Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 1:21 - ಕನ್ನಡ ಸತ್ಯವೇದವು C.L. Bible (BSI)

21 ವಾಡಿಕೆಯ ಪ್ರಕಾರ ಎಲ್ಕಾನನು ಕುಟುಂಬ ಸಹಿತವಾಗಿ ಸರ್ವೇಶ್ವರನಿಗೆ ವಾರ್ಷಿಕ ಬಲಿಯನ್ನು ಅರ್ಪಿಸಲು ಹಾಗು ಹರಕೆಯನ್ನು ತೀರಿಸಲು ಶಿಲೋವಿಗೆ ಹೋಗಲು ಸಿದ್ಧನಾದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಎಲ್ಕಾನನು ಎಂದಿನಂತೆ ಕುಟುಂಬ ಸಹಿತವಾಗಿ ಯೆಹೋವನಿಗೆ ವಾರ್ಷಿಕಯಜ್ಞವನ್ನು ಅರ್ಪಿಸಿ ಹರಕೆಸಲ್ಲಿಸಬೇಕೆಂದು ಶೀಲೋವಿಗೆ ಹೋಗುವುದಕ್ಕೆ ಸಿದ್ಧನಾಗಲು ಹನ್ನಳು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಎಲ್ಕಾನನು ಕುಟುಂಬಸಹಿತವಾಗಿ ಎಂದಿನಂತೆ ಯೆಹೋವನಿಗೆ ವಾರ್ಷಿಕಯಜ್ಞವನ್ನು ಅರ್ಪಿಸುವದಕ್ಕೂ ಹರಕೆಸಲ್ಲಿಸುವದಕ್ಕೂ ಹೋಗುವದಕ್ಕೆ ಸಿದ್ಧನಾಗಲು ಹನ್ನಳು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಎಲ್ಕಾನನು ಯಜ್ಞವನ್ನು ಅರ್ಪಿಸಲು ಮತ್ತು ಯೆಹೋವನಿಗೆ ಮಾಡಿದ ಹರಕೆಯನ್ನು ಸಲ್ಲಿಸಲು ಆ ವರ್ಷವೂ ಶೀಲೋವಿಗೆ ತನ್ನ ಕುಟುಂಬ ಸಮೇತವಾಗಿ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಎಲ್ಕಾನನು ಯೆಹೋವ ದೇವರಿಗೆ ಪ್ರತಿ ವರುಷದ ಬಲಿಯನ್ನೂ, ತನ್ನ ಹರಕೆಯನ್ನೂ ಸಲ್ಲಿಸುವುದಕ್ಕೆ ತನ್ನ ಮನೆಯವರೆಲ್ಲರ ಸಂಗಡ ಹೋಗುವಾಗ,

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 1:21
7 ತಿಳಿವುಗಳ ಹೋಲಿಕೆ  

ಎಲ್ಕಾನನು ಪ್ರತಿ ವರ್ಷ ರಾಮಾದಿಂದ ಶಿಲೋವಿಗೆ ಹೋಗಿ ಸೇನಾಧೀಶ್ವರರಾದ ಸರ್ವೇಶ್ವರಸ್ವಾಮಿಗೆ ಬಲಿದಾನವನ್ನು ಸಮರ್ಪಿಸಿ ಆರಾಧಿಸುತ್ತಿದ್ದನು. ಅಲ್ಲಿ ಏಲಿಯನ ಮಕ್ಕಳಾದ ಹೊಫ್ನಿ, ಫೀನೆಹಾಸ ಎಂಬವರು ಸರ್ವೇಶ್ವರನ ಯಾಜಕರಾಗಿದ್ದರು.


ಆಗ ನೀವು ನಿರ್ಭಯರಾಗಿ ನಾನು ನಿಮಗೆ ಆಜ್ಞಾಪಿಸಿದ ಎಲ್ಲಾ ಕಾಣಿಕೆಗಳನ್ನು ಅಂದರೆ, ದಹನಬಲಿ ಮುಂತಾದ ಯಜ್ಞಪಶುಗಳನ್ನು, ಬೆಳೆಯ ದಶಮಾಂಶಗಳನ್ನು, ಸರ್ವೇಶ್ವರನಿಗಾಗಿ ಪ್ರತ್ಯೇಕಿಸುವ ಪದಾರ್ಥಗಳನ್ನು, ಹರಕೆಮಾಡಿದ ವಿಶೇಷ ಕಾಣಿಕೆಗಳನ್ನು, ಇವುಗಳನ್ನೆಲ್ಲ ನಿಮ್ಮ ದೇವರಾದ ಸರ್ವೇಶ್ವರ ತಮ್ಮ ನಾಮಸ್ಥಾಪನೆಗಾಗಿ ಆರಿಸಿಕೊಳ್ಳುವ ಸ್ಥಳಕ್ಕೇ ತರಬೇಕು.


ಸರ್ವೇಶ್ವರನಿಗೆ ಸೇವೆಸಲ್ಲಿಸಿರಿ. ನಿಮಗೆ ಇದು ಸರಿಕಾಣದಿದ್ದರೆ ಯಾರಿಗೆ ಸೇವೆಸಲ್ಲಿಸಬೇಕೆಂದಿದ್ದೀರಿ? ಇಂದೇ ಆರಿಸಿಕೊಳ್ಳಿ: ನಿಮ್ಮ ಪೂರ್ವಜರು ಯೂಫ್ರಟಿಸ್ ನದಿಯ ಆಚೆಯಲ್ಲಿ ಪೂಜಿಸುತ್ತಿದ್ದ ದೇವತೆಗಳಿಗೋ? ಈ ನಾಡಿನ ಮೂಲನಿವಾಸಿಗಳಾದ ಅಮೋರಿಯರ ದೇವತೆಗಳಿಗೋ? ಹೇಳಿ. ನಾನು ಮತ್ತು ನನ್ನ ಮನೆಯವರು ಮಾತ್ರ ಸರ್ವೇಶ್ವರನಿಗೇ ಸೇವೆ ಸಲ್ಲಿಸುತ್ತೇವೆ,” ಎಂದನು.


ಸನ್ಮಾರ್ಗದಲೇ ನಾ ನಡೆಯುವೆನು I ನನಗೆಂದು ನೀಡುವೆ ದರ್ಶನವನು? I ಮನೆಯೊಳಗೂ ಶುದ್ಧಹೃದಯಿ ನಾನು II


ಅವನು ತನ್ನ ಪುತ್ರಪೌತ್ರರಿಗೆ, ‘ನೀವು ನ್ಯಾಯನೀತಿಯನ್ನು ಪಾಲಿಸುತ್ತಾ ಸರ್ವೇಶ್ವರ ಸ್ವಾಮಿಯ ಮಾರ್ಗದಲ್ಲೇ ನಡೆಯಬೇಕು; ಹಾಗೆ ಮಾಡಿದರೆ ವಾಗ್ದಾನ ಮಾಡಿದುದನ್ನೆಲ್ಲ ಈಡೇರಿಸುವರು,’ ಎಂದು ಬೋಧಿಸಲೆಂದೇ ನಾನು ಅವನನ್ನು ಆರಿಸಿಕೊಂಡಿದ್ದೇನೆ".


ಅವನ ತಾಯಿ ಪ್ರತಿವರ್ಷ ಗಂಡನ ಜೊತೆಯಲ್ಲಿ ಬಲಿಯನ್ನು ಅರ್ಪಿಸುವುದಕ್ಕೆ ಬಂದಾಗ ಒಂದು ಚಿಕ್ಕ ನಿಲುವಂಗಿಯನ್ನು ಹೊಲಿದು ಅವನಿಗೆ ತಂದುಕೊಡುತ್ತಿದ್ದಳು.


ನೀವು ಸಮರ್ಪಿಸುವ ದಹನಬಲಿ ಮುಂತಾದ ಯಜ್ಞಗಳ ಪಶುಪ್ರಾಣಿಗಳನ್ನು, ನಿಮ್ಮ ಬೆಳೆಯಲ್ಲಿ ದಶಮಾಂಶವನ್ನು ಪ್ರತ್ಯೇಕಿಸುವ ಪದಾರ್ಥಗಳನ್ನು ಮತ್ತು ಹರಕೇಮುಡುಪುಗಳನ್ನು, ಕಾಣಿಕೆಗಳನ್ನು ಹಾಗು ದನಕುರಿಗಳ ಚೊಚ್ಚಲು ಮರಿಗಳನ್ನು ಆ ಸ್ಥಳಕ್ಕೆ ಮಾತ್ರ ತರಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು