Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಯೋಹಾನನು 4:14 - ಕನ್ನಡ ಸತ್ಯವೇದವು C.L. Bible (BSI)

14 ಪಿತನು ತಮ್ಮ ಪುತ್ರನನ್ನು ಲೋಕೋದ್ಧಾರಕನನ್ನಾಗಿ ಕಳುಹಿಸಿಕೊಟ್ಟದ್ದನ್ನು ನಾವು ಕಣ್ಣಾರೆ ಕಂಡಿದ್ದೇವೆ. ಇದರ ವಿಷಯವಾಗಿ ಸಾಕ್ಷಿ ಹೇಳುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ತಂದೆಯು ತನ್ನ ಮಗನನ್ನು ಲೋಕರಕ್ಷಕನನ್ನಾಗಿ ಕಳುಹಿಸಿಕೊಟ್ಟಿರುವುದನ್ನು ನಾವು ತಿಳಿದಿದ್ದೇವೆ ಮತ್ತು ಅದರ ವಿಷಯದಲ್ಲಿ ನಾವು ಸಾಕ್ಷಿ ಹೇಳುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ತಂದೆಯು ತನ್ನ ಮಗನನ್ನು ಲೋಕರಕ್ಷಕನನ್ನಾಗಿ ಕಳುಹಿಸಿಕೊಟ್ಟಿರುವದನ್ನು ನಾವು ನೋಡಿದ್ದೇವೆ, ಅದರ ವಿಷಯದಲ್ಲಿ ಸಾಕ್ಷಿಹೇಳುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ದೇವರು ತನ್ನ ಮಗನನ್ನು ಲೋಕರಕ್ಷಕನನ್ನಾಗಿ ಕಳುಹಿಸಿದ್ದನ್ನು ನಾವು ನೋಡಿದ್ದೇವೆ. ನಾವು ಈಗ ಜನರಿಗೆ ಹೇಳುತ್ತಿರುವುದು ಅದನ್ನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ತಂದೆಯು ಮಗನನ್ನು ಲೋಕ ರಕ್ಷಕರನ್ನಾಗಿ ಕಳುಹಿಸಿಕೊಟ್ಟಿರುವುದನ್ನು ನಾವು ನೋಡಿದ್ದೇವೆ ಮತ್ತು ಅದಕ್ಕೆ ನಾವು ಸಾಕ್ಷಿ ಹೇಳುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 ಬಾಬಾನ್ ಅಪ್ಲ್ಯಾ ಲೆಕಾಕ್ ಜಗಾಚೊ ರಾಕನ್ದಾರ್ ಹೊವ್ನ್ ಧಾಡುನ್ ದಿಲ್ಲೆ ಅಮಿ ಕಳ್ವುನ್ ಘೆಟ್ಲ್ಯಾಂವ್ ಅನಿ ತೆಚ್ಯಾ ವಿಶಯಾತ್ ಅಮಿ ಸಾಕ್ಷಿ ಸಾಂಗ್ತಾಂವ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಯೋಹಾನನು 4:14
18 ತಿಳಿವುಗಳ ಹೋಲಿಕೆ  

ನಾವು ದೇವರನ್ನು ಪ್ರೀತಿಸಿದ್ದರಲ್ಲಿ ಅಲ್ಲ, ಅವರು ನಮ್ಮನ್ನು ಪ್ರೀತಿಸಿ ನಮ್ಮ ಪಾಪನಿವಾರಣಾರ್ಥವಾಗಿ ತಮ್ಮ ಪುತ್ರನನ್ನು ಕಳುಹಿಸಿದ್ದರಲ್ಲಿಯೇ ಪ್ರೀತಿಯ ನಿಜಗುಣ ತೋರಿಬರುತ್ತದೆ.


ಆಗ ಅವರು, ಆ ಮಹಿಳೆಗೆ, “ನೀನು ಹೇಳಿದುದರಿಂದ ಮಾತ್ರವೇ ಈಗ ನಾವು ನಂಬುತ್ತಿಲ್ಲ, ನಾವೇ ಕಿವಿಯಾರೆ ಕೇಳಿ ನಂಬಿದ್ದೇವೆ; ಲೋಕೋದ್ಧಾರಕ ಇವರೇ ಎಂದು ನಮಗೀಗ ತಿಳಿಯಿತು,” ಎಂದರು.


ಆ ದಿವ್ಯವಾಣಿ ಮನುಷ್ಯ ಆದರು. ಮನುಷ್ಯನಾಗಿ ನಮ್ಮೊಡನೆ ವಾಸಮಾಡಿದರು. ಅವರ ಮಹಿಮೆಯನ್ನು ನಾವು ನೋಡಿದೆವು, ಪಿತನಿಂದ ಪಡೆದ ಆ ಮಹಿಮೆ ಏಕೈಕ ಪುತ್ರನಿಗೆ ಮೀಸಲಾದ ಮಹಿಮೆಯೇ. ಎಂದೇ ಅವರು ವರಪ್ರಸಾದದಿಂದಲೂ ಸತ್ಯದಿಂದಲೂ ಪರಿಪೂರ್ಣರಾಗಿದ್ದರು.


ಮರುದಿನ ಯೊವಾನ್ನನು, ತಾನಿದ್ದಲ್ಲಿಗೇ ಯೇಸು ಬರುತ್ತಿರುವುದನ್ನು ಕಂಡು, “ಇಗೋ ನೋಡಿ, ಬಲಿಯರ್ಪಣೆಗಾಗಿ ದೇವರು ನೇಮಿಸಿರುವ ಕುರಿಮರಿ; ಲೋಕದ ಪಾಪಗಳನ್ನು ಪರಿಹರಿಸುವವರು ಇವರೇ.


ಮನುಷ್ಯರು ಕೊಡುವ ಸಾಕ್ಷ್ಯವನ್ನು ನಾವು ಅಂಗೀಕರಿಸುತ್ತೇವೆ. ದೇವರು ನೀಡುವ ಸಾಕ್ಷ್ಯ ಅದಕ್ಕಿಂತಲೂ ಶ್ರೇಷ್ಠವಾದುದು. ದೇವರ ಈ ಸಾಕ್ಷ್ಯ ಅವರ ಪುತ್ರನನ್ನು ಕುರಿತದ್ದಾಗಿದೆ.


ನನ್ನ ಈ ಪುಟ್ಟ ಪತ್ರವನ್ನು ನಂಬಿಕಸ್ಥ ಸಹೋದರನಾದ ಸಿಲ್ವಾನನ ಸಹಾಯದಿಂದ ನಿಮಗೆ ಬರೆದಿರುತ್ತೇನೆ. ನಿಮ್ಮನ್ನು ಪ್ರೋತ್ಸಾಹಿಸಲೆಂದು ಮತ್ತು ಇದುವೇ ದೇವರ ನಿಜವಾದ ಅನುಗ್ರಹವೆಂದು ಸ್ಪಷ್ಟೀಕರಿಸಲು ಬರೆದಿದ್ದೇನೆ. ಈ ಅನುಗ್ರಹದಲ್ಲಿ ನೀವು ದೃಢವಾಗಿ ನಿಲ್ಲಿರಿ.


ಯಾವನಾದರೂ ನನ್ನ ಮಾತನ್ನು ಕೇಳಿಯೂ ಅದರಂತೆ ನಡೆಯದೆಹೋದರೆ ಅಂಥವನಿಗೆ ತೀರ್ಪುಕೊಡುವವನು ನಾನಲ್ಲ. ನಾನು ಬಂದುದು ಲೋಕದ ಉದ್ಧಾರಕ್ಕಾಗಿ, ತೀರ್ಪುಕೊಡುವುದಕ್ಕಾಗಿ ಅಲ್ಲ.


ಪವಿತ್ರಗ್ರಂಥದಿಂದಲೇ ನಿತ್ಯಜೀವ ಲಭಿಸುವುದೆಂದು ಭಾವಿಸಿ, ನೀವು ಅದನ್ನು ಪರಿಶೀಲಿಸಿ ನೋಡುತ್ತೀರಿ. ಆ ಗ್ರಂಥವು ಸಹ ನನ್ನ ಪರವಾಗಿ ಸಾಕ್ಷಿಹೇಳುತ್ತದೆ.


ದೇವರು ಕಳುಹಿಸಿದಾತನು ದೇವರ ಮಾತುಗಳನ್ನೇ ಆಡುತ್ತಾನೆ. ಏಕೆಂದರೆ ದೇವರು ಆತನಿಗೆ ಪವಿತ್ರಾತ್ಮ ಅವರನ್ನು ಪೂರ್ಣವಾಗಿ ಕೊಟ್ಟಿರುತ್ತಾರೆ.


ಸೀಲ ಮತ್ತು ತಿಮೊಥೇಯ ಮಕೆದೋನಿಯದಿಂದ ಬಂದ ಮೇಲೆ ಪೌಲನು ಶುಭಸಂದೇಶವನ್ನು ಸಾರುವುದರಲ್ಲೂ ಯೇಸುವೇ ಬರಬೇಕಾದ ಲೋಕೋದ್ಧಾರಕ ಎಂದು ಯೆಹೂದ್ಯರಿಗೆ ರುಜುವಾತುಪಡಿಸುವುದರಲ್ಲೂ ತನ್ನ ಸಮಯವನ್ನು ಕಳೆದನು.


ಇಂತಿರುವಲ್ಲಿ, ಪಿತನೇ ಪ್ರತಿಷ್ಠಿಸಿ ಕಳುಹಿಸಿಕೊಟ್ಟವನಾದ ನಾನು, ‘ದೇವರ ಪುತ್ರನಾಗಿದ್ದೇನೆ’ ಎಂದು ಹೇಳಿಕೊಂಡಿದ್ದಕ್ಕೆ, ‘ಇವನು ದೇವದೂಷಣೆ ಮಾಡಿದ್ದಾನೆ’ ಎನ್ನುತ್ತೀರಲ್ಲಾ?


ಆತನು ತಾನು ಕಂಡದ್ದನ್ನೂ ಕೇಳಿದ್ದನ್ನೂ ಕುರಿತೇ ಸಾಕ್ಷಿ ಹೇಳುತ್ತಾನೆ. ಆದರೂ ಆತನ ಮಾತನ್ನು ಯಾರೂ ಅಂಗೀಕರಿಸುವುದಿಲ್ಲ.


ನಾನು ನಿನಗೆ ಸತ್ಯವಾಗಿ ಹೇಳುತ್ತೇನೆ ಕೇಳು: ನಮಗೆ ತಿಳಿದುದನ್ನೇ ಕುರಿತು ನಾವು ಮಾತನಾಡುತ್ತೇವೆ, ನಾವು ಕಂಡದ್ದನ್ನು ಕುರಿತು ಸಾಕ್ಷಿ ನೀಡುತ್ತೇವೆ. ಆದರೂ ನಮ್ಮ ಸಾಕ್ಷ್ಯವನ್ನು ನೀವು ಒಪ್ಪಿಕೊಳ್ಳಲು ಸಿದ್ಧರಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು