Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 1:2 - ಕನ್ನಡ ಸತ್ಯವೇದವು C.L. Bible (BSI)

2 ಎಲ್ಕಾನನಿಗೆ ಇಬ್ಬರು ಹೆಂಡತಿಯರು. ಒಬ್ಬಳು ಹನ್ನ. ಇನ್ನೊಬ್ಬಳು ಪೆನಿನ್ನ. ಪೆನಿನ್ನಗೆ ಮಕ್ಕಳು ಇದ್ದರು; ಆದರೆ ಹನ್ನಳಿಗೆ ಇರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಎಲ್ಕಾನನಿಗೆ ಇಬ್ಬರು ಹೆಂಡತಿಯರಿದ್ದರು. ಮೊದಲನೆಯವಳು ಹನ್ನಳು, ಎರಡನೆಯವಳು ಪೆನಿನ್ನಳು. ಪೆನಿನ್ನಳಿಗೆ ಮಕ್ಕಳಿದ್ದರು; ಹನ್ನಳಿಗೆ ಮಕ್ಕಳಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಎಲ್ಕಾನನಿಗೆ ಹನ್ನಳು, ಪೆನಿನ್ನಳು ಎಂಬ ಇಬ್ಬರು ಹೆಂಡತಿಯರಿದ್ದರು. ಪೆನಿನ್ನಳಿಗೆ ಮಕ್ಕಳಿದ್ದರು; ಹನ್ನಳಿಗೆ ಇರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಎಲ್ಕಾನನಿಗೆ ಇಬ್ಬರು ಹೆಂಡತಿಯರು. ಹನ್ನಳು ಎಂಬುದು ಒಬ್ಬಳ ಹೆಸರಾದರೆ, ಇನ್ನೊಬ್ಬಳು ಪೆನಿನ್ನಳು. ಪೆನಿನ್ನಳಿಗೆ ಮಕ್ಕಳಿದ್ದರು. ಆದರೆ ಹನ್ನಳಿಗೆ ಮಕ್ಕಳಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಅವನಿಗೆ ಇಬ್ಬರು ಹೆಂಡತಿಯರು. ಒಬ್ಬಳ ಹೆಸರು ಹನ್ನ, ಮತ್ತೊಬ್ಬಳ ಹೆಸರು ಪೆನಿನ್ನ. ಪೆನಿನ್ನಳಿಗೆ ಮಕ್ಕಳಿದ್ದರು. ಆದರೆ ಹನ್ನಳಿಗೆ ಮಕ್ಕಳಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 1:2
13 ತಿಳಿವುಗಳ ಹೋಲಿಕೆ  

ಎಲಿಜಬೇತಳು ಬಂಜೆ ಆದುದರಿಂದ ಅವರಿಗೆ ಮಕ್ಕಳಿರಲಿಲ್ಲ. ಅಲ್ಲದೆ ಅವರಿಬ್ಬರೂ ಮುದುಕರಾಗಿದ್ದರು.


“ನಿಮ್ಮ ಹೆಂಡತಿಯನ್ನು ನೀವು ಬಿಟ್ಟುಬಿಡಬಹುದೆಂದು ಮೋಶೆ ಅನುಮತಿ ಇತ್ತದ್ದು ನಿಮ್ಮ ಹೃದಯ ಕಾಠಿಣ್ಯದ ನಿಮಿತ್ತದಿಂದಲೇ. ಆದರೆ ಅದು ಆದಿಯಿಂದಲೇ ಹಾಗಿರಲಿಲ್ಲ.


ಚೊರ್ಗಾ ಎಂಬ ಊರಲ್ಲಿ ದಾನ್ ಕುಲದ ಮಾನೋಹ ಎಂಬ ಒಬ್ಬ ಮನುಷ್ಯನಿದ್ದನು. ಅವನ ಹೆಂಡತಿ ಬಂಜೆಯಾಗಿದ್ದುದರಿಂದ ಅವನಿಗೆ ಮಕ್ಕಳಿರಲಿಲ್ಲ.


ಗಿದ್ಯೋನನಿಗೆ ಅನೇಕ ಮಂದಿ ಹೆಂಡತಿಯರು ಇದ್ದರು. ಅವನಿಗೆ ಎಪ್ಪತ್ತು ಮಂದಿ ಗಂಡು ಮಕ್ಕಳು ಹುಟ್ಟಿದರು.


ಹೀಗಿರಲು ಲೇಯಳ ಬಗ್ಗೆ ಯಕೋಬನಿಗೆ ಉದಾಸೀನ ಉಂಟಾಯಿತು. ಇದನ್ನು ಕಂಡು ಸರ್ವೇಶ್ವರಸ್ವಾಮಿ ಆಕೆಗೆ ತಾಯ್ತನವನ್ನು ಅನುಗ್ರಹಿಸಿದರು; ರಾಖೇಲಳು ಬಂಜೆಯಾಗೇ ಉಳಿದಳು.


ರೆಬೆಕ್ಕಳಿಗೆ ಮಕ್ಕಳಾಗಲಿಲ್ಲ. ಸರ್ವೇಶ್ವರ ಅವನ ವಿಜ್ಞಾಪನೆಯನ್ನು ಆಲಿಸಿದರು. ರೆಬೆಕ್ಕಳು ಗರ್ಭವತಿಯಾದಳು.


ಲೆಮೆಕನು ತನ್ನ ಹೆಂಡತಿಯರಿಗೆ ಹೀಗೆಂದನು: ಆದಾ, ಚಿಲ್ಲಾ, ಕೇಳಿ ನಾನು ಹೇಳುವುದನ್ನು ಲೆಮೆಕನ ಸತಿಯರೇ, ಆಲಿಸಿ ನನ್ನ ಮಾತನ್ನು ನಾ ಹತಮಾಡಿದೆ ನನಗೆ ಗಾಯ ಮಾಡಿದವನನ್ನು ನಾ ಕೊಂದೆ ನನ್ನನ್ನು ಹೊಡೆದಾ ಪ್ರಾಯದವನನ್ನು.


ಇದಲ್ಲದೆ ಅಲ್ಲಿ ಅಶೇರನ ವಂಶಕ್ಕೆ ಸೇರಿದ ಫನುವೇಲನ ಮಗಳಾದ ಅನ್ನಳೆಂಬ ಪ್ರವಾದಿನಿಯಿದ್ದಳು. ಅವಳು ಮುದಿಪ್ರಾಯದವಳು, ಮದುವೆಯಾಗಿ ಏಳು ವರ್ಷ ಮಾತ್ರ ಗಂಡನೊಡನೆ ಬಾಳಿ ವಿಧವೆಯಾದವಳು.


ಲೆಮೆಕನಿಗೆ ‘ಆದಾ’ ಹಾಗು ‘ಚಿಲ್ಲಾ’ ಎಂಬ ಇಬ್ಬರು ಹೆಂಡಿರು.


ಸಾರಯಳು ಬಂಜೆ, ಆಕೆಗೆ ಮಕ್ಕಳಿರಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು