Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಯೋಹಾನನು 5:3 - ಕನ್ನಡ ಸತ್ಯವೇದವು C.L. Bible (BSI)

3 ದೇವರನ್ನು ಪ್ರೀತಿಸುವುದು ಎಂದರೆ ಅವರು ಕೊಟ್ಟ ಆಜ್ಞೆಗಳನ್ನು ಅನುಸರಿಸಿ ನಡೆಯುವುದೇ. ಅವರ ಆಜ್ಞೆಗಳು ನಮಗೆ ಹೊರೆಯೇನೂ ಅಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ದೇವರ ಮೇಲಿನ ಪ್ರೀತಿ ಏನೆಂದರೆ ಆತನ ಆಜ್ಞೆಗಳನ್ನು ಕೈಕೊಂಡು ನಡೆಯುವುದೇ. ಆತನ ಆಜ್ಞೆಗಳು ಕಷ್ಟಕರವಾದವುಗಳಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ದೇವರ ಮೇಲಣ ಪ್ರೀತಿ ಏನಂದರೆ ಆತನ ಆಜ್ಞೆಗಳನ್ನು ಕೈಕೊಂಡು ನಡೆಯುವದೇ. ಆತನ ಆಜ್ಞೆಗಳು ಭಾರವಾದವುಗಳಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ದೇವರನ್ನು ಪ್ರೀತಿಸುವುದು ಎಂದರೆ ಆತನ ಆಜ್ಞೆಗಳಿಗೆ ವಿಧೇಯರಾಗಿರುವುದು. ದೇವರ ಆಜ್ಞೆಗಳು ನಮಗೆ ಕಠಿಣವಾದವುಗಳಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ದೇವರ ಪ್ರೀತಿ ಏನೆಂದರೆ: ದೇವರ ಆಜ್ಞೆಗಳನ್ನು ಕೈಗೊಂಡು ನಡೆಯುವುದೇ. ಅವರ ಆಜ್ಞೆಗಳು ಕಠಿಣವಾದವುಗಳಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 ಅನಿ ದೆವಾಚೊ ಪ್ರೆಮ್ ಕರ್ತಲೊ ಮಟ್ಲ್ಯಾರ್, ತೆಚ್ಯಾ ಹುಕುಮಾಕ್ನಿ ಮಾನುನ್ ಘೆವ್ನ್ ಚಲ್ತಲೆ, ತೆಚಿ ಹುಕುಮಾ ತವ್ಡಿ ತರಾಸಾಚಿ ನ್ಹಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಯೋಹಾನನು 5:3
26 ತಿಳಿವುಗಳ ಹೋಲಿಕೆ  

ನೀವು ನನ್ನನ್ನು ಪ್ರೀತಿಸುವವರಾಗಿದ್ದರೆ ನನ್ನ ಆಜ್ಞೆಗಳನ್ನು ಕೈಗೊಂಡು ನಡೆಯುವಿರಿ.


ನನ್ನ ಪಿತನು ಕೊಟ್ಟ ಆಜ್ಞೆಗಳನ್ನು ಪಾಲಿಸಿ ಅವರ ಪ್ರೀತಿಯಲ್ಲಿ ನಾನು ನೆಲೆಗೊಂಡಿರುವ ಹಾಗೆ ನೀವು ಕೂಡ ನಾನು ಕೊಟ್ಟ ಆಜ್ಞೆಗಳನ್ನು ಪಾಲಿಸಿದರೆ ನನ್ನ ಪ್ರೀತಿಯಲ್ಲಿ ನೆಲೆಗೊಂಡಿರುವಿರಿ.


ದೇವರ ಆಜ್ಞೆಗಳನ್ನು ಅನುಸರಿಸಿ ನಡೆಯುವುದೇ ಪ್ರೀತಿ. ಪ್ರೀತಿಮಾರ್ಗದಲ್ಲಿ ನಡೆಯಬೇಕೆಂಬುದೇ ನೀವು ಮೊತ್ತಮೊದಲಿನಿಂದಲೂ ಕೇಳಿರುವ ಆಜ್ಞೆ.


ನಾವು ದೇವರ ಆಜ್ಞೆಗಳನ್ನು ಕೈಗೊಂಡು ನಡೆದರೆ ಅದರಿಂದಲೇ ಅವರ ಅರಿವು ನಮಗಿದೆ ಎಂದು ಖಚಿತವಾಗುತ್ತದೆ.


ಆದುದರಿಂದ ನಿಮ್ಮ ದೇವರಾದ ಸರ್ವೇಶ್ವರಸ್ವಾಮಿಯೊಬ್ಬರೇ ದೇವರೆಂದು ತಿಳಿದುಕೊಳ್ಳಬೇಕು. ಅವರೇ ನಂಬಿಕಸ್ತರಾದ ದೇವರು; ತಮ್ಮನ್ನು ಪ್ರೀತಿಸಿ ತಮ್ಮ ಆಜ್ಞೆಗಳನ್ನು ಅನುಸರಿಸುವವರಿಗೆ ತಾವು ಮಾಡಿದ ವಾಗ್ದಾನವನ್ನು ನೆರವೇರಿಸಿ, ತಮ್ಮ ಅಚಲಪ್ರೀತಿಯನ್ನು ಅವರ ಸಂತತಿಯವರಲ್ಲಿ ಸಾವಿರ ತಲೆಗಳವರೆಗೂ ತೋರಿಸುವರು.


ಇಲ್ಲ ಮನುಜಾ, ನಿನಗೆ ಯಾವುದು ಒಳಿತೆಂದು ಸರ್ವೇಶ್ವರ ಈಗಾಗಲೇ ಸ್ಪಷ್ಟಪಡಿಸಿದ್ದಾರೆ: ನ್ಯಾಯನೀತಿಯ ನಡವಳಿಕೆ, ಕರುಣೆಯಲ್ಲಿ ಅಚಲ ಆಸಕ್ತಿ, ದೇವರ ಮುಂದೆ ನಮ್ರತೆ, ಇಷ್ಟನ್ನೇ ಆ ಸ್ವಾಮಿ ನಿನ್ನಿಂದ ಅಪೇಕ್ಷಿಸುವುದು.


ನನ್ನ ಅಂತರಂಗದಲ್ಲಿ ದೈವನಿಯಮವನ್ನು ಕುರಿತು ಆನಂದಿಸುತ್ತೇನೆ.


ನಾನು ಆಜ್ಞಾಪಿಸಿದಂತೆ ನಡೆದರೆ ನೀವು ನನ್ನ ಗೆಳೆಯರು.


ಪಾಪವನ್ನು ಅರಿಕೆಮಾಡಿ ನನ್ನ ದೇವರಾದ ಸರ್ವೇಶ್ವರನಿಗೆ ಹೀಗೆಂದು ಬಿನ್ನವಿಸಿದೆ: “ಹೇ ಸರ್ವೇಶ್ವರಾ, ಮಹೋನ್ನತರೂ ಭಯಭಕ್ತಿಗೆ ಪಾತ್ರರೂ ಆದ ದೇವರೇ, ನಿಮ್ಮನ್ನು ಪ್ರೀತಿಸಿ, ನಿಮ್ಮ ಆಜ್ಞೆಗಳನ್ನು ಅನುಸರಿಸುವವರಿಗೆ ನೀವು ಮಾಡಿದ ವಾಗ್ದಾನಗಳನ್ನು ಪ್ರೀತಿಯಿಂದ ನೆರವೇರಿಸುತ್ತೀರಿ.


ಆ ದಿನಗಳು ಬಂದಮೇಲೆ ಇಸ್ರಯೇಲ್ ವಂಶದವರೊಡನೆ ನಾನು ಮಾಡಿಕೊಳ್ಳುವ ಒಡಂಬಡಿಕೆ ಹೀಗಿರುವುದು, ಎಂದರು ಸರ್ವೇಶ್ವರ. ನಾಟಿಸುವೆನು ನನ್ನಾಜ್ಞೆಗಳನು ಅವರ ಮನದಲಿ ಬರೆಯುವೆನು ಅವುಗಳನು ಅವರ ಹೃದಯದಲಿ ದೇವನಾಗಿರುವೆನು ನಾನವರಿಗೆ ಅವರಾಗುವರು ಪ್ರಜೆಗಳು ನನಗೆ.


ಧರ್ಮಶಾಸ್ತ್ರ ಪವಿತ್ರವಾದುದು. ಅಂತೆಯೇ, ಆಜ್ಞೆಯೂ ಪವಿತ್ರವಾದುದು. ನ್ಯಾಯವಾದುದು ಮತ್ತು ಹಿತಕರವಾದುದು.


ಆಕೆಯ ದಾರಿ ಸುಖಕರ, ಆಕೆಯ ಮಾರ್ಗ ಕ್ಷೇಮಕರ.


ನಿನ್ನ ನುಡಿಯೊಂದೊಂದೂ ಪರಮ ಪರಿಶೋಧಿತ I ಅದರ ಮೇಲಿದೆ ನಿನ್ನ ದಾಸನಿಗೆ ಬಹುಮೋದ II


ನಿನ್ನ ನಿಯಮದಂತೆ ಬಾಳಲು ಯತ್ನಿಸಿದೆ I ಎಂತಲೇ, ಆತಂಕವಿಲ್ಲದೆ ನಡೆದೆ II


ನನ್ನನ್ನು ಪ್ರೀತಿಸಿ ನನ್ನ ಆಜ್ಞೆಗಳನ್ನು ಕೈಗೊಳ್ಳುವವರಿಗಾದರೋ ಸಾವಿರ ತಲೆಗಳವರೆಗೆ ದಯೆತೋರಿಸುತ್ತೇನೆ.


ನನ್ನನ್ನು ಪ್ರೀತಿಸಿ ನನ್ನ ಆಜ್ಞೆಗಳನ್ನು ಕೈಗೊಳ್ಳುವವರಿಗಾದರೋ ಸಾವಿರ ತಲೆಗಳವರೆಗೆ ದಯೆತೋರಿಸುತ್ತೇನೆ.


ಭಾರವಾದ ಹಾಗೂ ಹೊರಲಾಗದ ಹೊರೆಗಳನ್ನು ಕಟ್ಟಿ ಮಾನವರ ಹೆಗಲ ಮೇಲೆ ಹೇರುತ್ತಾರೆ. ತಾವಾದರೋ ಅವನ್ನು ಕಿರುಬೆರಳಿನಿಂದಲೂ ಮುಟ್ಟಲೊಲ್ಲರು.


ಇದಲ್ಲದೆ, ಇವನು ಸರ್ವೇಶ್ವರನನ್ನೇ ಹೊಂದಿಕೊಂಡು ಅವರನ್ನು ಬಿಡದೆ ಅನುಸರಿಸುತ್ತಾ, ಅವರು ಮೋಶೆಯ ಮುಖಾಂತರ ಅನುಗ್ರಹಿಸಿದ ಆಜ್ಞೆಗಳನ್ನು ಕೈಗೊಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು