Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಯೋಹಾನನು 4:4 - ಕನ್ನಡ ಸತ್ಯವೇದವು C.L. Bible (BSI)

4 ಪ್ರಿಯಮಕ್ಕಳೇ, ನೀವಂತೂ ದೇವರಿಗೆ ಸೇರಿದವರು. ಲೋಕದಲ್ಲಿರುವ ದುರಾತ್ಮಕ್ಕಿಂತಲೂ ನಿಮ್ಮಲ್ಲಿರುವ ಆತ್ಮವು ಶ್ರೇಷ್ಠವಾದುದು. ಆದ್ದರಿಂದಲೇ ಆ ಕಪಟ ಪ್ರವಾದಿಗಳನ್ನು ಜಯಿಸಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಪ್ರಿಯಮಕ್ಕಳೇ, ನೀವಂತೂ ದೇವರಿಗೆ ಸೇರಿದವರಾಗಿದ್ದೀರಿ. ಮತ್ತು ಲೋಕದಲ್ಲಿರುವವನಿಗಿಂತ ನಿಮ್ಮಲ್ಲಿರುವಾತನು ಉನ್ನತನಾಗಿರುವುದರಿಂದ ನೀವು ಆ ಸುಳ್ಳು ಪ್ರವಾದಿಗಳ ಆತ್ಮವನ್ನು ಜಯಿಸಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಪ್ರಿಯರಾದ ಮಕ್ಕಳೇ, ನೀವಂತೂ ದೇವರಿಂದ ಹುಟ್ಟಿದವರಾಗಿದ್ದೀರಿ; ಮತ್ತು ಲೋಕದಲ್ಲಿರುವವನಿಗಿಂತ ನಿಮ್ಮಲ್ಲಿರುವಾತನು ಹೆಚ್ಚಿನವನಾಗಿರುವದರಿಂದ ನೀವು ಆ ಸುಳ್ಳು ಪ್ರವಾದಿಗಳನ್ನು ಜಯಿಸಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ನನ್ನ ಪ್ರಿಯ ಮಕ್ಕಳೇ, ನೀವು ದೇವರಿಗೆ ಸೇರಿದವರು. ಆದ್ದರಿಂದ ನೀವು ಅವರನ್ನು (ಸುಳ್ಳುಬೋಧಕರು) ಸೋಲಿಸಿದ್ದೀರಿ. ಏಕೆಂದರೆ ನಿಮ್ಮಲ್ಲಿರುವಾತನು (ದೇವರು) ಈ ಲೋಕದ ಜನರಲ್ಲಿರುವವನಿಗಿಂತ (ಸೈತಾನ) ದೊಡ್ಡವನಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಪ್ರಿಯ ಮಕ್ಕಳೇ, ನೀವು ದೇವರಿಗೆ ಸೇರಿದವರಾಗಿದ್ದೀರಿ, ಸುಳ್ಳು ಪ್ರವಾದಿಗಳನ್ನು ಜಯಿಸಿದ್ದೀರಿ. ಏಕೆಂದರೆ ನಿಮ್ಮಲ್ಲಿರುವ ದೇವರು ಲೋಕದಲ್ಲಿ ಇರುವವನಿಗಿಂತ ದೊಡ್ಡವರಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ಪ್ರಿತಿಚ್ಯಾ ಪೊರಾನು, ತುಮಿ ದೆವಾಚಿ ಪೊರಾ, ಅನಿ ಝುಟ್ಯಾ ಪ್ರವಾದ್ಯಾಕ್ನಿ ಹಾರ್‍ವುಲ್ಯಾಸಿ ಕಶ್ಯಾಕ್ ಮಟ್ಲ್ಯಾರ್ ತುಮ್ಚ್ಯಾ ವಾಂಗ್ಡಾ ಹೊತ್ತೊ ದೆವ್ ಹ್ಯಾ ಜಗಾತ್ಲ್ಯಾ ಆತ್ಮ್ಯಾಕಿಂತಾ ಲೈ ತಾಕ್ತಿಚೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಯೋಹಾನನು 4:4
28 ತಿಳಿವುಗಳ ಹೋಲಿಕೆ  

ಹೀಗಿರುವಲ್ಲಿ ನಾವು ಏನು ಹೇಳೋಣ? ದೇವರೇ ನಮ್ಮ ಪರ ಇರುವಾಗ ನಮ್ಮನ್ನು ವಿರೋಧಿಸುವವರು ಯಾರು?


ದೇವರಿಂದ ಜನಿಸಿದ ಪ್ರತಿ ಒಬ್ಬನೂ ಲೋಕವನ್ನು ಜಯಿಸುತ್ತಾನೆ. ಲೋಕವನ್ನು ಜಯಿಸುವಂಥದು ನಮ್ಮ ವಿಶ್ವಾಸವೇ.


ನಮ್ಮನ್ನು ಪ್ರೀತಿಸಿದ ಯೇಸುಕ್ರಿಸ್ತರ ಮುಖಾಂತರ ಇವೆಲ್ಲವುಗಳಲ್ಲಿಯೂ ನಾವು ಪೂರ್ಣ ಜಯಶಾಲಿಗಳಾಗುತ್ತೇವೆ.


ಹೀಗೆ ದೇವರು ನಮ್ಮಲ್ಲಿಟ್ಟಿರುವ ಪ್ರೀತಿ ನಮಗೆ ಗೊತ್ತಿದೆ. ಅದರಲ್ಲಿ ನಮಗೆ ವಿಶ್ವಾಸವಿದೆ. ದೇವರು ಪ್ರೀತಿಸ್ವರೂಪಿ. ಪ್ರೀತಿಯಲ್ಲಿ ನೆಲೆಸಿರುವವನು ದೇವರಲ್ಲಿ ನೆಲೆಸಿದ್ದಾನೆ. ದೇವರೂ ಅವನಲ್ಲಿ ನೆಲೆಸಿರುತ್ತಾರೆ.


ನಾವಾದರೋ ಪ್ರಾಪಂಚಿಕ ಆತ್ಮವನ್ನು ಹೊಂದಿದವರಲ್ಲ. ದೇವರು ನಮಗೆ ದಯಪಾಲಿಸಿರುವ ವರಪ್ರಸಾದಗಳನ್ನು ಅರಿತುಕೊಳ್ಳುವಂತೆ ಮಾಡುವ ಪಾರಮಾರ್ಥಿಕ ಆತ್ಮವನ್ನು ಪಡೆದಿದ್ದೇವೆ.


ಇಡೀ ಲೋಕವು ಕೇಡಿಗನ ವಶದಲ್ಲಿ ಇದ್ದರು ಸಹ ನಾವು ದೇವರಿಗೆ ಸೇರಿದವರೆಂಬುದು ನಮಗೆ ತಿಳಿದಿದೆ.


ದೇವರು ನಮಗೆ ತಮ್ಮ ಆತ್ಮವನ್ನು ನೀಡಿರುವುದರಿಂದಲೇ ನಾವು ಅವರಲ್ಲಿಯೂ ಅವರು ನಮ್ಮಲ್ಲಿಯೂ ನೆಲೆಸಿರುವುದನ್ನು ತಿಳಿದುಕೊಳ್ಳುತ್ತೇವೆ.


ಕೊನೆಯದಾಗಿ, ಪ್ರಭುವಿನ ಅನ್ಯೋನ್ಯತೆಯಲ್ಲಿ ಬಲಾಢ್ಯರಾಗಿರಿ. ಅವರ ಪರಾಕ್ರಮ ಶಕ್ತಿಯನ್ನು ಆಶ್ರಯಿಸಿರಿ.


ನಿಮ್ಮ ವಿಶ್ವಾಸದ ಫಲವಾಗಿ, ಯೇಸುಕ್ರಿಸ್ತರು ನಿಮ್ಮ ಹೃದಯಗಳಲ್ಲಿ ಸದಾ ವಾಸಿಸಲಿ ಮತ್ತು ನಿಮ್ಮ ಜೀವನವು ಪ್ರೀತಿಯಲ್ಲಿ ಬೇರೂರಿ ಸದೃಢವಾಗಿ ನಿಲ್ಲಲಿ.


ಜಯಿಸಿದರು ಸೋದರರು ಆ ನಿಂದಕನನ್ನು ಯಜ್ಞದ ಕುರಿಮರಿಯ ರಕ್ತದಿಂದ ಸತ್ಯಕ್ಕೆ ಸಾಕ್ಷಿಯನ್ನಿತ್ತುದರಿಂದ ಜೀವದಾಶೆಯನು ತೊರೆದುದರಿಂದ ಮರಣದ ಭಯವನು ಬಿಸುಟುದರಿಂದ.


ದೇವರ ಆಜ್ಞೆಯನ್ನು ಪಾಲಿಸುವವನು ಅವರಲ್ಲಿ ನೆಲೆಸಿರುತ್ತಾನೆ. ದೇವರೂ ಅವನಲ್ಲಿ ನೆಲೆಸಿರುತ್ತಾರೆ. ದೇವರು ನಮ್ಮಲ್ಲಿ ನೆಲೆಸಿದ್ದಾರೆಂದು ಅವರು ದಯಪಾಲಿಸುವ ಪವಿತ್ರಾತ್ಮರಿಂದಲೇ ತಿಳಿದುಕೊಳ್ಳುತ್ತೇವೆ.


ಈಗ ಈ ಲೋಕವು ನ್ಯಾಯತೀರ್ಪಿಗೆ ಒಳಗಾಗುವುದು. ಇದೀಗಲೇ ಈ ಲೋಕಾಧಿಪತಿಯನ್ನು ಹೊರದೂಡಲಾಗುವುದು.


ನಾನು ಇವರಲ್ಲಿಯೂ ನೀವು ನನ್ನಲ್ಲಿಯೂ ಇದ್ದು, ಇವರ ಐಕ್ಯಮತ್ಯವು ಪೂರ್ಣಸಿದ್ಧಿಗೆ ಬರಲಿ. ಆಗ ನೀವೇ ನನ್ನನ್ನು ಕಳುಹಿಸಿರುವಿರಿ ಎಂದೂ ನನ್ನನ್ನು ಪ್ರೀತಿಸಿದಂತೆಯೇ ಇವರನ್ನು ನೀವು ಪ್ರೀತಿಸಿರುವಿರಿ ಎಂದೂ ಲೋಕಕ್ಕೆ ಮನವರಿಕೆ ಆಗುವುದು.


ನಾವಾದರೋ ದೇವರಿಗೆ ಸೇರಿದವರು. ದೇವರನ್ನು ಅರಿತವನು ನಮಗೆ ಕಿವಿಗೊಡುತ್ತಾನೆ. ದೇವರಿಗೆ ಸೇರದವನು ನಮಗೆ ಕಿವಿಗೊಡುವುದಿಲ್ಲ. ಇದರಿಂದಲೇ ಸತ್ಯವನ್ನು ಸಾರುವ ಆತ್ಮ ಯಾವುದು ಮತ್ತು ಅಸತ್ಯವನ್ನು ಸಾರುವ ಆತ್ಮ ಯಾವುದು ಎಂಬುದು ನಮಗೆ ತಿಳಿಯುತ್ತದೆ.


ದೇವರ ಆಲಯಕ್ಕೂ ಕಲ್ಲಿನ ವಿಗ್ರಹಕ್ಕೂ ಎಲ್ಲಿಯ ಸಾಮ್ಯ? ನಾವಾದರೋ ಜೀವಂತ ದೇವರ ಮಂದಿರವಾಗಿದ್ದೇವೆ. ಇದನ್ನು ದೇವರೇ ಹೇಳಿದ್ದಾರೆ: “ನನ್ನ ಜನರಲ್ಲೇ ನಾ ಮನೆಮಾಡುವೆನು ಅವರ ನಡುವೆಯೇ ನಾ ತಿರುಗಾಡುವೆನು ಅವರಿಗೆ ನಾನೇ ದೇವರಾಗಿರುವೆನು ಅವರೆನಗೆ ಪ್ರಜೆಯಾಗಿರುವರು.”


ಬರೆಯುತಿಹೆನು ತಂದೆಗಳಿರಾ, ಇದನ್ನು ಏಕೆನೆ, ಬಲ್ಲವರಾದಿರಿ ಆದಿಯಿಂದಿರುವಾತನನ್ನು. ಬರೆಯುತಿಹೆನು ಯುವಜನರಿರಾ, ಇದನ್ನು ಏಕೆನೆ, ನೀವು ಜಯಿಸಿದ್ದಾಯಿತು ಆ ಕಡುಗೇಡಿಗನನ್ನು.


“ಊಟ ಹೊಟ್ಟೆಗಾಗಿ, ಹೊಟ್ಟೆ ಊಟಕ್ಕಾಗಿ,” ಎಂದು ಹೇಳುವುದುಂಟು. ದೇವರು ಎರಡನ್ನೂ ನಾಶಗೊಳಿಸುವರು. ಆದರೆ ದೇಹವಿರುವುದು ದುರಾಚಾರಕ್ಕಲ್ಲ; ಪ್ರಭುವಿನ ಸೇವೆಗಾಗಿ. ಪ್ರಭುವೇ ದೇಹದ ಪರಿಪಾಲಕ.


ಆಗ ನೀವು ಲೋಕದ ರೀತಿನೀತಿಗಳನ್ನು ಅನುಸರಿಸಿ ಬಾಳಿದಿರಿ. ವಾಯುಮಂಡಲದಲ್ಲಿನ ಅಶರೀರ ಶಕ್ತಿಗಳ ಅಧಿಪತಿಗೆ ಅಧೀನರಾಗಿದ್ದಿರಿ. ದುಷ್ಕರ್ಮಿಗಳನ್ನು ಪ್ರಚೋದಿಸುತ್ತಲಿರುವ ದುರಾತ್ಮನಿಗೆ ವಿಧೇಯರಾಗಿದ್ದಿರಿ.


ಅಂತಿಮ ತೀರ್ಪಿನ ವಿಷಯವಾಗಿ ಅವರ ತಪ್ಪುಭಾವನೆಯನ್ನು ಮನವರಿಕೆ ಮಾಡಿಕೊಡುವರು. ಏಕೆಂದರೆ, ಇಹದ ಲೋಕಾಧಿಪತಿಗೆ ಈಗಾಗಲೇ ನ್ಯಾಯತೀರ್ಪನ್ನು ಕೊಡಲಾಗಿದೆ.


ಇವರು ವಿಶ್ವಾಸಿಸುವುದಿಲ್ಲ. ಏಕೆಂದರೆ, ಪೃಥ್ವಿಯ ಮಿಥ್ಯ ದೈವವು ಇವರ ಮನಸ್ಸನ್ನು ಮಂಕಾಗಿಸಿದೆ; ದೇವರ ಪ್ರತಿರೂಪವಾಗಿರುವ ಕ್ರಿಸ್ತಯೇಸುವಿನ ಮಹಿಮೆಯನ್ನು ಸಾರುವ ಶುಭಸಂದೇಶದ ಬೆಳಕನ್ನು ಕಾಣದಂತೆ ಇವರನ್ನು ಕುರುಡಾಗಿಸಿದೆ.


ಇಹದ ಲೋಕಾಧಿಪತಿ ಬರುವ ಸಮಯವಾಯಿತು. ಇನ್ನು ಬಹಳ ಹೊತ್ತು ನಾನು ನಿಮ್ಮೊಡನೆ ಮಾತನಾಡಲು ಕಾಲಾವಕಾಶವಿಲ್ಲ. ನನ್ನ ಮೇಲೆ ಅವನಿಗೆ ಯಾವ ಅಧಿಕಾರವೂ ಇಲ್ಲ.


ಪ್ರಿಯಮಕ್ಕಳೇ, ನೀವು ಪಾಪಮಾಡಬಾರದೆಂದೇ ನಾನಿದನ್ನು ನಿಮಗೆ ಬರೆಯುತ್ತಿದ್ದೇನೆ. ಒಂದು ವೇಳೆ ಯಾರಾದರೂ ಪಾಪಮಾಡಿದ್ದೇ ಆದರೆ ನಮ್ಮ ಪರವಾಗಿ ಪಿತನ ಬಳಿಯಲ್ಲಿ ಬಿನ್ನಯಿಸಲು ಒಬ್ಬರಿದ್ದಾರೆ. ಅವರೇ ಸತ್ಯಸ್ವರೂಪರಾದ ಯೇಸುಕ್ರಿಸ್ತರು.


ಯಾವ ವಿಷಯದಲ್ಲಾದರೂ ನಮ್ಮ ಮನಸ್ಸಾಕ್ಷಿ ನಮ್ಮನ್ನು ಖಂಡಿಸಿದ್ದೇ ಆದರೆ ಎಲ್ಲವನ್ನೂ ಬಲ್ಲ ದೇವರು ನಮ್ಮ ಮನಸ್ಸಾಕ್ಷಿಗಿಂತಲೂ ದೊಡ್ಡವರೆಂಬುದು ನಮಗೆ ತಿಳಿದೇ ಇರುತ್ತದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು