Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 1:8 - ಕನ್ನಡ ಸತ್ಯವೇದವು C.L. Bible (BSI)

8 ಆಗ ಆಕೆಯ ಗಂಡ ಎಲ್ಕಾನನು ಆಕೆಗೆ, “ಹನ್ನಾ, ಏಕೆ ಅಳುತ್ತಿರುವೆ? ಊಟಮಾಡದಿರುವುದಕ್ಕೆ ಕಾರಣ ಏನು? ವ್ಯಸನಪಡುವುದು ಏಕೆ? ಹತ್ತು ಮಕ್ಕಳಿಗಿಂತಲು ನಾನು ನಿನಗೆ ಹೆಚ್ಚಲ್ಲವೆ?” ಎಂದನು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಆಗ ಆಕೆಯ ಗಂಡನಾದ ಎಲ್ಕಾನನು ಆಕೆಗೆ “ಹನ್ನಾ, ಏಕೆ ಅಳುತ್ತೀ? ಊಟ ಮಾಡದಿರುವುದಕ್ಕೆ ಕಾರಣವೇನು? ನೀನು ವ್ಯಸನಪಡುವುದೇಕೆ? ನಾನು ನಿನಗೆ ಹತ್ತು ಮಂದಿ ಗಂಡು ಮಕ್ಕಳಿಗಿಂತ ಹೆಚ್ಚಾಗಿದ್ದೇನಲ್ಲಾ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಆಗ ಆಕೆಯ ಗಂಡನಾದ ಎಲ್ಕಾನನು ಆಕೆಗೆ - ಹನ್ನಾ, ಏಕೆ ಅಳುತ್ತೀ? ಉಣ್ಣದಿರುವದಕ್ಕೇನು ಕಾರಣ? ನೀನು ವ್ಯಸನಪಡುವದೇಕೆ? ನಾನು ನಿನಗೆ ಹತ್ತು ಮಂದಿ ಮಕ್ಕಳಿಗಿಂತ ಹೆಚ್ಚಾಗಿದ್ದೇನಲ್ಲಾ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಅವಳ ಗಂಡನಾದ ಎಲ್ಕಾನನು ಅವಳನ್ನು ಕುರಿತು, “ಹನ್ನಾ, ಯಾಕೆ ಅಳುತ್ತಿರುವೆ? ಯಾಕೆ ಊಟಮಾಡುತ್ತಿಲ್ಲ? ಯಾಕೆ ವ್ಯಸನದಿಂದಿರುವೆ? ನಿನಗೆ ನಾನಿಲ್ಲವೇ? ನಾನು ನಿನ್ನ ಗಂಡ. ನಾನು ನಿನಗೆ ಹತ್ತು ಗಂಡುಮಕ್ಕಳಿಗಿಂತಲೂ ಹೆಚ್ಚಾಗಿದ್ದೇನಲ್ಲಾ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಆಗ ಅವಳ ಗಂಡ ಎಲ್ಕಾನನು ಅವಳಿಗೆ, “ಹನ್ನಳೇ, ಏಕೆ ಅಳುತ್ತೀ? ಏಕೆ ಊಟಮಾಡದೆ ಇದ್ದೀ? ನಿನ್ನ ಮನ ಏಕೆ ಕುಂದಿದೆ? ಹತ್ತು ಮಂದಿ ಪುತ್ರರಿಗಿಂತ ನಾನು ನಿನಗೆ ಹೆಚ್ಚಲ್ಲವೆ?” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 1:8
11 ತಿಳಿವುಗಳ ಹೋಲಿಕೆ  

ಅವನು ನಿನಗೆ ನವಚೈತನ್ಯವನ್ನು ಕೊಟ್ಟು ವೃದ್ಧಾಪ್ಯದಲ್ಲಿ ನಿನಗೆ ಸಂರಕ್ಷಣೆಯನ್ನು ನೀಡುವನು. ಸಪ್ತಕುವರರಿಗಿಂತ ನಿನಗೆ ಮೆಚ್ಚುಗೆ ಆದ ನಿನ್ನ ಪ್ರಿಯ ಸೊಸೆ ಈ ಮಗುವನ್ನು ನಿನಗೆ ಕೊಟ್ಟಿದ್ದಾಳೆ!” ಎಂದು ಹರಸಿದರು.


ಗಂಡಬಿಟ್ಟು ಮನನೊಂದಿರುವ ಪತ್ನಿ ನೀನು ಹೌದು, ತ್ಯಜಿಸಲಾದ ಯೌವನದ ಪತ್ನಿ ನೀನು. ಸರ್ವೇಶ್ವರ ಕನಿಕರಿಸಿ ಕರೆದಿಹನು ನಿನ್ನನು. ಆ ನಿನ್ನ ದೇವರ ನುಡಿಯಿದು :


ಸಂಕಟದಲ್ಲಿ ಆಗದಾ ನೆಂಟನಿಗೆ ಸರ್ವಶಕ್ತನಲ್ಲಿ ಭಯಭಕ್ತಿ ಇರುವುದುಂಟೆ?


ಸಹೋದರರೇ, ಮೈಗಳ್ಳರಿಗೆ ಬುದ್ಧಿಹೇಳಿರಿ; ಮನಗುಂದಿದವರಿಗೆ ಧೈರ್ಯ ತುಂಬಿರಿ; ದುರ್ಬಲರಿಗೆ ನೆರವಾಗಿರಿ; ಎಲ್ಲರೊಡನೆ ಸಹನೆಯಿಂದಿರಿ. ಇದು ನಮ್ಮ ಪ್ರಬೋಧನೆ.


ಯೇಸು, “ಏಕಮ್ಮಾ ಅಳುತ್ತಿರುವೇ? ಏನನ್ನು ಹುಡುಕುತ್ತಿರುವೇ?’ ಎಂದು ಕೇಳಿದಾಗಲೂ ಮರಿಯಳು ಅವರು ತೋಟಗಾರನೆಂದು ಭಾವಿಸಿ, “ಅಯ್ಯಾ, ನೀವೇನಾದರೂ ಅವರನ್ನು ಕೊಂಡೊಯ್ದಿದ್ದರೆ ಎಲ್ಲಿ ಇಟ್ಟಿರುವಿರಿ, ಹೇಳಿ; ನಾನು ತೆಗೆದುಕೊಂಡು ಹೋಗುತ್ತೇನೆ,” ಎಂದು ಹೇಳಿದಳು.


ಅವರು ಆಕೆಯನ್ನು, “ಏಕಮ್ಮಾ ಅಳುತ್ತಿರುವೆ?” ಎಂದು ಕೇಳಿದರು. “ನನ್ನ ಪ್ರಭುವನ್ನು ತೆಗೆದುಕೊಂಡು ಹೋಗಿಬಿಟ್ಟಿದ್ದಾರೆ. ಎಲ್ಲಿ ಇಟ್ಟಿದ್ದಾರೋ ತಿಳಿಯದು,” ಎಂದಳು.


ಬರುವೆನಾಗ ನಿನ್ನ ಬಲಿಪೀಠದ ಬಳಿಗೆ I ನನ್ನಾನಂದ ನಿಧಿಯಾದ ನಿನ್ನ ಸನ್ನಿಧಿಗೆ I ವೀಣೆ ನುಡಿಸಿ ದೇವಾ, ನಿನ್ನ ಸ್ತುತಿಸಲಿಕೆ II


ಆನಂದ ಗೀತೆಯನು ಹಾಡು ಹೆರದವಳೇ, ಬಂಜೆಯಾಗಿದ್ದವಳೇ; ಉಲ್ಲಾಸದಿಂದ ಅರಚು, ಬೇನೆಯನು ಅನುಭವಿಸದವಳೇ. ‘ಗಂಡನುಳ್ಳವಳಿಗಿಂತ ಹೆಚ್ಚು ಮಕ್ಕಳನ್ನು ಹೆರುವೆ’ ಎಂದು ಹೇಳುತ್ತಾರೆ ಸರ್ವೇಶ್ವರ ಸ್ವಾಮಿ ನಿನಗೆ.


ಹಜಾಯೇಲನು, “ನನ್ನೊಡೆಯಾ, ಏಕೆ ಅಳುತ್ತೀರಿ?” ಎಂದು ಕೇಳಿದನು. ಅದಕ್ಕೆ ಅವನು, “ನೀನು ಇಸ್ರಯೇಲರಿಗೆ ಎಷ್ಟು ಕೇಡು ಮಾಡುವೆಯೆಂಬುದು ನನಗೆ ಪ್ರಕಟವಾಯಿತು. ನೀನು ಅವರ ಕೋಣೆಗಳಿಗೆ ಬೆಂಕಿ ಹೊತ್ತಿಸುವೆ; ಯೌವನಸ್ಥರನ್ನು ಕತ್ತಿಯಿಂದ ಸಂಹರಿಸುವೆ; ಮಕ್ಕಳನ್ನು ಬಂಡೆಗೆ ಅಪ್ಪಳಿಸುವೆ; ಗರ್ಭಿಣಿಯರ ಹೊಟ್ಟೆಯನ್ನು ಸೀಳುವೆ,” ಎಂದು ಉತ್ತರಕೊಟ್ಟನು.


ವರ್ಷ ವರ್ಷವೂ ಇದು ಹಾಗೆಯೆ ನಡೆಯುತ್ತಿತ್ತು; “ಸರ್ವೇಶ್ವರನ ಮಂದಿರಕ್ಕೆ ಹೋದಾಗಲೆಲ್ಲ ಪೆನಿನ್ನಳು ಹನ್ನಳನ್ನು ಕೆಣಕುತ್ತಿದ್ದಳು. ಇದರಿಂದಾಗಿ ಒಮ್ಮೆ ಹನ್ನಳು ಊಟ ಮಾಡಲೊಲ್ಲದೆ ಅಳುತ್ತಾ ಇದ್ದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು