Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಯೋಹಾನನು 5:1 - ಕನ್ನಡ ಸತ್ಯವೇದವು C.L. Bible (BSI)

1 ಯೇಸುವೇ ‘ಕ್ರಿಸ್ತ’ ಎಂದು ವಿಶ್ವಾಸಿಸುವ ಪ್ರತಿಯೊಬ್ಬನೂ ದೇವರ ಮಗು. ತಂದೆಯನ್ನು ಪ್ರೀತಿಸುವವನು ಆತನ ಮಗುವನ್ನೂ ಪ್ರೀತಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಯೇಸುವೇ ಕ್ರಿಸ್ತನೆಂದು ನಂಬುವ ಪ್ರತಿಯೊಬ್ಬನೂ ದೇವರಿಂದ ಹುಟ್ಟಿದವನಾಗಿದ್ದಾನೆ. ಯಾವನು ತನ್ನನ್ನು ಹುಟ್ಟಿಸಿದ ತಂದೆಯನ್ನು ಪ್ರೀತಿಸುತ್ತಾನೋ, ಅವನು ತಂದೆಯಿಂದ ಹುಟ್ಟಿದವರೆಲ್ಲರನ್ನೂ ಪ್ರೀತಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಯೇಸುವು ಕ್ರಿಸ್ತನೆಂದು ನಂಬುವ ಪ್ರತಿಯೊಬ್ಬನು ದೇವರಿಂದ ಹುಟ್ಟಿದವನಾಗಿದ್ದಾನೆ. ಯಾವನು ಹುಟ್ಟಿಸಿದ ತಂದೆಯನ್ನು ಪ್ರೀತಿಸುತ್ತಾನೋ ಅವನು ತಂದೆಯಿಂದ ಹುಟ್ಟಿದವರೆಲ್ಲರನ್ನೂ ಪ್ರೀತಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಯೇಸುವೇ ಕ್ರಿಸ್ತನೆಂದು ನಂಬುವವರು ದೇವರ ಮಕ್ಕಳಾಗಿದ್ದಾರೆ. ತಂದೆಯನ್ನು (ದೇವರನ್ನು) ಪ್ರೀತಿಸುವವನು ತಂದೆಯ ಮಕ್ಕಳನ್ನೂ ಪ್ರೀತಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಯೇಸುವೇ ಕ್ರಿಸ್ತ ಎಂದು ನಂಬುವ ಪ್ರತಿಯೊಬ್ಬರೂ ದೇವರಿಂದ ಹುಟ್ಟಿದವರಾಗಿದ್ದಾರೆ. ತಂದೆಯನ್ನು ಪ್ರೀತಿಸುವ ಪ್ರತಿಯೊಬ್ಬರು ದೇವರಿಂದ ಹುಟ್ಟಿದವರನ್ನು ಸಹ ಪ್ರೀತಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ಜೆಜುಕ್ ಕ್ರಿಸ್ತ್ ಮನುನ್ ವಿಶ್ವಾಸ್‍ ಕರ್ತಲೊ ಹರ್ ಎಕ್ಲೊಬಿ ದೆವಾಚೊ ಪೊರ್. ಜೆ ಕೊನ್ ಬಾಬಾಚೊ ಪ್ರೆಮ್ ಕರ್ತಾ, ತೊ ಬಾಬಾಚ್ಯಾ ಪೊರಾಂಚೊಬಿ ಪ್ರೆಮ್ ಕರ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಯೋಹಾನನು 5:1
27 ತಿಳಿವುಗಳ ಹೋಲಿಕೆ  

ಕ್ರಿಸ್ತಯೇಸು ಸತ್ಯಸ್ವರೂಪಿ ಎಂಬುದನ್ನು ನೀವು ಬಲ್ಲಿರಿ. ಎಂದೇ, ಸತ್ಯಮಾರ್ಗದಲ್ಲಿ ನಡೆಯುವ ಪ್ರತಿಯೊಬ್ಬನೂ ಅವರಿಂದ ಜನಿಸಿದವನು ಎಂಬುದು ನಿಮಗೆ ವೇದ್ಯವಾಗಿರಬೇಕು.


ಯೇಸು, ಅವರಿಗೆ, “ದೇವರೇ ನಿಮ್ಮ ತಂದೆಯಾಗಿದ್ದರೆ, ನನ್ನ ಮೇಲೆ ನಿಮಗೆ ಪ್ರೀತಿಯಿರುತ್ತಿತ್ತು. ಕಾರಣ, ನಾನು ದೇವರಿಂದಲೇ ಹೊರಟು ಇಲ್ಲಿಗೆ ಬಂದವನು. ನನ್ನಷ್ಟಕ್ಕೆ ನಾನೇ ಬರಲಿಲ್ಲ. ನನ್ನನ್ನು ಕಳುಹಿಸಿದ್ದು ದೇವರೇ.


ಪ್ರಿಯರೇ, ನಾವು ಒಬ್ಬರನ್ನೊಬ್ಬರು ಪ್ರೀತಿಸೋಣ. ಪ್ರೀತಿ ದೇವರಿಂದ ಉಗಮವಾದುದು. ಪ್ರೀತಿಸುವವನು ದೇವರ ಮಗನು. ಅವನು ದೇವರನ್ನು ಬಲ್ಲವನು.


ನಾವು ನಮ್ಮ ಸಹೋದರರನ್ನು ಪ್ರೀತಿಸುವುದರಿಂದ ಸಾವಿನಿಂದ ಜೀವಕ್ಕೆ ಸಾಗಿದ್ದೇವೆಂದು ತಿಳಿದಿದ್ದೇವೆ. ಪ್ರೀತಿಸದೆ ಇರುವವನು ಸಾವಿನಲ್ಲೇ ನೆಲೆಸಿರುತ್ತಾನೆ.


ದೇವರಿಂದ ಜನಿಸಿದ ಪ್ರತಿ ಒಬ್ಬನೂ ಲೋಕವನ್ನು ಜಯಿಸುತ್ತಾನೆ. ಲೋಕವನ್ನು ಜಯಿಸುವಂಥದು ನಮ್ಮ ವಿಶ್ವಾಸವೇ.


ತಾನು ದೇವರನ್ನು ಪ್ರೀತಿಸುತ್ತೇನೆಂದು ಒಬ್ಬನು ಹೇಳುತ್ತಾ ತನ್ನ ಸಹೋದರನನ್ನು ದ್ವೇಷಿಸಿದರೆ, ಅವನು ಸುಳ್ಳುಗಾರನಾಗುತ್ತಾನೆ. ತಾನು ಕಂಡಿರುವ ತನ್ನ ಸಹೋದರನನ್ನು ಪ್ರೀತಿಸದವನು ತಾನು ಕಾಣದಿರುವ ದೇವರನ್ನು ಹೇಗೆ ಪ್ರೀತಿಸಿಯಾನು?


ದೇವರಿಂದ ಜನಿಸಿದ ಯಾವನೂ ಪಾಪಮಾಡನು. ದೇವರ ಜೀವದ ಕುಡಿ ಅವನಲ್ಲಿರುವುದು. ಅವನು ಪಾಪದಲ್ಲಿ ಜೀವಿಸನು. ಏಕೆಂದರೆ, ಅವನು ದೇವರಿಂದ ಜನಿಸಿದವನು.


ಆಗ ಯೇಸು, “ನಾನು ನಿನಗೆ ಸತ್ಯವಾಗಿ ಹೇಳುತ್ತೇನೆ: ಒಬ್ಬನು ಹೊಸದಾಗಿ ಹುಟ್ಟದಿದ್ದರೆ ಅವನು ದೇವರ ಸಾಮ್ರಾಜ್ಯವನ್ನು ಸೇರಲಾರ,” ಎಂದು ಹೇಳಿದರು.


ಅದಕ್ಕೆ ಪೇತ್ರನು, “ಅಭಿಷಿಕ್ತರಾದ ಲೋಕೋದ್ಧಾರಕ ತಾವೇ, ಜೀವಸ್ವರೂಪರಾದ ದೇವರ ಪುತ್ರ ತಾವೇ,” ಎಂದನು.


ತನ್ನ ಸಹೋದರನನ್ನು ಪ್ರೀತಿಸುವವನಾದರೋ ಬೆಳಕಿನಲ್ಲಿ ನೆಲೆಗೊಂಡಿರುತ್ತಾನೆ. ಎಡವಿ ಪಾಪದಲ್ಲಿ ಬೀಳಿಸುವಂಥದ್ದೇನೂ ಅವನಲ್ಲಿ ಇರದು.


ನನ್ನ ಮೇಲೆ ದ್ವೇಷ ಇದ್ದವನಿಗೆ ನನ್ನ ಪಿತನ ಮೇಲೆಯೂ ದ್ವೇಷ ಇದೆ.


ದೇವರ ಆತ್ಮದಿಂದ ಬಂದ ಪ್ರೇರಣೆಯನ್ನು ನೀವು ಹೀಗೆ ಗುರುತಿಸಬಹುದು; ಮನುಷ್ಯ ಆಗಿ ಬಂದ ಕ್ರಿಸ್ತಯೇಸುವನ್ನು ಒಪ್ಪಿಕೊಳ್ಳುವ ಆತ್ಮವು ದೇವರಿಂದ ಪ್ರೇರಿತವಾದುದು.


ನಮ್ಮ ಪ್ರಭು ಯೇಸುಕ್ರಿಸ್ತರ ತಂದೆಯಾದ ದೇವರಿಗೆ ಸ್ತುತಿಸ್ತೋತ್ರ ಸಲ್ಲಲಿ! ಯೇಸುಕ್ರಿಸ್ತರನ್ನು ಮರಣದಿಂದ ಪುನರುತ್ಥಾನಗೊಳಿಸುವುದರ ಮೂಲಕ ದೇವರು ತಮ್ಮ ಅಪಾರ ಕರುಣೆಯಿಂದ ನಮಗೆ ಹೊಸ ಜನ್ಮವನ್ನು ಮತ್ತು ಜೀವಂತ ನಿರೀಕ್ಷೆಯನ್ನು ನೀಡಿದ್ದಾರೆ.


ಸೃಷ್ಟಿಗಳಲ್ಲೆಲ್ಲಾ ನಾವು ಪ್ರಥಮ ಫಲವಾಗುವಂತೆ ದೇವರು ತಮ್ಮ ಸುಚಿತ್ತದ ಪ್ರಕಾರ ಸತ್ಯವಾಕ್ಯದ ಮೂಲಕ ನಮಗೆ ಜೀವವಿತ್ತರು.


ತಾವೇ ದೇವರಿಂದ ಬಂದ ಪರಮಪೂಜ್ಯರು. ಹೌದು, ಇದೇ ನಮ್ಮ ವಿಶ್ವಾಸ ಮತ್ತು ಗ್ರಹಿಕೆ,” ಎಂದು ಹೇಳಿದನು.


ಲೋಕದ ಸುಖಸಂಪತ್ತುಳ್ಳ ಒಬ್ಬನು, ಕುಂದುಕೊರತೆಯಲ್ಲಿ ಸಿಲುಕಿರುವ ತನ್ನ ಸಹೋದರನನ್ನು ಕಂಡಾಗಲೂ ಮನಕರಗದಿದ್ದರೆ ಅವನಲ್ಲಿ ದೇವರ ಪ್ರೀತಿ ಹೇಗೆ ತಾನೇ ನೆಲೆಸೀತು?


ಅವರು ಪ್ರಯಾಣ ಮಾಡುತ್ತಾ ದಾರಿಯಲ್ಲಿ ನೀರಿದ್ದ ಒಂದು ಸ್ಥಳಕ್ಕೆ ಬಂದರು. ಅದನ್ನು ಕಂಡ ಆ ಅಧಿಕಾರಿ, “ಇಲ್ಲಿ ನೀರಿದೆ. ನಾನು ದೀಕ್ಷಾಸ್ನಾನವನ್ನು ಪಡೆಯಲು ಏನಾದರೂ ಅಭ್ಯಂತರವಿದೆಯೇ?” ಎಂದನು.


ದಿವ್ಯವಾಣಿಯ ಮುಖಾಂತರವೇ ಸಮಸ್ತವೂ ಉಂಟಾಯಿತು. ಉಂಟಾದವುಗಳಲ್ಲಿ ಯಾವುದೂ ಆ ದಿವ್ಯವಾಣಿಯಿಂದಲ್ಲದೆ ಆದುದಿಲ್ಲ.


ಯೇಸುವೇ ದೇವರ ಪುತ್ರನೆಂದು ನಂಬಿದವರೇ ಹೊರತು ಲೋಕವನ್ನು ಜಯಿಸಲು ಬೇರೆ ಯಾರಿಂದ ಸಾಧ್ಯ?


ನಮಗೆ ತಿಳಿದಿರುವಂತೆ ದೇವರಿಂದ ಜನಿಸಿದವನು ಪಾಪಜೀವಿಯಾಗಿರುವುದಿಲ್ಲ. ಏಕೆಂದರೆ, ದೇವರ ಪುತ್ರನ ರಕ್ಷಣೆ ಅವನಿಗಿದೆ. ಕೇಡಿಗನ ಹಿಡಿತಕ್ಕೆ ಅವನು ಸಿಗನು.


ನಮ್ಮ ಜನರ ಮೇಲೆ ಅವನಿಗೆ ಪ್ರೀತಿ ಇದೆ; ಅಲ್ಲದೆ ನಮ್ಮ ಪ್ರಾರ್ಥನಾಮಂದಿರವನ್ನು ಕಟ್ಟಿಸಿಕೊಟ್ಟವನೂ ಅವನೇ,” ಎಂದು ಬಹಳವಾಗಿ ವಿನಂತಿಸಿದರು.


(ಫಿಲಿಪ್ಪನು, “ನೀವು ಹೃದಯಪೂರ್ವಕವಾಗಿ ವಿಶ್ವಾಸಿಸುವುದಾದರೆ ದೀಕ್ಷಾಸ್ನಾನವನ್ನು ಪಡೆಯಬಹುದು,” ಎಂದನು. “ಯೇಸುಕ್ರಿಸ್ತ ದೇವರ ಪುತ್ರ ಎಂದು ನಾನು ವಿಶ್ವಾಸಿಸುತ್ತೇನೆ,” ಎಂದು ಅಧಿಕಾರಿ ಪ್ರತ್ಯುತ್ತರವಿತ್ತನು).


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು