ಪವಿತ್ರಾತ್ಮನೇ ಈ ಪೋಷಕ. ಲೋಕವು ಇವರನ್ನು ಬರಮಾಡಿಕೊಳ್ಳದು. ಏಕೆಂದರೆ ಲೋಕ ಇವರನ್ನು ಕಾಣುವುದೂ ಇಲ್ಲ, ಅರಿತುಕೊಳ್ಳುವುದೂ ಇಲ್ಲ. ಆದರೆ ನೀವು ಇವರನ್ನು ಅರಿಯುವಿರಿ. ಕಾರಣ, ಇವರು ನಿಮ್ಮೊಂದಿಗೂ ನಿಮ್ಮಲ್ಲಿಯೂ ನೆಲಸಿರುವರು.


ಅಂದಮೇಲೆ, ಈ ಬೋಧನೆಯನ್ನು ತಿರಸ್ಕರಿಸುವವನು ಮನುಷ್ಯನನ್ನು ಮಾತ್ರವಲ್ಲ, ನಿಮಗೆ ಪವಿತ್ರಾತ್ಮರನ್ನು ಪ್ರದಾನ ಮಾಡಿರುವ ದೇವರನ್ನೇ ತಿರಸ್ಕರಿಸುತ್ತಾನೆ.


ನಾವು ದೇವರ ಆಜ್ಞೆಗಳನ್ನು ಕೈಗೊಂಡು ನಡೆದರೆ ಅದರಿಂದಲೇ ಅವರ ಅರಿವು ನಮಗಿದೆ ಎಂದು ಖಚಿತವಾಗುತ್ತದೆ.


ಆದರೆ ದೇವರ ವಾಕ್ಯವನ್ನು ಕೈಗೊಂಡು ನಡೆಯುವವನಲ್ಲಿ ಪ್ರೀತಿ ನಿಜಕ್ಕೂ ಸಿದ್ಧಿಗೆ ಬಂದಿರುತ್ತದೆ.


ಮೊದಲಿನಿಂದಲೂ ನೀವು ಯಾವ ಸಂದೇಶವನ್ನು ಕೇಳಿದ್ದೀರೋ ಅದು ನಿಮ್ಮಲ್ಲಿ ನೆಲೆಸಲಿ. ಮೊದಲಿನಿಂದಲೂ ನೀವು ಕೇಳಿದ ಸಂದೇಶ ನಿಮ್ಮಲ್ಲಿ ನೆಲೆಸಿದರೆ ಪುತ್ರನಲ್ಲಿಯೂ ಪಿತನಲ್ಲಿಯೂ ನೀವು ನೆಲೆಸುತ್ತೀರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು