Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಯೋಹಾನನು 4:6 - ಕನ್ನಡ ಸತ್ಯವೇದವು C.L. Bible (BSI)

6 ನಾವಾದರೋ ದೇವರಿಗೆ ಸೇರಿದವರು. ದೇವರನ್ನು ಅರಿತವನು ನಮಗೆ ಕಿವಿಗೊಡುತ್ತಾನೆ. ದೇವರಿಗೆ ಸೇರದವನು ನಮಗೆ ಕಿವಿಗೊಡುವುದಿಲ್ಲ. ಇದರಿಂದಲೇ ಸತ್ಯವನ್ನು ಸಾರುವ ಆತ್ಮ ಯಾವುದು ಮತ್ತು ಅಸತ್ಯವನ್ನು ಸಾರುವ ಆತ್ಮ ಯಾವುದು ಎಂಬುದು ನಮಗೆ ತಿಳಿಯುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ನಾವಂತೂ ದೇವರಿಗೆ ಸಂಬಂಧಪಟ್ಟವರಾಗಿದ್ದೇವೆ. ದೇವರನ್ನು ಬಲ್ಲವರು ನಮ್ಮ ಮಾತನ್ನು ಕೇಳುತ್ತಾರೆ. ದೇವರಿಗೆ ಸಂಬಂಧಪಡದವರು ನಮ್ಮ ಮಾತನ್ನು ಕೇಳುವುದಿಲ್ಲ. ಇದರಿಂದಲೇ ಸತ್ಯವನ್ನು ಬೋಧಿಸುವ ಆತ್ಮ ಯಾವುದು ಮತ್ತು ಸುಳ್ಳನ್ನು ಬೋಧಿಸುವ ಆತ್ಮ ಯಾವುದು ಎಂದು ನಾವು ತಿಳಿದುಕೊಳ್ಳುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ನಾವಂತೂ ದೇವರಿಂದ ಹುಟ್ಟಿದವರಾಗಿದ್ದೇವೆ; ದೇವರನ್ನು ಬಲ್ಲವನು ನಮ್ಮ ಮಾತನ್ನು ಕೇಳುತ್ತಾನೆ; ದೇವರಿಂದ ಹುಟ್ಟದವನು ನಮ್ಮ ಮಾತನ್ನು ಕೇಳುವದಿಲ್ಲ. ಇದು ಸತ್ಯವನ್ನು ಬೋಧಿಸುವ ಆತ್ಮ, ಅದು ಸುಳ್ಳನ್ನು ಬೋಧಿಸುವ ಆತ್ಮ ಎಂದು ಇದರಿಂದಲೇ ತಿಳುಕೊಳ್ಳುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ನಾವಾದರೋ ದೇವರಿಂದ ಬಂದವರು. ಆದ್ದರಿಂದ ದೇವರನ್ನು ಬಲ್ಲ ಜನರು ನಮಗೆ ಕಿವಿಗೊಡುತ್ತಾರೆ, ಆದರೆ ದೇವರಿಂದ ಬಂದಿಲ್ಲದ ಜನರು ನಮ್ಮ ಮಾತುಗಳನ್ನು ಕೇಳುವುದಿಲ್ಲ. ಯಾವುದು ಸತ್ಯವನ್ನು ಬೋಧಿಸುವ ಆತ್ಮ, ಯಾವುದು ಸುಳ್ಳನ್ನು ಬೋಧಿಸುವ ಆತ್ಮ ಎಂಬುದನ್ನು ಹೀಗೆ ತಿಳಿದುಕೊಳ್ಳುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ನಾವಂತೂ ದೇವರಿಗೆ ಸೇರಿದವರಾಗಿದ್ದೇವೆ. ದೇವರನ್ನು ಬಲ್ಲವರು ನಮ್ಮ ಮಾತನ್ನು ಕೇಳುತ್ತಾರೆ. ದೇವರಿಗೆ ಸೇರದವರು ನಮ್ಮ ಮಾತನ್ನು ಕೇಳುವುದಿಲ್ಲ. ಇದು ಸತ್ಯದ ಆತ್ಮ. ಅದು ಸುಳ್ಳಿನ ಆತ್ಮ ಎಂದು ಇದರಿಂದಲೇ ನಾವು ತಿಳಿದುಕೊಳ್ಳುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

6 ಅಮಿ ದೆವಾಚಿ ಪೊರಾ, ಜೆ ಕೊನ್ ದೆವಾಕ್ ವಳಕ್ತಾ ತೊ ಅಮ್ಕಾಬಿ ವಳಕ್ತಾ, ಜೆ ಕೊನ್ ದೆವಾಚೊ ನ್ಹಯ್ ತೊ ಅಮ್ಕಾ ಕಾನ್ ದಿ ನಾ, ಹೆಚ್ಯಾ ವೈನಾ ಖರ್‍ಯಾ ಅನಿ ಝುಟ್ಯಾ ಆತ್ಮ್ಯಾಚ್ಯಾ ಮದ್ದಿ ಹೊತ್ತೊ ಪರಕ್ ಕಾಯ್ ಮನುನ್ ಅಮಿ ವಳಕ್ತಾಂವ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಯೋಹಾನನು 4:6
33 ತಿಳಿವುಗಳ ಹೋಲಿಕೆ  

ಸತ್ಯಸ್ವರೂಪಿಯಾದ ಪವಿತ್ರಾತ್ಮನೇ ಈ ಪೋಷಕ. ಲೋಕವು ಇವರನ್ನು ಬರಮಾಡಿಕೊಳ್ಳದು. ಏಕೆಂದರೆ ಲೋಕ ಇವರನ್ನು ಕಾಣುವುದೂ ಇಲ್ಲ, ಅರಿತುಕೊಳ್ಳುವುದೂ ಇಲ್ಲ. ಆದರೆ ನೀವು ಇವರನ್ನು ಅರಿಯುವಿರಿ. ಕಾರಣ, ಇವರು ನಿಮ್ಮೊಂದಿಗೂ ನಿಮ್ಮಲ್ಲಿಯೂ ನೆಲಸಿರುವರು.


ನನ್ನ ಕುರಿಗಳಾದರೋ ನನ್ನ ಸ್ವರವನ್ನು ಗುರುತಿಸುತ್ತವೆ. ನಾನು ಅವನ್ನು ಬಲ್ಲೆನು. ಅವು ನನ್ನನ್ನು ಹಿಂಬಾಲಿಸುತ್ತವೆ.


ಪಿತನಿಂದ ಹೊರಡುವ ಸತ್ಯಸ್ವರೂಪಿಯಾದ ಪವಿತ್ರಾತ್ಮರನ್ನು ನಿಮ್ಮ ಪೋಷಕರನ್ನಾಗಿ ನಾನು ಪಿತನಿಂದಲೇ ಕಳುಹಿಸುವೆನು. ಅವರು ಬಂದು ನನ್ನ ಪರವಾಗಿ ಸಾಕ್ಷಿನೀಡುವರು.


ಪ್ರಿಯರೇ, “ನಾವು ಪವಿತ್ರಾತ್ಮ ಪ್ರೇರಿತರು” ಎಂದು ಹೇಳುವ ಎಲ್ಲರನ್ನೂ ನಂಬಬಾರದು. ಆ ಪ್ರೇರಣೆ ದೇವರಿಂದ ಬಂದಿದೆಯೇ ಎಂದು ಪರೀಕ್ಷಿಸಿ ನೋಡಬೇಕು. ಏಕೆಂದರೆ, ಎಷ್ಟೋ ಮಂದಿ ಕಪಟ ಪ್ರವಾದಿಗಳು ಎಲ್ಲೆಡೆಯಲ್ಲೂ ಹರಡಿದ್ದಾರೆ.


ಪ್ರಿಯಮಕ್ಕಳೇ, ನೀವಂತೂ ದೇವರಿಗೆ ಸೇರಿದವರು. ಲೋಕದಲ್ಲಿರುವ ದುರಾತ್ಮಕ್ಕಿಂತಲೂ ನಿಮ್ಮಲ್ಲಿರುವ ಆತ್ಮವು ಶ್ರೇಷ್ಠವಾದುದು. ಆದ್ದರಿಂದಲೇ ಆ ಕಪಟ ಪ್ರವಾದಿಗಳನ್ನು ಜಯಿಸಿದ್ದೀರಿ.


ಪಿಲಾತನು, “ಹಾಗಾದರೆ ನೀನೊಬ್ಬ ಅರಸನೋ?’ ಎಂದು ಕೇಳಲು ಯೇಸು, “ ‘ಅರಸ’ ಎನ್ನುವುದು ನೀವು ಹೇಳುವ ಮಾತು. ಸತ್ಯವನ್ನು ಕುರಿತು ಸಾಕ್ಷಿ ಹೇಳುವುದು ನನ್ನ ಕೆಲಸ. ಅದಕ್ಕಾಗಿಯೇ ನಾನು ಹುಟ್ಟಿದುದು. ಅದಕ್ಕಾಗಿಯೇ ನಾನು ಜಗತ್ತಿಗೆ ಬಂದುದು. ಸತ್ಯಪರರೆಲ್ಲರೂ ನನ್ನ ಮಾತಿಗೆ ಕಿವಿಗೊಡುತ್ತಾರೆ,” ಎಂದು ಹೇಳಿದರು.


ನಿಮ್ಮಲ್ಲಿ ಯಾರಾದರೊಬ್ಬನು ತಾನು ದೇವರ ವಾಕ್ಯವನ್ನು ಬೋಧಿಸುವವನು ಅಥವಾ ಪವಿತ್ರಾತ್ಮ ಪ್ರೇರಣೆಯನ್ನು ಹೊಂದಿದವನು ಎಂದು ಭಾವಿಸುವುದಾದರೆ, ನಾನು ನಿಮಗೆ ಬರೆದಿರುವುದೆಲ್ಲ ಪ್ರಭುವಿನ ಆಜ್ಞೆಯೆಂದು ಚೆನ್ನಾಗಿ ತಿಳಿದುಕೊಳ್ಳಲಿ.


ಹೇಗೂ ಸತ್ಯಸ್ವರೂಪಿ ಆದ ಪವಿತ್ರಾತ್ಮ ಬಂದಮೇಲೆ ನಿಮ್ಮನ್ನು ಸಮಗ್ರ ಸತ್ಯದೆಡೆಗೆ ಕರೆದೊಯ್ಯುವರು. ಅವರು ತಮ್ಮಷ್ಟಕ್ಕೆ ತಾವೇ ಏನನ್ನೂ ಬೋಧಿಸದೆ ತಾವು ಕೇಳಿದುದನ್ನು ಕುರಿತೇ ಮಾತನಾಡುವರು; ಮುಂದೆ ನಡೆಯಲಿರುವುದನ್ನೂ ನಿಮಗೆ ತಿಳಿಸುವರು.


ನಾನಾದರೋ ಸರ್ವೇಶ್ವರಸ್ವಾಮಿಯ ಆತ್ಮಪ್ರೇರಣೆಯಿಂದ, ಅವರ ಬಲಪರಾಕ್ರಮದಿಂದ, ನ್ಯಾಯನೀತಿಯಿಂದ ತುಂಬಿದವನು. ಯಕೋಬ ವಂಶಕ್ಕೆ ಅದರ ದ್ರೋಹವನ್ನು, ಇಸ್ರಯೇಲ್ ವಂಶಕ್ಕೆ ಅದರ ಪಾಪವನ್ನು ಪ್ರಕಟಿಸಲು ಸಮರ್ಥನು.


ಪ್ರೀತಿಸದವನು ದೇವರನ್ನು ಬಲ್ಲವನಲ್ಲ. ಏಕೆಂದರೆ, ದೇವರು ಪ್ರೀತಿಸ್ವರೂಪಿ.


ಮುಂಬರುವ ದಿನಗಳಲ್ಲಿ ಕೆಲವರು ವಂಚಿಸುವ ಆತ್ಮಗಳಿಗೆ ಬಲಿಬಿದ್ದು, ದುರಾತ್ಮಗಳ ದುರುಪದೇಶಗಳಿಗೆ ಕಿವಿಗೊಟ್ಟು ವಿಶ್ವಾಸಭ್ರಷ್ಟರಾಗುವರೆಂದು ಪವಿತ್ರಾತ್ಮ ಸ್ಪಷ್ಟವಾಗಿ ತಿಳಿಸಿದ್ದಾರೆ.


ನಾನು ಕಳುಹಿಸಿದಾತನನ್ನು ಬರಮಾಡಿಕೊಳ್ಳುವವನು ನನ್ನನ್ನೇ ಬರಮಾಡಿಕೊಳ್ಳುತ್ತಾನೆ. ನನ್ನನ್ನು ಬರಮಾಡಿಕೊಳ್ಳುವವನು ನನ್ನನ್ನು ಕಳುಹಿಸಿದಾತನನ್ನೇ ಬರಮಾಡಿಕೊಳ್ಳುತ್ತಾನೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ,” ಎಂದರು.


ಅದಕ್ಕೆ ಅವರು, “ನಿನ್ನ ಪಿತನೆಲ್ಲಿ?” ಎಂದು ಕೇಳಿದರು. ಯೇಸು, “ನೀವು ನನ್ನನ್ನು ಅರಿತಿಲ್ಲ, ನನ್ನ ಪಿತನನ್ನೂ ಅರಿತಿಲ್ಲ. ನೀವು ನನ್ನನ್ನು ಅರಿತಿದ್ದರೆ, ನನ್ನ ಪಿತನನ್ನೂ ಅರಿಯುತ್ತಿದ್ದಿರಿ,” ಎಂದರು.


ನನ್ನ ಪಿತ ಸಮಸ್ತವನ್ನೂ ನನ್ನ ವಶಕ್ಕೆ ಒಪ್ಪಿಸಿದ್ದಾರೆ. ಪುತ್ರನು ಯಾರೆಂದು ಪಿತನ ಹೊರತು ಬೇರಾರೂ ಅರಿಯರು. ಪಿತನು ಯಾರೆಂದು ಪುತ್ರನು ಮತ್ತು ಯಾರಿಗೆ ಪುತ್ರನು ಅವರನ್ನು ಶ್ರುತಪಡಿಸಲು ಇಚ್ಛಿಸುತ್ತಾನೋ ಅವನೇ ಹೊರತು ಮತ್ತಾರೂ ಅರಿಯರು,” ಎಂದು ಹೇಳಿದರು.


ನನ್ನ ಜನರು ಮರದ ತುಂಡನ್ನು ಹಿಡಿದು ಕಣಿ ಕೇಳುತ್ತಾರೆ; ಕೈಯಲ್ಲಿ ಹಿಡಿದ ದೊಣ್ಣೆಯಿಂದ ವಿವೇಕವಾಣಿಯನ್ನು ಪಡೆಯಲೆತ್ನಿಸುತ್ತಾರೆ. ವ್ಯಭಿಚಾರಗುಣ ಅವರನ್ನು ತಪ್ಪುದಾರಿಗೆ ಎಳೆದಿದೆ. ದೇವರ ಸದ್ಭಕ್ತಿಯನ್ನು ತೊರೆದು ಅವರು ಧರ್ಮಭ್ರಷ್ಠರಾಗಿದ್ದಾರೆ.


ಸರ್ವೇಶ್ವರ ನಿಮ್ಮ ಮೇಲೆ ಗಾಢನಿದ್ರೆಯನ್ನು ಬರಮಾಡಿ ಪ್ರವಾದಿಗಳೆಂಬ ಕಣ್ಣುಗಳನ್ನು ಕಟ್ಟಿಬಿಟ್ಟಿದ್ದಾರೆ. ದಿವ್ಯದರ್ಶನಗಳೆಂಬ ಕಲೆಗಳಿಗೆ ಮುಸುಕು ಹಾಕಿಬಿಟ್ಟಿದ್ದಾರೆ.


‘ದೇವರ ಉಪದೇಶವನ್ನೂ ದೇವರ ಬೋಧನೆಯನ್ನೂ ವಿಚಾರಿಸೋಣ’ ಎಂದು ಅವರು ಹೇಳುವತನಕ ಅವರಿಗೆ ಜ್ಞಾನೋದಯವಾಗುವುದಿಲ್ಲ.


ಪ್ರಿಯರೇ, ನಮ್ಮ ಪ್ರಭುವಾದ ಕ್ರಿಸ್ತಯೇಸುವಿನ ಪ್ರೇಷಿತರು. ನಿಮಗೆ ಮುಂಚಿತವಾಗಿ ತಿಳಿಸಿದ ಮಾತುಗಳನ್ನು ನೆನಪುಮಾಡಿಕೊಳ್ಳಿ.


ಪೂರ್ವಕಾಲದಲ್ಲಿ ಪವಿತ್ರ ಪ್ರವಾದಿಗಳು ಹೇಳಿದ ಮಾತುಗಳನ್ನು ಮತ್ತು ಪ್ರೇಷಿತರ ಮೂಲಕ, ಲೋಕೋದ್ಧಾರಕರಾದ ನಮ್ಮ ಪ್ರಭು ಕೊಟ್ಟ ಆಜ್ಞೆಗಳನ್ನು ನಿಮ್ಮ ಜ್ಞಾಪಕಕ್ಕೆ ತರಲು ಬಯಸಿದ್ದೇನೆ.


ನೀವು ಹೊರಗಿನ ತೋರಿಕೆಗಳನ್ನು ಗಮನಿಸುವಂತವರು. ಯಾರಾದರೂ ತಾನು ಕ್ರಿಸ್ತಯೇಸುವಿಗೆ ಸೇರಿದವನು ಎಂದು ದೃಢವಾಗಿ ನಂಬುವುದಾದರೆ, ಅವನು ಮತ್ತೆ ತನ್ನನ್ನೇ ಪರೀಕ್ಷಿಸಿ ನೋಡಲಿ. ಏಕೆಂದರೆ, ಅವನಂತೆಯೇ ನಾವೂ ಕ್ರಿಸ್ತಯೇಸುವಿಗೆ ಸೇರಿದವರು.


“ದೇವರು ಅವರಿಗೆ ಜಡಸ್ವಭಾವವನ್ನು ಕೊಟ್ಟರು. ಇಂದಿನವರೆಗೂ ಅವರು ಕಣ್ಣಿದ್ದೂ ಕಾಣರು, ಕಿವಿಯಿದ್ದೂ ಕೇಳರು,” ಎಂದು ಲಿಖಿತವಾಗಿದೆ. ಇದಲ್ಲದೆ ದಾವೀದನು ಇಂತೆಂದಿದ್ದಾನೆ:


ದೇವರಿಗೆ ಅತ್ಯಂತ ಪ್ರಿಯರು ಹಾಗು ದೇವಜನರಾಗಲು ಕರೆಹೊಂದಿದವರು ಆದ ರೋಮ್‍ನಗರ ನಿವಾಸಿಗಳೆಲ್ಲರಿಗೆ: ಕ್ರಿಸ್ತಯೇಸುವಿನ ದಾಸನೂ ಪ್ರೇಷಿತನಾಗಲು ಕರೆಹೊಂದಿದವನೂ ದೇವರ ಶುಭಸಂದೇಶವನ್ನು ಸಾರಲು ನೇಮಕಗೊಂಡವನೂ ಆದ ಪೌಲನು ಬರೆಯುವ ಪತ್ರ: ನಮ್ಮ ತಂದೆಯಾದ ದೇವರು ಹಾಗು ಪ್ರಭುವಾದ ಯೇಸುಕ್ರಿಸ್ತರು ನಿಮಗೆ ಕೃಪಾಶೀರ್ವಾದವನ್ನೂ ಶಾಂತಿಸಮಾಧಾನವನ್ನೂ ಅನುಗ್ರಹಿಸಲಿ.


ಯೇಸು ಪುನಃ, “ನಿಮಗೆ ಶಾಂತಿ, ಪಿತನು ನನ್ನನ್ನು ಕಳುಹಿಸಿದಂತೆಯೇ ನಾನೂ ನಿಮ್ಮನ್ನು ಕಳುಹಿಸುತ್ತೇನೆ,” ಎಂದರು.


ಈ ಮಂದೆಗೆ ಸೇರದ ಬೇರೆ ಕುರಿಗಳೂ ನನಗಿವೆ. ಅವನ್ನೂ ನಾನು ಕರೆತರಬೇಕು. ಅವು ಸಹ ನನ್ನ ಸ್ವರಕ್ಕೆ ಕಿವಿಗೊಡುತ್ತವೆ. ಆಗ ಒಂದೇ ಕುರಿಹಿಂಡು ಆಗುವುದು. ಒಬ್ಬನೇ ಕುರಿಗಾಹಿ ಇರುವನು.


“ಗಾಳಿಮಾತಿನಿಂದ ಮೋಸಮಾಡುವಂಥ ಸುಳ್ಳುಗಾರನೊಬ್ಬನು: ‘ದ್ರಾಕ್ಷಾರಸ, ಮದ್ಯಪಾನಗಳ ಕುರಿತು ಪ್ರವಾದನೆ ಮಾಡುತ್ತೇನೆ, ಎಂದು ಹೇಳಿದರೆ ಅಂಥವನೇ ಈ ಜನರಿಗೆ ಸರಿಯಾದ ಪ್ರವಾದಿ ಎನಿಸಿಕೊಳ್ಳುವನು.


“ನೀವು ನರಲೋಕದವರು, ನಾನು ಪರಲೋಕದವನು. ನಿಮ್ಮಂತೆ ನಾನು ಇಹಲೋಕದವನಲ್ಲ.


ಕಾವಲುಗಾರನು ಅವನಿಗೆ ಬಾಗಿಲು ತೆರೆಯುತ್ತಾನೆ. ಕುರಿಗಳು ಅವನ ಸ್ವರವನ್ನು ಕೇಳುತ್ತವೆ. ಅವನು ತನ್ನ ಕುರಿಗಳನ್ನು ಹೆಸರಿಟ್ಟು ಕರೆದು ಹೊರಗೆ ಬಿಡುತ್ತಾನೆ.


ಇಡೀ ಲೋಕವು ಕೇಡಿಗನ ವಶದಲ್ಲಿ ಇದ್ದರು ಸಹ ನಾವು ದೇವರಿಗೆ ಸೇರಿದವರೆಂಬುದು ನಮಗೆ ತಿಳಿದಿದೆ.


‘ನಾನು ಅಸತ್ಯವನ್ನಾಡುವ ಆತ್ಮವಾಗಿ ಅವನ ಎಲ್ಲ ಪ್ರವಾದಿಗಳಲ್ಲಿ ಸೇರುವೆನು’, ಎಂದು ಉತ್ತರಕೊಟ್ಟಿತು. ಆಗ ಸರ್ವೇಶ್ವರ ಅದಕ್ಕೆ, ‘ಹೋಗಿ ಅದರಂತೆಯೇ ಮಾಡು; ಅವನನ್ನು ಪ್ರೇರೇಪಿಸಿ ಸಫಲನಾಗುವೆ’, ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು