Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಯೋಹಾನನು 5:20 - ಕನ್ನಡ ಸತ್ಯವೇದವು C.L. Bible (BSI)

20 ದೇವರ ಪುತ್ರ ಆಗಮಿಸಿ, ಸತ್ಯಸ್ವರೂಪರಾದ ದೇವರನ್ನು ನಾವು ತಿಳಿದುಕೊಳ್ಳುವಂತೆ ನಮಗೆ ಅರಿವನ್ನು ನೀಡಿದ್ದಾರೆ. ಇದನ್ನು ನಾವು ಬಲ್ಲೆವು. ದೇವರ ಪುತ್ರರಾದ ಯೇಸುಕ್ರಿಸ್ತರಲ್ಲಿ ನೆಲೆಸಿರುವ ನಾವು ಸತ್ಯಸ್ವರೂಪಿಯಲ್ಲೇ ನೆಲೆಸಿದ್ದೇವೆ. ನಿಜವಾದ ದೇವರೂ ನಿತ್ಯಜೀವವೂ ಇವರೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ದೇವರ ಮಗನು ಈ ಲೋಕಕ್ಕೆ ಬಂದು ನಾವು ಸತ್ಯವಾಗಿರುವಾತನನ್ನು ಅರಿತುಕೊಳ್ಳುವ ಹಾಗೆ ನಮಗೆ ವಿವೇಕವನ್ನು ಕೊಟ್ಟಿದ್ದಾನೆಂಬುದು ನಮಗೆ ಗೊತ್ತಿದೆ, ಮತ್ತು ನಾವು ದೇವರ ಮಗನಾದ ಯೇಸುಕ್ರಿಸ್ತನಲ್ಲಿ ಇರುವವರಾಗಿ ಸತ್ಯದೇವರಾಗಿರುವಾತನಲ್ಲಿದ್ದೇವೆ. ಈ ಕ್ರಿಸ್ತನೇ ಸತ್ಯದೇವರೂ, ನಿತ್ಯಜೀವವೂ ಆಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ದೇವರ ಮಗನು ಬಂದು ನಾವು ಸತ್ಯವಾಗಿರುವಾತನನ್ನು ಅರಿತುಕೊಳ್ಳುವ ಹಾಗೆ ನಮಗೆ ವಿವೇಕವನ್ನು ಕೊಟ್ಟಿದ್ದಾನೆಂಬದು ನಮಗೆ ಗೊತ್ತದೆ. ಮತ್ತು ನಾವು ದೇವರ ಮಗನಾದ ಯೇಸು ಕ್ರಿಸ್ತನಲ್ಲಿ ಇರುವವರಾಗಿ ಸತ್ಯವಾಗಿರುವಾತನಲ್ಲಿದ್ದೇವೆ. ಆತನು ಸತ್ಯದೇವರೂ ನಿತ್ಯಜೀವವೂ ಆಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ದೇವರ ಮಗನು ಬಂದಿದ್ದಾನೆಂಬುದು ನಮಗೆ ತಿಳಿದಿದೆ. ದೇವರ ಮಗನು ನಮಗೆ ತಿಳುವಳಿಕೆಯನ್ನು ದಯಪಾಲಿಸಿರುವನು. ಈಗ ನಾವು ದೇವರನ್ನು ತಿಳಿದುಕೊಳ್ಳಬಲ್ಲೆವು. ಸತ್ಯವಾಗಿರುವಾತನು ದೇವರೇ. ಸತ್ಯ ದೇವರಲ್ಲಿಯೂ ಮತ್ತು ಆತನ ಮಗನಾದ ಯೇಸು ಕ್ರಿಸ್ತನಲ್ಲಿಯೂ ನಾವು ನೆಲೆಸಿದ್ದೇವೆ. ಆತನು ಸತ್ಯದೇವರೂ ನಿತ್ಯಜೀವವೂ ಆಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ದೇವರ ಪುತ್ರ ಆಗಿರುವ ಕ್ರಿಸ್ತ ಯೇಸುವು ಬಂದು, ಸತ್ಯವಾಗಿರುವ ದೇವರನ್ನು ನಾವು ಅರಿತುಕೊಳ್ಳುವ ಹಾಗೆ ಅವರು ನಮಗೆ ತಿಳುವಳಿಕೆಯನ್ನು ಕೊಟ್ಟಿದ್ದಾರೆಂದೂ ನಾವು ಸತ್ಯವಾಗಿರುವ ದೇವರಲ್ಲಿ ಅವರ ಪುತ್ರ ಆಗಿರುವ ಕ್ರಿಸ್ತ ಯೇಸುವಿನಲ್ಲಿ ಇರುವವರಾಗಿದ್ದೇವೆ ಎಂದೂ ನಮಗೆ ಗೊತ್ತಿದೆ. ಈ ಕ್ರಿಸ್ತ ಯೇಸುವೇ ಸತ್ಯ ದೇವರೂ ನಿತ್ಯಜೀವವೂ ಆಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

20 ದೆವಾಚ್ಯಾ ಲೆಕಾನ್ ಹ್ಯಾ ಜಗಾಕ್ ಯೆವ್ನ್ ಅಮಿ ಖರ್ಯಾ ದೆವಾಕ್ ವಳ್ಕುನ್ ಘೆಯ್ ಸಾರ್ಕೆ ಅಮ್ಕಾ ಬುದ್ದ್ ದಿಲ್ಯಾನ್ ಮನುನ್ ಅಮ್ಕಾ ಗೊತ್ತ್ ಹಾಯ್, ಅನಿ ದೆವಾಚ್ಯಾ ಲೆಕಾ ಜೆಜು ಕ್ರಿಸ್ತಾಚ್ಯಾ ವಾಂಗ್ಡಾ ಅಮಿ ಹಾವ್, ಹ್ಯೊಚ್ ಖರ್ಯಾ ದೆವಾಚ್ಯಾ ವಾಂಗ್ಡಾ ಅಮಿ ಹಾತ್, ಹ್ಯೊಚ್ ಖರೊ ದೆವ್ ಅನಿ ಶಾಶ್ವತ್ ಜಿವ್ ಹೊವ್ನ್ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಯೋಹಾನನು 5:20
53 ತಿಳಿವುಗಳ ಹೋಲಿಕೆ  

ಏಕೈಕ ನಿಜದೇವರಾದ ನಿಮ್ಮನ್ನೂ ನೀವು ಕಳುಹಿಸಿಕೊಟ್ಟ ಯೇಸು ಕ್ರಿಸ್ತನನ್ನೂ ಅರಿತುಕೊಳ್ಳುವುದೇ ನಿತ್ಯಜೀವ.


ಆಮೇಲೆ, ಪವಿತ್ರಗ್ರಂಥವನ್ನು ಅವರು ಅರ್ಥಮಾಡಿಕೊಳ್ಳುವಂತೆ ಅವರ ಬುದ್ಧಿಯನ್ನು ವಿಕಾಸಗೊಳಿಸಿದರು.


ಅದಕ್ಕೆ ಉತ್ತರವಾಗಿ ಯೇಸು, “ನಾನು ಇಷ್ಟುಕಾಲ ನಿಮ್ಮೊಡನೆ ಇದ್ದರೂ ನಾನು ಯಾರೆಂಬುದನ್ನು ನೀನು ಅರಿತುಕೊಳ್ಳಲಿಲ್ಲವೆ? ನನ್ನನ್ನು ನೋಡಿದವನು ಪಿತನನ್ನೇ ನೋಡಿದವನಾಗಿದ್ದಾನೆ. ಹೀಗಿರುವಾಗ, ಫಿಲಿಪ್ಪನೇ, ‘ನಮಗೆ ಪಿತನನ್ನು ತೋರಿಸಿ’ ಎಂದು ಹೇಗೆ ಕೇಳುತ್ತೀ?


ನಿಜವಾಗಿಯೂ ನಮ್ಮ ಧರ್ಮದ ನಿಗೂಢಾರ್ಥ ಶ್ರೇಷ್ಠವಾದದ್ದು ಎಂಬುದು ನಿಸ್ಸಂದೇಹವಾದ ವಿಷಯ. “ನರಮಾನವ ರೂಪದಲಿ ಪ್ರತ್ಯಕ್ಷನಾಗಿ ದೇವರಿಗೆ ಪ್ರಿಯನೆಂದು ಪವಿತ್ರಾತ್ಮನಿಂದ ಪ್ರಕಟಿತನಾಗಿ ದೇವದೂತರಿಗೆ ಪ್ರದರ್ಶಿತವಾಗಿ ಅನ್ಯಜನರಿಗೆ ಪ್ರಬೋಧಿತನಾಗಿ ಜಗದಲ್ಲೆಲ್ಲೂ ವಿಶ್ವಾಸಪಡೆದವನಾಗಿ ಸ್ವರ್ಗಕ್ಕೇರಿದಾತ ಮಹಿಮಾನ್ವಿತ ಯೇಸುಕ್ರಿಸ್ತ.


ಇಂತೆನ್ನುತ್ತಾರೆ ಸೇನಾಧೀಶ್ವರ ಸರ್ವೇಶ್ವರ, ಇಸ್ರಯೇಲರ ಅರಸ, ಅವರ ಉದ್ಧಾರಕ: “ಆದಿಯು ನಾನೇ, ಅಂತ್ಯವು ನಾನೇ, ನನ್ನ ಹೊರತು ದೇವರಾರು ಇಲ್ಲ ಬೇರೆ.


ಯೇಸುವೇ ‘ಕ್ರಿಸ್ತ’ ಎಂದು ವಿಶ್ವಾಸಿಸುವ ಪ್ರತಿಯೊಬ್ಬನೂ ದೇವರ ಮಗು. ತಂದೆಯನ್ನು ಪ್ರೀತಿಸುವವನು ಆತನ ಮಗುವನ್ನೂ ಪ್ರೀತಿಸುತ್ತಾನೆ.


ಆಗ ತೋಮನು, “ನನ್ನ ಪ್ರಭುವೇ, ನನ್ನ ದೇವರೇ,” ಎಂದನು.


“ಫಿಲದೆಲ್ಫಿಯದಲ್ಲಿರುವ ಶ್ರೀಸಭೆಯ ದೂತನಿಗೆ ಹೀಗೆ ಬರೆ : ಸತ್ಯವಂತನೂ ಪರಿಶುದ್ಧನೂ ಆಗಿರುವಾತನು ನೀಡುವ ಸಂದೇಶವಿದು: ದಾವೀದನ ಮನೆತನದ ಬೀಗದ ಕೈ ನನ್ನಲ್ಲಿ ಇದೆ. ನಾನು ಬಾಗಿಲನ್ನು ತೆರೆದರೆ ಬೇರೆ ಯಾರೂ ಅದನ್ನು ಮುಚ್ಚಲಾಗದು. ನಾನು ಬಾಗಿಲನ್ನು ಮುಚ್ಚಿದರೆ ಬೇರೆ ಯಾರೂ ಅದನ್ನು ತೆರೆಯಲಾಗದು. ಈಗ ನಾನು ನಿನಗೆ ಹೇಳುವುದೇನೆಂದರೆ :


ಹೀಗೆ ದೇವರು ನಮ್ಮಲ್ಲಿಟ್ಟಿರುವ ಪ್ರೀತಿ ನಮಗೆ ಗೊತ್ತಿದೆ. ಅದರಲ್ಲಿ ನಮಗೆ ವಿಶ್ವಾಸವಿದೆ. ದೇವರು ಪ್ರೀತಿಸ್ವರೂಪಿ. ಪ್ರೀತಿಯಲ್ಲಿ ನೆಲೆಸಿರುವವನು ದೇವರಲ್ಲಿ ನೆಲೆಸಿದ್ದಾನೆ. ದೇವರೂ ಅವನಲ್ಲಿ ನೆಲೆಸಿರುತ್ತಾರೆ.


ಅಬ್ರಹಾಮ್, ಇಸಾಕ್ ಮತ್ತು ಯಕೋಬ ಎಂಬ ಪಿತಾಮಹರೂ ಸಹ ಇವರಿಗೆ ಸೇರಿದವರೇ. ಶಾರೀರಿಕವಾಗಿ ಕ್ರಿಸ್ತಯೇಸುವೂ ಇವರ ವಂಶದಲ್ಲಿ ಹುಟ್ಟಿದವರೇ. ಸಕಲಕ್ಕೂ ಒಡೆಯರಾದ ದೇವರಿಗೆ ನಿರಂತರ ಸ್ತುತಿಸ್ತೋತ್ರ ಸಲ್ಲಲಿ, ಆಮೆನ್.


ನಾನೂ ಪಿತನೂ ಒಂದೇ ಆಗಿದ್ದೇವೆ,” ಎಂದರು.


ಮಗುವೊಂದು ಹುಟ್ಟಿತೆಮಗೆ ವರಪುತ್ರನನು ಕೊಟ್ಟರೆಮಗೆ. ಆತನ ಕೈಯಲ್ಲಿಹುದು ರಾಜ್ಯಾಡಳಿತ ‘ಅದ್ಭುತಶಾಲಿ’, ಮಂತ್ರಿಶ್ರೇಷ್ಠ’ ‘ಪರಾಕ್ರಮದೇವ’, ‘ಅನಂತ ಪಿತ’, ‘ಶಾಂತಿ ನೃಪ’ - ಇವು ಆತನ ನಾಮಾಂಕಿತ.


ದೇವರ ಆತ್ಮದಿಂದ ಬಂದ ಪ್ರೇರಣೆಯನ್ನು ನೀವು ಹೀಗೆ ಗುರುತಿಸಬಹುದು; ಮನುಷ್ಯ ಆಗಿ ಬಂದ ಕ್ರಿಸ್ತಯೇಸುವನ್ನು ಒಪ್ಪಿಕೊಳ್ಳುವ ಆತ್ಮವು ದೇವರಿಂದ ಪ್ರೇರಿತವಾದುದು.


ತಾನು ದೇವರಲ್ಲಿ ನೆಲೆಸಿದ್ದೇನೆಂದು ಹೇಳುವವನು ಕ್ರಿಸ್ತಯೇಸು ಜೀವಿಸಿದಂತೆಯೇ ಜೀವಿಸಬೇಕು. ಇದರಿಂದಲೇ ನಾವು ದೇವರಲ್ಲಿ ನೆಲೆಗೊಂಡಿದ್ದೇವೆಂದು ತಿಳಿದುಕೊಳ್ಳುತ್ತೇವೆ.


ತಮ್ಮ ಪುತ್ರನನ್ನು ಕುರಿತಾದರೋ: “ದೇವಾ, ನಿನ್ನ ಸಿಂಹಾಸನವು ಶಾಶ್ವತವಾದುದು; ನ್ಯಾಯದಂಡವೇ ನಿನ್ನ ರಾಜದಂಡವಾಗಿದೆ.


ನೀವು ನಿಮ್ಮ ವಿಷಯದಲ್ಲಿ ಹಾಗೂ ಪವಿತ್ರಾತ್ಮ ನಿಮ್ಮ ಪಾಲನೆಗೆ ವಹಿಸಿರುವ ಮಂದೆಯ ವಿಷಯದಲ್ಲಿ ಜಾಗರೂಕರಾಗಿರಿ. ಪ್ರಭು ತಮ್ಮ ಸ್ವಂತ ರಕ್ತ ಸುರಿಸಿ ಸಂಪಾದಿಸಿದ ಧರ್ಮಸಭೆಗೆ ಉತ್ತಮ ಕುರಿಗಾಹಿಗಳಾಗಿರಿ.


ನಿಮ್ಮ ಸಂದೇಶವನ್ನು ಇವರಿಗೆ ತಿಳಿಸಿದ್ದೇನೆ. ನಾನು ಲೋಕಕ್ಕೆ ಸೇರಿದವನಲ್ಲ. ಅಂತೆಯೇ, ಇವರೂ ಲೋಕಕ್ಕೆ ಸೇರಿದವರಲ್ಲ. ಈ ಕಾರಣ, ಲೋಕಕ್ಕೆ ಇವರ ಮೇಲೆ ದ್ವೇಷವಿದೆ.


ನಾನು ಈ ದೃಶ್ಯವನ್ನೂ ಕಂಡೆ: ಸ್ವರ್ಗವು ತೆರೆದಿತ್ತು. ಬಿಳಿಯ ಕುದುರೆಯೊಂದು ಕಾಣಿಸಿತು. ಅದರ ಮೇಲೆ ಒಬ್ಬನು ಕುಳಿತಿದ್ದನು. ನಂಬಿಕಸ್ಥನೆಂದೂ ಸತ್ಯವಂತನೆಂದೂ ಆತನ ಹೆಸರು; ಆತನು ನಿಷ್ಪಕ್ಷಪಾತದಿಂದ ನ್ಯಾಯತೀರ್ಪು ಕೊಡುವವನು; ನ್ಯಾಯಬದ್ಧವಾಗಿ ಯುದ್ಧಮಾಡುವವನು.


ಅವರು ದೇವರ ದಾಸನಾದ ಮೋಶೆಯ ಗೀತೆಯನ್ನೂ ಯಜ್ಞದ ಕುರಿಮರಿಯ ಗೀತೆಯನ್ನೂ ಹಾಡುತ್ತಿದ್ದರು. ಅದು ಯಾವುದೆಂದರೆ : ಹೇ ದೇವಾ, ಹೇ ಪ್ರಭೂ, ನೀ ಸರ್ವಶಕ್ತ ! ಏನು ಘನ, ಏನು ಅದ್ಭುತ, ನಿನ್ನ ಸತ್ಕಾರ್ಯ ! ರಾಷ್ಟ್ರಗಳಿಗೆಲ್ಲಾ ನೀ ರಾಜಾಧಿರಾಜ ನಿಜವಾದುದು, ಋಜುವಾದುದು ನಿನ್ನ ಸನ್ಮಾರ್ಗ.


ಅವರು ಆರ್ತಧ್ವನಿಯಿಂದ, ‘ಸರ್ವಶಕ್ತ ಪ್ರಭುವೇ, ಸತ್ಯವಂತರೇ, ಪರಿಶುದ್ಧರೇ, ನಮ್ಮನ್ನು ಕೊಲೆಮಾಡಿದ ಭೂನಿವಾಸಿಗಳಿಗೆ ಇನ್ನೆಷ್ಟುಕಾಲ ನ್ಯಾಯವಿಚಾರಣೆ ಮಾಡದೆ, ಸೇಡನ್ನು ತೀರಿಸಿಕೊಳ್ಳದೆ ಇರುತ್ತೀರಿ?” ಎಂದು ಕೇಳಿದರು.


“ಲವೊದಿಕೀಯದಲ್ಲಿರುವ ಶ್ರೀಸಭೆಯ ದೂತನಿಗೆ ಹೀಗೆ ಬರೆ : ವಿಶ್ವಾಸಪಾತ್ರನೂ ಸತ್ಯಸಾಕ್ಷಿಯೂ ದೇವರ ಸೃಷ್ಟಿಗೆ ಮೂಲಾಧಾರನೂ ಆದ ‘ಆಮೆನ್’ ಎಂಬಾತನು ನೀಡುವ ಸಂದೇಶವಿದು :


ಪಿತನು ತಮ್ಮ ಪುತ್ರನನ್ನು ಲೋಕೋದ್ಧಾರಕನನ್ನಾಗಿ ಕಳುಹಿಸಿಕೊಟ್ಟದ್ದನ್ನು ನಾವು ಕಣ್ಣಾರೆ ಕಂಡಿದ್ದೇವೆ. ಇದರ ವಿಷಯವಾಗಿ ಸಾಕ್ಷಿ ಹೇಳುತ್ತೇವೆ.


ಧರ್ಮಶಾಸ್ತ್ರದ ಪಾಲನೆಯಿಂದ ದೊರಕುವ, ನನ್ನದೇ ಎಂದು ಹೇಳಿಕೊಳ್ಳಬಹುದಾದ ಸತ್ಸಂಬಂಧ ಯಾವುದೂ ನನಗಿಲ್ಲ. ಪ್ರತಿಯಾಗಿ, ನಾನು ಕ್ರಿಸ್ತಯೇಸುವಿನಲ್ಲಿಟ್ಟಿರುವ ವಿಶ್ವಾಸದ ಪ್ರಯುಕ್ತ ದೇವರೊಂದಿಗೆ ಸರಿಯಾದ ಸತ್ಸಂಬಂಧವನ್ನು ಹೊಂದಿದ್ದೇನೆ. ಈ ಸಂಬಂಧವು ದೇವರು ನನಗೆ ದಯಪಾಲಿಸಿರುವ ಅನುಗ್ರಹ. ನನ್ನ ವಿಶ್ವಾಸದ ಆಧಾರದ ಮೇಲೆ ಅವರೇ ನೀಡಿರುವ ಕೃಪಾವರ.


“ಕತ್ತಲೆಯಿಂದ ಬೆಳಕು ಹೊಳೆಯಲಿ,” ಎಂದ ದೇವರೇ, ತಮ್ಮ ಜ್ಯೋತಿಯಿಂದ ನಮ್ಮ ಅಂತರಂಗವನ್ನು ಬೆಳಗಿಸಿದ್ದಾರೆ. ಇದರ ಪರಿಣಾಮವಾಗಿ ಕ್ರಿಸ್ತಯೇಸುವಿನ ಮುಖಮಂಡಲದಲ್ಲಿ ಪ್ರಜ್ವಲಿಸುತ್ತಿರುವ ದೇವರ ಮಹಿಮೆಯ ದಿವ್ಯಜ್ಞಾನವು ನಮ್ಮಲ್ಲಿ ಉದಯಿಸುವಂತಾಗಿದೆ.


ನೀವು ನನ್ನಲ್ಲಿ ನೆಲೆಗೊಂಡಿರಿ, ಆಗ ನಾನು ನಿಮ್ಮಲ್ಲಿ ನೆಲೆಗೊಂಡಿರುವೆನು. ಕವಲು ಮೂಲಬಳ್ಳಿಯಲ್ಲಿ ಒಂದಾಗಿ ನೆಲಸದಿದ್ದರೆ ತನ್ನಷ್ಟಕ್ಕೆ ತಾನೇ ಫಲಕೊಡಲಾಗದು. ಹಾಗೆಯೇ ನೀವು ಕೂಡ ನನ್ನಲ್ಲಿ ಒಂದಾಗಿ ನೆಲಸದಿದ್ದರೆ ಫಲಕೊಡಲಾರಿರಿ.


ಆಗ ಯೇಸು, “ನನ್ನನ್ನು ಪ್ರೀತಿಸುವವನು ನನ್ನ ಮಾತನ್ನು ಕೈಗೊಂಡು ನಡೆಯುವನು. ಅವನನ್ನು ನನ್ನ ಪಿತನೂ ಪ್ರೀತಿಸುವರು ಮತ್ತು ನಾವಿಬ್ಬರೂ ಅವನ ಬಳಿ ಬಂದು ಅವನಲ್ಲಿ ನೆಲೆಸುವೆವು.


ನಾನು ನನ್ನ ಪಿತನಲ್ಲಿ ಇರುವೆನು; ನೀವು ನನ್ನಲ್ಲಿ ಇರುವಿರಿ ಮತ್ತು ನಾನು ನಿಮ್ಮಲ್ಲಿ ಇರುವೆನು. ಇದನ್ನು ಆ ದಿನದಂದು ನೀವು ಅರಿತುಕೊಳ್ಳುವಿರಿ.


ಅದಕ್ಕೆ ಯೇಸು, “ಮಾರ್ಗವೂ ಸತ್ಯವೂ ಜೀವವೂ ನಾನೇ. ನನ್ನ ಮುಖಾಂತರ ಬಾರದ ಹೊರತು ಯಾರೂ ಪಿತನ ಬಳಿಗೆ ಬರಲಾರರು.


ಯಾರೂ ಎಂದೂ ದೇವರನ್ನು ಕಂಡಿಲ್ಲ; ಪಿತನ ವಕ್ಷಸ್ಥಲದಲ್ಲಿರುವ, ಸ್ವತಃ ದೇವರಾಗಿರುವ ಏಕೈಕ ಪುತ್ರನೇ ಅವರನ್ನು ತಿಳಿಯಪಡಿಸಿದ್ದಾರೆ.


ಏಕೆಂದರೆ ನಿಮ್ಮ ವಿರೋಧಿಗಳಾರೂ ಪ್ರತಿಭಟಿಸಲು ಅಥವಾ ವಿರೋಧಿಸಲು ಆಗದಂಥ ವಾಕ್ಚಾತುರ್ಯವನ್ನೂ ಜ್ಞಾನಶಕ್ತಿಯನ್ನೂ ನಿಮಗೆ ಕೊಡುವೆನು.


ಅದಕ್ಕೆ ಪ್ರತ್ಯುತ್ತರವಾಗಿ ಯೇಸು, “ಸ್ವರ್ಗಸಾಮ್ರಾಜ್ಯದ ರಹಸ್ಯಗಳನ್ನು ಅರಿತುಕೊಳ್ಳುವ ಸದವಕಾಶ ಲಭಿಸಿರುವುದು ನಿಮಗೆ, ಅವರಿಗಲ್ಲ.


ಹೇ ಸರ್ವೇಶ್ವರಾ, ನೀವಾದರೋ ಸತ್ಯದೇವರು, ಜೀವಸ್ವರೂಪ ದೇವರು, ಶಾಶ್ವತ ರಾಜರು ನಿಮ್ಮ ಕೋಪಕ್ಕೆ ನಡುಗುತ್ತದೆ ಭೂಲೋಕ ನಿಮ್ಮ ರೋಷವನ್ನು ತಾಳಲಾರದು ಜನಾಂಗ.


ನಿನ್ನ ಸೃಷ್ಟಿಕರ್ತನೆ ನಿನಗೆ ಪತಿಯು ‘ಸೇನಾಧೀಶ್ವರನಾದ ಸರ್ವೇಶ್ವರ’ ಆತನ ಹೆಸರು. ಇಸ್ರಯೇಲಿನ ಪರಮಪಾವನನೆ ನಿನ್ನ ಉದ್ಧಾರಕನು. ‘ಸರ್ವಲೋಕದ ದೇವ’ ಆತನ ನಾಮಧೇಯ.


ಮೊದಲಿನಿಂದಲೂ ನೀವು ಯಾವ ಸಂದೇಶವನ್ನು ಕೇಳಿದ್ದೀರೋ ಅದು ನಿಮ್ಮಲ್ಲಿ ನೆಲೆಸಲಿ. ಮೊದಲಿನಿಂದಲೂ ನೀವು ಕೇಳಿದ ಸಂದೇಶ ನಿಮ್ಮಲ್ಲಿ ನೆಲೆಸಿದರೆ ಪುತ್ರನಲ್ಲಿಯೂ ಪಿತನಲ್ಲಿಯೂ ನೀವು ನೆಲೆಸುತ್ತೀರಿ.


ಹೀಗೆ ದೇವಜನರೆಲ್ಲರೊಡನೆ, ಕ್ರಿಸ್ತಯೇಸುವಿನ ಅಗಾಧ ಪ್ರೀತಿಯ ಉದ್ದ-ಅಗಲ, ಆಳ-ಎತ್ತರ ಎಷ್ಟೆಂಬುದನ್ನು ನೀವು ಗ್ರಹಿಸಿಕೊಳ್ಳುವಂತಾಗಲಿ.


ಯಾರಾದರೂ ಯೇಸುಕ್ರಿಸ್ತರೊಡನೆ ಒಂದಾದರೆ ಅವನು ನೂತನ ಸೃಷ್ಟಿಯಾಗುತ್ತಾನೆ. ಹಳೆಯದೆಲ್ಲಾ ಅಳಿದುಹೋಗುತ್ತದೆ. ಹೊಸದಿದೋ, ಜನ್ಮತಳೆದಿದೆ.


ಅವರ ಕೃಪೆಯಿಂದಲೇ ನೀವು ಕ್ರಿಸ್ತಯೇಸುವಿನಲ್ಲಿ ಬಾಳುತ್ತಾ ಇದ್ದೀರಿ; ಅವರ ಕೃಪೆಯಿಂದಲೇ ಕ್ರಿಸ್ತಯೇಸು ನಮಗೆ ಜ್ಞಾನ ಮೂಲವಾಗಿದ್ದಾರೆ. ದೇವರಿಂದ ನಮಗೆ ದೊರಕುವ ಸತ್ಸಂಬಂಧ, ಪಾವನತೆ ಹಾಗೂ ವಿಮೋಚನೆ ಆ ಕ್ರಿಸ್ತಯೇಸುವಿನಿಂದಲೇ.


ನೀತಿಸ್ವರೂಪಿಯಾದ ಪಿತನೇ, ಲೋಕವು ನಿಮ್ಮನ್ನು ಅರಿತುಕೊಳ್ಳಲಿಲ್ಲ. ಆದರೆ ನಾನು ಅರಿತಿದ್ದೇನೆ. ನನ್ನನ್ನು ಕಳುಹಿಸಿದವರು ನೀವೆಂದು ಇವರು ತಿಳಿದುಕೊಂಡಿದ್ದಾರೆ.


ಆತನ ಕಾಲದಲ್ಲಿ ಯೆಹೂದ್ಯರು ಸುರಕ್ಷಿತರಾಗಿ ಇರುವರು. ಇಸ್ರಯೇಲರು ನೆಮ್ಮದಿಯಿಂದ ಬಾಳುವರು. ‘ಯೆಹೋವ ಚಿದ್ಕೇನು’ (ಎಂದರೆ ಸರ್ವೇಶ್ವರನೇ ನಮ್ಮ ಸದ್ಧರ್ಮ) ಎಂಬ ಹೆಸರು ಆತನಿಗಿರುವುದು.


ಯೇಸು, ಅವರಿಗೆ, “ದೇವರೇ ನಿಮ್ಮ ತಂದೆಯಾಗಿದ್ದರೆ, ನನ್ನ ಮೇಲೆ ನಿಮಗೆ ಪ್ರೀತಿಯಿರುತ್ತಿತ್ತು. ಕಾರಣ, ನಾನು ದೇವರಿಂದಲೇ ಹೊರಟು ಇಲ್ಲಿಗೆ ಬಂದವನು. ನನ್ನಷ್ಟಕ್ಕೆ ನಾನೇ ಬರಲಿಲ್ಲ. ನನ್ನನ್ನು ಕಳುಹಿಸಿದ್ದು ದೇವರೇ.


ಪುತ್ರನನ್ನು ತಿರಸ್ಕರಿಸುವವನು ಪಿತನನ್ನೂ ತಿರಸ್ಕರಿಸುತ್ತಾನೆ. ಪುತ್ರನನ್ನು ಅಂಗೀಕರಿಸುವವನು ಪಿತನನ್ನೂ ಅಂಗೀಕರಿಸುತ್ತಾನೆ.


ಯೇಸುವೇ ದೇವರ ಪುತ್ರನೆಂದು ನಂಬಿದವರೇ ಹೊರತು ಲೋಕವನ್ನು ಜಯಿಸಲು ಬೇರೆ ಯಾರಿಂದ ಸಾಧ್ಯ?


ನಾವು ಏನನ್ನು ಬೇಡಿಕೊಂಡರೂ ನಮ್ಮ ವಿಜ್ಞಾಪನೆಗೆ ದೇವರು ಕಿವಿಗೊಡುತ್ತಾರೆ ಎಂಬುದು ನಮಗೆ ತಿಳಿದಿದ್ದರೆ ನಾವು ಬೇಡಿದುದೆಲ್ಲವೂ ನಮಗೆ ಲಭಿಸಿದಂತೆಯೇ ಎಂಬುದೂ ನಮಗೆ ತಿಳಿದಿದೆ.


ನಮಗೆ ತಿಳಿದಿರುವಂತೆ ದೇವರಿಂದ ಜನಿಸಿದವನು ಪಾಪಜೀವಿಯಾಗಿರುವುದಿಲ್ಲ. ಏಕೆಂದರೆ, ದೇವರ ಪುತ್ರನ ರಕ್ಷಣೆ ಅವನಿಗಿದೆ. ಕೇಡಿಗನ ಹಿಡಿತಕ್ಕೆ ಅವನು ಸಿಗನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು