Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 1:19 - ಕನ್ನಡ ಸತ್ಯವೇದವು C.L. Bible (BSI)

19 ಮಾರನೆಯ ದಿನ ಬೆಳಿಗ್ಗೆ ಅವರೆಲ್ಲರು ಎದ್ದು ಸರ್ವೇಶ್ವರನನ್ನು ಆರಾಧಿಸಿ ರಾಮಾದಲ್ಲಿದ್ದ ತಮ್ಮ ಮನೆಗೆ ಬಂದರು. ಎಲ್ಕಾನನು ತನ್ನ ಹೆಂಡತಿಯಾದ ಹನ್ನಳನ್ನು ಕೂಡಲು ಆಕೆ ಸರ್ವೇಶ್ವರನ ಅನುಗ್ರಹದಿಂದ ಗರ್ಭಿಣಿ ಆದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಅವರು ಮರುದಿನ ಬೆಳಿಗ್ಗೆ ಎದ್ದು ಯೆಹೋವನನ್ನು ಆರಾಧಿಸಿ ರಾಮದಲ್ಲಿದ್ದ ತಮ್ಮ ಮನೆಗೆ ಬಂದರು. ಎಲ್ಕಾನನು ತನ್ನ ಹೆಂಡತಿಯಾದ ಹನ್ನಳೊಂದಿಗೆ ಸಂಗಮಿಸಲು, ಯೆಹೋವನು ಆಕೆಯ ಪ್ರಾರ್ಥನೆಯನ್ನು ಪರಿಗಣಿಸಿದ್ದರಿಂದ ಆಕೆಯು ಗರ್ಭಿಣಿಯಾದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಅವರು ಮರುದಿನ ಬೆಳಿಗ್ಗೆ ಎದ್ದು ಯೆಹೋವನನ್ನು ಆರಾಧಿಸಿ ರಾಮದಲ್ಲಿದ್ದ ತಮ್ಮ ಮನೆಗೆ ಬಂದರು. ಎಲ್ಕಾನನು ತನ್ನ ಹೆಂಡತಿಯಾದ ಹನ್ನಳನ್ನು ಕೂಡಲು ಆಕೆಯು ಯೆಹೋವನ ಅನುಗ್ರಹದಿಂದ ಗರ್ಭಿಣಿಯಾಗಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಎಲ್ಕಾನನ ಕುಟುಂಬದವರು ಮರುದಿನ ಬೆಳಿಗ್ಗೆ ಎದ್ದು ಯೆಹೋವನನ್ನು ಆರಾಧಿಸಿ, ರಾಮಾತಯಿಮಿನಲ್ಲಿದ್ದ ತಮ್ಮ ಮನೆಗೆ ಹಿಂದಿರುಗಿದರು. ಎಲ್ಕಾನನು ಹನ್ನಳನ್ನು ಕೂಡಿದನು. ಯೆಹೋವನು ಹನ್ನಳನ್ನು ಜ್ಞಾಪಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಅವರು ಉದಯದಲ್ಲಿ ಎದ್ದು, ಯೆಹೋವ ದೇವರನ್ನು ಆರಾಧಿಸಿ, ಹಿಂದಿರುಗಿಕೊಂಡು ರಾಮದಲ್ಲಿರುವ ತಮ್ಮ ಮನೆಗೆ ಬಂದರು. ಎಲ್ಕಾನನು ತನ್ನ ಹೆಂಡತಿಯಾದ ಹನ್ನಳನ್ನು ಸಂಗಮಿಸಲು, ಆಗ ಯೆಹೋವ ದೇವರು ಅವಳನ್ನು ಜ್ಞಾಪಕಮಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 1:19
23 ತಿಳಿವುಗಳ ಹೋಲಿಕೆ  

ಸರ್ವೇಶ್ವರ ಸ್ವಾಮಿ ತಾವು ಹೇಳಿದ್ದಂತೆಯೇ ಸಾರಳಿಗೆ ನೆರವಾದರು. ಆಕೆಗೆ ಕೊಟ್ಟ ಮಾತನ್ನು ನೆರವೇರಿಸಿದರು.


“ಸರ್ವಶಕ್ತರಾದ ಸರ್ವೇಶ್ವರಾ, ನಿಮ್ಮ ದಾಸಿ ಆದ ನನ್ನ ದುಃಖವನ್ನು ನೀಗಿಸಿರಿ; ನನ್ನನ್ನು ಪರಾಂಬರಿಸಿರಿ; ನನ್ನನ್ನು ತಿರಸ್ಕರಿಸದೆ ಕನಿಕರಪಟ್ಟು ನನಗೊಬ್ಬ ಮಗನನ್ನು ಅನುಗ್ರಹಿಸಿ. ಅವನನ್ನು ಅಮರಣಾಂತರ ನಿಮಗೇ ಸಮರ್ಪಿಸುವೆನು; ಅವನ ತಲೆಯ ಮೇಲೆ ಕ್ಷೌರಕತ್ತಿಯನ್ನು ಬರಗೊಡಿಸುವುದಿಲ್ಲ ಎಂದು ಹರಕೆ ಮಾಡುತ್ತೇನೆ.”


ಇದಾದ ಬಳಿಕ ದೇವರು ರಾಖೇಲಳನ್ನು ನೆನೆಸಿಕೊಂಡರು. ಆಕೆಯ ಮೊರೆಯನ್ನು ಕೇಳಿ ಆಕೆಗೂ ಮಕ್ಕಳಾಗುವಂತೆ ಅನುಗ್ರಹಿಸಿದರು.


ಆದಾಮನು ತನ್ನ ಹೆಂಡತಿಯ ಜೊತೆ ಕೂಡಲು ಆಕೆ ಗರ್ಭಿಣಿಯಾಗಿ ಕಾಯಿನನನ್ನು ಹೆತ್ತಳು. “ಸರ್ವೇಶ್ವರ ಸ್ವಾಮಿಯ ಅನುಗ್ರಹದಿಂದ ಒಂದು ಗಂಡುಮಗುವನ್ನು ಪಡೆದಿದ್ದೇನೆ” ಎಂದಳು.


ಬಳಿಕ ಅವನು, “ಸ್ವಾಮಿ ಯೇಸುವೇ, ನೀವು ರಾಜ್ಯಾಧಿಕಾರದೊಡನೆ ಬರುವಾಗ ನನ್ನನ್ನು ಜ್ಞಾಪಿಸಿಕೊಳ್ಳಿ,” ಎಂದು ಬೇಡಿಕೊಂಡನು.


ಮುಂಜಾನೆ ಬೆಳಕುಹರಿಯುವ ಮುನ್ನ ಯೇಸುಸ್ವಾಮಿ ಎದ್ದು ಏಕಾಂತ ಪ್ರದೇಶಕ್ಕೆ ಹೋಗಿ ಪ್ರಾರ್ಥನೆಮಾಡುತ್ತಿದ್ದರು.


ಅರುಣೋದಯದಲೆದ್ದು ಮೊರೆಯಿಟ್ಟೆನು I ನಿನ್ನ ವಾಕ್ಯದಲೆ ನಂಬಿಕೆಯಿಟ್ಟೆನು II


ತ್ರಿಕಾಲದೊಳು ಗೋಗರೆದು ಯಾಚಿಸುವೆನು I ಎನ್ನಯ ಮೊರೆಗಾತನು ಕಿವಿಗೊಡದಿರನು II


ಯೌವನದೆನ್ನ ಪಾಪಪ್ರವೃತ್ತಿಗಳ ಮನದಲ್ಲಿಟ್ಟುಕೊಳ್ಳಬೇಡ I ನಿನ್ನೊಲುಮೆ ನಲ್ಮೆಗಳ ನಿಮಿತ್ತ ಪ್ರಭು, ನನ್ನ ನೆನೆಯದಿರಬೇಡ II


ಮರುದಿನ ಬೆಳಿಗ್ಗೆ ಸಮುವೇಲನು ಮಾಳಿಗೆಯ ಮೇಲೆ ಮಲಗಿದ್ದ ಸೌಲನನ್ನು, “ಏಳು, ನಿನ್ನನ್ನು ಸಾಗಕಳಿಸುತ್ತೇನೆ,” ಎಂದು ಎಬ್ಬಿಸಲು, ಅವನೆದ್ದನು. ತರುವಾಯ ಅವರು ಇಬ್ಬರೂ ಹೊರಟು ಊರಹೊರಗೆ ಬಂದಾಗ ಸಮುವೇಲನು ಸೌಲನಿಗೆ,


ದೇವರಿಗೆ ನೋಹನ ಮತ್ತು ಅವನ ಸಂಗಡ ನಾವೆಯಲ್ಲಿದ್ದ ಎಲ್ಲ ಪ್ರಾಣಿಪಕ್ಷಿಗಳ ನೆನಪಿತ್ತು. ಅವರು ಭೂಮಿಯ ಮೇಲೆ ಗಾಳಿ ಬೀಸುವಂತೆ ಮಾಡಲು ನೀರು ತಗ್ಗಿತು.


ಹೀನ ಸ್ಥಿತಿಯಲ್ಲಿದ್ದ ನಮ್ಮನ್ನು ಜ್ಞಾಪಿಸಿಕೊಂಡಾತನಿಗೆ ಧನ್ಯವಾದ, ಆತನ ಪ್ರೀತಿ ಶಾಶ್ವತ.


ಉದಯಕಾಲದಲ್ಲಿ ಪ್ರಭು, ನಿನಗೆ ಕೇಳಿಬರುವುದು ನನ್ನ ಸ್ವರ I ಉದಯಾರಾಧನೆ ಮಾಡಿ ಎದುರು ನೋಡುತ್ತಿರುವೆ ನಾ ಸದುತ್ತರ II


ಎಲ್ಕಾನನು ರಾಮಾದಲ್ಲಿದ್ದ ತನ್ನ ಮನೆಗೆ ಹಿಂದಿರುಗಿದನು. ಹುಡುಗ ಸಮುವೇಲನು ಯಾಜಕ ಏಲಿಯನ ಕೈಕೆಳಗಿದ್ದು ಸರ್ವೇಶ್ವರನ ಸೇವೆಮಾಡುತ್ತಾ ಬಂದನು.


ಎಫ್ರಯಿಮ್ ಬೆಟ್ಟದ ಪ್ರದೇಶದಲ್ಲಿ ರಾಮಾ ಒಂದು ಊರು. ಆ ಊರಲ್ಲಿ ‘ಎಲ್ಕಾನ’ ಎಂಬ ಒಬ್ಬ ಮನುಷ್ಯನಿದ್ದ. ಇವನು ಯೆರೋಹಾಮನ ಮಗ, ಎಲೀಹುವಿನ ಮೊಮ್ಮಗ ಹಾಗು ತೋಹುವಿನ ಮರಿಮಗ. ಈ ತೋಹು ಎಂಬುವನು ಎಫ್ರಯಿಮ್ಯನಾದ ಚೂಫನ ಮಗ.


ಅಲ್ಲಿ ಅವನ ಸ್ವಂತ ಮನೆ ಇದ್ದುದರಿಂದ ಅಲ್ಲಿಯೇ ಸರ್ವೇಶ್ವರನಿಗೆ ಒಂದು ಬಲಿಪೀಠವನ್ನು ಕಟ್ಟಿಸಿ ಇಸ್ರಯೇಲರನ್ನು ಪಾಲಿಸುತ್ತಿದ್ದನು.


ಗಿಬ್ಯೋನ್, ರಾಮಾ, ಬೇರೋತ್,


ಆದುದರಿಂದ ಇಸ್ರಯೇಲರ ಹಿರಿಯರೆಲ್ಲರೂ ಕೂಡಿ ರಾಮಾದಲ್ಲಿದ್ದ ಸಮುವೇಲನ ಬಳಿಗೆ ಬಂದು,


ಅನಂತರ ಸಮುವೇಲನು ರಾಮಾಕ್ಕೆ ಹೋದನು; ಇತ್ತ ಸೌಲನು ತನ್ನ ಊರಾದ ಗಿಬೆಯದಲ್ಲಿದ್ದ ಮನೆಗೆ ತೆರಳಿದನು.


ಸಮುವೇಲನು ಎಣ್ಣೆಯ ಕೊಂಬನ್ನು ತೆಗೆದುಕೊಂಡು ಅವನನ್ನು ಅವನ ಸಹೋದರರ ಮಧ್ಯದಲ್ಲಿ ಅಭಿಷೇಕಿಸಿದನು. ಕೂಡಲೆ ಸರ್ವೇಶ್ವರನ ಆತ್ಮವು ದಾವೀದನ ಮೇಲೆ ಬಂದು ನೆಲೆಗೊಂಡಿತು. ಅನಂತರ ಸಮುವೇಲನು ರಾಮಾಕ್ಕೆ ಹೊರಟುಹೋದನು.


ಹೀಗೆ ದಾವೀದನು ತಪ್ಪಿಸಿಕೊಂಡು ರಾಮಾದಲ್ಲಿದ್ದ ಸಮುವೇಲನ ಬಳಿಗೆ ಬಂದನು. ಸೌಲನು ತನಗೆ ಮಾಡಿದ್ದೆಲ್ಲವನ್ನೂ ತಿಳಿಸಿದನು. ಅವರಿಬ್ಬರೂ ಹೋಗಿ ಅಲ್ಲಿನ ಒಂದು ಮಠದಲ್ಲಿ ವಾಸವಾಗಿ ಇದ್ದರು.


ಸಮುವೇಲನು ಮರಣಹೊಂದಿದನು. ಇಸ್ರಯೇಲರೆಲ್ಲರೂ ಕೂಡಿಬಂದು ಅವನಿಗಾಗಿ ಸಂತಾಪಸೂಚಿಸುತ್ತಾ ಅವನ ಶವವನ್ನು ರಾಮಾದಲ್ಲಿದ್ದ ಅವನ ಮನೆಯ ಅಂಗಳದಲ್ಲೇ ಸಮಾಧಿಮಾಡಿದರು. ದಾವೀದನು ಹೊರಟು ಪಾರಾನ್ ಮರುಭೂಮಿಗೆ ಹೋದನು.


ಆ ಮಹಿಳೆ ಗರ್ಭಿಣಿಯಾಗಿ, ಎಲೀಷನು ಹೇಳಿದಂತೆ ಮುಂದಿನ ವರ್ಷ, ಅದೇ ಕಾಲದಲ್ಲಿ ಒಬ್ಬ ಮಗನನ್ನು ಹೆತ್ತಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು