Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಯೋಹಾನನು 4:2 - ಕನ್ನಡ ಸತ್ಯವೇದವು C.L. Bible (BSI)

2 ದೇವರ ಆತ್ಮದಿಂದ ಬಂದ ಪ್ರೇರಣೆಯನ್ನು ನೀವು ಹೀಗೆ ಗುರುತಿಸಬಹುದು; ಮನುಷ್ಯ ಆಗಿ ಬಂದ ಕ್ರಿಸ್ತಯೇಸುವನ್ನು ಒಪ್ಪಿಕೊಳ್ಳುವ ಆತ್ಮವು ದೇವರಿಂದ ಪ್ರೇರಿತವಾದುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ದೇವರಾತ್ಮ ಪ್ರೇರಿತವಾದ ನುಡಿಗಳು ಎಂದು ತಿಳಿದುಕೊಳ್ಳುವುದು ಹೇಗೆಂದರೆ, ಯೇಸು ಕ್ರಿಸ್ತನು ಮನುಷ್ಯ ರೂಪವನ್ನು ಧರಿಸಿಕೊಂಡು ಬಂದನು ಎಂದು ಒಪ್ಪಿಕೊಳ್ಳುವ ಆತ್ಮವು ದೇವರಿಂದ ಪ್ರೇರಿತವಾಗಿ ಬಂದದ್ದಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಪ್ರೇರಿಸುವಂಥವನು ದೇವರ ಆತ್ಮನೇ ಎಂದು ತಿಳಿದುಕೊಳ್ಳುವದಕ್ಕೆ ಲಕ್ಷಣವೇನಂದರೆ - ಮನುಷ್ಯನಾಗಿ ಬಂದ ಯೇಸು ಕ್ರಿಸ್ತನನ್ನು ಒಪ್ಪಿಕೊಳ್ಳುವ ಆತ್ಮವು ದೇವರಿಂದ ಪ್ರೇರಿತವಾದದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ದೇವರಾತ್ಮವನ್ನು ನೀವು ಇದೇ ರೀತಿ ತಿಳಿದುಕೊಳ್ಳಲು ಸಾಧ್ಯ. “ಈ ಲೋಕಕ್ಕೆ ಮನುಷ್ಯನಾಗಿ ಬಂದ ಯೇಸುವೇ ಕ್ರಿಸ್ತನೆಂದು ನಾನು ನಂಬುತ್ತೇನೆ” ಎಂದು ಹೇಳುವ ಆತ್ಮವು ದೇವರಿಂದ ಬಂದದ್ದಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ನೀವು ದೇವರಾತ್ಮನನ್ನು ಹೀಗೆ ಗುರುತಿಸಬಹುದು: ಕ್ರಿಸ್ತ ಯೇಸು ನರಮಾಂಸರಾಗಿ ಬಂದರೆಂದು ಒಪ್ಪಿಕೊಳ್ಳುವ ಪ್ರತಿಯೊಂದು ಆತ್ಮವು ದೇವರಿಂದ ಬಂದದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 ತ್ಯಾ ಆತ್ಮ್ಯಾಚಿ ಗೊಸ್ಟಿಯಾ ಕಳ್ವುನ್ ಘೆತಲೆ ಕಸೆ ಮಟ್ಲ್ಯಾರ್, ಜೆ ಕೊನ್ ಜೆಜು ಕ್ರಿಸ್ತ್ ಮಾನ್ಸಾಚೊ ರುಪ್ ಘೆವ್ನ್ ಯೆಲಾ ಮನುನ್ ಕೊನ್ ವಳಕ್ತಾ, ತೊ ದೆವಾಕ್ನಾ ಯೆಲ್ಲೊ ಆತ್ಮೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಯೋಹಾನನು 4:2
10 ತಿಳಿವುಗಳ ಹೋಲಿಕೆ  

ಇಷ್ಟುಮಾತ್ರ ನಿಮಗೆ ಸ್ಪಷ್ಟವಾಗಿ ತಿಳಿದಿರಲಿ; ಪವಿತ್ರಾತ್ಮ ಪ್ರೇರಣೆಯಿಂದ ಮಾತನಾಡುವ ಯಾವಾತನೂ, “ಯೇಸುವಿಗೆ ಧಿಕ್ಕಾರ!” ಎನ್ನಲಾರನು. ಅಂತೆಯೇ, ಪವಿತ್ರಾತ್ಮ ಪ್ರೇರಣೆಯಿಂದಲ್ಲದೆ ಯಾವಾತನೂ, “ಯೇಸುವೇ ಪ್ರಭು,” ಎಂದು ಒಪ್ಪಿಕೊಳ್ಳಲಾರನು.


ಆ ದಿವ್ಯವಾಣಿ ಮನುಷ್ಯ ಆದರು. ಮನುಷ್ಯನಾಗಿ ನಮ್ಮೊಡನೆ ವಾಸಮಾಡಿದರು. ಅವರ ಮಹಿಮೆಯನ್ನು ನಾವು ನೋಡಿದೆವು, ಪಿತನಿಂದ ಪಡೆದ ಆ ಮಹಿಮೆ ಏಕೈಕ ಪುತ್ರನಿಗೆ ಮೀಸಲಾದ ಮಹಿಮೆಯೇ. ಎಂದೇ ಅವರು ವರಪ್ರಸಾದದಿಂದಲೂ ಸತ್ಯದಿಂದಲೂ ಪರಿಪೂರ್ಣರಾಗಿದ್ದರು.


ನಿಜವಾಗಿಯೂ ನಮ್ಮ ಧರ್ಮದ ನಿಗೂಢಾರ್ಥ ಶ್ರೇಷ್ಠವಾದದ್ದು ಎಂಬುದು ನಿಸ್ಸಂದೇಹವಾದ ವಿಷಯ. “ನರಮಾನವ ರೂಪದಲಿ ಪ್ರತ್ಯಕ್ಷನಾಗಿ ದೇವರಿಗೆ ಪ್ರಿಯನೆಂದು ಪವಿತ್ರಾತ್ಮನಿಂದ ಪ್ರಕಟಿತನಾಗಿ ದೇವದೂತರಿಗೆ ಪ್ರದರ್ಶಿತವಾಗಿ ಅನ್ಯಜನರಿಗೆ ಪ್ರಬೋಧಿತನಾಗಿ ಜಗದಲ್ಲೆಲ್ಲೂ ವಿಶ್ವಾಸಪಡೆದವನಾಗಿ ಸ್ವರ್ಗಕ್ಕೇರಿದಾತ ಮಹಿಮಾನ್ವಿತ ಯೇಸುಕ್ರಿಸ್ತ.


ಯೇಸುವೇ ‘ಕ್ರಿಸ್ತ’ ಎಂದು ವಿಶ್ವಾಸಿಸುವ ಪ್ರತಿಯೊಬ್ಬನೂ ದೇವರ ಮಗು. ತಂದೆಯನ್ನು ಪ್ರೀತಿಸುವವನು ಆತನ ಮಗುವನ್ನೂ ಪ್ರೀತಿಸುತ್ತಾನೆ.


ಯೇಸುವನ್ನು ಒಪ್ಪಿಕೊಳ್ಳದ ಆತ್ಮ ದೇವರಿಂದ ಪ್ರೇರಿತವಾದುದಲ್ಲ. ಅದು ಕ್ರಿಸ್ತವಿರೋಧಿಯ ಆತ್ಮ. ಅದು ಬರುವುದೆಂದು ನೀವು ಕೇಳಿದ್ದೀರಿ; ಈಗಾಗಲೇ ಅದು ಲೋಕದಲ್ಲಿ ತಲೆದೋರಿದೆ.


ಪುತ್ರನನ್ನು ತಿರಸ್ಕರಿಸುವವನು ಪಿತನನ್ನೂ ತಿರಸ್ಕರಿಸುತ್ತಾನೆ. ಪುತ್ರನನ್ನು ಅಂಗೀಕರಿಸುವವನು ಪಿತನನ್ನೂ ಅಂಗೀಕರಿಸುತ್ತಾನೆ.


ಆ ಜೀವ ಪ್ರತ್ಯಕ್ಷವಾಯಿತು. ಅದನ್ನು ನಾವು ನೋಡಿದ್ದೇವೆ. ಆ ಬಗ್ಗೆ ಸಾಕ್ಷಿ ಹೇಳುತ್ತೇವೆ. ಪಿತನ ಬಳಿಯಿದ್ದು ನಮಗೆ ಪ್ರತ್ಯಕ್ಷವಾದಂಥ ನಿತ್ಯಜೀವವನ್ನು ನಿಮಗೆ ಸಾರುತ್ತೇವೆ.


ಯೇಸುವೇ ದೇವರ ಪುತ್ರನೆಂದು ಯಾವನು ಒಪ್ಪಿಕೊಳ್ಳುತ್ತಾನೋ ಅವನಲ್ಲಿ ದೇವರು ನೆಲೆಸಿದ್ದಾರೆ; ಅವನೂ ದೇವರಲ್ಲಿ ನೆಲೆಸಿದ್ದಾನೆ.


ಅನೇಕ ಮಂದಿ ವಂಚಕರು ಲೋಕದಲ್ಲಿ ತಲೆದೋರಿದ್ದಾರೆ. ಯೇಸುಕ್ರಿಸ್ತರು ಮನುಷ್ಯ ಆಗಿಬಂದರೆಂಬುದನ್ನು ಇವರು ಒಪ್ಪಿಕೊಳ್ಳುವುದಿಲ್ಲ. ಇಂಥವನು ವಂಚಕನೂ ಕ್ರಿಸ್ತವಿರೋಧಿಯೂ ಹೌದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು