Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಯೋಹಾನನು 4:16 - ಕನ್ನಡ ಸತ್ಯವೇದವು C.L. Bible (BSI)

16 ಹೀಗೆ ದೇವರು ನಮ್ಮಲ್ಲಿಟ್ಟಿರುವ ಪ್ರೀತಿ ನಮಗೆ ಗೊತ್ತಿದೆ. ಅದರಲ್ಲಿ ನಮಗೆ ವಿಶ್ವಾಸವಿದೆ. ದೇವರು ಪ್ರೀತಿಸ್ವರೂಪಿ. ಪ್ರೀತಿಯಲ್ಲಿ ನೆಲೆಸಿರುವವನು ದೇವರಲ್ಲಿ ನೆಲೆಸಿದ್ದಾನೆ. ದೇವರೂ ಅವನಲ್ಲಿ ನೆಲೆಸಿರುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಹೀಗೆ ದೇವರು ನಮ್ಮಲ್ಲಿಟ್ಟಿರುವ ಪ್ರೀತಿಯನ್ನು ನಾವು ತಿಳಿದುಕೊಂಡಿದ್ದೇವೆ. ಅದನ್ನು ನಂಬಿದ್ದೇವೆ. ದೇವರು ಪ್ರೀತಿಸ್ವರೂಪಿ, ಪ್ರೀತಿಯಲ್ಲಿ ನೆಲೆಗೊಂಡಿರುವವನು ದೇವರಲ್ಲಿ ನೆಲೆಗೊಂಡಿದ್ದಾನೆ. ದೇವರು ಅವನಲ್ಲಿ ನೆಲೆಗೊಂಡಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ದೇವರು ನಮ್ಮಲ್ಲಿಟ್ಟಿರುವ ಪ್ರೀತಿಯನ್ನು ನಾವು ತಿಳಿದುಕೊಂಡಿದ್ದೇವೆ ಅದನ್ನು ನಂಬಿದ್ದೇವೆ. ದೇವರು ಪ್ರೀತಿಸ್ವರೂಪಿ; ಪ್ರೀತಿಯಲ್ಲಿ ನೆಲೆಗೊಂಡಿರುವವನು ದೇವರಲ್ಲಿ ನೆಲೆಗೊಂಡಿದ್ದಾನೆ, ದೇವರು ಅವನಲ್ಲಿ ನೆಲೆಗೊಂಡಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಹೀಗಿರಲಾಗಿ ನಮ್ಮ ಮೇಲೆ ದೇವರಿಗಿರುವ ಪ್ರೀತಿಯನ್ನು ನಾವು ತಿಳಿದುಕೊಂಡಿದ್ದೇವೆ. ನಾವು ಆ ಪ್ರೀತಿಯಲ್ಲಿ ಭರವಸವಿಟ್ಟಿದ್ದೇವೆ. ದೇವರು ಪ್ರೀತಿಸ್ವರೂಪಿ. ಪ್ರೀತಿಯಲ್ಲಿ ನೆಲೆಸಿರುವವನು ದೇವರಲ್ಲಿ ನೆಲೆಸಿದ್ದಾನೆ. ದೇವರೂ ಅವನಲ್ಲಿ ನೆಲೆಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ದೇವರು ನಮ್ಮನ್ನು ಪ್ರೀತಿಸುತ್ತಾರೆಂದು ನಾವು ತಿಳಿದುಕೊಂಡಿದ್ದೇವೆ ಮತ್ತು ಅದನ್ನು ನಂಬಿದ್ದೇವೆ. ದೇವರು ಪ್ರೀತಿಯಾಗಿದ್ದಾರೆ, ಪ್ರೀತಿಯಲ್ಲಿ ಬಾಳುವವರು ದೇವರಲ್ಲಿ ಬಾಳುವವರಾಗಿದ್ದಾರೆ, ದೇವರು ಅವರಲ್ಲಿ ಬಾಳುವವರಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

16 ಅಸೆ ದೆವಾನ್ ಅಮ್ಚ್ಯಾ ವೈರ್ ಥವಲ್ಲೊ ಪ್ರೆಮ್ ಅಮಿ ಕಳ್ವುನ್ ಘೆತಾಂವ್, ದೆವ್ ಪ್ರೆಮಾನ್ ಭರಲ್ಲೊ, ಜೆ ಕೊನ್ ಪ್ರೆಮಾನ್ ರ್‍ಹಾತಾ, ತೆಚ್ಯಾ ವಾಂಗ್ಡಾ ದೆವ್ ರ್‍ಹಾತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಯೋಹಾನನು 4:16
13 ತಿಳಿವುಗಳ ಹೋಲಿಕೆ  

ದೇವರ ಆಜ್ಞೆಯನ್ನು ಪಾಲಿಸುವವನು ಅವರಲ್ಲಿ ನೆಲೆಸಿರುತ್ತಾನೆ. ದೇವರೂ ಅವನಲ್ಲಿ ನೆಲೆಸಿರುತ್ತಾರೆ. ದೇವರು ನಮ್ಮಲ್ಲಿ ನೆಲೆಸಿದ್ದಾರೆಂದು ಅವರು ದಯಪಾಲಿಸುವ ಪವಿತ್ರಾತ್ಮರಿಂದಲೇ ತಿಳಿದುಕೊಳ್ಳುತ್ತೇವೆ.


ನಾವು ದೇವರ ಮಕ್ಕಳು ಎನಿಸಿಕೊಂಡಿರಬೇಕಾದರೆ ಪಿತನು ನಮ್ಮನ್ನು ಎಷ್ಟಾಗಿ ಪ್ರೀತಿಸುತ್ತಾರೆಂಬುದನ್ನು ಗಮನಿಸಿರಿ. ನಿಜಕ್ಕೂ ನಾವು ದೇವರ ಮಕ್ಕಳೇ. ಲೋಕವು ಅವರನ್ನು ಅರಿತುಕೊಳ್ಳಲಿಲ್ಲವಾದ ಕಾರಣ ನಾವು ಎಂಥವರೆಂದು ಅದು ಅರಿತಿಲ್ಲ.


ಕ್ರಿಸ್ತಯೇಸು ನಮಗೋಸ್ಕರ ತಮ್ಮ ಪ್ರಾಣವನ್ನೇ ತೆತ್ತರು. ಇದರಿಂದ ಪ್ರೀತಿ ಎಂತಹುದೆಂದು ನಾವು ಅರಿತುಕೊಂಡೆವು. ನಾವೂ ಕೂಡ ಸಹೋದರರಿಗಾಗಿ ಪ್ರಾಣಾರ್ಪಣೆ ಮಾಡಲು ಬದ್ಧರಾಗಿದ್ದೇವೆ.


ಪವಿತ್ರಗ್ರಂಥದಲ್ಲಿ ಹೇಳಿರುವಂತೆ : “ಕಣ್ಣಾವುದೂ ಕಂಡಿಲ್ಲ, ಕಿವಿಯಾವುದೂ ಕೇಳಿಲ್ಲ. ಮನುಜಕಲ್ಪನೆಗೂ ಎಟುಕಲಿಲ್ಲ. ಅಂಥ ಅತಿಶಯಗಳನ್ನು ಸಜ್ಜುಗೊಳಿಸಿರುವನು, ತನ್ನನೊಲಿದವರಿಗೆ ಪರಮದೇವನು.”


ನಿನಗಂಜಿ ನಡೆವರಿಗೆ ನೀ ಕಟ್ಟಿಟ್ಟಿರುವ ಬುತ್ತಿ ಅದೆಷ್ಟು ಅಗಾಧ I ನಿನ್ನ ನಂಬಿದವರಿಗೆ ಬಟ್ಟ ಬಯಲಾಗಿ ನೀಡುವ ನೆರವದೆಷ್ಟು ಅಪಾರ II


ತಾವೇ ದೇವರಿಂದ ಬಂದ ಪರಮಪೂಜ್ಯರು. ಹೌದು, ಇದೇ ನಮ್ಮ ವಿಶ್ವಾಸ ಮತ್ತು ಗ್ರಹಿಕೆ,” ಎಂದು ಹೇಳಿದನು.


ತಮ್ಮನ್ನು ಕಾದು ಎದುರುನೋಡುವವರ ಪರವಾಗಿ ಕಾರ್ಯಗತರಾಗುವಂಥ ದೇವರು, ನಿಮ್ಮನ್ನು ಬಿಟ್ಟರೆ, ಯಾರಿದ್ದಾರೆ? ಅಂಥಾ ದೇವರನ್ನು ಲೋಕಾದಿಯಿಂದ ಯಾರೂ ಕಂಡಿಲ್ಲ, ಅಂಥವರು ಯಾರ ಕಿವಿಗೂ ಬೀಳಲಿಲ್ಲ, ಯಾವ ಕಣ್ಣಿಗೂ ಕಾಣಿಸಲಿಲ್ಲ.


ಅದಕ್ಕೆ ಉತ್ತರವಾಗಿ ಯೇಸು, “ಇವನ ಪಾಪವಾಗಲಿ, ಇವನನ್ನು ಹೆತ್ತವರ ಪಾಪವಾಗಲಿ ಇದಕ್ಕೆ ಕಾರಣವಲ್ಲ, ದೇವರ ಕಾರ್ಯ ಇವನಲ್ಲಿ ವ್ಯಕ್ತವಾಗುವಂತೆ ಹೀಗಾಗಿದೆ.


ಪ್ರಿಯರೇ, ನಾವು ಒಬ್ಬರನ್ನೊಬ್ಬರು ಪ್ರೀತಿಸೋಣ. ಪ್ರೀತಿ ದೇವರಿಂದ ಉಗಮವಾದುದು. ಪ್ರೀತಿಸುವವನು ದೇವರ ಮಗನು. ಅವನು ದೇವರನ್ನು ಬಲ್ಲವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು