Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಯೋಹಾನನು 4:12 - ಕನ್ನಡ ಸತ್ಯವೇದವು C.L. Bible (BSI)

12 ದೇವರನ್ನು ಯಾರೂ ಎಂದೂ ನೋಡಿಲ್ಲ. ಆದರೂ ನಾವು ಒಬ್ಬರನ್ನೊಬ್ಬರು ಪ್ರೀತಿಸಿದರೆ ದೇವರು ನಮ್ಮಲ್ಲಿ ನೆಲೆಸಿರುತ್ತಾರೆ. ಅವರ ಪ್ರೀತಿ ನಮ್ಮಲ್ಲಿ ಸಿದ್ಧಿಗೆ ಬರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ದೇವರನ್ನು ಯಾರೂ ಎಂದೂ ನೋಡಿಲ್ಲ. ನಾವು ಒಬ್ಬರನ್ನೊಬ್ಬರು ಪ್ರೀತಿಸಿದರೆ ದೇವರು ನಮ್ಮಲ್ಲಿ ನೆಲೆಗೊಂಡಿದ್ದಾನೆ, ಮತ್ತು ಆತನ ಪ್ರೀತಿಯು ನಮ್ಮಲ್ಲಿ ಪರಿಪೂರ್ಣಗೊಂಡಿರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ದೇವರನ್ನು ಯಾರೂ ಎಂದೂ ನೋಡಿಲ್ಲ; ನಾವು ಒಬ್ಬರನ್ನೊಬ್ಬರು ಪ್ರೀತಿಸಿದರೆ ದೇವರು ನಮ್ಮಲ್ಲಿ ನೆಲೆಗೊಂಡಿದ್ದಾನೆ, ಮತ್ತು ಆತನಿಂದಾಗುವ ಪ್ರೀತಿಯು ನಮ್ಮಲ್ಲಿ ಸಿದ್ಧಿಗೆ ಬರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ದೇವರನ್ನು ಯಾರೂ ಎಂದೂ ನೋಡಿಲ್ಲ. ಆದರೆ ನಾವು ಒಬ್ಬರನ್ನೊಬ್ಬರು ಪ್ರೀತಿಸಿದರೆ, ದೇವರು ನಮ್ಮಲ್ಲಿ ನೆಲೆಸಿರುತ್ತಾನೆ. ನಾವು ಒಬ್ಬರನ್ನೊಬ್ಬರು ಪ್ರೀತಿಸಿದರೆ, ದೇವರ ಪ್ರೀತಿಯು ನಮ್ಮಲ್ಲಿ ಪರಿಪೂರ್ಣವಾದ ಮಟ್ಟವನ್ನು ತಲುಪುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ದೇವರನ್ನು ಯಾರೂ ಎಂದೂ ನೋಡಿಲ್ಲ, ನಾವು ಒಬ್ಬರನ್ನೊಬ್ಬರು ಪ್ರೀತಿಸಿದರೆ, ದೇವರು ನಮ್ಮಲ್ಲಿ ನೆಲೆಗೊಂಡಿದ್ದಾರೆ ಮತ್ತು ಅವರ ಪ್ರೀತಿಯು ನಮ್ಮಲ್ಲಿ ಸಿದ್ಧಿಗೆ ಬರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

12 ಕೊನ್ ಬಿ ಕನ್ನಾಬಿ ದೆವಾಕ್ ಬಗುಕ್ನಾತ್, ಅಮಿ ಎಕಾಮೆಕಾಚೊ ಪ್ರೆಮ್ ಕರ್ಲ್ಯಾರ್ ದೆವ್ ಅಮ್ಚ್ಯಾ ವಾಂಗ್ಡಾ ರ್‍ಹಾತಾ.ಅನಿ ತೆಚೊ ಪ್ರೆಮ್ ಅಮ್ಚ್ಯಾಕ್ಡೆ ಪುರಾ ಹೊತಾ. .

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಯೋಹಾನನು 4:12
14 ತಿಳಿವುಗಳ ಹೋಲಿಕೆ  

ಯಾರೂ ಎಂದೂ ದೇವರನ್ನು ಕಂಡಿಲ್ಲ; ಪಿತನ ವಕ್ಷಸ್ಥಲದಲ್ಲಿರುವ, ಸ್ವತಃ ದೇವರಾಗಿರುವ ಏಕೈಕ ಪುತ್ರನೇ ಅವರನ್ನು ತಿಳಿಯಪಡಿಸಿದ್ದಾರೆ.


ಆದರೆ ದೇವರ ವಾಕ್ಯವನ್ನು ಕೈಗೊಂಡು ನಡೆಯುವವನಲ್ಲಿ ಪ್ರೀತಿ ನಿಜಕ್ಕೂ ಸಿದ್ಧಿಗೆ ಬಂದಿರುತ್ತದೆ.


ತಾನು ದೇವರನ್ನು ಪ್ರೀತಿಸುತ್ತೇನೆಂದು ಒಬ್ಬನು ಹೇಳುತ್ತಾ ತನ್ನ ಸಹೋದರನನ್ನು ದ್ವೇಷಿಸಿದರೆ, ಅವನು ಸುಳ್ಳುಗಾರನಾಗುತ್ತಾನೆ. ತಾನು ಕಂಡಿರುವ ತನ್ನ ಸಹೋದರನನ್ನು ಪ್ರೀತಿಸದವನು ತಾನು ಕಾಣದಿರುವ ದೇವರನ್ನು ಹೇಗೆ ಪ್ರೀತಿಸಿಯಾನು?


ದೇವರ ಆಜ್ಞೆಯನ್ನು ಪಾಲಿಸುವವನು ಅವರಲ್ಲಿ ನೆಲೆಸಿರುತ್ತಾನೆ. ದೇವರೂ ಅವನಲ್ಲಿ ನೆಲೆಸಿರುತ್ತಾರೆ. ದೇವರು ನಮ್ಮಲ್ಲಿ ನೆಲೆಸಿದ್ದಾರೆಂದು ಅವರು ದಯಪಾಲಿಸುವ ಪವಿತ್ರಾತ್ಮರಿಂದಲೇ ತಿಳಿದುಕೊಳ್ಳುತ್ತೇವೆ.


ಮತ್ತೆ ಅವರು, “ಆದರೆ ನೀನು ನನ್ನ ಮುಖವನ್ನು ನೋಡಲಾಗದು. ಏಕೆಂದರೆ ನನ್ನನ್ನು ನೋಡಿದ ಮಾನವ ಜೀವಂತನಾಗಿ ಉಳಿಯಲಾರ,” ಎಂದು ಹೇಳೀದರು.


ನಾವಾದರೋ ದೇವರಿಗೆ ಸೇರಿದವರು. ದೇವರನ್ನು ಅರಿತವನು ನಮಗೆ ಕಿವಿಗೊಡುತ್ತಾನೆ. ದೇವರಿಗೆ ಸೇರದವನು ನಮಗೆ ಕಿವಿಗೊಡುವುದಿಲ್ಲ. ಇದರಿಂದಲೇ ಸತ್ಯವನ್ನು ಸಾರುವ ಆತ್ಮ ಯಾವುದು ಮತ್ತು ಅಸತ್ಯವನ್ನು ಸಾರುವ ಆತ್ಮ ಯಾವುದು ಎಂಬುದು ನಮಗೆ ತಿಳಿಯುತ್ತದೆ.


ಸರ್ವಯುಗಗಳ ಅರಸರೂ ಅಮರರೂ ಅಗೋಚರರೂ ಆಗಿರುವ ಏಕೈಕ ದೇವರಿಗೆ ಯುಗಯುಗಾಂತರಕ್ಕೆ ಗೌರವವೂ ಮಹಿಮೆಯೂ ಸಲ್ಲಲಿ! ಆಮೆನ್.


ನಾನವನ ಸಂಗಡ ಮಾತಾಡುವುದು ನಿಗೂಢವಾಗಿ ಅಲ್ಲ, ಮುಖಾಮುಖಿಯಾಗಿ, ಸ್ಪಷ್ಟವಾಗಿ, ಒಗಟಾಗಿಯಲ್ಲ ಸರ್ವೇಶ್ವರನ ಸ್ವರೂಪವನ್ನೆ ಕಂಡವನಾತ! ಇಂತಿರಲು ನನ್ನ ದಾಸ ಮೋಶೆಗೆ ವಿರುದ್ಧ ಮಾತನಾಡಲು ನೀವೇಕೆ ಭಯಪಡಲಿಲ್ಲಾ? ಎಂದು ಹೇಳಿ ಕೋಪದಿಂದ ಹೊರಟುಹೋದರು.


ಯಕೋಬನು, “ನಾನು ದೇವರನ್ನು ಮುಖಾಮುಖಿಯಾಗಿ ಕಂಡಿದ್ದರೂ ಪ್ರಾಣಸಹಿತ ಉಳಿದಿದ್ದೇನಲ್ಲಾ!” ಎಂದುಕೊಂಡು ಆ ಸ್ಥಳಕ್ಕೆ ‘ಪೆನೀಯೇಲ್’ ಎಂದು ಹೆಸರಿಟ್ಟನು.


ವಿಶ್ವಾಸವಿದ್ದುದರಿಂದಲೇ ಆತನು ಅರಸನ ಕಡುಕೋಪಕ್ಕೂ ಅಂಜದೆ ಈಜಿಪ್ಟ್ ದೇಶವನ್ನು ಬಿಟ್ಟುಬಂದನು. ಕಣ್ಣಿಗೆ ಕಾಣದ ದೇವರನ್ನು ಕಣ್ಣಾರೆ ಕಾಣುತ್ತಿರುವನೋ ಎನ್ನುವಷ್ಟು ದೃಢಚಿತ್ತನಾಗಿ ಅವನು ಮುನ್ನಡೆದನು.


ನಿಲ್ಲುವುವು ನಂಬಿಕೆ, ನಿರೀಕ್ಷೆ, ಪ್ರೀತಿ ನೆಲೆಯಾಗಿ; ಈ ಮೂರಲಿ ಪ್ರೀತಿಯೇ ಪರಮೋನ್ನತವೆಂಬುದ ನೀನರಿ.


ಹೀಗೆ ದೇವರು ನಮ್ಮಲ್ಲಿಟ್ಟಿರುವ ಪ್ರೀತಿ ನಮಗೆ ಗೊತ್ತಿದೆ. ಅದರಲ್ಲಿ ನಮಗೆ ವಿಶ್ವಾಸವಿದೆ. ದೇವರು ಪ್ರೀತಿಸ್ವರೂಪಿ. ಪ್ರೀತಿಯಲ್ಲಿ ನೆಲೆಸಿರುವವನು ದೇವರಲ್ಲಿ ನೆಲೆಸಿದ್ದಾನೆ. ದೇವರೂ ಅವನಲ್ಲಿ ನೆಲೆಸಿರುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು