Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಯೋಹಾನನು 3:5 - ಕನ್ನಡ ಸತ್ಯವೇದವು C.L. Bible (BSI)

5 ಪಾಪರಹಿತರಾದ ಕ್ರಿಸ್ತಯೇಸು ಪಾಪಪರಿಹಾರ ಮಾಡಲೆಂದೇ ಕಾಣಿಸಿಕೊಂಡರೆಂದು ನೀವು ಬಲ್ಲಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಪಾಪಗಳನ್ನು ನಿವಾರಣೆ ಮಾಡುವುದಕ್ಕಾಗಿ ಕ್ರಿಸ್ತನು ಪ್ರತ್ಯಕ್ಷನಾದನೆಂಬುದು ಮತ್ತು ಆತನಲ್ಲಿ ಪಾಪವಿಲ್ಲವೆಂಬುದು ನಿಮಗೆ ಗೊತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಪಾಪಗಳನ್ನು ಹೋಗಲಾಡಿಸುವದಕ್ಕಾಗಿ ಕ್ರಿಸ್ತನು ಪ್ರತ್ಯಕ್ಷನಾದನೆಂಬದು ನಿಮಗೆ ಗೊತ್ತಾಗಿದೆ; ಆತನಲ್ಲಿ ಪಾಪವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಕ್ರಿಸ್ತನು ಜನರ ಪಾಪಗಳನ್ನು ಹೋಗಲಾಡಿಸಲು ಬಂದನೆಂಬುದು ನಿಮಗೆ ತಿಳಿದಿದೆ. ಆತನಲ್ಲಿ ಪಾಪವೆಂಬುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಪಾಪಗಳನ್ನು ನಿವಾರಣೆ ಮಾಡುವುದಕ್ಕಾಗಿ ಕ್ರಿಸ್ತ ಯೇಸು ಪ್ರತ್ಯಕ್ಷರಾದರೆಂಬುದು ನಿಮಗೆ ಗೊತ್ತಾಗಿದೆ. ಕ್ರಿಸ್ತ ಯೇಸುವಿನಲ್ಲಿ ಪಾಪವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 ಪಾಪ್ ಕಾಡುನ್ ಟಾಕುಚೆ ಮನುನ್ ಕ್ರಿಸ್ತ್ ಯೆಲೊ ಮನ್ತಲೆ ತುಮ್ಕಾ ಗೊತ್ತ್ ಹಾಯ್, ತೆಚ್ಯಾಕ್ಡೆ ಕಸ್ಲೊಬಿ ಪಾಪ್ ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಯೋಹಾನನು 3:5
33 ತಿಳಿವುಗಳ ಹೋಲಿಕೆ  

ಪಾಪವನ್ನೇ ಅರಿಯದ ಕ್ರಿಸ್ತಯೇಸುವನ್ನು ದೇವರು ನಮಗೋಸ್ಕರ ಪಾಪಸ್ವರೂಪಿಯನ್ನಾಗಿಸಿದರು. ಕ್ರಿಸ್ತಯೇಸುವಿನಲ್ಲಿ ನಾವು ದೇವರೊಡನೆ ಸತ್ಸಂಬಂಧವನ್ನು ಪಡೆಯಲೆಂದೇ ಹೀಗೆ ಮಾಡಿದರು.


ಹಾಗೆಯೇ, ಎಲ್ಲಾ ಮಾನವರ ಪಾಪಗಳನ್ನು ಹೊತ್ತು ಹೋಗಲಾಡಿಸಲು ಕ್ರಿಸ್ತಯೇಸು ಒಮ್ಮೆಗೇ ಎಲ್ಲಾ ಕಾಲಕ್ಕೂ ತಮ್ಮನ್ನೇ ಬಲಿಯಾಗಿ ಸಮರ್ಪಿಸಿಕೊಂಡರು. ಅವರು ಮತ್ತೆ ಪ್ರತ್ಯಕ್ಷರಾಗುವರು; ಪಾಪನಿವಾರಣೆ ಮಾಡಲೆಂದು ಅಲ್ಲ, ತಮ್ಮನ್ನು ನಂಬಿ ನಿರೀಕ್ಷಿಸಿಕೊಂಡಿರುವವರನ್ನು ಜೀವೋದ್ಧಾರ ಮಾಡಲೆಂದು.


ಅಂತೆಯೇ ಕ್ರಿಸ್ತಯೇಸು ನೀತಿವಂತರಾಗಿದ್ದರೂ ಅನೀತಿವಂತರಿಗಾಗಿ ಪ್ರಾಣತ್ಯಾಗಮಾಡಿದರು. ಪಾಪ ನಿವಾರಣಾರ್ಥವಾಗಿ ಒಂದೇ ಸಾರಿಗೆ ಮಾತ್ರವಲ್ಲ, ಎಂದೆಂದಿಗೂ ನಮ್ಮನ್ನು ದೇವರ ಬಳಿಗೆ ಸೇರಿಸಲು ಸತ್ತರು. ದೇಹದಲ್ಲಿ ಅವರು ವಧಿತರಾದರೂ ಆತ್ಮದಲ್ಲಿ ಜೀವಂತರಾದರು.


ನಾವು ಪಾಪದ ಪಾಲಿಗೆ ಸತ್ತು, ಸತ್ಯಕ್ಕೋಸ್ಕರ ಜೀವಿಸುವಂತೆ ಕ್ರಿಸ್ತಯೇಸು ತಮ್ಮ ದೇಹದಲ್ಲಿ ನಮ್ಮ ಪಾಪಗಳನ್ನು ಹೊತ್ತು ಶಿಲುಬೆಯ ಮರವನ್ನೇರಿದರು. ಅವರ ಗಾಯಗಳಿಂದ ನೀವು ಗುಣಹೊಂದಿದಿರಿ.


ಹಾಗೆ ಸಮರ್ಪಿಸಬೇಕಾಗಿದ್ದ ಪಕ್ಷದಲ್ಲಿ ಲೋಕಾದಿಯಿಂದಲೂ ಅವರು ಅನೇಕ ಸಾರಿ ಮರಣಯಾತನೆಯನ್ನು ಅನುಭವಿಸಬೇಕಾಗಿ ಬರುತ್ತಿತ್ತು; ಅದಕ್ಕೆ ಬದಲಾಗಿ ಯುಗಾಂತ್ಯವಾದ ಈ ಕಾಲದಲ್ಲಿ ಪಾಪನಿವಾರಣೆ ಮಾಡಬೇಕೆಂಬ ಉದ್ದೇಶದಿಂದ ಒಮ್ಮೆಗೇ ತಮ್ಮನ್ನು ತಾವೇ ಬಲಿಯಾಗಿ ಸಮರ್ಪಿಸಿಕೊಳ್ಳಲೆಂದು ಯೇಸು ಪ್ರತ್ಯಕ್ಷರಾದರು.


ಮರುದಿನ ಯೊವಾನ್ನನು, ತಾನಿದ್ದಲ್ಲಿಗೇ ಯೇಸು ಬರುತ್ತಿರುವುದನ್ನು ಕಂಡು, “ಇಗೋ ನೋಡಿ, ಬಲಿಯರ್ಪಣೆಗಾಗಿ ದೇವರು ನೇಮಿಸಿರುವ ಕುರಿಮರಿ; ಲೋಕದ ಪಾಪಗಳನ್ನು ಪರಿಹರಿಸುವವರು ಇವರೇ.


ನಂಬಲರ್ಹವಾದ ಸಾಕ್ಷಿಯೂ ಮೃತ್ಯುವಿನಿಂದ ಪುನರುತ್ಥಾನ ಹೊಂದಿದವರಲ್ಲಿ ಪ್ರಪ್ರಥಮರೂ ಭೂರಾಜರ ಒಡೆಯರೂ ಆದ ಯೇಸುಕ್ರಿಸ್ತರಿಂದಲೂ ನಿಮಗೆ ಕೃಪಾಶೀರ್ವಾದವೂ ಶಾಂತಿಸಮಾಧಾನವೂ ಲಭಿಸಲಿ! ನಮ್ಮನ್ನು ಪ್ರೀತಿಸುವವರೂ ತಮ್ಮ ರಕ್ತದಿಂದ ನಮ್ಮ ಪಾಪಗಳನ್ನು ತೊಳೆದವರೂ


ಬದಲಿಗೆ, ದೇವರು ಬೆಳಕಿನಲ್ಲಿರುವಂತೆ ನಾವೂ ಬೆಳಕಿನಲ್ಲಿ ನಡೆದರೆ ನಮ್ಮಲ್ಲಿ ಪರಸ್ಪರ ಅನ್ಯೋನ್ಯತೆ ಇರುತ್ತದೆ. ಆಗ ದೇವರ ಪುತ್ರನಾದ ಯೇಸುವಿನ ರಕ್ತವು ನಮ್ಮನ್ನು ಎಲ್ಲ ಪಾಪದಿಂದಲೂ ಶುದ್ಧಗೊಳಿಸುತ್ತದೆ.


ಆ ಜೀವ ಪ್ರತ್ಯಕ್ಷವಾಯಿತು. ಅದನ್ನು ನಾವು ನೋಡಿದ್ದೇವೆ. ಆ ಬಗ್ಗೆ ಸಾಕ್ಷಿ ಹೇಳುತ್ತೇವೆ. ಪಿತನ ಬಳಿಯಿದ್ದು ನಮಗೆ ಪ್ರತ್ಯಕ್ಷವಾದಂಥ ನಿತ್ಯಜೀವವನ್ನು ನಿಮಗೆ ಸಾರುತ್ತೇವೆ.


ಯೇಸುಕ್ರಿಸ್ತರು ನಮ್ಮನ್ನು ಸಕಲ ಅಪರಾಧಗಳಿಂದ ವಿಮೋಚಿಸಿ, ಪರಿಶುದ್ಧರನ್ನಾಗಿಸಿ, ಸತ್ಕಾರ್ಯಗಳಲ್ಲಿ ಆಸಕ್ತರಾದ ಒಂದು ಜನಾಂಗವನ್ನಾಗಿ ಮಾಡಿದರು. ನಮ್ಮನ್ನು ತಮ್ಮ ಸ್ವಂತದವರನ್ನಾಗಿಸಿಕೊಳ್ಳಲೆಂದು ತಮ್ಮನ್ನೇ ನಮಗಾಗಿ ಸಮರ್ಪಿಸಿಕೊಟ್ಟನು.


ಅವರು ಯಾವ ಪಾಪವನ್ನೂ ಮಾಡಲಿಲ್ಲ. ಅವರ ಬಾಯಿಂದ ಅಬದ್ಧವಾದ ಮಾತೊಂದೂ ಕೇಳಿಬರಲಿಲ್ಲ.


ಇವರೇ ದೇವರ ಮಹಿಮೆಯ ತೇಜಸ್ಸು; ಇವರೇ ದೈವತ್ವದ ಪಡಿಯಚ್ಚು; ತಮ್ಮ ಶಕ್ತಿಯುತ ವಾಕ್ಯದಿಂದ ಇವರೇ ಸಮಸ್ತಕ್ಕೂ ಆಧಾರ; ನಮ್ಮ ಪಾಪಗಳನ್ನು ತೊಡೆದುಹಾಕಿ, ಸ್ವರ್ಗದಲ್ಲಿ ಮಹೋನ್ನತ ದೇವರ ಬಲಪಾರ್ಶ್ವದಲ್ಲಿ ಆಸೀನರಾಗಿರುವವರೂ ಇವರೇ.


ಕ್ರಿಸ್ತಯೇಸು, ಪಾಪಿಗಳ ಉದ್ಧಾರಕ್ಕಾಗಿ ಈ ಲೋಕಕ್ಕೆ ಬಂದರು ಎನ್ನುವ ಮಾತು ಸತ್ಯವಾದುದು, ನಂಬಲರ್ಹವಾದುದು ಹಾಗೂ ಎಲ್ಲರ ಅಂಗೀಕಾರಕ್ಕೆ ಯೋಗ್ಯವಾದುದು. ಅಂಥ ಪಾಪಿಗಳಲ್ಲಿ ನಾನೇ ಪ್ರಮುಖನು.


ಆಕೆ ಒಬ್ಬ ಮಗನನ್ನು ಹೆರುವಳು. ಆತನಿಗೆ ನೀನು ‘ಯೇಸು’ ಎಂಬ ಹೆಸರಿಡಬೇಕು. ಏಕೆಂದರೆ ತನ್ನ ಜನರನ್ನು ಅವರ ಪಾಪಗಳಿಂದ ರಕ್ಷಿಸಿ ಉದ್ಧಾರಮಾಡುವವನು ಆತನೇ,” ಎಂದನು.


ಪ್ರಿಯಮಕ್ಕಳೇ, ನೀವು ಪಾಪಮಾಡಬಾರದೆಂದೇ ನಾನಿದನ್ನು ನಿಮಗೆ ಬರೆಯುತ್ತಿದ್ದೇನೆ. ಒಂದು ವೇಳೆ ಯಾರಾದರೂ ಪಾಪಮಾಡಿದ್ದೇ ಆದರೆ ನಮ್ಮ ಪರವಾಗಿ ಪಿತನ ಬಳಿಯಲ್ಲಿ ಬಿನ್ನಯಿಸಲು ಒಬ್ಬರಿದ್ದಾರೆ. ಅವರೇ ಸತ್ಯಸ್ವರೂಪರಾದ ಯೇಸುಕ್ರಿಸ್ತರು.


ವಿಶ್ವಸೃಷ್ಟಿಗೆ ಮೊದಲೇ ಯೇಸುಕ್ರಿಸ್ತರನ್ನು ದೇವರು ಇದಕ್ಕೆಂದು ಗೊತ್ತುಮಾಡಿದ್ದರು. ಈ ಅಂತಿಮ ದಿನಗಳಲ್ಲಿ ನಿಮಗೋಸ್ಕರ ಯೇಸು ಪ್ರತ್ಯಕ್ಷರಾದರು.


ಈ ಪ್ರಧಾನಯಾಜಕ, ನಮ್ಮ ದೌರ್ಬಲ್ಯಗಳನ್ನು ಕಂಡು ಅನುಕಂಪ ತೋರದೆ ಇರುವವರಲ್ಲ. ಅವರು, ನಮ್ಮಂತೆಯೇ ಇದ್ದುಕೊಂಡು ಎಲ್ಲಾ ವಿಷಯಗಳಲ್ಲೂ ಶೋಧನೆ ಸಂಕಟಗಳನ್ನು ಅನುಭವಿಸಿದರು. ಆದರೆ ಪಾಪವನ್ನು ಮಾತ್ರ ಮಾಡಲಿಲ್ಲ.


ನಮಗೆ ಬೇಕಾಗಿದ್ದ ಪ್ರಧಾನ ಯಾಜಕರು ಯೇಸುವೇ. ಇವರು ಪರಿಶುದ್ಧರು, ನಿರ್ದೋಷಿ, ನಿಷ್ಕಳಂಕರು, ಪಾಪಿಗಳಿಂದ ಪ್ರತ್ಯೇಕಿಸಲಾದವರು, ಗಗನಮಂಡಲಗಳಿಗಿಂತಲೂ ಉನ್ನತದಲ್ಲಿರುವವರು.


ನಿಜವಾಗಿಯೂ ನಮ್ಮ ಧರ್ಮದ ನಿಗೂಢಾರ್ಥ ಶ್ರೇಷ್ಠವಾದದ್ದು ಎಂಬುದು ನಿಸ್ಸಂದೇಹವಾದ ವಿಷಯ. “ನರಮಾನವ ರೂಪದಲಿ ಪ್ರತ್ಯಕ್ಷನಾಗಿ ದೇವರಿಗೆ ಪ್ರಿಯನೆಂದು ಪವಿತ್ರಾತ್ಮನಿಂದ ಪ್ರಕಟಿತನಾಗಿ ದೇವದೂತರಿಗೆ ಪ್ರದರ್ಶಿತವಾಗಿ ಅನ್ಯಜನರಿಗೆ ಪ್ರಬೋಧಿತನಾಗಿ ಜಗದಲ್ಲೆಲ್ಲೂ ವಿಶ್ವಾಸಪಡೆದವನಾಗಿ ಸ್ವರ್ಗಕ್ಕೇರಿದಾತ ಮಹಿಮಾನ್ವಿತ ಯೇಸುಕ್ರಿಸ್ತ.


ಇಹದ ಲೋಕಾಧಿಪತಿ ಬರುವ ಸಮಯವಾಯಿತು. ಇನ್ನು ಬಹಳ ಹೊತ್ತು ನಾನು ನಿಮ್ಮೊಡನೆ ಮಾತನಾಡಲು ಕಾಲಾವಕಾಶವಿಲ್ಲ. ನನ್ನ ಮೇಲೆ ಅವನಿಗೆ ಯಾವ ಅಧಿಕಾರವೂ ಇಲ್ಲ.


ನನ್ನಲ್ಲಿ ತಪ್ಪಿದೆಯೆಂದು ಸಮರ್ಥಿಸಬಲ್ಲವರು ನಿಮ್ಮಲ್ಲಿ ಯಾರಿದ್ದಾರೆ? ನಾನು ಸತ್ಯವನ್ನೇ ಆಡುವುದಾದರೆ ನನ್ನನ್ನು ನೀವು ನಂಬುವುದಿಲ್ಲವೇಕೆ?


ಇಸ್ರಯೇಲರಿಗೆ ಇವರನ್ನು ತೋರ್ಪಡಿಸಬೇಕೆಂದೇ ನಾನು ನೀರಿನಿಂದ ಸ್ನಾನದೀಕ್ಷೆಕೊಡುತ್ತಾ ಬಂದೆನು; ಬರಬೇಕಾಗಿದ್ದವರು ಇವರೇ ಎಂದು ನನಗೂ ತಿಳಿದಿರಲಿಲ್ಲ,” ಎಂದು ನುಡಿದನು.


ನಡೆದುದನ್ನು ಕಂಡ ಶತಾಧಿಪತಿ ದೇವರನ್ನು ಹೊಗಳುತ್ತಾ, “ಈ ಮನುಷ್ಯ ಖಂಡಿತವಾಗಿ ಸತ್ಪುರುಷನೇ ಸರಿ,” ಎಂದನು.


ನಮಗೇನೋ ಶಿಕ್ಷೆ ನ್ಯಾಯವಾಗಿದೆ, ನಮ್ಮ ಕೃತ್ಯಕ್ಕೆ ತಕ್ಕ ಫಲ ಸಿಕ್ಕಿದೆ; ಇವರಾದರೋ, ನಿರಪರಾಧಿ!” ಎಂದನು.


ಆದುದರಿಂದ ಪಶ್ಚಾತ್ತಾಪದ ಮಾತುಗಳೊಂದಿಗೆ ದೇವರಿಗೆ ಅಭಿಮುಖವಾಗಿ, “ಪ್ರಭುವೇ, ನಮ್ಮ ಅಪರಾಧವನ್ನು ತೊಡೆದುಹಾಕು. ನಮ್ಮಲ್ಲಿ ಒಳಿತಾದುದನ್ನೇ ಅಂಗೀಕರಿಸು. ನಿನಗೆ ಸ್ತುತಿಬಲಿಯನ್ನು ಸಮರ್ಪಿಸುವೆವು.


ನಿಮ್ಮ ಪೂರ್ವಜರಿಂದ ಪರಂಪರೆಯಾಗಿ ಬಂದಿರುವ ನಿರರ್ಥಕ ನಡವಳಿಕೆಯಿಂದ ನಿಮ್ಮನ್ನು ಬಿಡುಗಡೆಮಾಡಲು ಕೊಡಲಾದ ಬೆಲೆಯು ಎಂಥದ್ದೆಂದು ನಿಮಗೆ ತಿಳಿದಿದೆ. ಅದು ನಶಿಸಿಹೋಗುವ ಬೆಳ್ಳಿಬಂಗಾರವಲ್ಲ.


ಅವರೇ ನಮ್ಮ ಪಾಪಗಳನ್ನು ನಿವಾರಿಸುವ ಪರಿಹಾರ ಬಲಿಯಾಗಿದ್ದಾರೆ. ನಮ್ಮ ಪಾಪಗಳನ್ನು ಮಾತ್ರವಲ್ಲ, ಇಡೀ ಜಗತ್ತಿನ ಪಾಪಗಳನ್ನು ಅವರು ಪರಿಹರಿಸುತ್ತಾರೆ.


ಕ್ರಿಸ್ತಯೇಸು ಸತ್ಯಸ್ವರೂಪಿ ಎಂಬುದನ್ನು ನೀವು ಬಲ್ಲಿರಿ. ಎಂದೇ, ಸತ್ಯಮಾರ್ಗದಲ್ಲಿ ನಡೆಯುವ ಪ್ರತಿಯೊಬ್ಬನೂ ಅವರಿಂದ ಜನಿಸಿದವನು ಎಂಬುದು ನಿಮಗೆ ವೇದ್ಯವಾಗಿರಬೇಕು.


ಪಾಪಮಾಡುವವನು ಸೈತಾನನ ಸಂತಾನದವನು. ಸೈತಾನನು ಆದಿಯಿಂದಲೂ ಪಾಪಮಾಡಿದವನೇ. ಅವನ ದುಷ್ಕೃತ್ಯಗಳನ್ನು ವಿನಾಶಗೊಳಿಸಲೆಂದೇ ದೇವರ ಪುತ್ರ ಕಾಣಿಸಿಕೊಂಡಿದ್ದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು