1 ಸಮುಯೇಲ 1:24 - ಕನ್ನಡ ಸತ್ಯವೇದವು C.L. Bible (BSI)24 ಅನಂತರ ಆಕೆ ಮಗನನ್ನು ಶಿಲೋವಿನಲ್ಲಿದ್ದ ಸರ್ವೇಶ್ವರನ ಮಂದಿರಕ್ಕೆ ತಂದಳು. ಅವನು ಇನ್ನೂ ಚಿಕ್ಕವನು ಆಗಿದ್ದನು. ಜೊತೆಗೆ ಅವರು ಮೂರು ವರ್ಷದ ಹೋರಿಯೊಂದನ್ನು, ಹತ್ತು ಕಿಲೋಗ್ರಾಂ ಹಿಟ್ಟನ್ನು ಹಾಗೂ ಒಂದು ತಿತ್ತಿ ದ್ರಾಕ್ಷಾರಸವನ್ನೂ ತಂದಿದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ಅನಂತರ ಆಕೆಯು ಮೂರು ವರ್ಷದ ಒಂದು ಹೋರಿಯನ್ನೂ, ಒಂದು ಏಫಾ ಹಿಟ್ಟನ್ನೂ, ಒಂದು ತಿತ್ತಿ ದ್ರಾಕ್ಷಾರಸವನ್ನೂ ತೆಗೆದುಕೊಂಡು ಪುತ್ರನೊಂದಿಗೆ ಶೀಲೋವಿನಲ್ಲಿದ್ದ ಯೆಹೋವನ ಮಂದಿರಕ್ಕೆ ಬಂದಳು. ಮಗನು ಇನ್ನೂ ಚಿಕ್ಕವನಾಗಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ಅನಂತರ ಆಕೆಯು ಮೂರು ವರುಷದ ಒಂದು ಹೋರಿಯನ್ನೂ ಮೂವತ್ತು ಸೇರು ಹಿಟ್ಟನ್ನೂ ಒಂದು ತಿತ್ತಿ ದ್ರಾಕ್ಷಾರಸವನ್ನೂ ತೆಗೆದುಕೊಂಡು ಪುತ್ರಸಹಿತವಾಗಿ ಶೀಲೋವಿನಲ್ಲಿದ್ದ ಯೆಹೋವನ ಮಂದಿರಕ್ಕೆ ಬಂದಳು; ಮಗನು ಇನ್ನೂ ಚಿಕ್ಕವನಾಗಿದ್ದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24 ಮಗುವು ಗಟ್ಟಿಯಾದ ಊಟ ಮಾಡುವಂತಾದಾಗ ಹನ್ನಳು ಶೀಲೋವಿನಲ್ಲಿದ್ದ ಯೆಹೋವನ ಆಲಯಕ್ಕೆ ಅವನನ್ನು ಕರೆದುಕೊಂಡು ಹೋದಳು. ಹನ್ನಳು ಮೂರು ವರ್ಷದ ಒಂದು ಹೋರಿಯನ್ನೂ ಮೂವತ್ತು ಸೇರು ಹಿಟ್ಟನ್ನೂ ಒಂದು ಸೀಸೆ ದ್ರಾಕ್ಷಾರಸವನ್ನೂ ತೆಗೆದುಕೊಂಡು ಹೋದಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 ಅವನು ಎದೆಹಾಲು ಕುಡಿಯುವುದನ್ನು ಬಿಟ್ಟ ತರುವಾಯ, ಅವನನ್ನು ತನ್ನ ಸಂಗಡ ತೆಗೆದುಕೊಂಡು, ಮೂರು ವರ್ಷದ ಹೋರಿಯೊಂದನ್ನೂ, ಸುಮಾರು ಹದಿನಾರು ಕಿಲೋಗ್ರಾಂ ಹಿಟ್ಟನ್ನೂ, ಒಂದು ಬುದ್ದಲಿ ದ್ರಾಕ್ಷಾರಸವನ್ನೂ ತೆಗೆದುಕೊಂಡು ಶೀಲೋವಿನಲ್ಲಿರುವ ಯೆಹೋವ ದೇವರ ಮನೆಗೆ ಹೋದಳು. ಅಧ್ಯಾಯವನ್ನು ನೋಡಿ |