Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಯೋಹಾನನು 4:20 - ಕನ್ನಡ ಸತ್ಯವೇದವು C.L. Bible (BSI)

20 ತಾನು ದೇವರನ್ನು ಪ್ರೀತಿಸುತ್ತೇನೆಂದು ಒಬ್ಬನು ಹೇಳುತ್ತಾ ತನ್ನ ಸಹೋದರನನ್ನು ದ್ವೇಷಿಸಿದರೆ, ಅವನು ಸುಳ್ಳುಗಾರನಾಗುತ್ತಾನೆ. ತಾನು ಕಂಡಿರುವ ತನ್ನ ಸಹೋದರನನ್ನು ಪ್ರೀತಿಸದವನು ತಾನು ಕಾಣದಿರುವ ದೇವರನ್ನು ಹೇಗೆ ಪ್ರೀತಿಸಿಯಾನು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಒಬ್ಬನು, “ತಾನು ದೇವರನ್ನು ಪ್ರೀತಿಸುತ್ತೇನೆ” ಎಂದು ಹೇಳಿ ತನ್ನ ಸಹೋದರನನ್ನು ದ್ವೇಷಿಸಿದರೆ ಅವನು ಸುಳ್ಳುಗಾರನಾಗಿದ್ದಾನೆ. ಏಕೆಂದರೆ ತನ್ನೊಂದಿಗೆ ಇರುವ ಸಹೋದರನನ್ನು ಪ್ರೀತಿಸದವನು, ತಾನು ಕಾಣದಿರುವ ದೇವರನ್ನು ಹೇಗೆ ಪ್ರೀತಿಸಬಲ್ಲನು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಒಬ್ಬನು ತಾನು ದೇವರನ್ನು ಪ್ರೀತಿಸುತ್ತೇನೆಂದು ಹೇಳಿ ತನ್ನ ಸಹೋದರನನ್ನು ದ್ವೇಷಿಸಿದರೆ ಅವನು ಸುಳ್ಳುಗಾರನಾಗಿದ್ದಾನೆ. ತಾನು ಕಂಡಿರುವ ತನ್ನ ಸಹೋದರನನ್ನು ಪ್ರೀತಿಸದವನು ತಾನು ಕಾಣದಿರುವ ದೇವರನ್ನು ಪ್ರೀತಿಸಲಾರನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 “ನಾನು ದೇವರನ್ನು ಪ್ರೀತಿಸುತ್ತೇನೆ” ಎಂದು ಹೇಳಿಕೊಳ್ಳುವವನು ತನ್ನ ಸಹೋದರನನ್ನಾಗಲಿ ಸಹೋದರಿಯನ್ನಾಗಲಿ ದ್ವೇಷಿಸಿದರೆ, ಅವನು ಸುಳ್ಳುಗಾರನಾಗಿದ್ದಾನೆ. ಅವನು ತನ್ನ ಸಹೋದರನನ್ನು ಕಣ್ಣಾರೆ ನೋಡುತ್ತಿದ್ದರೂ ಅವನನ್ನು ದ್ವೇಷಿಸುತ್ತಾನೆ. ಆದ್ದರಿಂದ ಅವನು ದೇವರನ್ನು ಪ್ರೀತಿಸಲಾಗುವುದಿಲ್ಲ. ಏಕೆಂದರೆ ಅವನು ದೇವರನ್ನು ಎಂದೂ ನೋಡಿಲ್ಲ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಒಬ್ಬನು, “ನಾನು ದೇವರನ್ನು ಪ್ರೀತಿಸುತ್ತೇನೆ,” ಎಂದು ಹೇಳಿ ತನ್ನ ಸಹೋದರರನ್ನು ದ್ವೇಷ ಮಾಡಿದರೆ, ಅವನು ಸುಳ್ಳುಗಾರನಾಗಿದ್ದಾನೆ. ಏಕೆಂದರೆ ತಾನು ಕಾಣುವ ಸಹೋದರನನ್ನು ಪ್ರೀತಿಸದವನು, ಕಾಣದಿರುವ ದೇವರನ್ನು ಪ್ರೀತಿಸಲಾರನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

20 ಎಕ್ಲೊ, ದೆವಾಚೊ ಪ್ರೆಮ್ ಕರ್ತಾ ಮನುನ್ ಅಪ್ಲ್ಯಾ ಭಾವಾಕುಚ್ ವಿರೊದ್ ಕರ್ತಾ ಹೊಲ್ಯಾರ್, ತೊ ಝುಟೊಚ್, ಅಪ್ನಾಚ್ಯಾ ಡೊಳ್ಯಾಚ್ಯಾ ಇದ್ರಾಕ್ ಹೊತ್ತ್ಯಾ ಭಾವಾಕುಚ್ ತೊ ಪ್ರೆಮ್ ಕರಿನಾ ಹೊಲ್ಯಾರ್ ದಿಸಿನಸಲ್ಲ್ಯಾ ದೆವಾಕ್ ತೊ ಕಸೊ ಪ್ರೆಮ್ ಕರ್ತಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಯೋಹಾನನು 4:20
9 ತಿಳಿವುಗಳ ಹೋಲಿಕೆ  

ಲೋಕದ ಸುಖಸಂಪತ್ತುಳ್ಳ ಒಬ್ಬನು, ಕುಂದುಕೊರತೆಯಲ್ಲಿ ಸಿಲುಕಿರುವ ತನ್ನ ಸಹೋದರನನ್ನು ಕಂಡಾಗಲೂ ಮನಕರಗದಿದ್ದರೆ ಅವನಲ್ಲಿ ದೇವರ ಪ್ರೀತಿ ಹೇಗೆ ತಾನೇ ನೆಲೆಸೀತು?


“ನಾನು ಬೆಳಕಿನಲ್ಲಿದ್ದೇನೆ” ಎಂದು ಹೇಳಿಕೊಂಡು ತನ್ನ ಸಹೋದರನನ್ನು ದ್ವೇಷಿಸುವವನು ಇನ್ನೂ ಕತ್ತಲಲ್ಲೇ ಇದ್ದಾನೆ.


ದೇವರನ್ನು ಯಾರೂ ಎಂದೂ ನೋಡಿಲ್ಲ. ಆದರೂ ನಾವು ಒಬ್ಬರನ್ನೊಬ್ಬರು ಪ್ರೀತಿಸಿದರೆ ದೇವರು ನಮ್ಮಲ್ಲಿ ನೆಲೆಸಿರುತ್ತಾರೆ. ಅವರ ಪ್ರೀತಿ ನಮ್ಮಲ್ಲಿ ಸಿದ್ಧಿಗೆ ಬರುತ್ತದೆ.


ದೇವರನ್ನು ಬಲ್ಲೆನೆಂದು ಹೇಳಿಕೊಳ್ಳುತ್ತಾ ಅವರ ಆಜ್ಞೆಗಳನ್ನು ಕೈಗೊಳ್ಳದೆ ಇರುವವನು ಸುಳ್ಳುಗಾರ ಮತ್ತು ಸತ್ಯವೆಂಬುದೇ ಅವನಲ್ಲಿ ಇರುವುದಿಲ್ಲ.


ತನ್ನ ಸಹೋದರನನ್ನು ದ್ವೇಷಿಸುವವನು ಕತ್ತಲಲ್ಲಿ ಇದ್ದಾನೆ; ಕತ್ತಲಲ್ಲೇ ನಡೆಯುತ್ತಾನೆ. ಕತ್ತಲು ಅವನನ್ನು ಕುರುಡಾಗಿಸಿರುವುದರಿಂದ ಎತ್ತ ಹೋಗುತ್ತಿದ್ದಾನೆಂದು ಅವನಿಗೇ ತಿಳಿಯದು.


ಕ್ರಿಸ್ತಯೇಸುವನ್ನು ನೀವು ನೋಡದಿದ್ದರೂ ಅವರನ್ನು ಪ್ರೀತಿಸುತ್ತೀರಿ. ನೀವೀಗ ಕಣ್ಣಾರೆ ಕಾಣದಿದ್ದರೂ ಅವರನ್ನು ವಿಶ್ವಾಸಿಸುತ್ತೀರಿ.


ನಾವು ಕತ್ತಲಲ್ಲಿ ಬಾಳುತ್ತಾ ದೇವರೊಡನೆ ಅನ್ಯೋನ್ಯವಾಗಿದ್ದೇವೆಂದು ಹೇಳಿದರೆ ನಾವು ಸುಳ್ಳುಗಾರರು, ಸತ್ಯಕ್ಕನುಸಾರ ಬಾಳದವರು.


ನಿಮ್ಮ ಈ ಪರಸ್ಪರ ಪ್ರೀತಿಯನ್ನು ಕಂಡು ನೀವು ನನ್ನ ಶಿಷ್ಯರೆಂದು ಜನರೆಲ್ಲರೂ ಅರಿತುಕೊಳ್ಳುವರು.


ನಮ್ಮಲ್ಲಿ ಪಾಪವಿಲ್ಲವೆಂದು ನಾವು ಹೇಳಿಕೊಂಡರೆ, ನಮ್ಮನ್ನು ನಾವೇ ವಂಚಿಸಿಕೊಳ್ಳುತ್ತೇವೆ ಮತ್ತು ಸತ್ಯವೆಂಬುದೇ ನಮ್ಮಲ್ಲಿ ಇರುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು