Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಯೋಹಾನನು 4:21 - ಕನ್ನಡ ಸತ್ಯವೇದವು C.L. Bible (BSI)

21 ದೇವರನ್ನು ಪ್ರೀತಿಸುವವನು ತನ್ನ ಸಹೋದರನನ್ನೂ ಪ್ರೀತಿಸಬೇಕೆಂಬುದು ಕ್ರಿಸ್ತಯೇಸು ನಮಗೆ ಮಾಡಿರುವ ಆಜ್ಞೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ದೇವರನ್ನು ಪ್ರೀತಿಸುವವನು, ತನ್ನ ಸಹೋದರನನ್ನೂ ಪ್ರೀತಿಸಬೇಕೆಂಬ ಆಜ್ಞೆಯನ್ನು ನಾವು ಆತನಿಂದ ಹೊಂದಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ದೇವರನ್ನು ಪ್ರೀತಿಸುವವನು ತನ್ನ ಸಹೋದರನನ್ನೂ ಪ್ರೀತಿಸಬೇಕೆಂಬ ಆಜ್ಞೆಯನ್ನು ನಾವು ಆತನಿಂದ ಹೊಂದಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ದೇವರನ್ನು ಪ್ರೀತಿಸುವವನು ತನ್ನ ಸಹೋದರನನ್ನೂ ಪ್ರೀತಿಸಬೇಕೆಂಬುದು ದೇವರು ನಮಗೆ ನೀಡಿರುವ ಆಜ್ಞೆಯಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ದೇವರನ್ನು ಪ್ರೀತಿಸುವವನು ತನ್ನ ಸಹೋದರನನ್ನೂ ಸಹೋದರಿಯನ್ನೂ ಪ್ರೀತಿಸಬೇಕೆಂಬ ಈ ಆಜ್ಞೆಯನ್ನು ನಾವು ದೇವರಿಂದ ಹೊಂದಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

21 ಖರೆಬಿ ಕ್ರಿಸ್ತಾನುಚ್ ದಿಲ್ಲೊ ಹುಕುಮ್ ಹ್ಯೊ; ಜೆ ಕೊನ್ ದೆವಾಚೊ ಪ್ರೆಮ್ ಕರ್ತಾ, ತೆನಿ ಅಪ್ಲ್ಯಾ ಭಾವಾಚೊಬಿ ಪ್ರೆಮ್ ಕರುಕ್ ಪಾಜೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಯೋಹಾನನು 4:21
20 ತಿಳಿವುಗಳ ಹೋಲಿಕೆ  

ನಿನ್ನ ಸ್ವಜನರಲ್ಲಿ ಯಾರಿಗೂ ಕೇಡಿಗೆ ಕೇಡು ಮಾಡಬೇಡ, ಅವರಿಗೆ ವಿರುದ್ಧ ಮತ್ಸರ ಇಟ್ಟುಕೊಳ್ಳಬೇಡ; ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸು. ನಾನು ಸರ್ವೇಶ್ವರ.


ನಾವು ಒಬ್ಬರನ್ನೊಬ್ಬರು ಪ್ರೀತಿಸಬೇಕು ಎಂಬುದೇ ಮೊತ್ತಮೊದಲಿನಿಂದಲೂ ನೀವು ಕೇಳಿದ ಸಂದೇಶ.


ಸಹೋದರ ಪ್ರೇಮವನ್ನು ಕುರಿತು ನಿಮಗೆ ಬರೆಯುವ ಅವಶ್ಯಕತೆಯಿಲ್ಲ. ನೀವು ಒಬ್ಬರನ್ನೊಬ್ಬರು ಪ್ರೀತಿಸುವುದನ್ನು ದೇವರಿಂದಲೇ ಕಲಿತಿದ್ದೀರಿ.


ಕಡೆಯದಾಗಿ ನೀವೆಲ್ಲರೂ ಏಕಮನಸ್ಸುಳ್ಳವರಾಗಿರಿ; ಪರಸ್ಪರ ಸಹಾನುಭೂತಿ ಇರಲಿ. ಒಡಹುಟ್ಟಿದವರಂತೆ ಒಬ್ಬರನ್ನೊಬ್ಬರು ಪ್ರೀತಿಸಿರಿ; ದಯೆತೋರುವವರೂ ದೀನಭಾವವುಳ್ಳವರೂ ಆಗಿರಿ.


“ನೀನು ನಿನ್ನನ್ನೇ ಪ್ರೀತಿಸಿಕೊಳ್ಳುವಂತೆ ನಿನ್ನ ನೆರೆಯವರನ್ನು ಪ್ರೀತಿಸು,” ಎಂಬ ಒಂದೇ ವಚನದಲ್ಲಿ ಇಡೀ ಧರ್ಮಶಾಸ್ತ್ರವು ಅಡಗಿದೆ.


ನಾನು ಕೊಡುವ ಆಜ್ಞೆ ಏನೆಂದರೆ: ನಾನು ನಿಮ್ಮನ್ನು ಪ್ರೀತಿಸಿದಂತೆಯೇ ನೀವು ಸಹ ಒಬ್ಬರನ್ನೊಬ್ಬರು ಪ್ರೀತಿಸಬೇಕು.


ನಾವು ದೇವರ ಪುತ್ರ ಯೇಸುಕ್ರಿಸ್ತರ ನಾಮದಲ್ಲಿ ವಿಶ್ವಾಸವಿಟ್ಟು ಅವರು ವಿಧಿಸಿದಂತೆ ಒಬ್ಬರನ್ನೊಬ್ಬರು ಪ್ರೀತಿಸಬೇಕು. ಇದೇ ದೇವರ ಆಜ್ಞೆ.


ನಾವು ನಮ್ಮ ಸಹೋದರರನ್ನು ಪ್ರೀತಿಸುವುದರಿಂದ ಸಾವಿನಿಂದ ಜೀವಕ್ಕೆ ಸಾಗಿದ್ದೇವೆಂದು ತಿಳಿದಿದ್ದೇವೆ. ಪ್ರೀತಿಸದೆ ಇರುವವನು ಸಾವಿನಲ್ಲೇ ನೆಲೆಸಿರುತ್ತಾನೆ.


ಎಲ್ಲಕ್ಕೂ ಮಿಗಿಲಾಗಿ ಒಬ್ಬರನ್ನೊಬ್ಬರು ಯಥಾರ್ಥವಾಗಿ ಪ್ರೀತಿಸಿರಿ. ಏಕೆಂದರೆ, ಪ್ರೀತಿ ಅಸಂಖ್ಯಾತ ಪಾಪಗಳನ್ನು ಅಳಿಸಿಹಾಕುತ್ತದೆ.


ಅದಕ್ಕೆ ಅವನು, “ದಯೆತೋರಿದವನೇ ನೆರೆಯವನು,” ಎಂದನು. ಆಗ ಯೇಸು, “ಹೋಗು, ನೀನೂ ಹಾಗೆಯೇ ಮಾಡು,” ಎಂದು ಹೇಳಿದರು.


ಪ್ರಿಯರೇ, ದೇವರೇ ನಮ್ಮನ್ನು ಇಷ್ಟಾಗಿ ಪ್ರೀತಿಸಿರುವಲ್ಲಿ ನಾವು ಸಹ ಒಬ್ಬರನ್ನೊಬ್ಬರು ಪ್ರೀತಿಸಲೇಬೇಕು.


ಕ್ರಿಸ್ತಯೇಸುವಿನಲ್ಲಿ ಬಾಳುವವರಿಗೆ ಸುನ್ನತಿ ಮಾಡಿಸಿಕೊಳ್ಳುವುದೋ ಅಥವಾ ಮಾಡಿಸಿಕೊಳ್ಳದಿರುವುದೋ ಮುಖ್ಯವಲ್ಲ. ಪ್ರೀತಿಯಿಂದ ಕಾರ್ಯ ಎಸಗುವ ವಿಶ್ವಾಸವೇ ಪ್ರಮುಖವಾದುದು.


ಪ್ರಿಯಮಕ್ಕಳೇ, ನಾವು ಬರಿಯ ಮಾತಿನಿಂದಾಗಲಿ, ಬಾಯುಪಚಾರದಿಂದಾಗಲಿ, ಪ್ರೀತಿಸುವವರಾಗಿರಬಾರದು. ನಮ್ಮ ಪ್ರೀತಿ ಸತ್ಯದಲ್ಲೂ ಕೃತ್ಯದಲ್ಲೂ ವ್ಯಕ್ತವಾಗಬೇಕು.


“ ‘ಮಿತ್ರರನ್ನು ಪ್ರೀತಿಸು, ಶತ್ರುವನ್ನು ದ್ವೇಷಿಸು’ ಎಂದು ಹೇಳಿರುವುದು ನಿಮಗೆ ತಿಳಿದೇ ಇದೆ.


ಪ್ರಿಯರೇ, ನಾನು ನಿಮಗೆ ಬರೆಯುತ್ತಿರುವುದು ಹೊಸ ಆಜ್ಞೆಯೇನೂ ಅಲ್ಲ, ಮೊದಲಿನಿಂದಲೂ ನೀವು ಪಡೆದಿರುವ ಹಳೆಯ ಆಜ್ಞೆಯೇ. ಈ ಆಜ್ಞೆಯೇ ನೀವು ಈಗಾಗಲೇ ಕೇಳಿರುವ ಸಂದೇಶ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು