Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಯೋಹಾನನು 5:4 - ಕನ್ನಡ ಸತ್ಯವೇದವು C.L. Bible (BSI)

4 ದೇವರಿಂದ ಜನಿಸಿದ ಪ್ರತಿ ಒಬ್ಬನೂ ಲೋಕವನ್ನು ಜಯಿಸುತ್ತಾನೆ. ಲೋಕವನ್ನು ಜಯಿಸುವಂಥದು ನಮ್ಮ ವಿಶ್ವಾಸವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಏಕೆಂದರೆ ದೇವರಿಂದ ಹುಟ್ಟಿದವನು ಲೋಕವನ್ನು ಜಯಿಸುತ್ತಾನೆ. ಲೋಕವನ್ನು ಜಯಿಸುವಂಥದ್ದು ನಮ್ಮ ನಂಬಿಕೆಯೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಯಾಕಂದರೆ ದೇವರಿಂದ ಹುಟ್ಟಿರುವಂಥದೆಲ್ಲವು ಲೋಕವನ್ನು ಜಯಿಸುತ್ತದೆ. ಲೋಕವನ್ನು ಜಯಿಸಿದಂಥದು ನಮ್ಮ ನಂಬಿಕೆಯೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಏಕೆಂದರೆ ದೇವರಿಂದ ಹೊಸದಾಗಿ ಹುಟ್ಟಿರುವ ಪ್ರತಿಯೊಬ್ಬನೂ ಲೋಕದ ವಿರುದ್ಧ ಗೆಲ್ಲುವ ಶಕ್ತಿಯನ್ನು ಹೊಂದಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ದೇವರಿಂದ ಹುಟ್ಟಿರುವ ಪ್ರತಿಯೊಬ್ಬರು ಲೋಕವನ್ನು ಜಯಿಸುತ್ತಾರೆ. ಲೋಕವನ್ನು ಜಯಿಸುವಂಥದು ನಮ್ಮ ನಂಬಿಕೆಯೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ಕಶ್ಯಾಕ್ ಮಟ್ಲ್ಯಾರ್, ದೆವಾಕ್ನಾ ಜಲ್ಮಲ್ಲೊ ಜಗಾಕ್ ಜಿಕ್ತಾ, ಜಗಾಕ್ ಜಿಕ್ತಲೊ ಅಮ್ಚೊ ವಿಶ್ವಾಸ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಯೋಹಾನನು 5:4
21 ತಿಳಿವುಗಳ ಹೋಲಿಕೆ  

ಆದರೆ ನಮ್ಮ ಪ್ರಭುವಾದ ಯೇಸುಕ್ರಿಸ್ತರ ಮುಖಾಂತರ ನಮಗೆ ಜಯವನ್ನು ದೊರಕಿಸಿಕೊಟ್ಟಿರುವ ದೇವರಿಗೆ ಸ್ತೋತ್ರ ಸಲ್ಲಲಿ!


ಪ್ರಿಯಮಕ್ಕಳೇ, ನೀವಂತೂ ದೇವರಿಗೆ ಸೇರಿದವರು. ಲೋಕದಲ್ಲಿರುವ ದುರಾತ್ಮಕ್ಕಿಂತಲೂ ನಿಮ್ಮಲ್ಲಿರುವ ಆತ್ಮವು ಶ್ರೇಷ್ಠವಾದುದು. ಆದ್ದರಿಂದಲೇ ಆ ಕಪಟ ಪ್ರವಾದಿಗಳನ್ನು ಜಯಿಸಿದ್ದೀರಿ.


ನಿಮಗೆ ನನ್ನಲ್ಲಿ ಶಾಂತಿಸಮಾಧಾನ ಲಭಿಸಲೆಂದು ಇದನ್ನೆಲ್ಲಾ ನಿಮಗೆ ಹೇಳಿದ್ದೇನೆ. ಲೋಕದಲ್ಲಿ ನಿಮಗೆ ಕಷ್ಟಸಂಕಟಗಳು ತಪ್ಪಿದ್ದಲ್ಲ, ಆದರೆ ಧೈರ್ಯವಾಗಿರಿ. ನಾನು ಲೋಕವನ್ನು ಜಯಿಸಿದ್ದೇನೆ,” ಎಂದು ಹೇಳಿದರು.


ದೇವರಿಂದ ಜನಿಸಿದ ಯಾವನೂ ಪಾಪಮಾಡನು. ದೇವರ ಜೀವದ ಕುಡಿ ಅವನಲ್ಲಿರುವುದು. ಅವನು ಪಾಪದಲ್ಲಿ ಜೀವಿಸನು. ಏಕೆಂದರೆ, ಅವನು ದೇವರಿಂದ ಜನಿಸಿದವನು.


ಯೇಸುವೇ ದೇವರ ಪುತ್ರನೆಂದು ನಂಬಿದವರೇ ಹೊರತು ಲೋಕವನ್ನು ಜಯಿಸಲು ಬೇರೆ ಯಾರಿಂದ ಸಾಧ್ಯ?


ನಾನು ಜಯಗಳಿಸಿ ನನ್ನ ತಂದೆಯೊಡನೆ ಅವರ ಸಿಂಹಾಸನದಲ್ಲಿ ಕುಳಿತುಕೊಂಡಿದ್ದೇನೆ. ಅದೇ ಪ್ರಕಾರ ಜಯಹೊಂದಿದವನಿಗೆ ನನ್ನೊಡನೆ ಸಿಂಹಾಸನದಲ್ಲಿ ಕುಳಿತುಕೊಳ್ಳುವ ಹಕ್ಕನ್ನು ನಾನು ಕೊಡುತ್ತೇನೆ.


ಜಯಿಸಿದರು ಸೋದರರು ಆ ನಿಂದಕನನ್ನು ಯಜ್ಞದ ಕುರಿಮರಿಯ ರಕ್ತದಿಂದ ಸತ್ಯಕ್ಕೆ ಸಾಕ್ಷಿಯನ್ನಿತ್ತುದರಿಂದ ಜೀವದಾಶೆಯನು ತೊರೆದುದರಿಂದ ಮರಣದ ಭಯವನು ಬಿಸುಟುದರಿಂದ.


ಜಯಹೊಂದುವವನು ಹೀಗೆ ಶ್ವೇತಾಂಬರನಾಗುವನು. ಜೀವಬಾಧ್ಯರ ಪಟ್ಟಿಯಿಂದ ಅವನ ಹೆಸರನ್ನು ನಾನು ಅಳಿಸಿಹಾಕುವುದಿಲ್ಲ. ನನ್ನ ಪಿತನ ಸಾನ್ನಿಧ್ಯದಲ್ಲಿಯೂ ಅವರ ದೂತರ ಮುಂದೆಯೂ ಅವನು ನನ್ನವನೆಂದು ನಾನು ಒಪ್ಪಿಕೊಳ್ಳುತ್ತೇನೆ.


ಸಭೆಗಳಿಗೆ ದೇವರಾತ್ಮ ಹೇಳುವುದನ್ನು ಕಿವಿಯುಳ್ಳವನು ಕೇಳಲಿ. ಜಯಹೊಂದುವವನಿಗೆ ಎರಡನೆಯ ಮರಣದಿಂದ ಯಾವ ಕೇಡೂ ಸಂಭವಿಸದು.


ಜಯ ಹೊಂದಿದವನನ್ನು ನನ್ನ ದೇವರ ಆಲಯದ ಸ್ತಂಭವಾಗಿ ನಿಲ್ಲಿಸುತ್ತೇನೆ. ಅವನು ಅಲ್ಲಿಯೇ ನಿರಂತರವಾಗಿ ಇರುತ್ತಾನೆ. ಅವನ ಮೇಲೆ ನನ್ನ ದೇವರ ನಾಮವನ್ನೂ ನನ್ನ ದೇವರ ನಗರವಾದ ನೂತನ ಜೆರುಸಲೇಮಿನ ನಾಮವನ್ನೂ ನನ್ನ ಹೊಸ ನಾಮವನ್ನೂ ಬರೆಯುತ್ತೇನೆ. ಈ ನೂತನ ಜೆರುಸಲೇಮ್ ನನ್ನ ದೇವರ ಸಾನ್ನಿಧ್ಯದಿಂದಲೂ ಸ್ವರ್ಗದಿಂದಲೂ ಇಳಿದುಬರುತ್ತದೆ.


ನಾನು ನನ್ನ ಪಿತನಿಂದ ಅಧಿಕಾರ ಪಡೆದಿರುವಂತೆಯೇ, ಜಯಹೊಂದುವವನಿಗೆ ಹಾಗು ನಾನು ಮೆಚ್ಚುವ ಕಾರ್ಯಗಳನ್ನು ಕೊನೆಯವರೆಗೂ ಮುಂದುವರಿಸಿಕೊಂಡು ಹೋಗುವವನಿಗೆ, ‘ಜನಾಂಗಗಳ ಮೇಲೆ ಅಧಿಕಾರವನ್ನು ಕೊಡುವೆನು ಅವನು ಅವುಗಳನ್ನು ಕಬ್ಬಿಣದ ದಂಡದಿಂದ ಆಳುವನು ಮಣ್ಣಿನ ಮಡಕೆಯಂತೆ ಅವುಗಳನ್ನು ನುಚ್ಚುನೂರು ಮಾಡುವನು.’ ಅಂಥವನಿಗೆ ಉದಯ ತಾರೆಯನ್ನು ನೀಡುವೆನು.


ಯೇಸುವೇ ‘ಕ್ರಿಸ್ತ’ ಎಂದು ವಿಶ್ವಾಸಿಸುವ ಪ್ರತಿಯೊಬ್ಬನೂ ದೇವರ ಮಗು. ತಂದೆಯನ್ನು ಪ್ರೀತಿಸುವವನು ಆತನ ಮಗುವನ್ನೂ ಪ್ರೀತಿಸುತ್ತಾನೆ.


ಇದಲ್ಲದೆ, ಗಾಜಿನ ಸಮುದ್ರದಂತಿದ್ದ ಒಂದು ವಸ್ತು ಕಾಣಿಸಿತು; ಅದು ಬೆಂಕಿಯಿಂದ ಕೂಡಿತ್ತು. ಮೃಗದ ವಿರುದ್ಧ, ಅದರ ವಿಗ್ರಹದ ವಿರುದ್ಧ ಹಾಗೂ ಅದರ ಹೆಸರನ್ನು ಸೂಚಿಸುವ ಸಂಖ್ಯೆಯ ವಿರುದ್ಧ ಜಯಗಳಿಸಿದವರನ್ನು ಸಹ ಕಂಡೆ. ಅವರು ಗಾಜಿನ ಸಮುದ್ರದ ಬಳಿ ನಿಂತಿದ್ದರು; ಕೈಗಳಲ್ಲಿ ದೇವರಿತ್ತ ಕಿನ್ನರಿಗಳಿದ್ದವು.


ಸಭೆಗಳಿಗೆ ದೇವರಾತ್ಮ ಹೇಳುವುದನ್ನು ಕಿವಿಯುಳ್ಳವನು ಕೇಳಲಿ. ಯಾರು ಜಯಹೊಂದುತ್ತಾನೋ ಅಂಥವನಿಗೆ ದೇವರ ಪರಂಧಾಮದಲ್ಲಿ ಇರುವ ಜೀವವೃಕ್ಷದ ಫಲವನ್ನು ಸವಿಯುವ ಸೌಭಾಗ್ಯವನ್ನು ನಾನು ಅನುಗ್ರಹಿಸುತ್ತೇನೆ.


“ಸಭೆಗಳಿಗೆ ದೇವರಾತ್ಮ ಹೇಳುವುದನ್ನು ಕಿವಿಯುಳ್ಳವನು ಕೇಳಲಿ. ಜಯಹೊಂದಿದವನಿಗೆ ಮರೆಯಾಗಿರುವ ಮನ್ನವನ್ನು ನಾನು ದಯಪಾಲಿಸುತ್ತೇನೆ. ಇದಲ್ಲದೆ, ಆತನಿಗೆ ಒಂದು ಬಿಳಿಯ ಕಲ್ಲನ್ನು ನಾನು ಕೊಡುತ್ತೇನೆ. ಆ ಕಲ್ಲಿನ ಮೇಲೆ ಒಂದು ಹೊಸ ಹೆಸರನ್ನು ಕೆತ್ತಲಾಗಿರುತ್ತದೆ. ಆ ಕಲ್ಲನ್ನು ಸ್ವೀಕರಿಸಿದವನಿಗೇ ಹೊರತು ಮತ್ಯಾರಿಗೂ ಆ ಹೆಸರು ತಿಳಿಯದು.


ಅಂಥವರ ಜನನವು ರಕ್ತಸಂಬಂಧದಿಂದ ಅಲ್ಲ, ಶಾರೀರಕ ಇಚ್ಛೆಯಿಂದ ಅಲ್ಲ. ಮಾನವ ಸಹಜ ಬಯಕೆಯಿಂದಲೂ ಅಲ್ಲ, ದೇವರಿಂದಲೇ ಆದುದು.


ಆಗ ಯೇಸು, “ನಾನು ನಿನಗೆ ಸತ್ಯವಾಗಿ ಹೇಳುತ್ತೇನೆ: ಒಬ್ಬನು ಹೊಸದಾಗಿ ಹುಟ್ಟದಿದ್ದರೆ ಅವನು ದೇವರ ಸಾಮ್ರಾಜ್ಯವನ್ನು ಸೇರಲಾರ,” ಎಂದು ಹೇಳಿದರು.


ಕ್ರಿಸ್ತಯೇಸು ಸತ್ಯಸ್ವರೂಪಿ ಎಂಬುದನ್ನು ನೀವು ಬಲ್ಲಿರಿ. ಎಂದೇ, ಸತ್ಯಮಾರ್ಗದಲ್ಲಿ ನಡೆಯುವ ಪ್ರತಿಯೊಬ್ಬನೂ ಅವರಿಂದ ಜನಿಸಿದವನು ಎಂಬುದು ನಿಮಗೆ ವೇದ್ಯವಾಗಿರಬೇಕು.


ನಮಗೆ ತಿಳಿದಿರುವಂತೆ ದೇವರಿಂದ ಜನಿಸಿದವನು ಪಾಪಜೀವಿಯಾಗಿರುವುದಿಲ್ಲ. ಏಕೆಂದರೆ, ದೇವರ ಪುತ್ರನ ರಕ್ಷಣೆ ಅವನಿಗಿದೆ. ಕೇಡಿಗನ ಹಿಡಿತಕ್ಕೆ ಅವನು ಸಿಗನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು