Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಯೋಹಾನನು 5:11 - ಕನ್ನಡ ಸತ್ಯವೇದವು C.L. Bible (BSI)

11 ದೇವರು ನಮಗೆ ನಿತ್ಯಜೀವವನ್ನು ಅನುಗ್ರಹಿಸಿದ್ದಾರೆ. ಆ ಜೀವ ಅವರ ಪುತ್ರನಲ್ಲಿದೆ ಎಂಬುದೇ ಈ ಸಾಕ್ಷ್ಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಆ ಸಾಕ್ಷಿ ಯಾವುದೆಂದರೆ, ದೇವರು ನಮಗೆ ನಿತ್ಯಜೀವವನ್ನು ಅನುಗ್ರಹಿಸಿದ್ದಾನೆ. ಆ ಜೀವವು ಆತನ ಮಗನಲ್ಲಿದೆ ಎಂಬುದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಆ ಸಾಕ್ಷಿ ಯಾವದಂದರೆ ದೇವರು ನಮಗೆ ನಿತ್ಯಜೀವವನ್ನು ಅನುಗ್ರಹಿಸಿದನು, ಆ ಜೀವವು ಆತನ ಮಗನಲ್ಲಿ ಅದೆ ಎಂಬದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ನಮಗೆ ನಿತ್ಯಜೀವವನ್ನು ತಾನು ದಯಪಾಲಿಸಿರುವುದಾಗಿ ದೇವರು ಹೇಳಿದನು. ಈ ನಿತ್ಯಜೀವವು ಆತನ ಮಗನಲ್ಲಿದೆ. (ಯೇಸು)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಆ ಸಾಕ್ಷಿ ಯಾವುದೆಂದರೆ: ದೇವರು ನಮಗೆ ನಿತ್ಯಜೀವವನ್ನು ಅನುಗ್ರಹಿಸಿದ್ದಾರೆ. ಈ ಜೀವವು ದೇವರ ಪುತ್ರ ಕ್ರಿಸ್ತ ಯೇಸುವಿನಲ್ಲಿ ಇದೆ ಎಂಬುದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

11 ತಿ ಸಾಕ್ಷಿ ಖಲಿ ಮಟ್ಲ್ಯಾರ್, ಅಮ್ಕಾ ದೆವಾನ್ ಅಮ್ಕಾ ನಿರಂತರ್ ಜಿವನ್ ದಿಲ್ಯಾನಾಯ್, ತೊ ಜಿವ್ ತೆಚ್ಯಾ ಲೆಕಾಚ್ಯಾ ಭುತ್ತುರ್ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಯೋಹಾನನು 5:11
37 ತಿಳಿವುಗಳ ಹೋಲಿಕೆ  

ಮರಣವೇ ಪಾಪದ ವೇತನ; ನಮ್ಮ ಪ್ರಭು ಯೇಸುಕ್ರಿಸ್ತರಲ್ಲಿ ಇರುವ ನಿತ್ಯಜೀವವೇ ದೇವರ ಉಚಿತ ವರದಾನ.


ಕ್ರಿಸ್ತಯೇಸು ನಮಗೆ ವಾಗ್ದಾನಮಾಡಿರುವ ನಿತ್ಯಜೀವ ಇದೇ.


ಪುತ್ರನಲ್ಲಿ ವಿಶ್ವಾಸವಿಟ್ಟವನು ನಿತ್ಯಜೀವವನ್ನು ಪಡೆದಿರುತ್ತಾನೆ; ಪುತ್ರನಿಗೆ ಶರಣಾಗದವನು ನಿತ್ಯಜೀವವನ್ನು ಸವಿಯನು. ಅವನು ದೇವರ ಕೋಪಾಗ್ನಿಗೆ ಗುರಿಯಾಗುತ್ತಾನೆ,” ಎಂದು ಉತ್ತರಕೊಟ್ಟನು.


ದೇವರ ಪುತ್ರ ಆಗಮಿಸಿ, ಸತ್ಯಸ್ವರೂಪರಾದ ದೇವರನ್ನು ನಾವು ತಿಳಿದುಕೊಳ್ಳುವಂತೆ ನಮಗೆ ಅರಿವನ್ನು ನೀಡಿದ್ದಾರೆ. ಇದನ್ನು ನಾವು ಬಲ್ಲೆವು. ದೇವರ ಪುತ್ರರಾದ ಯೇಸುಕ್ರಿಸ್ತರಲ್ಲಿ ನೆಲೆಸಿರುವ ನಾವು ಸತ್ಯಸ್ವರೂಪಿಯಲ್ಲೇ ನೆಲೆಸಿದ್ದೇವೆ. ನಿಜವಾದ ದೇವರೂ ನಿತ್ಯಜೀವವೂ ಇವರೇ.


ತಮ್ಮ ಏಕೈಕ ಪುತ್ರನ ಮುಖಾಂತರ ನಾವು ಸಜ್ಜೀವವನ್ನು ಪಡೆಯುವಂತೆ ದೇವರು ಅವರನ್ನು ಲೋಕಕ್ಕೆ ಕಳುಹಿಸಿದರು. ನಮ್ಮ ಮೇಲೆ ದೇವರಿಗಿರುವ ಪ್ರೀತಿ ಹೀಗೆ ವ್ಯಕ್ತವಾಯಿತು.


ಆ ದಿವ್ಯವಾಣಿಯಲ್ಲಿ ಸಜ್ಜೀವವಿತ್ತು. ಆ ಜೀವವೇ ಮಾನವಜನಾಂಗದ ಜ್ಯೋತಿಯಾಗಿತ್ತು.


ದೇವರ ಪುತ್ರನಲ್ಲಿ ವಿಶ್ವಾಸವಿಡುವವನು ಈ ಸಾಕ್ಷ್ಯವನ್ನು ತನ್ನ ಅಂತರಂಗದಲ್ಲೇ ಹೊಂದಿರುತ್ತಾನೆ. ದೇವರಲ್ಲಿ ವಿಶ್ವಾಸವಿಡದವನಾದರೋ ಅವರನ್ನು ಸುಳ್ಳುಗಾರರನ್ನಾಗಿಸುತ್ತಾನೆ. ಹೇಗೆಂದರೆ, ದೇವರು ತಮ್ಮ ಪುತ್ರನ ಪರವಾಗಿ ಕೊಟ್ಟ ಸಾಕ್ಷ್ಯದಲ್ಲಿ ಅವನಿಗೆ ನಂಬಿಕೆಯಿಲ್ಲ.


ಇದು ಕಣ್ಣಾರೆ ಕಂಡವನ ಹೇಳಿಕೆ. ಈ ಹೇಳಿಕೆ ಸತ್ಯವಾದುದು; ತಾನು ಸತ್ಯವನ್ನೇ ನುಡಿಯುತ್ತಿದ್ದೇನೆಂಬ ಅರಿವು ಅವನಿಗೆ ಇದೆ. ನೀವು ವಿಶ್ವಾಸಿಸಬೇಕೆಂದೇ ಆತನು ಇದನ್ನು ಹೇಳಿದ್ದಾನೆ.


ನಾನು ಅವುಗಳಿಗೆ ನಿತ್ಯಜೀವವನ್ನು ಕೊಡುತ್ತೇನೆ. ಅವು ಎಂದಿಗೂ ನಾಶ ಆಗುವುದಿಲ್ಲ. ನನ್ನ ಕೈಯಿಂದ ಅವನ್ನು ಯಾರೂ ಕಸಿದುಕೊಳ್ಳಲಾರರು,


ಅದಕ್ಕೆ ಸಿಮೋನ ಪೇತ್ರನು, “ಪ್ರಭುವೇ, ನಾವು ಹೋಗುವುದಾದರೂ ಯಾರ ಬಳಿಗೆ? ನಿತ್ಯಜೀವವನ್ನು ಈಯುವ ನುಡಿ ಇರುವುದು ತಮ್ಮಲ್ಲೇ.


ಪಿತನು ತಾವೇ ಸ್ವಯಂ ಜೀವಮೂಲವಾಗಿರುವಂತೆ ಪುತ್ರನು ಸಹ ಸ್ವಯಂ ಜೀವಮೂಲವಾಗಿರುವಂತೆ ಕರುಣಿಸಿದ್ದಾರೆ.


ನಿತ್ಯಜೀವವನ್ನು ದಯಪಾಲಿಸುವ ಕರುಣಾಮಯ ಪ್ರಭು ಯೇಸುಕ್ರಿಸ್ತರನ್ನು ಎದುರುನೋಡುತ್ತಾ ದೇವರ ಪ್ರೀತಿಯಲ್ಲಿ ನೆಲೆಗೊಂಡಿರಿ.


ಇದಕ್ಕೆ ಪವಿತ್ರಾತ್ಮ ಸಾಕ್ಷಿ. ಏಕೆಂದರೆ, ಪವಿತ್ರಾತ್ಮ ಸತ್ಯಸ್ವರೂಪಿ.


ಇದರಿಂದಾಗಿ, ಮುಂದೆ ವಿಶ್ವಾಸಿಗಳಾಗಿ ನಿತ್ಯಜೀವ ಪಡೆಯುವವರಿಗೆ ಆದರ್ಶ ದೊರಕುವಂತೆ ಕ್ರಿಸ್ತಯೇಸು ನನಗೆ ಪೂರ್ಣ ಸಹನೆ ತೋರಿದರು. ಇದು ದೇವರ ಕರುಣೆಯೇ ಸರಿ.


ಅದಕ್ಕೆ ಯೇಸು, “ಮಾರ್ಗವೂ ಸತ್ಯವೂ ಜೀವವೂ ನಾನೇ. ನನ್ನ ಮುಖಾಂತರ ಬಾರದ ಹೊರತು ಯಾರೂ ಪಿತನ ಬಳಿಗೆ ಬರಲಾರರು.


ದೆಮೇತ್ರಿಯನ ವಿಷಯದಲ್ಲಿ ಎಲ್ಲರೂ ಒಳ್ಳೆಯದನ್ನೇ ಹೇಳುತ್ತಾರೆ. ಸತ್ಯವೂ ಅವನ ಪರವಾಗಿದೆ. ನಾವು ಅವನ ಬಗ್ಗೆ ಸಾಕ್ಷಿ ಹೇಳಬಲ್ಲೆವು. ನಮ್ಮ ಸಾಕ್ಷ್ಯ ಸತ್ಯವೆಂದು ನೀನು ಬಲ್ಲೆ.


ಅವರ ಆಜ್ಞೆಯೇ ನಿತ್ಯಜೀವದಾಯಕ ಎಂದು ನಾನು ಬಲ್ಲೆ. ಆದ್ದರಿಂದಲೇ ಪಿತನು ಹೇಳಿದಂತೆಯೇ ನಾನು ಮಾತನಾಡುತ್ತೇನೆ.”


ಪುತ್ರನನ್ನು ಕಂಡು ಆತನಲ್ಲಿ ವಿಶ್ವಾಸ ಇಡುವ ಪ್ರತಿಯೊಬ್ಬನೂ ನಿತ್ಯಜೀವವನ್ನು ಪಡೆಯಬೇಕೆಂಬುದೇ ನನ್ನ ಪಿತನ ಸಂಕಲ್ಪ. ಅಂಥವನನ್ನು ಅಂತಿಮ ದಿನದಂದು ನಾನು ಜೀವಕ್ಕೆ ಎಬ್ಬಿಸುತ್ತೇನೆ,” ಎಂದು ನುಡಿದರು.


ಬಳಿಕ ಆ ದೇವದೂತನು ಜೀವಜಲದ ನದಿಯನ್ನು ನನಗೆ ತೋರಿಸಿದನು. ಅದು ಸ್ಫಟಿಕದಂತೆ ಮಿನುಗುತ್ತಿತ್ತು. ಅದು ದೇವರ ಹಾಗೂ ಯಜ್ಞದ ಕುರಿಮರಿಯ ಸಿಂಹಾಸನದಲ್ಲಿ ಉಗಮಿಸಿ,


ಯೊವಾನ್ನನು ದೇವರ ಸಂದೇಶಕ್ಕೂ ಕ್ರಿಸ್ತೇಸು ತಿಳಿಸಿದ ಸತ್ಯಕ್ಕೂ ಸಾಕ್ಷಾತ್ ಸಾಕ್ಷಿಯಾಗಿದ್ದಾನೆ.


ವಿಶ್ವಾಸವುಳ್ಳವನಲ್ಲಿ ನಿತ್ಯಜೀವ ಇದೆಯೆಂದು ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ.


ಪಿತನು ಸತ್ತವರನ್ನು ಎಬ್ಬಿಸಿ ಅವರಿಗೆ ಜೀವವನ್ನು ಕೊಡುವಂತೆಯೇ ಪುತ್ರನೂ ತನಗೆ ಬೇಕಾದವರಿಗೆ ಜೀವವನ್ನು ಕೊಡುತ್ತಾನೆ.


ಕೊಯ್ದವನು ಈಗಾಗಲೇ ಕೂಲಿಯನ್ನು ಪಡೆಯುತ್ತಾನೆ. ಅವನು ನಿತ್ಯಜೀವಕ್ಕೆ ಫಲವನ್ನು ಕೂಡಿಸಿಡುತ್ತಾನೆ. ಹೀಗೆ ಬಿತ್ತುವವನೂ ಕೊಯ್ಯುವವನೂ ಒಟ್ಟಿಗೆ ಸಂತೋಷಪಡುತ್ತಾರೆ.


“ಹೀಗೆ ಈ ದುರ್ಜನರು ನಿತ್ಯಶಿಕ್ಷೆಗೂ, ಆ ಸಜ್ಜನರು ನಿತ್ಯಜೀವಕ್ಕೂ ಹೋಗುವರು,” ಎಂದು ಹೇಳಿದರು ಸ್ವಾಮಿ.


ಹೀಗೆ ಪಾಪವು ಮರಣದ ಮೂಲಕ ಆಳ್ವಿಕೆ ನಡೆಸಿದಂತೆ, ದೈವಾನುಗ್ರಹವು ನಮ್ಮ ಪ್ರಭು ಯೇಸುಕ್ರಿಸ್ತರ ಮುಖಾಂತರ ನಮ್ಮನ್ನು ದೇವರೊಡನೆ ಸತ್ಸಂಬಂಧದಲ್ಲಿರಿಸಿ, ಅಮರಜೀವದತ್ತ ಒಯ್ದು, ಆಳ್ವಿಕೆ ನಡೆಸುತ್ತದೆ.


ಜೆರುಸಲೇಮಿನ ಯೆಹೂದ್ಯ ಅಧಿಕಾರಿಗಳು, ಯಾಜಕರನ್ನೂ ಲೇವಿಯರನ್ನೂ ಯೊವಾನ್ನನ ಬಳಿಗೆ ಕಳಿಸಿದರು. ಇವರು, “ನೀನು ಯಾರು?” ಎಂದು ಪ್ರಶ್ನಿಸಿದರು.


ದಾರಿಯಲ್ಲಿ ಸಮಾರಿಯ ಪ್ರಾಂತ್ಯವನ್ನು ಹಾದುಹೋಗಬೇಕಾಗಿತ್ತು.


ನಾವು ದೇವರನ್ನು ಪ್ರೀತಿಸಿದ್ದರಲ್ಲಿ ಅಲ್ಲ, ಅವರು ನಮ್ಮನ್ನು ಪ್ರೀತಿಸಿ ನಮ್ಮ ಪಾಪನಿವಾರಣಾರ್ಥವಾಗಿ ತಮ್ಮ ಪುತ್ರನನ್ನು ಕಳುಹಿಸಿದ್ದರಲ್ಲಿಯೇ ಪ್ರೀತಿಯ ನಿಜಗುಣ ತೋರಿಬರುತ್ತದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು