Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 1:1 - ಕನ್ನಡ ಸತ್ಯವೇದವು C.L. Bible (BSI)

1 ಎಫ್ರಯಿಮ್ ಬೆಟ್ಟದ ಪ್ರದೇಶದಲ್ಲಿ ರಾಮಾ ಒಂದು ಊರು. ಆ ಊರಲ್ಲಿ ‘ಎಲ್ಕಾನ’ ಎಂಬ ಒಬ್ಬ ಮನುಷ್ಯನಿದ್ದ. ಇವನು ಯೆರೋಹಾಮನ ಮಗ, ಎಲೀಹುವಿನ ಮೊಮ್ಮಗ ಹಾಗು ತೋಹುವಿನ ಮರಿಮಗ. ಈ ತೋಹು ಎಂಬುವನು ಎಫ್ರಯಿಮ್ಯನಾದ ಚೂಫನ ಮಗ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಎಫ್ರಾಯೀಮ್ ಬೆಟ್ಟದ ಸೀಮೆಯಲ್ಲಿನ ರಾಮಾತಯಿಮ್ ಚೋಫೀಮ್ ಊರಿನಲ್ಲಿ ಎಲ್ಕಾನನೆಂಬ ಒಬ್ಬ ಮನುಷ್ಯನಿದ್ದನು. ಇವನು ಯೆರೋಹಾಮನ ಮಗನೂ ಎಲೀಹುವಿನ ಮೊಮ್ಮಗನೂ ತೋಹುವಿನ ಮರಿಮಗನೂ ಆಗಿದ್ದನು. ತೋಹು ಎಂಬವನು ಎಫ್ರಾಯೀಮ್ಯನಾದ ಚೂಫನ ಮಗನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಎಫ್ರಾಯೀಮ್ ಬೆಟ್ಟದ ಸೀಮೆಯಲ್ಲಿನ ರಾಮಾತಯಿಮ್ ಚೋಫೀಮ್ ಊರಿನಲ್ಲಿ ಎಲ್ಕಾನನೆಂಬ ಒಬ್ಬ ಮನುಷ್ಯನಿದ್ದನು. ಇವನು ಯೆರೋಹಾಮನ ಮಗನೂ ಎಲೀಹುವಿನ ಮೊಮ್ಮಗನೂ ತೋಹುವಿನ ಮರಿಮಗನೂ ಆಗಿದ್ದನು. ತೋಹು ಎಂಬವನು ಎಫ್ರಾಯೀಮ್ಯನಾದ ಚೂಫನ ಮಗನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಎಲ್ಕಾನ ಎಂಬ ಒಬ್ಬ ಮನುಷ್ಯನಿದ್ದನು. ಅವನು ಎಫ್ರಾಯೀಮ್ ಬೆಟ್ಟದ ಸೀಮೆಯ ರಾಮಾತಯಿಮ್ ಎಂಬ ಊರಿನವನು. ಅವನು ಚೋಫೀಮ್ ಕುಟುಂಬದವನೂ ಯೆರೋಹಾಮನ ಮಗನೂ ಆಗಿದ್ದನು. ಯೆರೋಹಾಮನು ಎಲೀಹುವಿನ ಮಗ. ಎಲೀಹುವನು ತೋಹುವನ ಮಗ. ತೋಹುವನು ಚೂಫನ ಮಗ. ಇವರೆಲ್ಲ ಎಫ್ರಾಯೀಮ್ ಕುಲದವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಎಫ್ರಾಯೀಮ್ ಬೆಟ್ಟದ ಪ್ರದೇಶ ರಾಮತಾಯೀಮ್ ಚೋಫಿಮಿನಲ್ಲಿ ಎಲ್ಕಾನ ಎಂಬ ಹೆಸರುಳ್ಳ ಒಬ್ಬ ಮನುಷ್ಯನಿದ್ದನು. ಅವನು ಎಫ್ರಾಯೀಮ್ಯನಾದ ಚೂಫನ ಮೊಮ್ಮಗನೂ ತೋಹುವಿನ ಮಗನೂ ಆದ ಎಲೀಹುವಿನ ಮಗನಾದ ಯೆರೋಹಾಮನ ಮಗನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 1:1
21 ತಿಳಿವುಗಳ ಹೋಲಿಕೆ  

ಎಲ್ಕಾನ, ಯೆರೋಹಾಮ, ಎಲೀಯೇಲ, ತೋಹ,


ಮಾರನೆಯ ದಿನ ಬೆಳಿಗ್ಗೆ ಅವರೆಲ್ಲರು ಎದ್ದು ಸರ್ವೇಶ್ವರನನ್ನು ಆರಾಧಿಸಿ ರಾಮಾದಲ್ಲಿದ್ದ ತಮ್ಮ ಮನೆಗೆ ಬಂದರು. ಎಲ್ಕಾನನು ತನ್ನ ಹೆಂಡತಿಯಾದ ಹನ್ನಳನ್ನು ಕೂಡಲು ಆಕೆ ಸರ್ವೇಶ್ವರನ ಅನುಗ್ರಹದಿಂದ ಗರ್ಭಿಣಿ ಆದಳು.


ಅವನ ಹೆಸರು ಎಲಿಮೆಲೆಕ್; ಅವನ ಪತ್ನಿಯ ಹೆಸರು ನವೊಮಿ. ಮಹ್ಲೋನ್ ಮತ್ತು ಕಿಲ್ಯೋನ್ ಅವರ ಇಬ್ಬರು ಪುತ್ರರು. ಇವರು ಇಸ್ರಯೇಲ್ ವಂಶದ ಎಫ್ರಾತಕುಲಕ್ಕೆ ಸೇರಿದವರು, ಬೆತ್ಲೆಹೇಮಿನವರು.


ದಾವೀದನು ಜೆಸ್ಸೆಯ ಎಂಬವನ ಮಗ. ಜೆಸ್ಸೆಯ ಯೆಹೂದದ ಬೆತ್ಲೆಹೇಮ್ ಊರಿನ ಎಫ್ರಾತ್ಯನು. ಸೌಲನ ಕಾಲದಲ್ಲಿ ಹಣ್ಣುಹಣ್ಣು ಮುದುಕ. ಇವನ ಎಂಟುಮಂದಿ ಮಕ್ಕಳಲ್ಲಿ ದಾವೀದನು ಒಬ್ಬ.


ಕಡೆಗೆ ಅವರು ಚೂಫ್ ನಾಡಿಗೆ ಬಂದರು. ಅಲ್ಲಿ ಅವನು ತನ್ನ ಆಳಿಗೆ, “ಹಿಂದಿರುಗಿ ಹೋಗೋಣ ನಡೆ; ನಮ್ಮ ತಂದೆ ಈ ಕತ್ತೆಗಳ ಚಿಂತೆಯನ್ನೇ ಬಿಟ್ಟು ನಮ್ಮ ಚಿಂತೆಯಲ್ಲಿ ಇರಬಹುದು,” ಎಂದನು.


ಆ ಕಾಲದಲ್ಲಿ ಇಸ್ರಯೇಲರಿಗೆ ಅರಸನಿರಲಿಲ್ಲ. ಎಫ್ರಯಿಮ್ ಪರ್ವತ ಪ್ರದೇಶದ ಒಂದು ಮೂಲೆಯಲ್ಲಿ ಯಾರೋ ಒಬ್ಬ ಲೇವಿಯನು ಪ್ರವಾಸಿಯಾಗಿದ್ದನು. ಯೆಹೂದದ ಬೆತ್ಲೆಹೇಮಿನವಳಾದ ಒಬ್ಬ ಸ್ತ್ರೀ ಅವನಿಗೆ ಉಪಪತ್ನಿಯಾಗಿದ್ದಳು.


ಎಫ್ರಯಿಮ್ ಬೆಟ್ಟದ ಪ್ರಾಂತ್ಯದಲ್ಲಿ ಮೀಕ ಎಂಬ ಒಬ್ಬ ಮನುಷ್ಯನು ಇದ್ದನು.


ಸಂಜೆಯಾಯಿತು. ಅರಿಮತಾಯ ಊರಿನ ಜೋಸೆಫ್ ಎಂಬ ಒಬ್ಬ ಧನವಂತನು ಅಲ್ಲಿಗೆ ಬಂದನು. ಈತನು ಸಹ ಯೇಸುವಿನ ಶಿಷ್ಯನಾಗಿದ್ದನು.


ಇದಲ್ಲದೆ, ಅವರು ತಪ್ಪಿಸಿಕೊಂಡು ಹೋಗದಂತೆ ಎಫ್ರಯಿಮಿಗೆ ಹೋಗುವ ಜೋರ್ಡನಿನ ಹಾಯಗಡಗಳನ್ನೆಲ್ಲಾ ಹಿಡಿದರು. ತಪ್ಪಿಸಿಕೊಂಡ ಎಫ್ರಯಿಮ್ಯರಲ್ಲಿ ಒಬ್ಬನು ಅಲ್ಲಿಗೆ ಬಂದು ನನ್ನನ್ನು ದಾಟಗೊಡಿರಿ ಎಂದು ಅವರನ್ನು ಕೇಳಿದಾಗ ಅವರು, “ನೀನು ಎಫ್ರಯಿಮನೋ?’ ಎಂದು ಕೇಳುತ್ತಿದ್ದರು.


ಆರೋನನ ಮಗ ಎಲ್ಲಾಜಾರನೂ ಮರಣಹೊಂದಿದನು. ಅವನ ಶವವನ್ನು ಎಫ್ರಯಿಮ್ ಮಲೆನಾಡಿನಲ್ಲಿ ಅವನ ಮಗ ಫೀನೆಹಾಸನ ಪಾಲಿಗೆ ಬಂದ ಗುಡ್ಡದಲ್ಲಿ ಸಮಾಧಿಮಾಡಿದರು.


ಅರಸ ಸೊಲೊಮೋನನಿಗೆ ವಿರುದ್ಧ ದಂಗೆ ಎದ್ದವರಲ್ಲಿ, ಅವನ ಸೇವಕನೂ ಚರೇದ ಊರಿನ ಎಫ್ರಯೀಮ್ಯನಾದ ನೆಬಾಟನ ಮಗನೂ ಆಗಿದ್ದ, ಯಾರೊಬ್ಬಾಮ ಎಂಬವನು ಮತ್ತೊಬ್ಬನು. ಚೆರೂಗಳೆಂಬ ವಿಧವೆ ಅವನ ತಾಯಿ.


ಎಲ್ಕಾನನು ರಾಮಾದಲ್ಲಿದ್ದ ತನ್ನ ಮನೆಗೆ ಹಿಂದಿರುಗಿದನು. ಹುಡುಗ ಸಮುವೇಲನು ಯಾಜಕ ಏಲಿಯನ ಕೈಕೆಳಗಿದ್ದು ಸರ್ವೇಶ್ವರನ ಸೇವೆಮಾಡುತ್ತಾ ಬಂದನು.


ಅಲ್ಲಿ ಅವನ ಸ್ವಂತ ಮನೆ ಇದ್ದುದರಿಂದ ಅಲ್ಲಿಯೇ ಸರ್ವೇಶ್ವರನಿಗೆ ಒಂದು ಬಲಿಪೀಠವನ್ನು ಕಟ್ಟಿಸಿ ಇಸ್ರಯೇಲರನ್ನು ಪಾಲಿಸುತ್ತಿದ್ದನು.


ಕೆಹಾತನ ಸಂತತಿಯವರು: ಅಮ್ಮೀನಾದಾಬ್, ಕೋರಹ, ಅಸ್ಸೀರ್,


ಹೀಗೆ ಕಾರ್ಯ ನಿರ್ವಹಿಸಿದವರ ಕುಟುಂಬಗಳ ಸರಣಿಯು ಇಂತಿದೆ: ಕೇಹತನ ಗೋತ್ರದವರು: ಪ್ರಥಮ ಸಂಗೀತಮಂಡಲಿಯ ನಾಯಕ ಯೋವೇಲನ ಮಗ ಹೇಮಾನ, ಇವನ ಹಿಂದಿನ ವಂಶಾವಳಿ ಯಕೋಬನವರೆಗೆ ಹೀಗಿದೆ: ಹೇಮಾನ, ಯೋವೇಲ, ಸಮುವೇಲ,


ಆಕೆ ಎಫ್ರಯಿಮ್ ಬೆಟ್ಟದ ಸೀಮೆಯಲ್ಲಿ ರಾಮಕ್ಕೂ ಬೇತೇಲಿಗೂ ಮಧ್ಯದಲ್ಲಿರುವ ‘ದೆಬೋರಳ ಖರ್ಜೂರ ವೃಕ್ಷ’ವೆಂದು ಹೆಸರುಗೊಂಡ ಮರದ ಕೆಳಗೆ ಆಸೀನಳಾಗಿರುತ್ತಿದ್ದಳು. ಇಸ್ರಯೇಲರು ನ್ಯಾಯತೀರ್ಪಿಗಾಗಿ ಆಕೆಯ ಬಳಿಗೆ ಬರುತ್ತಿದ್ದರು.


ಅದರಂತೆಯೇ ಸೌಲನು ಹೊರಟು ಎಫ್ರಯಿಮ್ ಪರ್ವತಪ್ರಾಂತ್ಯ ಹಾಗು ಶಾಲಿಷಾನಾಡು ಇವುಗಳಲ್ಲಿ ಸುತ್ತಾಡಿದರೂ ಅವು ಸಿಕ್ಕಲಿಲ್ಲ. ಶಾಲೀಮ್, ಬೆನ್ಯಾಮೀನ ಈ ಪ್ರಾಂತ್ಯಗಳಲ್ಲಿಯೂ ಸಿಕ್ಕಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು