Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಯೋಹಾನನು 4:17 - ಕನ್ನಡ ಸತ್ಯವೇದವು C.L. Bible (BSI)

17 ಇದರಿಂದಾಗಿ, ಪ್ರೀತಿ ನಮ್ಮಲ್ಲಿ ಸಿದ್ಧಿಗೆ ಬಂದಿರುತ್ತದೆ; ನ್ಯಾಯತೀರ್ಪಿನ ದಿನದಂದು ನಾವು ಭರವಸೆಯಿಂದಿರುತ್ತೇವೆ. ಈ ಲೋಕದಲ್ಲಿ ನಮ್ಮ ಬಾಳು ಕ್ರಿಸ್ತಯೇಸುವಿನ ಬಾಳಿನಂತೆ ಇರುವುದರಿಂದಲೇ ಆ ಭರವಸೆ ನಮಗೆ ಇರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ನ್ಯಾಯತೀರ್ಪಿನ ದಿನದಲ್ಲಿ ನಾವು ಧೈರ್ಯದಿಂದಿರುವುದಕ್ಕಾಗಿ ಆತನ ಪ್ರೀತಿಯು ನಮ್ಮೊಳಗೆ ಪೂರ್ಣಗೊಂಡಿದೆ. ಈ ಲೋಕದಲ್ಲಿ ನಮ್ಮ ಬಾಳು ಕ್ರಿಸ್ತಯೇಸುವಿನ ಬಾಳಿನಂತೆ ಇರುವುದರಿಂದಲೇ ಆ ಭರವಸೆ ನಮಗೆ ಇರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ನ್ಯಾಯತೀರ್ಪಿನ ದಿನದಲ್ಲಿ ನಮಗಿರುವ ಧೈರ್ಯದಲ್ಲಿಯೇ ಆತನ ಪ್ರೀತಿಯು ನಮ್ಮೊಳಗೆ ಸಿದ್ಧಿಗೆ ಬಂತು. ಯಾಕಂದರೆ ಕ್ರಿಸ್ತನು ಎಂಥವನಾಗಿದ್ದಾನೋ ನಾವು ಅಂಥವರಾಗಿಯೇ ಈ ಲೋಕದಲ್ಲಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಹೀಗೆ ಪ್ರೀತಿಯು ನಮ್ಮಲ್ಲಿ ಪರಿಪೂರ್ಣವಾಗುವುದರಿಂದ ದೇವರು ನಮಗೆ ತೀರ್ಪು ನೀಡುವ ದಿನದಂದು ನಾವು ನಿರ್ಭಯದಿಂದಿರುತ್ತೇವೆ. ಈ ಲೋಕದಲ್ಲಿ ನಾವು ಆತನಂತೆಯೇ (ಕ್ರಿಸ್ತನು ಅಥವಾ ದೇವರು) ಇರುವುದರಿಂದ ನಾವು ಧೈರ್ಯದಿಂದಿರುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ನ್ಯಾಯತೀರ್ಪಿನ ದಿನದಲ್ಲಿ ನಮಗೆ ಧೈರ್ಯವಿರುವಂತೆ ನಮ್ಮ ಪ್ರೀತಿಯು ಸಿದ್ಧಿಗೆ ಬಂತು. ಏಕೆಂದರೆ ಯೇಸು ಎಂಥವರಾಗಿದ್ದಾರೋ ನಾವು ಅಂಥವರಾಗಿಯೇ ಈ ಲೋಕದಲ್ಲಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

17 ಝಡ್ತಿಚ್ಯಾ ದಿಸಾತ್ನಿ ಅಮಿ ಧರ್ಯಾನ್ ಜಾವ್ಕ್ ತೆಚೊ ಪ್ರೆಮ್ ಅಮ್ಚ್ಯಾ ಭುತ್ತುರ್ ಪುರಾ ಹೊಲಾ. ಹ್ಯಾ ಜಗಾತ್ ಅಮ್ಚೆ ಜಿವನ್ ಜೆಜು ಕ್ರಿಸ್ತಾಚ್ಯಾ ಜಿವನಾ ಸಾರ್ಕೆ ರ್‍ಹಾಯ್ ಸಗೊಳ್ ಅಮ್ಕಾ ಹ್ಯೊ ಬರೊಸೊ ಘಾವ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಯೋಹಾನನು 4:17
25 ತಿಳಿವುಗಳ ಹೋಲಿಕೆ  

ದೇವರನ್ನು ಯಾರೂ ಎಂದೂ ನೋಡಿಲ್ಲ. ಆದರೂ ನಾವು ಒಬ್ಬರನ್ನೊಬ್ಬರು ಪ್ರೀತಿಸಿದರೆ ದೇವರು ನಮ್ಮಲ್ಲಿ ನೆಲೆಸಿರುತ್ತಾರೆ. ಅವರ ಪ್ರೀತಿ ನಮ್ಮಲ್ಲಿ ಸಿದ್ಧಿಗೆ ಬರುತ್ತದೆ.


ಹೌದು ಪ್ರಿಯ ಮಕ್ಕಳೇ, ಕ್ರಿಸ್ತಯೇಸು ಪ್ರತ್ಯಕ್ಷರಾಗುವಾಗ, ಅವರ ಪುನರಾಗಮನದ ಪ್ರಯುಕ್ತ ಅವರ ಮುಂದೆ ನಾವು ನಾಚಿಕೆಪಡದೆ ಧೈರ್ಯದಿಂದಿರುವಂತೆ ಅವರಲ್ಲಿ ನೆಲೆಗೊಂಡಿರೋಣ.


ಕ್ರಿಸ್ತಯೇಸುವಿನಲ್ಲಿ ನಂಬಿಕೆ ನಿರೀಕ್ಷೆಯನ್ನಿಟ್ಟಿರುವ ಪ್ರತಿಯೊಬ್ಬನೂ ಅವರು ಶುದ್ಧರಾಗಿರುವಂತೆಯೇ ತನ್ನನ್ನು ಶುದ್ಧವಾಗಿಟ್ಟುಕೊಳ್ಳುತ್ತಾನೆ.


ಆದರೆ ದೇವರ ವಾಕ್ಯವನ್ನು ಕೈಗೊಂಡು ನಡೆಯುವವನಲ್ಲಿ ಪ್ರೀತಿ ನಿಜಕ್ಕೂ ಸಿದ್ಧಿಗೆ ಬಂದಿರುತ್ತದೆ.


ದೇವರು ಯಾರನ್ನು ತಮ್ಮವರೆಂದು ಮೊದಲೇ ಆರಿಸಿಕೊಂಡರೋಅವರನ್ನು ತಮ್ಮ ಪುತ್ರನ ಅನುರೂಪಿಗಳಾಗುವಂತೆ ಆಗಲೇ ನೇಮಿಸಿದರು. ಹೀಗೆ ಅನೇಕ ಸಹೋದರರಲ್ಲಿ ತಮ್ಮ ಪುತ್ರನೇ ಜೇಷ್ಠನಾಗಿರಬೇಕೆಂಬುದು ದೇವರ ನಿರ್ಧಾರವಾಗಿದೆ.


ಧಣಿಗಿಂತಲೂ ದಾಸನು ದೊಡ್ಡವನಲ್ಲವೆಂದು ನಾನು ನಿಮಗೆ ಹೇಳಿದ್ದನ್ನು ನೆನಪಿಗೆ ತಂದುಕೊಳ್ಳಿ. ಅವರು ನನ್ನನ್ನು ಹಿಂಸೆಗೆ ಗುರಿಮಾಡಿದಂತೆ ನಿಮ್ಮನ್ನೂ ಹಿಂಸೆಗೆ ಗುರಿಮಾಡುವರು. ನನ್ನ ಬೋಧನೆಯ ಮಾತನ್ನು ಅವರು ಅನುಸರಿಸಿ ನಡೆದರೆ ನಿಮ್ಮ ಬೋಧನೆಯ ಮಾತನ್ನು ಅನುಸರಿಸಿ ನಡೆಯುವರು.


ನಾವು ದೇವರ ಮಕ್ಕಳು ಎನಿಸಿಕೊಂಡಿರಬೇಕಾದರೆ ಪಿತನು ನಮ್ಮನ್ನು ಎಷ್ಟಾಗಿ ಪ್ರೀತಿಸುತ್ತಾರೆಂಬುದನ್ನು ಗಮನಿಸಿರಿ. ನಿಜಕ್ಕೂ ನಾವು ದೇವರ ಮಕ್ಕಳೇ. ಲೋಕವು ಅವರನ್ನು ಅರಿತುಕೊಳ್ಳಲಿಲ್ಲವಾದ ಕಾರಣ ನಾವು ಎಂಥವರೆಂದು ಅದು ಅರಿತಿಲ್ಲ.


ಈಗಿರುವ ಭೂಮ್ಯಾಕಾಶಗಳನ್ನು ಅದೇ ವಾಕ್ಯದ ಬಲದಿಂದ ಅಗ್ನಿನಾಶಕ್ಕಾಗಿ ಕಾದಿರಿಸಲಾಗಿದೆ. ದುರ್ಜನರು ವಿನಾಶವಾಗಬೇಕಾದ ನ್ಯಾಯತೀರ್ಪಿನ ದಿನದವರೆಗೂ ಇವನ್ನು ಉಳಿಸಲಾಗಿದೆ.


ಹೀಗೆ, ಸಜ್ಜನರನ್ನು ಸಂಕಟಶೋಧನೆಗಳಿಂದ ಸಂರಕ್ಷಿಸಲು, ದುರ್ಜನರನ್ನು ಅಂತಿಮ ನ್ಯಾಯತೀರ್ಪಿನ ದಿನದವರೆಗೂ ಶಿಕ್ಷಾವಸ್ಥೆಯಲ್ಲಿರಿಸಲು ಪ್ರಭುವಿಗೆ ತಿಳಿದಿದೆ.


ಆತನ ಸತ್ಕ್ರಿಯೆಗಳಿಂದಲೇ ವಿಶ್ವಾಸವು ಸಿದ್ಧಿಗೆ ಬಂದಿತು ಎಂಬುದನ್ನು ನಾವು ನೋಡುತ್ತೇವೆ.


ಜನರು ತಾವಾಡುವ ಪ್ರತಿಯೊಂದು ಜೊಳ್ಳುಮಾತಿಗೂ ತೀರ್ಪಿನ ದಿನ ಲೆಕ್ಕಕೊಡಬೇಕಾಗುವುದು ಎಂಬುದು ನಿಮಗೆ ತಿಳಿದಿರಲಿ.


ಆದುದರಿಂದ ತೀರ್ಪಿನ ದಿನ ಸೊದೋಮಿನ ಗತಿ ನಿನಗಿಂತ ಸಹನೀಯವಾಗಿರುವುದು ಎಂಬುದು ನಿನಗೆ ತಿಳಿದಿರಲಿ,” ಎಂದರು.


ಆದುದರಿಂದ ತೀರ್ಪಿನ ದಿನ ಟೈರ್ ಮತ್ತು ಸಿದೋನಿನ ಗತಿಯು ನಿಮಗಿಂತಲೂ ಮೇಲಾಗಿರುವುದೆಂದು ಒತ್ತಿ ಹೇಳುತ್ತೇನೆ.


ಗುರುವಿನಂತೆ ಶಿಷ್ಯನೂ ದಣಿಯಂತೆ ದಾಸನೂ ಆದರೆ ಸಾಕು. ಮನೆಯ ಯಜಮಾನನನ್ನೇ ‘ಬೆಲ್ಜಬೂಲ್’ ಎಂದು ಕರೆದಿರುವಾಗ ಅವನ ಮನೆಯವರನ್ನು ಇನ್ನೆಷ್ಟು ಅವಹೇಳನ ಮಾಡಲಾರರು?”


ತೀರ್ಪಿನ ದಿನ ಆ ಊರಿನ ಗತಿ ಸೊದೋಮ್ ಮತ್ತು ಗೊಮೋರ ಊರುಗಳ ಗತಿಗಿಂತ ಕಠಿಣವಾಗಿರುವುದೆಂದು ನಾನು ನಿಮಗೆ ಒತ್ತಿ ಹೇಳುತ್ತೇನೆ.


ದಯೆತೋರದವನಿಗೆ, ದಯೆದಾಕ್ಷಿಣ್ಯವಿಲ್ಲದ ನ್ಯಾಯತೀರ್ಪು ಕಾದಿರುತ್ತದೆ. ನ್ಯಾಯಕ್ಕೂ ಮಿಗಿಲಾಗಿ ವಿಜೃಂಭಿಸುವುದು ದಯೆಯೇ.


ನಾವು ಒಂದಾಗಿರುವಂತೆ ಇವರೂ ಒಂದಾಗಿರಲೆಂದು ನೀವು ನನಗಿತ್ತ ಮಹಿಮೆಯನ್ನು ನಾನು ಇವರಿಗೆ ಕೊಟ್ಟಿದ್ದೇನೆ.


ಪ್ರತಿಯೊಬ್ಬ ಮಾನವನು ಸಾಯುವುದು ಒಂದೇ ಸಾರಿ. ಅನಂತರ ಅವನು ನ್ಯಾಯತೀರ್ಪಿಗೆ ಗುರಿಯಾಗಬೇಕು.


ತಾನು ದೇವರಲ್ಲಿ ನೆಲೆಸಿದ್ದೇನೆಂದು ಹೇಳುವವನು ಕ್ರಿಸ್ತಯೇಸು ಜೀವಿಸಿದಂತೆಯೇ ಜೀವಿಸಬೇಕು. ಇದರಿಂದಲೇ ನಾವು ದೇವರಲ್ಲಿ ನೆಲೆಗೊಂಡಿದ್ದೇವೆಂದು ತಿಳಿದುಕೊಳ್ಳುತ್ತೇವೆ.


ಪ್ರಿಯಮಕ್ಕಳೇ, ನಿಮ್ಮನ್ನು ಸನ್ಮಾರ್ಗದಿಂದ ತಪ್ಪಿಸುವುದಕ್ಕೆ ಯಾರಿಗೂ ಅವಕಾಶ ಕೊಡಬೇಡಿ. ಕ್ರಿಸ್ತಯೇಸು ಸತ್ಯಸ್ವರೂಪಿಯಾಗಿರುವಂತೆಯೇ ಸತ್ಯಕ್ಕನುಸಾರ ನಡೆಯುವ ಪ್ರತಿಯೊಬ್ಬನೂ ಸತ್ಯವಂತನೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು