1 ಯೋಹಾನನು 5:18 - ಕನ್ನಡ ಸತ್ಯವೇದವು C.L. Bible (BSI)18 ನಮಗೆ ತಿಳಿದಿರುವಂತೆ ದೇವರಿಂದ ಜನಿಸಿದವನು ಪಾಪಜೀವಿಯಾಗಿರುವುದಿಲ್ಲ. ಏಕೆಂದರೆ, ದೇವರ ಪುತ್ರನ ರಕ್ಷಣೆ ಅವನಿಗಿದೆ. ಕೇಡಿಗನ ಹಿಡಿತಕ್ಕೆ ಅವನು ಸಿಗನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ದೇವರಿಂದ ಹುಟ್ಟಿರುವವನು ಪಾಪಮಾಡುವುದಿಲ್ಲವೆಂಬುದು ನಮಗೆ ಗೊತ್ತದೆ. ದೇವರಿಂದ ಹುಟ್ಟಿದವನು ತನ್ನನ್ನು ತಾನು ಕಾಪಾಡಿಕೊಳ್ಳುವನು. ಕೆಡುಕನು ಅವನನ್ನು ಮುಟ್ಟುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ದೇವರಿಂದ ಹುಟ್ಟಿರುವವನು ಪಾಪಮಾಡುವವನಲ್ಲವೆಂಬದು ನಮಗೆ ಗೊತ್ತದೆ. ದೇವರಿಂದ ಹುಟ್ಟಿದಾತನು ಅವನನ್ನು ಕಾಪಾಡುವನು; ಕೆಡುಕನು ಅವನನ್ನು ಹಿಡಿಯುವದಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ದೇವರಿಂದ ಹೊಸದಾಗಿ ಹುಟ್ಟಿದವನು ಪಾಪದಲ್ಲೇ ಮುಂದುವರಿಯುವುದಿಲ್ಲವೆಂದು ನಮಗೆ ತಿಳಿದಿದೆ. ದೇವರ ಮಗನಾದ ಯೇಸು ಅವನನ್ನು ಸುರಕ್ಷಿತವಾಗಿ ಕಾಪಾಡುತ್ತಾನೆ. ಕೆಡುಕನು ಅವನಿಗೆ ಕೇಡುಮಾಡಲಾಗುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ದೇವರಿಂದ ಹುಟ್ಟಿರುವವರು ಪಾಪದಲ್ಲಿ ಮುಂದುವರೆಯುವುದಿಲ್ಲವೆಂಬುದು ನಮಗೆ ಗೊತ್ತದೆ. ದೇವರಿಂದ ಹುಟ್ಟಿದವರನ್ನು ದೇವಪುತ್ರ ಆಗಿರುವ ಕ್ರಿಸ್ತ ಯೇಸುವು ಅಂಥವರನ್ನು ಕಾಪಾಡುವರು, ಕೆಡುಕನು ಅಂಥವರನ್ನು ಮುಟ್ಟುವುದಿಲ್ಲ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್18 ದೆವಾಕ್ನಾ ಜಲ್ಮಲ್ಲೊ ಪಾಪ್ ಕರಿನಾ ಮನುನ್ ಅಮ್ಕಾ ಗೊತ್ತ್ ಹಾಯ್. ದೆವಾಕ್ನಾ ಜಲ್ಮಲ್ಲೊ ಅಪ್ನಾಕ್ ಅಪ್ನಿ ರಾಕುನ್ ಘೆತಾ, ಸೈತಾನ್ ತೆಕಾ ಆಪ್ಡುಕ್ ಹೊಯ್ನಾ. ಅಧ್ಯಾಯವನ್ನು ನೋಡಿ |