Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಯೋಹಾನನು 4:7 - ಕನ್ನಡ ಸತ್ಯವೇದವು C.L. Bible (BSI)

7 ಪ್ರಿಯರೇ, ನಾವು ಒಬ್ಬರನ್ನೊಬ್ಬರು ಪ್ರೀತಿಸೋಣ. ಪ್ರೀತಿ ದೇವರಿಂದ ಉಗಮವಾದುದು. ಪ್ರೀತಿಸುವವನು ದೇವರ ಮಗನು. ಅವನು ದೇವರನ್ನು ಬಲ್ಲವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಪ್ರಿಯರೇ, ನಾವು ಒಬ್ಬರನ್ನೊಬ್ಬರು ಪ್ರೀತಿಸೋಣ. ಏಕೆಂದರೆ ಪ್ರೀತಿಯು ದೇವರಿಂದ ಬಂದದ್ದಾಗಿದೆ ಮತ್ತು ಪ್ರೀತಿ ಮಾಡುವ ಪ್ರತಿಯೊಬ್ಬನು ದೇವರಿಂದ ಹುಟ್ಟಿದವನೂ ದೇವರನ್ನು ಬಲ್ಲವನೂ ಆಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಪ್ರಿಯರೇ, ನಾವು ಒಬ್ಬರನ್ನೊಬ್ಬರು ಪ್ರೀತಿಸೋಣ. ಪ್ರೀತಿಯು ದೇವರಿಂದಾಗಿದೆ, ಮತ್ತು ಪ್ರೀತಿಮಾಡುವ ಪ್ರತಿಯೊಬ್ಬನು ದೇವರಿಂದ ಹುಟ್ಟಿದವನೂ ದೇವರನ್ನು ಬಲ್ಲವನೂ ಆಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಪ್ರಿಯ ಸ್ನೇಹಿತರೇ, ಪ್ರೀತಿಯು ದೇವರಿಂದ ಬಂದಿರುವುದರಿಂದ ನಾವು ಒಬ್ಬರನ್ನೊಬ್ಬರು ಪ್ರೀತಿಸಬೇಕು. ಪ್ರೀತಿಸುವವನು ದೇವರಿಂದ ಹೊಸದಾಗಿ ಹುಟ್ಟಿದವನಾಗಿದ್ದಾನೆ. ಆದ್ದರಿಂದ ಅವನು ದೇವರನ್ನು ಬಲ್ಲವನಾಗಿರುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಪ್ರಿಯರೇ, ನಾವು ಒಬ್ಬರನ್ನೊಬ್ಬರು ಪ್ರೀತಿಸೋಣ. ಏಕೆಂದರೆ ಪ್ರೀತಿಯು ದೇವರಿಂದಾಗಿದೆ. ಪ್ರೀತಿ ಮಾಡುವ ಪ್ರತಿಯೊಬ್ಬರು ದೇವರಿಂದ ಹುಟ್ಟಿದವರೂ ದೇವರನ್ನು ಬಲ್ಲವರೂ ಆಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ಪ್ರಿತಿಚ್ಯಾನು, ಅಮಿ ಎಕಾಮೆಕಾಕ್ ಪ್ರೆಮ್ ಕರುಂವಾ; ಕಶ್ಯಾಕ್ ಮಟ್ಲ್ಯಾರ್ ಪ್ರೆಮ್ ದೆವಾಕ್ನಾ ಯೆತಾ, ಜೆ ಕೊನ್ ಪ್ರೆಮ್ ಕರ್ತಾ ತೊ ದೆವಾಚೊ ಪೊರ್ ಅನಿ ತೊ ದೆವಾಕ್ ವಳಕ್ತಾ .

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಯೋಹಾನನು 4:7
25 ತಿಳಿವುಗಳ ಹೋಲಿಕೆ  

ತಾನು ದೇವರನ್ನು ಪ್ರೀತಿಸುತ್ತೇನೆಂದು ಒಬ್ಬನು ಹೇಳುತ್ತಾ ತನ್ನ ಸಹೋದರನನ್ನು ದ್ವೇಷಿಸಿದರೆ, ಅವನು ಸುಳ್ಳುಗಾರನಾಗುತ್ತಾನೆ. ತಾನು ಕಂಡಿರುವ ತನ್ನ ಸಹೋದರನನ್ನು ಪ್ರೀತಿಸದವನು ತಾನು ಕಾಣದಿರುವ ದೇವರನ್ನು ಹೇಗೆ ಪ್ರೀತಿಸಿಯಾನು?


ಪ್ರೀತಿಸದವನು ದೇವರನ್ನು ಬಲ್ಲವನಲ್ಲ. ಏಕೆಂದರೆ, ದೇವರು ಪ್ರೀತಿಸ್ವರೂಪಿ.


ಸತ್ಯಕ್ಕೆ ಶರಣಾಗಿ ಆತ್ಮಶುದ್ಧಿಹೊಂದಿರುವ ನೀವು ಸಹೋದರರನ್ನು ನಿಷ್ಕಪಟದಿಂದ ಪ್ರೀತಿಸಬಲ್ಲಿರಿ. ಎಂದೇ, ಒಬ್ಬರನ್ನೊಬ್ಬರು ಹೃತ್ಪೂರ್ವಕವಾಗಿಯೂ ಯಥಾರ್ಥವಾಗಿಯೂ ಪ್ರೀತಿಸಿರಿ.


ತನ್ನ ಸಹೋದರನನ್ನು ಪ್ರೀತಿಸುವವನಾದರೋ ಬೆಳಕಿನಲ್ಲಿ ನೆಲೆಗೊಂಡಿರುತ್ತಾನೆ. ಎಡವಿ ಪಾಪದಲ್ಲಿ ಬೀಳಿಸುವಂಥದ್ದೇನೂ ಅವನಲ್ಲಿ ಇರದು.


ಪವಿತ್ರಾತ್ಮದತ್ತವಾದ ಸತ್ಫಲಗಳು ಯಾವುವೆಂದರೆ: ಪ್ರೀತಿ, ಆನಂದ, ಶಾಂತಿಸಮಾಧಾನ, ಸಹನೆ, ದಯೆ, ಸದ್ಗುಣ, ಪ್ರಾಮಾಣಿಕತೆ, ಸೌಭಾಗ್ಯ, ಸಂಯಮ - ಇಂಥವುಗಳೇ.


ದೇವರು ನಮಗೆ ಪ್ರದಾನಮಾಡಿರುವ ಪವಿತ್ರಾತ್ಮ ನಮ್ಮನ್ನು ಹೇಡಿಗಳನ್ನಾಗಿ ಮಾಡುವುದಿಲ್ಲ; ನಮ್ಮಲ್ಲಿ ದೈವೀಶಕ್ತಿ, ಪ್ರೀತಿ ಹಾಗೂ ಸಂಯಮಗಳು ಪ್ರವರ್ಧಿಸುವಂತೆ ಮಾಡುತ್ತಾರೆ.


ದೇವರನ್ನು ಯಾರೂ ಎಂದೂ ನೋಡಿಲ್ಲ. ಆದರೂ ನಾವು ಒಬ್ಬರನ್ನೊಬ್ಬರು ಪ್ರೀತಿಸಿದರೆ ದೇವರು ನಮ್ಮಲ್ಲಿ ನೆಲೆಸಿರುತ್ತಾರೆ. ಅವರ ಪ್ರೀತಿ ನಮ್ಮಲ್ಲಿ ಸಿದ್ಧಿಗೆ ಬರುತ್ತದೆ.


ಕ್ರಿಸ್ತಯೇಸು ಸತ್ಯಸ್ವರೂಪಿ ಎಂಬುದನ್ನು ನೀವು ಬಲ್ಲಿರಿ. ಎಂದೇ, ಸತ್ಯಮಾರ್ಗದಲ್ಲಿ ನಡೆಯುವ ಪ್ರತಿಯೊಬ್ಬನೂ ಅವರಿಂದ ಜನಿಸಿದವನು ಎಂಬುದು ನಿಮಗೆ ವೇದ್ಯವಾಗಿರಬೇಕು.


ಏಕೈಕ ನಿಜದೇವರಾದ ನಿಮ್ಮನ್ನೂ ನೀವು ಕಳುಹಿಸಿಕೊಟ್ಟ ಯೇಸು ಕ್ರಿಸ್ತನನ್ನೂ ಅರಿತುಕೊಳ್ಳುವುದೇ ನಿತ್ಯಜೀವ.


“ಕತ್ತಲೆಯಿಂದ ಬೆಳಕು ಹೊಳೆಯಲಿ,” ಎಂದ ದೇವರೇ, ತಮ್ಮ ಜ್ಯೋತಿಯಿಂದ ನಮ್ಮ ಅಂತರಂಗವನ್ನು ಬೆಳಗಿಸಿದ್ದಾರೆ. ಇದರ ಪರಿಣಾಮವಾಗಿ ಕ್ರಿಸ್ತಯೇಸುವಿನ ಮುಖಮಂಡಲದಲ್ಲಿ ಪ್ರಜ್ವಲಿಸುತ್ತಿರುವ ದೇವರ ಮಹಿಮೆಯ ದಿವ್ಯಜ್ಞಾನವು ನಮ್ಮಲ್ಲಿ ಉದಯಿಸುವಂತಾಗಿದೆ.


ನಿಮ್ಮ ದೇವರಾದ ಸರ್ವೇಶ್ವರ ನಿಮ್ಮ ಮತ್ತು ನಿಮ್ಮ ಸಂತತಿಯವರ ಅಂತರಂಗಕ್ಕೇ ಸುನ್ನತಿ ಮಾಡುವರು. ಆಗ ನೀವು ಅವರನ್ನು ಸಂಪೂರ್ಣ ಹೃದಯದಿಂದಲೂ ಮನಸ್ಸಿನಿಂದಲೂ ಪ್ರೀತಿಸಿ ಬದುಕಿಬಾಳುವಿರಿ.


ಈಗಲಾದರೋ ನಿಜದೇವರನ್ನು ಅರಿತುಕೊಂಡಿದ್ದೀರಿ; ಸರಿಯಾಗಿ ಹೇಳಬೇಕಾದರೆ ದೇವರು ನಿಮ್ಮನ್ನು ಅರಿತುಕೊಂಡಿದ್ದಾರೆ. ಹೀಗಿರಲಾಗಿ, ದುರ್ಬಲ ಹಾಗೂ ದರಿದ್ರವಾದ ಮೂಲಭೂತ ಶಕ್ತಿಗಳಿಗೆ ನೀವು ಮರಳುವುದೇಕೆ? ಪುನಃ ಅವುಗಳಿಗೆ ಗುಲಾಮರಾಗಲು ಇಚ್ಛಿಸುವುದೇಕೆ?


ನಿಮಗೊಂದು ಹೊಸ ಆಜ್ಞೆಯನ್ನು ಕೊಡುತ್ತೇನೆ: ಒಬ್ಬರನ್ನೊಬ್ಬರು ಪ್ರೀತಿಸಿರಿ. ನಾನು ನಿಮ್ಮನ್ನು ಪ್ರಿತಿಸಿದಂತೆಯೇ ನೀವು ಸಹ ಒಬ್ಬರನ್ನೊಬ್ಬರು ಪ್ರೀತಿಸಿರಿ.


ಆದರೆ ದೇವರನ್ನು ಪ್ರೀತಿಸುವವನನ್ನು ದೇವರು ಗುರುತಿಸುತ್ತಾರೆ.


ನಾವು ದೇವರ ಆಜ್ಞೆಗಳನ್ನು ಕೈಗೊಂಡು ನಡೆದರೆ ಅದರಿಂದಲೇ ಅವರ ಅರಿವು ನಮಗಿದೆ ಎಂದು ಖಚಿತವಾಗುತ್ತದೆ.


ದೇವರನ್ನು ಬಲ್ಲೆನೆಂದು ಹೇಳಿಕೊಳ್ಳುತ್ತಾ ಅವರ ಆಜ್ಞೆಗಳನ್ನು ಕೈಗೊಳ್ಳದೆ ಇರುವವನು ಸುಳ್ಳುಗಾರ ಮತ್ತು ಸತ್ಯವೆಂಬುದೇ ಅವನಲ್ಲಿ ಇರುವುದಿಲ್ಲ.


ಪ್ರಿಯರೇ, ನಾನು ನಿಮಗೆ ಬರೆಯುತ್ತಿರುವುದು ಹೊಸ ಆಜ್ಞೆಯೇನೂ ಅಲ್ಲ, ಮೊದಲಿನಿಂದಲೂ ನೀವು ಪಡೆದಿರುವ ಹಳೆಯ ಆಜ್ಞೆಯೇ. ಈ ಆಜ್ಞೆಯೇ ನೀವು ಈಗಾಗಲೇ ಕೇಳಿರುವ ಸಂದೇಶ.


ದೇವರಿಂದ ಜನಿಸಿದ ಯಾವನೂ ಪಾಪಮಾಡನು. ದೇವರ ಜೀವದ ಕುಡಿ ಅವನಲ್ಲಿರುವುದು. ಅವನು ಪಾಪದಲ್ಲಿ ಜೀವಿಸನು. ಏಕೆಂದರೆ, ಅವನು ದೇವರಿಂದ ಜನಿಸಿದವನು.


ಪ್ರಿಯರೇ, ದೇವರೇ ನಮ್ಮನ್ನು ಇಷ್ಟಾಗಿ ಪ್ರೀತಿಸಿರುವಲ್ಲಿ ನಾವು ಸಹ ಒಬ್ಬರನ್ನೊಬ್ಬರು ಪ್ರೀತಿಸಲೇಬೇಕು.


ಹೀಗೆ ದೇವರು ನಮ್ಮಲ್ಲಿಟ್ಟಿರುವ ಪ್ರೀತಿ ನಮಗೆ ಗೊತ್ತಿದೆ. ಅದರಲ್ಲಿ ನಮಗೆ ವಿಶ್ವಾಸವಿದೆ. ದೇವರು ಪ್ರೀತಿಸ್ವರೂಪಿ. ಪ್ರೀತಿಯಲ್ಲಿ ನೆಲೆಸಿರುವವನು ದೇವರಲ್ಲಿ ನೆಲೆಸಿದ್ದಾನೆ. ದೇವರೂ ಅವನಲ್ಲಿ ನೆಲೆಸಿರುತ್ತಾರೆ.


ಯೇಸುವೇ ‘ಕ್ರಿಸ್ತ’ ಎಂದು ವಿಶ್ವಾಸಿಸುವ ಪ್ರತಿಯೊಬ್ಬನೂ ದೇವರ ಮಗು. ತಂದೆಯನ್ನು ಪ್ರೀತಿಸುವವನು ಆತನ ಮಗುವನ್ನೂ ಪ್ರೀತಿಸುತ್ತಾನೆ.


ಶ್ರೀಮಾತೆಯೇ, ನಾನು ಮಾಡುವ ಬಿನ್ನಹವಿದು: ನಾವು ಒಬ್ಬರನ್ನೊಬ್ಬರು ಪ್ರೀತಿಸಬೇಕು. ಇದು ಮೊತ್ತಮೊದಲಿನಿಂದಲೂ ನಮಗೆ ಕೊಡಲಾದ ಆಜ್ಞೆಯೇ ಹೊರತು ಹೊಸದೇನೂ ಅಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು