Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 1:12 - ಕನ್ನಡ ಸತ್ಯವೇದವು C.L. Bible (BSI)

12 ಹನ್ನಳು ಬಹಳ ಹೊತ್ತಿನವರೆಗೆ ಸರ್ವೇಶ್ವರನ ಮುಂದೆ ಪ್ರಾರ್ಥನೆ ಸಲ್ಲಿಸುತ್ತಾ ಇದ್ದಳು. ಏಲಿ ಆಕೆಯ ಬಾಯನ್ನು ಗಮನಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಆಕೆಯು ಬಹಳ ಹೊತ್ತಿನ ವರೆಗೆ ಯೆಹೋವನ ಮುಂದೆ ಪ್ರಾರ್ಥನೆಮಾಡುತ್ತಿರುವಾಗ ಏಲಿಯು ಆಕೆಯ ಬಾಯನ್ನೇ ನೋಡುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಆಕೆಯು ಬಲು ಹೊತ್ತಿನವರೆಗೆ ಯೆಹೋವನ ಮುಂದೆ ಪ್ರಾರ್ಥನೆ ಮಾಡುತ್ತಿರುವಾಗ ಏಲಿಯು ಆಕೆಯ ಬಾಯನ್ನೇ ನೋಡುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಹನ್ನಳು ಬಹಳ ಹೊತ್ತಿನವರೆಗೆ ಯೆಹೋವನಿಗೆ ಪ್ರಾರ್ಥನೆ ಮಾಡಿದಳು. ಅವಳು ಪ್ರಾರ್ಥನೆ ಮಾಡುತ್ತಿದ್ದಾಗ ಏಲಿಯು ಅವಳ ಬಾಯನ್ನೇ ನೋಡುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಅವಳು ಯೆಹೋವ ದೇವರ ಮುಂದೆ ಹೆಚ್ಚಾಗಿ ಪ್ರಾರ್ಥನೆ ಮಾಡುತ್ತಿರುವಾಗ, ಏಲಿಯು ಅವಳ ಬಾಯನ್ನೇ ನೋಡುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 1:12
8 ತಿಳಿವುಗಳ ಹೋಲಿಕೆ  

ಆದ್ದರಿಂದ ಒಬ್ಬರಿಗೊಬ್ಬರು ಪಾಪಗಳನ್ನು ಒಪ್ಪಿಕೊಳ್ಳಿರಿ. ಒಬ್ಬರಿಗೊಬ್ಬರು ಪ್ರಾರ್ಥಿಸಿರಿ. ಆಗ ನೀವು ಸ್ವಸ್ಥರಾಗುತ್ತೀರಿ. ಸತ್ಪುರುಷನ ಪ್ರಾರ್ಥನೆ ಶಕ್ತಿಯುತವಾದುದು ಹಾಗೂ ಫಲದಾಯಕವಾದುದು.


ಪ್ರಾರ್ಥನಾ ಜೀವನ ನಡೆಸಿರಿ. ಪ್ರಾರ್ಥಿಸುವಾಗಲೆಲ್ಲಾ ಎಚ್ಚರವಾಗಿದ್ದು ಕೃತಜ್ಞತಾಸ್ತುತಿಯನ್ನು ಸಲ್ಲಿಸಿರಿ.


ಪವಿತ್ರಾತ್ಮರಿಂದ ಪ್ರೇರಿತರಾಗಿ ಎಲ್ಲಾ ಸಮಯಗಳಲ್ಲೂ ಪ್ರಾರ್ಥಿಸಿರಿ. ನಿಮ್ಮ ಕೋರಿಕೆ, ಬೇಡಿಕೆಗಳನ್ನು ದೇವರಿಗೆ ಅರ್ಪಿಸಿರಿ. ಎಚ್ಚರವಾಗಿದ್ದು ಎಲ್ಲಾ ದೇವಜನರಿಗಾಗಿ ಎಡೆಬಿಡದೆ ಪ್ರಾರ್ಥಿಸಿರಿ.


ನಿರಾಶರಾಗದೆ ನಿರಂತರವಾಗಿ ಪ್ರಾರ್ಥನೆ ಮಾಡಬೇಕು ಎಂಬುದನ್ನು ಕಲಿಸಲು, ಯೇಸುಸ್ವಾಮಿ ತಮ್ಮ ಶಿಷ್ಯರಿಗೆ ಈ ಸಾಮತಿಯನ್ನು ಹೇಳಿದರು:


“ಸರ್ವಶಕ್ತರಾದ ಸರ್ವೇಶ್ವರಾ, ನಿಮ್ಮ ದಾಸಿ ಆದ ನನ್ನ ದುಃಖವನ್ನು ನೀಗಿಸಿರಿ; ನನ್ನನ್ನು ಪರಾಂಬರಿಸಿರಿ; ನನ್ನನ್ನು ತಿರಸ್ಕರಿಸದೆ ಕನಿಕರಪಟ್ಟು ನನಗೊಬ್ಬ ಮಗನನ್ನು ಅನುಗ್ರಹಿಸಿ. ಅವನನ್ನು ಅಮರಣಾಂತರ ನಿಮಗೇ ಸಮರ್ಪಿಸುವೆನು; ಅವನ ತಲೆಯ ಮೇಲೆ ಕ್ಷೌರಕತ್ತಿಯನ್ನು ಬರಗೊಡಿಸುವುದಿಲ್ಲ ಎಂದು ಹರಕೆ ಮಾಡುತ್ತೇನೆ.”


ಆಕೆ ಹೃದಯಾಂತರಾಳದಿಂದ ಪ್ರಾರ್ಥಿಸುತ್ತಾ ಇದ್ದಳು; ತುಟಿಗಳು ಅಲುಗಾಡುತ್ತಿದ್ದವು, ಶಬ್ದ ಮಾತ್ರ ಕೇಳಿಸುತ್ತಿರಲಿಲ್ಲ. ಆದುದರಿಂದ ಇವಳು ಕುಡಿದಿರಬೇಕೆಂದು ತಿಳಿದು,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು