Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಯೋಹಾನನು 4:9 - ಕನ್ನಡ ಸತ್ಯವೇದವು C.L. Bible (BSI)

9 ತಮ್ಮ ಏಕೈಕ ಪುತ್ರನ ಮುಖಾಂತರ ನಾವು ಸಜ್ಜೀವವನ್ನು ಪಡೆಯುವಂತೆ ದೇವರು ಅವರನ್ನು ಲೋಕಕ್ಕೆ ಕಳುಹಿಸಿದರು. ನಮ್ಮ ಮೇಲೆ ದೇವರಿಗಿರುವ ಪ್ರೀತಿ ಹೀಗೆ ವ್ಯಕ್ತವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ನಾವು ಆತನ ಮೂಲಕ ಜೀವಿಸುವುದಕ್ಕಾಗಿ ದೇವರು ತನ್ನ ಒಬ್ಬನೇ ಮಗನನ್ನು ಲೋಕಕ್ಕೆ ಕಳುಹಿಸಿಕೊಟ್ಟದ್ದರಲ್ಲಿಯೇ ದೇವರ ಪ್ರೀತಿಯು ನಮ್ಮಲ್ಲಿ ಪ್ರತ್ಯಕ್ಷವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ದೇವರು ತನ್ನ ಒಬ್ಬನೇ ಮಗನನ್ನು ನಾವು ಆತನ ಮೂಲಕ ಜೀವಿಸುವದಕ್ಕಾಗಿ ಲೋಕಕ್ಕೆ ಕಳುಹಿಸಿಕೊಟ್ಟದರಲ್ಲಿಯೇ ದೇವರ ಪ್ರೀತಿಯು ನಮ್ಮಲ್ಲಿ ಪ್ರತ್ಯಕ್ಷವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ದೇವರು ತನ್ನ ಒಬ್ಬನೇ ಮಗನ ಮೂಲಕ ನಮಗೆ ಜೀವವನ್ನು ಕೊಡುವುದಕ್ಕಾಗಿ ಆತನನ್ನು ಈ ಲೋಕಕ್ಕೆ ಕಳುಹಿಸಿದನು. ಹೀಗೆ ದೇವರು ತನ್ನ ಪ್ರೀತಿಯನ್ನು ನಮಗೆ ತೋರಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ತಮ್ಮ ಏಕೈಕ ಪುತ್ರ ಆಗಿರುವ ಕ್ರಿಸ್ತ ಯೇಸುವಿನ ಮೂಲಕ ನಾವು ಜೀವಿಸುವುದಕ್ಕಾಗಿ ದೇವರು ಅವರನ್ನು ಲೋಕಕ್ಕೆ ಕಳುಹಿಸಿದರು. ಇದರಿಂದಲೇ ದೇವರು ತಮ್ಮ ಪ್ರೀತಿಯನ್ನು ನಮ್ಮ ನಡುವೆ ತೋರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

9 ಅಮ್ಕಾ ಜಿವನ್ ದಿವ್ಚೆ ಮನುನ್ ಅಪ್ಲ್ಯಾ ಎಕ್ಲ್ಯಾಚ್ ಲೆಕಾಕ್ ಹ್ಯಾ ಜಗಾಕ್ ಧಾಡುನ್ ದಿವ್ನ್, ದೆವಾನ್ ಅಪ್ಲೊ ಪ್ರೆಮ್ ಅಮ್ಕಾ ದಾಕ್ವುನ್ ದಿಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಯೋಹಾನನು 4:9
27 ತಿಳಿವುಗಳ ಹೋಲಿಕೆ  

ದೇವರು ಲೋಕವನ್ನು ಎಷ್ಟಾಗಿ ಪ್ರೀತಿಸಿದರೆಂದರೆ ತಮ್ಮ ಏಕೈಕ ಪುತ್ರನನ್ನೇ ಧಾರೆಯೆರೆದರು; ಆತನಲ್ಲಿ ವಿಶ್ವಾಸವಿಟ್ಟ ಯಾರೂ ನಾಶವಾಗದೆ ಎಲ್ಲರೂ ನಿತ್ಯಜೀವವನ್ನು ಪಡೆಯಬೇಕೆಂಬುದೇ ದೇವರ ಉದ್ದೇಶ.


ದೇವರು ನಮಗೆ ನಿತ್ಯಜೀವವನ್ನು ಅನುಗ್ರಹಿಸಿದ್ದಾರೆ. ಆ ಜೀವ ಅವರ ಪುತ್ರನಲ್ಲಿದೆ ಎಂಬುದೇ ಈ ಸಾಕ್ಷ್ಯ.


ದೇವರು ತಮ್ಮ ಸ್ವಂತ ಪುತ್ರನನ್ನೇ ನಮ್ಮೆಲ್ಲರಿಗಾಗಿ ಕೊಡಲು ಹಿಂಜರಿಯಲಿಲ್ಲ. ತಮ್ಮ ಪುತ್ರನನ್ನೇ ಬಲಿದಾನವಾಗಿ ಅರ್ಪಿಸಿದ ದೇವರು ಮತ್ತೇನನ್ನು ತಾನೇ ನಮಗೆ ವರದಾನವಾಗಿ ಕೊಡದಿರಲಾರರು?


ಜೀವಸ್ವರೂಪಿ ಆದ ಪಿತನು ನನ್ನನ್ನು ಕಳುಹಿಸಿಕೊಟ್ಟಿರುವರು. ನಾನು ಅವರಿಂದಲೇ ಜೀವಿಸುತ್ತೇನೆ. ಅಂತೆಯೇ ನನ್ನನ್ನು ಭುಜಿಸುವವನು ನನ್ನಿಂದಲೇ ಜೀವಿಸುತ್ತಾನೆ.


ನಾವು ದೇವರನ್ನು ಪ್ರೀತಿಸಿದ್ದರಲ್ಲಿ ಅಲ್ಲ, ಅವರು ನಮ್ಮನ್ನು ಪ್ರೀತಿಸಿ ನಮ್ಮ ಪಾಪನಿವಾರಣಾರ್ಥವಾಗಿ ತಮ್ಮ ಪುತ್ರನನ್ನು ಕಳುಹಿಸಿದ್ದರಲ್ಲಿಯೇ ಪ್ರೀತಿಯ ನಿಜಗುಣ ತೋರಿಬರುತ್ತದೆ.


ಕ್ರಿಸ್ತಯೇಸು ನಮಗೋಸ್ಕರ ತಮ್ಮ ಪ್ರಾಣವನ್ನೇ ತೆತ್ತರು. ಇದರಿಂದ ಪ್ರೀತಿ ಎಂತಹುದೆಂದು ನಾವು ಅರಿತುಕೊಂಡೆವು. ನಾವೂ ಕೂಡ ಸಹೋದರರಿಗಾಗಿ ಪ್ರಾಣಾರ್ಪಣೆ ಮಾಡಲು ಬದ್ಧರಾಗಿದ್ದೇವೆ.


ಕಳ್ಳನು ಬರುವುದು ಕಳ್ಳತನಕ್ಕಾಗಿ, ಕೊಲ್ಲುವುದಕ್ಕಾಗಿ ಮತ್ತು ನಾಶಮಾಡುವುದಕ್ಕಾಗಿ ಮಾತ್ರ. ನಾನು ಬಂದದ್ದಾದರೋ ಜೀವನೀಡಲು, ಯಥೇಚ್ಛವಾಗಿ ನೀಡಲು.


ನಾನೇ ಸ್ವರ್ಗದಿಂದ ಇಳಿದುಬಂದ ಜೀವಂತ ರೊಟ್ಟಿ. ಈ ರೊಟ್ಟಿಯನ್ನು ತಿಂದವನು ಚಿರಕಾಲ ಬಾಳುತ್ತಾನೆ. ಲೋಕೋದ್ಧಾರಕ್ಕಾಗಿ ನಾನು ಅರ್ಪಿಸುವ ನನ್ನ ಮಾಂಸವೇ ನಾನು ಕೊಡುವ ರೊಟ್ಟಿ,” ಎಂದು ಹೇಳಿದರು.


ಪುತ್ರನಲ್ಲಿ ವಿಶ್ವಾಸವಿಟ್ಟವನಿಗೆ ತೀರ್ಪಿಲ್ಲ. ಆತನಲ್ಲಿ ವಿಶ್ವಾಸವಿಡದವನಾದರೋ ಈಗಾಗಲೇ ತೀರ್ಪಿಗೆ ಗುರಿಯಾಗಿದ್ದಾನೆ. ಏಕೆಂದರೆ, ಅವನಿಗೆ ದೇವರ ಏಕೈಕ ಪುತ್ರನಲ್ಲಿ ವಿಶ್ವಾಸವಿಲ್ಲ.


ಏಕೆಂದರೆ, ದೇವರು ತಮ್ಮ ದೂತರಲ್ಲಿ ಯಾರಿಗಾದರೂ - “ನೀನೇ ನನ್ನ ಪುತ್ರ; ನಾನೇ ನಿನ್ನನಿಂದು ಪಡೆದವ,” ಎಂದು ಎಂದಾದರೂ ಹೇಳಿದ್ದುಂಟೇ? ಅಥವಾ, “ನಾನಾತನಿಗೆ ಪಿತನು, ಆತನೆನಗೆ ಪುತ್ರನು,” ಎಂದಾಗಲಿ ಹೇಳಿದ್ದುಂಟೇ?


ಯೇಸು, ಅವರಿಗೆ, “ದೇವರೇ ನಿಮ್ಮ ತಂದೆಯಾಗಿದ್ದರೆ, ನನ್ನ ಮೇಲೆ ನಿಮಗೆ ಪ್ರೀತಿಯಿರುತ್ತಿತ್ತು. ಕಾರಣ, ನಾನು ದೇವರಿಂದಲೇ ಹೊರಟು ಇಲ್ಲಿಗೆ ಬಂದವನು. ನನ್ನಷ್ಟಕ್ಕೆ ನಾನೇ ಬರಲಿಲ್ಲ. ನನ್ನನ್ನು ಕಳುಹಿಸಿದ್ದು ದೇವರೇ.


“ದೇವರಾತ್ಮ ನನ್ನ ಮೇಲಿದೆ ದೀನದಲಿತರಿಗೆ ಶುಭಸಂದೇಶವನ್ನು ಬೋಧಿಸಲೆಂದು ಅವರೆನ್ನನು ಅಭಿಷೇಕಿಸಿದ್ದಾರೆ; ಬಂಧಿತರಿಗೆ ಬಿಡುಗಡೆಯನ್ನು, ಅಂಧರಿಗೆ ದೃಷ್ಟಿದಾನವನ್ನು ಪ್ರಕಟಿಸಲೂ ಶೋಷಿತರಿಗೆ ಸ್ವಾತಂತ್ರ್ಯ ನೀಡಲೂ


ಯಜಮಾನನಿಗೆ ಇನ್ನು ಉಳಿದಿದ್ದವನೆಂದರೆ ಅವನ ಮುದ್ದುಮಗನೊಬ್ಬನೇ, “ನನ್ನ ಮಗನಿಗಾದರೂ ಅವರು ಮರ್ಯಾದೆಕೊಟ್ಟಾರು,” ಎಂದು ಭಾವಿಸಿ, ಕಟ್ಟಕಡೆಗೆ ಆ ಯಜಮಾನ ತನ್ನ ಮಗನನ್ನೇ ಅವರ ಬಳಿಗೆ ಕಳುಹಿಸಿದ.


ಹೀಗೆ ದೇವರು ನಮ್ಮಲ್ಲಿಟ್ಟಿರುವ ಪ್ರೀತಿ ನಮಗೆ ಗೊತ್ತಿದೆ. ಅದರಲ್ಲಿ ನಮಗೆ ವಿಶ್ವಾಸವಿದೆ. ದೇವರು ಪ್ರೀತಿಸ್ವರೂಪಿ. ಪ್ರೀತಿಯಲ್ಲಿ ನೆಲೆಸಿರುವವನು ದೇವರಲ್ಲಿ ನೆಲೆಸಿದ್ದಾನೆ. ದೇವರೂ ಅವನಲ್ಲಿ ನೆಲೆಸಿರುತ್ತಾರೆ.


ಅದಕ್ಕೆ ಯೇಸು, “ಮಾರ್ಗವೂ ಸತ್ಯವೂ ಜೀವವೂ ನಾನೇ. ನನ್ನ ಮುಖಾಂತರ ಬಾರದ ಹೊರತು ಯಾರೂ ಪಿತನ ಬಳಿಗೆ ಬರಲಾರರು.


ಅದಕ್ಕೆ ಯೇಸು, “ದೇವರು ಕಳುಹಿಸಿದಾತನನ್ನು ನೀವು ವಿಶ್ವಾಸಿಸಬೇಕು. ಇದೇ ಅವರು ಮೆಚ್ಚುವ ಕಾರ್ಯ,” ಎಂದರು.


ನನ್ನನ್ನು ಕಳುಹಿಸಿದಾತನು ನನ್ನೊಡನಿದ್ದಾನೆ. ಆತನು ಮೆಚ್ಚುವುದನ್ನೇ ನಾನು ಸತತವೂ ಮಾಡುವುದರಿಂದ ಆತನು ನನ್ನನ್ನು ಏಕಾಕಿಯಾಗಿ ಬಿಟ್ಟಿಲ್ಲ.”


ಏಕೆಂದರೆ, ತಮ್ಮನ್ನು ಗೌರವಿಸುವಂತೆಯೇ ಜನರೆಲ್ಲರು ಪುತ್ರನನ್ನು ಗೌರವಿಸಬೇಕೆಂಬುದು ಅವರ ಬಯಕೆ. ಪುತ್ರನನ್ನು ಗೌರವಿಸದವನು ಆತನನ್ನು ಕಳುಹಿಸಿದ ಪಿತನನ್ನೂ ಗೌರವಿಸುವುದಿಲ್ಲ.


ಕೇಳಿರೀ ದೈವಾಜ್ಞೆಯನು: ಆತನು ಎನಗಿಂತೆದನು: I “ಈ ದಿನ ನಾನಿನ್ನ ಹಡೆದಿಹೆನು: ನೀನೆನಗೆ ಮಗನು II


ಆಗ ದೇವರು, “ನಿನಗೆ ಒಬ್ಬನೇ ಒಬ್ಬನೂ ಮುದ್ದುಮಗನೂ ಆದ ಇಸಾಕನನ್ನು ಕರೆದುಕೊಂಡು ಮೊರೀಯ ಪ್ರಾಂತಕ್ಕೆ ಹೋಗು. ಅಲ್ಲಿ ನಾನು ತೋರಿಸುವ ಬೆಟ್ಟದ ಮೇಲೆ ಅವನನ್ನು ದಹನಬಲಿಯಾಗಿ ಅರ್ಪಿಸು” ಎಂದರು.


ಅದಕ್ಕೆ ಉತ್ತರವಾಗಿ ಯೇಸು, “ಇವನ ಪಾಪವಾಗಲಿ, ಇವನನ್ನು ಹೆತ್ತವರ ಪಾಪವಾಗಲಿ ಇದಕ್ಕೆ ಕಾರಣವಲ್ಲ, ದೇವರ ಕಾರ್ಯ ಇವನಲ್ಲಿ ವ್ಯಕ್ತವಾಗುವಂತೆ ಹೀಗಾಗಿದೆ.


ದೇವರ ಪುತ್ರನ ನಾಮದಲ್ಲಿ ವಿಶ್ವಾಸ ಇಟ್ಟಿರುವ ನೀವು ನಿತ್ಯಜೀವವನ್ನು ಪಡೆದವರು ಎಂಬುದನ್ನು ತಿಳಿಸಲೆಂದೇ ನಾನು ನಿಮಗೆ ಇದನ್ನೆಲ್ಲಾ ಬರೆದಿದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು