Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಯೋಹಾನನು 3:9 - ಕನ್ನಡ ಸತ್ಯವೇದವು C.L. Bible (BSI)

9 ದೇವರಿಂದ ಜನಿಸಿದ ಯಾವನೂ ಪಾಪಮಾಡನು. ದೇವರ ಜೀವದ ಕುಡಿ ಅವನಲ್ಲಿರುವುದು. ಅವನು ಪಾಪದಲ್ಲಿ ಜೀವಿಸನು. ಏಕೆಂದರೆ, ಅವನು ದೇವರಿಂದ ಜನಿಸಿದವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ದೇವರಿಂದ ಹುಟ್ಟಿದವನು ಪಾಪಮಾಡುವುದಿಲ್ಲ. ಏಕೆಂದರೆ ದೇವರ ಸ್ವಭಾವವು ಅವನಲ್ಲಿ ನೆಲೆಗೊಂಡಿದೆ. ಅವನು ದೇವರಿಂದ ಹುಟ್ಟಿದ ಕಾರಣ ಪಾಪಮಾಡಲಾರನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ದೇವರಿಂದ ಹುಟ್ಟಿದವನು ಪಾಪಮಾಡನು; ದೇವರ ಜೀವವು ಅವನಲ್ಲಿ ನೆಲೆಗೊಂಡಿದೆ. ಅವನು ದೇವರಿಂದ ಹುಟ್ಟಿದ ಕಾರಣ ಪಾಪಮಾಡುವವನಾಗಿರಲಾರನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ದೇವರಿಂದ ಹೊಸದಾಗಿ ಹುಟ್ಟಿದವನು ಪಾಪಗಳಲ್ಲಿ ನೆಲೆಗೊಂಡಿರುವುದಿಲ್ಲ. ಏಕೆಂದರೆ ದೇವರು ದಯಪಾಲಿಸಿದ ಹೊಸ ಜೀವವು ಅವನಲ್ಲಿ ನೆಲೆಸಿರುತ್ತದೆ. ಅವನು ದೇವರಿಂದ ಹೊಸದಾಗಿ ಹುಟ್ಟಿದ ಕಾರಣ ಪಾಪದಲ್ಲೇ ಮುಂದುವರಿಯಲು ಅವನಿಗೆ ಸಾಧ್ಯವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ದೇವರಿಂದ ಹುಟ್ಟಿದವನು ಪಾಪವನ್ನು ಅಭ್ಯಾಸ ಮಾಡಲಾರನು, ಏಕೆಂದರೆ ದೇವರ ಬೀಜವು ಅವನಲ್ಲಿ ನೆಲೆಗೊಂಡಿದೆ. ಅವನು ದೇವರಿಂದ ಹುಟ್ಟಿದ ಕಾರಣ ಪಾಪ ಅಭ್ಯಾಸ ಮಾಡುವುದು ಅವನಿಗೆ ಅಸಾಧ್ಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

9 ದೆವಾಕನ್ನಾ ಜಲ್ಮಲ್ಲೊ ಪಾಪ್ ಕರಿನಾ, ಕಶ್ಯಾಕ್ ಮಟ್ಲ್ಯಾರ್, ದೆವಾಚೊ ಸೊಬಾವ್ ತೆಚ್ಯಾ ಭುತ್ತುರ್ ಹಾಯ್, ತೊ ದೆವಾಕ್ನಾ ಜಲ್ಮಲ್ಯಾ ಕಾರನಾ ವೈನಾ ತೊ ಪಾಪ್ ಕರಿನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಯೋಹಾನನು 3:9
18 ತಿಳಿವುಗಳ ಹೋಲಿಕೆ  

ನಮಗೆ ತಿಳಿದಿರುವಂತೆ ದೇವರಿಂದ ಜನಿಸಿದವನು ಪಾಪಜೀವಿಯಾಗಿರುವುದಿಲ್ಲ. ಏಕೆಂದರೆ, ದೇವರ ಪುತ್ರನ ರಕ್ಷಣೆ ಅವನಿಗಿದೆ. ಕೇಡಿಗನ ಹಿಡಿತಕ್ಕೆ ಅವನು ಸಿಗನು.


ನೀವು ಸಜೀವವಾದ ಅನಂತ ದೈವವಾಕ್ಯದ ಮೂಲಕ ಹೊಸಜನ್ಮವನ್ನು ಪಡೆದಿದ್ದೀರಿ; ಈ ಜನ್ಮವನ್ನು ನೀವು ಪಡೆದಿರುವುದು ಮರ್ತ್ಯಮಾನವನಿಂದಲ್ಲ, ಅಮರ ದೇವರಿಂದ.


ಅಂಥವರ ಜನನವು ರಕ್ತಸಂಬಂಧದಿಂದ ಅಲ್ಲ, ಶಾರೀರಕ ಇಚ್ಛೆಯಿಂದ ಅಲ್ಲ. ಮಾನವ ಸಹಜ ಬಯಕೆಯಿಂದಲೂ ಅಲ್ಲ, ದೇವರಿಂದಲೇ ಆದುದು.


ಕ್ರಿಸ್ತಯೇಸು ಸತ್ಯಸ್ವರೂಪಿ ಎಂಬುದನ್ನು ನೀವು ಬಲ್ಲಿರಿ. ಎಂದೇ, ಸತ್ಯಮಾರ್ಗದಲ್ಲಿ ನಡೆಯುವ ಪ್ರತಿಯೊಬ್ಬನೂ ಅವರಿಂದ ಜನಿಸಿದವನು ಎಂಬುದು ನಿಮಗೆ ವೇದ್ಯವಾಗಿರಬೇಕು.


ಯೇಸುವೇ ‘ಕ್ರಿಸ್ತ’ ಎಂದು ವಿಶ್ವಾಸಿಸುವ ಪ್ರತಿಯೊಬ್ಬನೂ ದೇವರ ಮಗು. ತಂದೆಯನ್ನು ಪ್ರೀತಿಸುವವನು ಆತನ ಮಗುವನ್ನೂ ಪ್ರೀತಿಸುತ್ತಾನೆ.


ದೇವರಿಂದ ಜನಿಸಿದ ಪ್ರತಿ ಒಬ್ಬನೂ ಲೋಕವನ್ನು ಜಯಿಸುತ್ತಾನೆ. ಲೋಕವನ್ನು ಜಯಿಸುವಂಥದು ನಮ್ಮ ವಿಶ್ವಾಸವೇ.


ಆಗ ಯೇಸು, “ನಾನು ನಿನಗೆ ಸತ್ಯವಾಗಿ ಹೇಳುತ್ತೇನೆ: ಒಬ್ಬನು ಹೊಸದಾಗಿ ಹುಟ್ಟದಿದ್ದರೆ ಅವನು ದೇವರ ಸಾಮ್ರಾಜ್ಯವನ್ನು ಸೇರಲಾರ,” ಎಂದು ಹೇಳಿದರು.


ಏಕೆಂದರೆ, ದೈಹಿಕ ವ್ಯಾಮೋಹವು ಪವಿತ್ರಾತ್ಮರಿಗೆ ವಿರುದ್ಧವಾಗಿದೆ. ಪವಿತ್ರಾತ್ಮ ಆ ವ್ಯಾಮೋಹಕ್ಕೆ ವಿರುದ್ಧವಾಗಿದ್ದಾರೆ. ಇವೆರಡೂ ಒಂದಕ್ಕೊಂದು ಕಾದಾಡುವುದರಿಂದ ನಿಮ್ಮ ಬಯಕೆ ಕೈಗೂಡುವುದಿಲ್ಲ.


ಪ್ರಿಯರೇ, ನಾವು ಒಬ್ಬರನ್ನೊಬ್ಬರು ಪ್ರೀತಿಸೋಣ. ಪ್ರೀತಿ ದೇವರಿಂದ ಉಗಮವಾದುದು. ಪ್ರೀತಿಸುವವನು ದೇವರ ಮಗನು. ಅವನು ದೇವರನ್ನು ಬಲ್ಲವನು.


ಒಳ್ಳೆಯ ಮರ ಕೆಟ್ಟ ಹಣ್ಣನ್ನು ಕೊಡಲಾರದು, ಹಾಗೆಯೇ ಕೆಟ್ಟ ಮರ ಒಳ್ಳೆಯ ಹಣ್ಣನ್ನು ಕೊಡಲಾರದು.


ಖಂಡಿತವಾಗಿಯೂ ಕೂಡದು. ಪಾಪದ ಪಾಲಿಗೆ ಸತ್ತಿರುವ ನಾವು ಅದರಲ್ಲೇ ಜೀವಿಸುವುದು ಹೇಗೆ ತಾನೆ ಸಾಧ್ಯ?


ನಾವಂತೂ ಕಣ್ಣಾರೆ ಕಂಡು, ಕಿವಿಯಾರೆ ಕೇಳಿದ ವಿಷಯನ್ನು ಕುರಿತು ಮೌನದಿಂದಿರಲಾಗದು,” ಎಂದು ಬದಲು ನುಡಿದರು.


‘ಅವನನ್ನು ಆದಷ್ಟೂ ಹಿಂಸೆಮಾಡೋಣ ಅವನ ದುರ್ಗತಿಗೆ ಮೂಲಕಾರಣ ಹುಡುಕೋಣ’ ಎಂದು ನೀವು ಆಡಿಕೊಳ್ಳುವ ಕಾರಣ.


ಅಕ್ರಮಗೈಯರು ಅಂಥವರಾರು I ಆತ ತೋರಿದ ಮಾರ್ಗದಲೆ ನಡೆವರು II


ಅವರಲ್ಲಿ ನೆಲೆಸಿರುವ ಪ್ರತಿಯೊಬ್ಬನೂ ಪಾಪಮಾಡನು. ಪಾಪಮಾಡುವವನು ಅವರನ್ನು ಕಂಡವನೂ ಅಲ್ಲ, ಅರಿತವನೂ ಅಲ್ಲ.


ಪ್ರಿಯನೇ, ನೀನು ಕೆಟ್ಟದ್ದನ್ನು ಅನುಸರಿಸದೆ ಒಳ್ಳೆಯದನ್ನೇ ಅನುಸರಿಸಿ ನಡೆ. ಒಳಿತನ್ನು ಮಾಡುವವನು ದೇವರಿಗೆ ಸೇರಿದವನು. ಕೆಡುಕನ್ನು ಮಾಡುವವನು ದೇವರನ್ನು ಕಾಣದವನು.


ಬಿತ್ತಬೇಕಾದ ಬೀಜದ ಮೇಲೆ ಈ ಜಂತುಗಳ ಹೆಣ ಬಿದ್ದರೆ ಆ ಬೀಜವು ಅಶುದ್ಧವಾಗುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು