Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಯೋಹಾನನು 5:13 - ಕನ್ನಡ ಸತ್ಯವೇದವು C.L. Bible (BSI)

13 ದೇವರ ಪುತ್ರನ ನಾಮದಲ್ಲಿ ವಿಶ್ವಾಸ ಇಟ್ಟಿರುವ ನೀವು ನಿತ್ಯಜೀವವನ್ನು ಪಡೆದವರು ಎಂಬುದನ್ನು ತಿಳಿಸಲೆಂದೇ ನಾನು ನಿಮಗೆ ಇದನ್ನೆಲ್ಲಾ ಬರೆದಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ದೇವರ ಮಗನ ಹೆಸರಿನಲ್ಲಿ ನಂಬಿಕೆಯಿಟ್ಟಿರುವವರಾದ ನಿಮ್ಮಲ್ಲಿ ಆ ನಿತ್ಯಜೀವ ಉಂಟೆಂಬುದು ಗೊತ್ತಾಗುವುದಕ್ಕಾಗಿ ನಿಮಗೆ ಈ ವಿಷಯಗಳನ್ನು ಬರೆದಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ದೇವರ ಮಗನ ಹೆಸರಿನಲ್ಲಿ ನಂಬಿಕೆಯಿಟ್ಟಿರುವವರಾದ ನಿಮ್ಮಲ್ಲಿ ನಿತ್ಯಜೀವ ಉಂಟೆಂದು ನಿಮಗೆ ಗೊತ್ತಾಗುವಂತೆ ಈ ಮಾತುಗಳನ್ನು ಬರೆದಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ದೇವರ ಮಗನಲ್ಲಿ ನಂಬಿಕೆಯಿಟ್ಟಿರುವ ನಿಮಗೆ ನಾನು ಈ ಪತ್ರವನ್ನು ಬರೆಯುತ್ತಿದ್ದೇನೆ. ಈಗ ನಿಮಗೆ ನಿತ್ಯಜೀವವಿದೆ ಎಂಬುದು ನಿಮಗೆ ಗೊತ್ತಾಗುವಂತೆ ನಾನು ಈ ಪತ್ರ ಬರೆಯುತ್ತಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ದೇವಪುತ್ರ ಆಗಿರುವವರ ಹೆಸರಿನಲ್ಲಿ ನಂಬಿಕೆಯಿಡುವ ನಿಮಗೆ ನಿತ್ಯಜೀವವು ಉಂಟೆಂದು ನೀವು ತಿಳಿಯುವ ಹಾಗೆ ನಾನು ನಿಮಗೆ ಇವುಗಳನ್ನು ಬರೆದಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

13 ದೆವಾಚ್ಯಾ ಲೆಕಾಚ್ಯಾ ನಾವಾ ವರ್ತಿ ವಿಶ್ವಾಸ್ ಥವಲ್ಲ್ಯಾ ತುಮ್ಕಾ ನಾಶ್ ಹೊಯ್ನಸಲ್ಲೆ ಜಿವನ್ ತುಮ್ಚ್ಯಾಕ್ಡೆ ಹಾಯ್ ಮನ್ತಲೆ ತುಮ್ಕಾ ಖಾತ್ರಿ ಹೊಂವ್ದಿತ್ ಮನುನ್ ಮಿಯಾ ಹೆ ವಿಶಯ್ ಲಿವ್ಕ್ ಲಾಗ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಯೋಹಾನನು 5:13
26 ತಿಳಿವುಗಳ ಹೋಲಿಕೆ  

ಇಲ್ಲಿ ಬರೆದವುಗಳ ಉದ್ದೇಶ ಇಷ್ಟೇ; ಯೇಸು, ದೇವರಪುತ್ರ ಹಾಗು ಲೋಕೋದ್ಧಾರಕ ಎಂದು ನೀವು ವಿಶ್ವಾಸಿಸಬೇಕು; ವಿಶ್ವಾಸಿಸಿ ಅವರ ಹೆಸರಿನಲ್ಲಿ ಸಜ್ಜೀವವನ್ನು ಪಡೆಯಬೇಕು.


ಕೆಲವರಾದರೋ ಅವರನ್ನು ಬರಮಾಡಿಕೊಂಡರು. ಅಂಥವರಿಗೆ, ಅಂದರೆ ಅವರಲ್ಲಿ ವಿಶ್ವಾಸ ಇಟ್ಟವರಿಗೆ, ದೇವರ ಮಕ್ಕಳಾಗುವ ಹಕ್ಕನ್ನು ಅವರು ಕೊಟ್ಟರು.


ನಾವು ದೇವರ ಪುತ್ರ ಯೇಸುಕ್ರಿಸ್ತರ ನಾಮದಲ್ಲಿ ವಿಶ್ವಾಸವಿಟ್ಟು ಅವರು ವಿಧಿಸಿದಂತೆ ಒಬ್ಬರನ್ನೊಬ್ಬರು ಪ್ರೀತಿಸಬೇಕು. ಇದೇ ದೇವರ ಆಜ್ಞೆ.


ಪುತ್ರನಲ್ಲಿ ವಿಶ್ವಾಸವಿಟ್ಟವನಿಗೆ ತೀರ್ಪಿಲ್ಲ. ಆತನಲ್ಲಿ ವಿಶ್ವಾಸವಿಡದವನಾದರೋ ಈಗಾಗಲೇ ತೀರ್ಪಿಗೆ ಗುರಿಯಾಗಿದ್ದಾನೆ. ಏಕೆಂದರೆ, ಅವನಿಗೆ ದೇವರ ಏಕೈಕ ಪುತ್ರನಲ್ಲಿ ವಿಶ್ವಾಸವಿಲ್ಲ.


ನೀವು ಸತ್ಯವನ್ನು ಅರಿಯದವರೆಂದು ಭಾವಿಸಿ ನಾನು ಬರೆಯುತ್ತಿಲ್ಲ, ನೀವು ಸತ್ಯವನ್ನು ಅರಿತವರು; ಸತ್ಯದಿಂದ ಸುಳ್ಳು ಜನಿಸದೆಂಬುದನ್ನು ತಿಳಿದವರು. ಆದುದರಿಂದ ನಾನು ನಿಮಗೆ ಬರೆದಿದ್ದೇನೆ.


ನೀವು ದೇವರ ಮಕ್ಕಳಾಗಿರುವುದರಿಂದಲೇ, “ಅಪ್ಪಾ, ತಂದೆಯೇ,” ಎಂದು ಕರೆಯುವ ತಮ್ಮ ಪುತ್ರನ ಆತ್ಮವನ್ನು ದೇವರು ನಮ್ಮ ಹೃದಯಗಳಿಗೆ ಕಳುಹಿಸಿದ್ದಾರೆ.


ದೇವರ ಪುತ್ರನಲ್ಲಿ ವಿಶ್ವಾಸವಿಡುವವನು ಈ ಸಾಕ್ಷ್ಯವನ್ನು ತನ್ನ ಅಂತರಂಗದಲ್ಲೇ ಹೊಂದಿರುತ್ತಾನೆ. ದೇವರಲ್ಲಿ ವಿಶ್ವಾಸವಿಡದವನಾದರೋ ಅವರನ್ನು ಸುಳ್ಳುಗಾರರನ್ನಾಗಿಸುತ್ತಾನೆ. ಹೇಗೆಂದರೆ, ದೇವರು ತಮ್ಮ ಪುತ್ರನ ಪರವಾಗಿ ಕೊಟ್ಟ ಸಾಕ್ಷ್ಯದಲ್ಲಿ ಅವನಿಗೆ ನಂಬಿಕೆಯಿಲ್ಲ.


ಪ್ರಿಯಮಕ್ಕಳೇ, ನೀವು ಪಾಪಮಾಡಬಾರದೆಂದೇ ನಾನಿದನ್ನು ನಿಮಗೆ ಬರೆಯುತ್ತಿದ್ದೇನೆ. ಒಂದು ವೇಳೆ ಯಾರಾದರೂ ಪಾಪಮಾಡಿದ್ದೇ ಆದರೆ ನಮ್ಮ ಪರವಾಗಿ ಪಿತನ ಬಳಿಯಲ್ಲಿ ಬಿನ್ನಯಿಸಲು ಒಬ್ಬರಿದ್ದಾರೆ. ಅವರೇ ಸತ್ಯಸ್ವರೂಪರಾದ ಯೇಸುಕ್ರಿಸ್ತರು.


ನಮ್ಮೆಲ್ಲರ ಆನಂದವು ಪರಿಪೂರ್ಣವಾಗುವಂತೆ ಇದನ್ನು ಬರೆಯುತ್ತಿದ್ದೇವೆ.


ನನ್ನ ಈ ಪುಟ್ಟ ಪತ್ರವನ್ನು ನಂಬಿಕಸ್ಥ ಸಹೋದರನಾದ ಸಿಲ್ವಾನನ ಸಹಾಯದಿಂದ ನಿಮಗೆ ಬರೆದಿರುತ್ತೇನೆ. ನಿಮ್ಮನ್ನು ಪ್ರೋತ್ಸಾಹಿಸಲೆಂದು ಮತ್ತು ಇದುವೇ ದೇವರ ನಿಜವಾದ ಅನುಗ್ರಹವೆಂದು ಸ್ಪಷ್ಟೀಕರಿಸಲು ಬರೆದಿದ್ದೇನೆ. ಈ ಅನುಗ್ರಹದಲ್ಲಿ ನೀವು ದೃಢವಾಗಿ ನಿಲ್ಲಿರಿ.


ಭೂಮಿಯ ಮೇಲಿನ ನಮ್ಮ ಈ ದೇಹ ಎಂಬ ಗುಡಾರವು ನಾಶವಾಗಿಹೋದರೂ ಸ್ವರ್ಗದಲ್ಲಿ ಶಾಶ್ವತವಾದ ಗೃಹವೊಂದು ನಮಗೆ ದೊರಕುವುದು. ಅದು ಮಾನವರಿಂದ ನಿರ್ಮಿತ ಆದುದಲ್ಲ, ದೇವರಿಂದಲೇ ನಿರ್ಮಿತವಾದುದು. ಇದು ನಮಗೆ ತಿಳಿದ ವಿಷಯ.


ಇವರಿಂದಲ್ಲದೆ ಬೇರಾರಿಂದಲೂ ನಮಗೆ ಜೀವೋದ್ಧಾರವಿಲ್ಲ. ಇವರ ನಾಮವನ್ನು ಬಿಟ್ಟರೆ ಈ ಧರೆಯಲ್ಲಿರುವ ಬೇರೆ ಯಾವ ನಾಮದಿಂದಲೂ ನಾವು ಜೀವೋದ್ಧಾರ ಹೊಂದುವಂತಿಲ್ಲ.”


ಯೇಸು ಸ್ವಾಮಿ ಪಾಸ್ಕಹಬ್ಬಕ್ಕಾಗಿ ಜೆರುಸಲೇಮಿನಲ್ಲಿದ್ದಾಗ ಮಾಡಿದ ಸೂಚಕಕಾರ್ಯಗಳನ್ನು ನೋಡಿ ಅನೇಕರು ಅವರನ್ನು ನಂಬಿದರು.


ನಿಮ್ಮನ್ನು ಸನ್ಮಾರ್ಗದಿಂದ ತಪ್ಪಿಸಬೇಕೆಂದಿರುವವರನ್ನು ಕುರಿತು ಇದನ್ನು ನಿಮಗೆ ಬರೆದಿದ್ದೇನೆ.


ನಿಮ್ಮ ಕಣ್ಣೆದುರಿಗಿರುವ ಈ ಮನುಷ್ಯನು ಯಾರೆಂದು ನಿಮಗೆ ಗೊತ್ತಿದೆ. ಯೇಸುವಿನ ನಾಮದಿಂದಲೇ, ಆ ನಾಮದ ಮೇಲಿಟ್ಟ ವಿಶ್ವಾಸದಿಂದಲೇ, ಈತನು ಶಕ್ತಿಪಡೆದಿದ್ದಾನೆ. ಯೇಸುವಿನಲ್ಲಿಟ್ಟ ಆ ವಿಶ್ವಾಸವೇ ಈತನಿಗೆ, ನೀವೇ ನೋಡುವಂತೆ, ಸಂಪೂರ್ಣ ಆರೋಗ್ಯವನ್ನು ದಯಪಾಲಿಸಿದೆ.


ಇವುಗಳಿಗೆ ಆ ಶಿಷ್ಯನೇ ಸಾಕ್ಷಿ. ಇದನ್ನೆಲ್ಲಾ ಬರೆದಿಟ್ಟವನೂ ಅವನೇ. ಅವನ ಸಾಕ್ಷಿ ಸತ್ಯವಾದುದೆಂದು ನಾವು ಬಲ್ಲೆವು.


“ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ: ನನ್ನ ಮಾತಿಗೆ ಕಿವಿಗೊಟ್ಟು ನನ್ನನ್ನು ಕಳುಹಿಸಿದ ಆತನಲ್ಲಿ ವಿಶ್ವಾಸವಿಡುವವನು ನಿತ್ಯಜೀವವನ್ನು ಪಡೆದಿರುತ್ತಾರೆ. ಅವನು ಖಂಡನೆಗೆ ಗುರಿ ಆಗನು; ಅವನು ಈಗಾಗಲೇ ಸಾವನ್ನು ದಾಟಿ ಜೀವವನ್ನು ಸೇರಿರುತ್ತಾನೆ.


ಕ್ರಿಸ್ತಯೇಸು ನಮಗೆ ವಾಗ್ದಾನಮಾಡಿರುವ ನಿತ್ಯಜೀವ ಇದೇ.


ತಮ್ಮ ಏಕೈಕ ಪುತ್ರನ ಮುಖಾಂತರ ನಾವು ಸಜ್ಜೀವವನ್ನು ಪಡೆಯುವಂತೆ ದೇವರು ಅವರನ್ನು ಲೋಕಕ್ಕೆ ಕಳುಹಿಸಿದರು. ನಮ್ಮ ಮೇಲೆ ದೇವರಿಗಿರುವ ಪ್ರೀತಿ ಹೀಗೆ ವ್ಯಕ್ತವಾಯಿತು.


ದೇವರು ನಮಗೆ ನಿತ್ಯಜೀವವನ್ನು ಅನುಗ್ರಹಿಸಿದ್ದಾರೆ. ಆ ಜೀವ ಅವರ ಪುತ್ರನಲ್ಲಿದೆ ಎಂಬುದೇ ಈ ಸಾಕ್ಷ್ಯ.


ದೇವರ ಪುತ್ರ ಆಗಮಿಸಿ, ಸತ್ಯಸ್ವರೂಪರಾದ ದೇವರನ್ನು ನಾವು ತಿಳಿದುಕೊಳ್ಳುವಂತೆ ನಮಗೆ ಅರಿವನ್ನು ನೀಡಿದ್ದಾರೆ. ಇದನ್ನು ನಾವು ಬಲ್ಲೆವು. ದೇವರ ಪುತ್ರರಾದ ಯೇಸುಕ್ರಿಸ್ತರಲ್ಲಿ ನೆಲೆಸಿರುವ ನಾವು ಸತ್ಯಸ್ವರೂಪಿಯಲ್ಲೇ ನೆಲೆಸಿದ್ದೇವೆ. ನಿಜವಾದ ದೇವರೂ ನಿತ್ಯಜೀವವೂ ಇವರೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು