Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಯೋಹಾನನು 4:8 - ಕನ್ನಡ ಸತ್ಯವೇದವು C.L. Bible (BSI)

8 ಪ್ರೀತಿಸದವನು ದೇವರನ್ನು ಬಲ್ಲವನಲ್ಲ. ಏಕೆಂದರೆ, ದೇವರು ಪ್ರೀತಿಸ್ವರೂಪಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಪ್ರೀತಿ ಇಲ್ಲದವನು ದೇವರನ್ನು ಬಲ್ಲವನಲ್ಲ. ಏಕೆಂದರೆ ದೇವರು ಪ್ರೀತಿಸ್ವರೂಪನಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಪ್ರೀತಿಯಿಲ್ಲದವನು ದೇವರನ್ನು ಬಲ್ಲವನಲ್ಲ; ಯಾಕಂದರೆ ದೇವರು ಪ್ರೀತಿಸ್ವರೂಪಿಯು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಪ್ರೀತಿಸದಿರುವವನು ದೇವರನ್ನು ತಿಳಿದಿಲ್ಲ. ಏಕೆಂದರೆ ದೇವರು ಪ್ರೀತಿಸ್ವರೂಪಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಪ್ರೀತಿಯಿಲ್ಲದವರು ದೇವರನ್ನು ಬಲ್ಲವರಲ್ಲ. ಏಕೆಂದರೆ ದೇವರು ಪ್ರೀತಿಯಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ಪ್ರೆಮ್ ಕರಿನಸಲ್ಲೊ ದೆವಾಕ್ ಒಳ್ಕಿನಾ, ಕಶ್ಯಾಕ್ ಮಟ್ಲ್ಯಾರ್ ದೆವುಚ್ ಪ್ರೆಮಾಚೊ ರುಪ್ ಹೊವ್ನ್ ಹಾಯ್ .

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಯೋಹಾನನು 4:8
14 ತಿಳಿವುಗಳ ಹೋಲಿಕೆ  

ಹೀಗೆ ದೇವರು ನಮ್ಮಲ್ಲಿಟ್ಟಿರುವ ಪ್ರೀತಿ ನಮಗೆ ಗೊತ್ತಿದೆ. ಅದರಲ್ಲಿ ನಮಗೆ ವಿಶ್ವಾಸವಿದೆ. ದೇವರು ಪ್ರೀತಿಸ್ವರೂಪಿ. ಪ್ರೀತಿಯಲ್ಲಿ ನೆಲೆಸಿರುವವನು ದೇವರಲ್ಲಿ ನೆಲೆಸಿದ್ದಾನೆ. ದೇವರೂ ಅವನಲ್ಲಿ ನೆಲೆಸಿರುತ್ತಾರೆ.


ಪ್ರಭು, ನೀ ದಯಾಳು, ದೇವಾ ನೀ ಕರುಣಾಮೂರ್ತಿ I ಸಹನಶೀಲನು, ಸತ್ಯಸ್ವರೂಪಿ, ಪ್ರೇಮಮೂರ್ತಿ II


ಪ್ರಿಯರೇ, ನಾವು ಒಬ್ಬರನ್ನೊಬ್ಬರು ಪ್ರೀತಿಸೋಣ. ಪ್ರೀತಿ ದೇವರಿಂದ ಉಗಮವಾದುದು. ಪ್ರೀತಿಸುವವನು ದೇವರ ಮಗನು. ಅವನು ದೇವರನ್ನು ಬಲ್ಲವನು.


ಕೊನೆಯದಾಗಿ ಪ್ರಿಯ ಸಹೋದರರೇ, ಸಂತೋಷದಿಂದಿರಿ, ಪರಿಪೂರ್ಣರಾಗಲು ಪ್ರಯತ್ನಿಸಿರಿ. ನನ್ನ ಬುದ್ಧಿಮಾತುಗಳಿಗೆ ಕಿವಿಗೊಡಿ; ಒಮ್ಮನಸ್ಸಿನಿಂದ ಬಾಳಿರಿ; ಸಮಾಧಾನದಿಂದ ಜೀವಿಸಿರಿ; ಆಗ ಪ್ರೀತಿ ಮತ್ತು ಶಾಂತಿ ಸ್ವರೂಪರಾದ ದೇವರು ನಿಮ್ಮೊಡನೆ ಇರುತ್ತಾರೆ.


ಪ್ರಭು, ನೀನು ದಯಾವಂತನು, ಕ್ಷಮಿಸುವವನು I ಮೊರೆಯಿಡುವವರಿಗೆ ನೀನು ಕೃಪಾಪೂರ್ಣನು II


ಆದರೆ ಕರುಣಾಮಯ ದೇವರು ನಮ್ಮನ್ನು ಅಪಾರವಾಗಿ ಪ್ರೀತಿಸಿ,


ದೇವರೇ ಬೆಳಕು. ಅವರಲ್ಲಿ ಕತ್ತಲು ಎಂಬುದೇ ಇಲ್ಲ. ಅವರ ಪುತ್ರನಿಂದಲೇ ನಾವು ಕೇಳಿದ ಈ ಸಂದೇಶವನ್ನು ನಿಮಗೆ ಸಾರುತ್ತಿದ್ದೇವೆ.


ಅವರಲ್ಲಿ ನೆಲೆಸಿರುವ ಪ್ರತಿಯೊಬ್ಬನೂ ಪಾಪಮಾಡನು. ಪಾಪಮಾಡುವವನು ಅವರನ್ನು ಕಂಡವನೂ ಅಲ್ಲ, ಅರಿತವನೂ ಅಲ್ಲ.


“ನಾನು ಬೆಳಕಿನಲ್ಲಿದ್ದೇನೆ” ಎಂದು ಹೇಳಿಕೊಂಡು ತನ್ನ ಸಹೋದರನನ್ನು ದ್ವೇಷಿಸುವವನು ಇನ್ನೂ ಕತ್ತಲಲ್ಲೇ ಇದ್ದಾನೆ.


ದೇವರನ್ನು ಬಲ್ಲೆನೆಂದು ಹೇಳಿಕೊಳ್ಳುತ್ತಾ ಅವರ ಆಜ್ಞೆಗಳನ್ನು ಕೈಗೊಳ್ಳದೆ ಇರುವವನು ಸುಳ್ಳುಗಾರ ಮತ್ತು ಸತ್ಯವೆಂಬುದೇ ಅವನಲ್ಲಿ ಇರುವುದಿಲ್ಲ.


ಏಕೆಂದರೆ, ನಮ್ಮ ದೇವರು ದಹಿಸುವ ಅಗ್ನಿ.


ಸನ್ಮಾರ್ಗದಲ್ಲಿ ನಡೆಯದವನೂ ಸಹೋದರನನ್ನು ಪ್ರೀತಿಸದವನೂ ದೇವರಿಂದ ಜನಿಸಿದವನಲ್ಲ. ಹೀಗೆ ದೇವರ ಮಕ್ಕಳು ಯಾರು ಮತ್ತು ಸೈತಾನನ ಮಕ್ಕಳು ಯಾರು ಎಂಬುದನ್ನು ತಿಳಿಯಬಹುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು