Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 10:10 - ಕನ್ನಡ ಸತ್ಯವೇದವು C.L. Bible (BSI)

10 ಅವನು ದೇವಗಿರಿಗೆ ಬಂದ ಕೂಡಲೆ ಪರವಶರಾದ ಪ್ರವಾದಿಗಳ ಗುಂಪೊಂದು ತನ್ನೆದುರಿಗೆ ಬರುವುದನ್ನು ಕಂಡನು. ದೇವರ ಆತ್ಮ ಅವನ ಮೇಲೆ ಇಳಿದು ಬಂದುದರಿಂದ ಅವನೂ ಪರವಶನಾಗಿ ಅವರೊಳಗೆ ಸೇರಿ ಪ್ರವಾದಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಅವನು ದೇವಗಿರಿಗೆ ಬಂದ ಕೂಡಲೆ ಪರವಶವಾದ ಪ್ರವಾದಿಸಮೂಹವು ತನ್ನೆದುರಿಗೆ ಬರುವುದನ್ನು ಕಂಡನು. ದೇವರ ಆತ್ಮವು ಸೌಲನ ಮೇಲೆ ಬಂದ್ದದರಿಂದ ಅವನೂ ಪರವಶನಾಗಿ ಅವರೊಂದಿಗೆ ಸೇರಿ ಪ್ರವಾದಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಅವನು ದೇವಗಿರಿಗೆ ಬಂದ ಕೂಡಲೆ ಪರವಶವಾದ ಪ್ರವಾದಿಸಮೂಹವು ತನ್ನೆದುರಿಗೆ ಬರುವದನ್ನು ಕಂಡನು. ದೇವರ ಆತ್ಮವು ಅವನ ಮೇಲೆ ಬಂದದರಿಂದ ಅವನೂ ಪರವಶನಾಗಿ ಅವರೊಳಗೆ ಸೇರಿ ಪ್ರವಾದಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಸೌಲನು ಮತ್ತು ಅವನ ಸೇವಕನು ಗಿಬಿಯತ್ ಎಲೋಹಿಮಿಗೆ ಹೋದರು. ಸೌಲನು ಆ ಸ್ಥಳದಲ್ಲಿ ಪ್ರವಾದಿಗಳ ಸಮೂಹವನ್ನು ಸಂಧಿಸಿದನು. ದೇವರ ಆತ್ಮವು ಮಹಾಶಕ್ತಿಯೊಡನೆ ಸೌಲನ ಮೈಮೇಲೆ ಬಂದಿತು. ಆಗ ಸೌಲನು ಪ್ರವಾದಿಗಳ ಜೊತೆಯಲ್ಲಿ ಪ್ರವಾದಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಅವನು ಗಿಬೆಯದ ಗುಡ್ಡಕ್ಕೆ ಬಂದಾಗ, ಪ್ರವಾದಿಗಳ ಗುಂಪು ಅವನೆದುರಿಗೆ ಬಂತು. ಆಗ ದೇವರ ಆತ್ಮವು ಅವನ ಮೇಲೆ ಬಂದದ್ದರಿಂದ, ಅವರಲ್ಲಿದ್ದು ಪ್ರವಾದಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 10:10
7 ತಿಳಿವುಗಳ ಹೋಲಿಕೆ  

ನನ್ನ ಹೃನ್ಮನಗಳಿಗೆ ಸರಿಯಾದುದನ್ನೇ ಮಾಡುವ ಒಬ್ಬ ಶ್ರದ್ಧೆಯುಳ್ಳ ಯಾಜಕನನ್ನು ಎಬ್ಬಿಸುವೆನು. ಅವನು ನನ್ನ ಅಭಿಷಿಕ್ತನ ಬಳಿಯಲ್ಲಿ ಸದಾಕಾಲ ಸೇವೆಮಾಡುವನು.


ಆಗ ಸರ್ವೇಶ್ವರನ ಆತ್ಮ ಅವನ ಮೇಲೆ ಬಂದಿತು. ಅವನು ಅತ್ಯಂತ ಕುಪಿತನಾದನು.


ಸರ್ವೇಶ್ವರನ ಆತ್ಮ ಅವನ ಮೇಲೆ ಬಂದುದರಿಂದ ಅವನು ಇಸ್ರಯೇಲರಿಗೆ ನ್ಯಾಯ ದೊರಕಿಸಲು ಯುದ್ಧಕ್ಕೆ ಹೊರಟನು. ಎರಡು ನದಿಗಳ ಮಧ್ಯೆಯಿರುವ ಅರಾಮ್ ರಾಜ್ಯದ ಅರಸ ಕೂಷನ್ ರಿಷಾತಯಿಮನನ್ನು ಸರ್ವೇಶ್ವರ ಆತನ ಕೈಗೊಪ್ಪಿಸಿದ್ದರಿಂದ ಅವನನ್ನು ಸಂಪೂರ್ಣವಾಗಿ ಸೋಲಿಸಿಬಿಟ್ಟನು.


ಸಂಸೋನನು ಲೆಹೀಯ ಸಮೀಪಕ್ಕೆ ಬರಲು ಫಿಲಿಷ್ಟಿಯರು ಅವನನ್ನು ಕಂಡು ಆರ್ಭಟಿಸಿದರು. ಸರ್ವೇಶ್ವರನ ಆತ್ಮ ಅವನ ಮೇಲೆ ಬಂದುದರಿಂದ ಅವನ ರಟ್ಟೆಗಳಿಗೆ ಸುತ್ತಲೂ ಕಟ್ಟಿದ್ದ ಹಗ್ಗಗಳು ಸುಟ್ಟ ಸೆಣಬಿನ ಹಾಗಾದವು; ಕೈಗೆ ಹಾಕಿದ ಬೇಡಿಗಳು ಕಳಚಿ ಬಿದ್ದವು.


ಸಮುವೇಲನು ಎಣ್ಣೆಯ ಕೊಂಬನ್ನು ತೆಗೆದುಕೊಂಡು ಅವನನ್ನು ಅವನ ಸಹೋದರರ ಮಧ್ಯದಲ್ಲಿ ಅಭಿಷೇಕಿಸಿದನು. ಕೂಡಲೆ ಸರ್ವೇಶ್ವರನ ಆತ್ಮವು ದಾವೀದನ ಮೇಲೆ ಬಂದು ನೆಲೆಗೊಂಡಿತು. ಅನಂತರ ಸಮುವೇಲನು ರಾಮಾಕ್ಕೆ ಹೊರಟುಹೋದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು