Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 10:21 - ಕನ್ನಡ ಸತ್ಯವೇದವು C.L. Bible (BSI)

21 ಆ ಕುಲದ ಗೋತ್ರಗಳನ್ನು ಬರಮಾಡಿದಾಗ ಮಟ್ರಿಯ ಗೋತ್ರದಲ್ಲಿ ಕೀಷನ ಮಗನಾದ ಸೌಲನಿಗೆ ಚೀಟು ಬಿದ್ದಿತು. ಅವನನ್ನು ಹುಡುಕಲು ಅವನು ಸಿಕ್ಕಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಆ ಕುಲದ ಗೋತ್ರಗಳನ್ನು ಬರಮಾಡಿದಾಗ ಮಟ್ರಿಯ ಗೋತ್ರದಲ್ಲಿ ಕೀಷನ ಮಗನಾದ ಸೌಲನಿಗೆ ಚೀಟುಬಿದ್ದಿತು. ಆದರೆ ಅವನನ್ನು ಹುಡುಕಲು ಅವನು ಸಿಕ್ಕಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಆ ಕುಲದ ಗೋತ್ರಗಳನ್ನು ಬರಮಾಡಿದಾಗ ಮಟ್ರಿಯ ಗೋತ್ರದಲ್ಲಿ ಕೀಷನ ಮಗನಾದ ಸೌಲನಿಗೆ ಚೀಟು ಬಿದ್ದಿತು. ಅವನನ್ನು ಹುಡುಕಲು ಅವನು ಸಿಕ್ಕಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಬೆನ್ಯಾಮೀನ್ ಕುಲದಲ್ಲಿ ಒಂದು ಕುಟುಂಬವನ್ನು ಆರಿಸಿಕೊಳ್ಳುವುದಕ್ಕಾಗಿ ಮತ್ತೆ ಚೀಟು ಹಾಕಲಾಯಿತು. ಅದರಲ್ಲಿ ಮಟ್ರಿಯ ಕುಟುಂಬವು ಆರಿಸಲ್ಪಟ್ಟಿತು. ನಂತರ ಸಮುವೇಲನು ಮಟ್ರಿಯ ಕುಟುಂಬದ ಪ್ರತಿಯೊಬ್ಬನನ್ನು ಸಮೀಪಕ್ಕೆ ಕರೆದು ಅವರಲ್ಲಿ ಒಬ್ಬನನ್ನು ಆರಿಸಿಕೊಳ್ಳುವುದಕ್ಕಾಗಿ ಚೀಟು ಹಾಕಿದನು. ಅದರಲ್ಲಿ ಕೀಷನ ಮಗನಾದ ಸೌಲನು ಆರಿಸಲ್ಪಟ್ಟನು. ಆದರೆ ಜನರು ಸೌಲನನ್ನು ಹುಡುಕಿದಾಗ ಅವರಿಗೆ ಅವನು ಸಿಕ್ಕಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಅವನು ಬೆನ್ಯಾಮೀನನ ಗೋತ್ರವನ್ನು ಅದರ ಕುಲಗಳ ಹಾಗೆಯೇ ಹತ್ತಿರಕ್ಕೆ ಬರಮಾಡಿದಾಗ, ಮಟ್ರಿಯ ಗೋತ್ರದಲ್ಲಿ ಕೀಷನ ಮಗನಾದ ಸೌಲನಿಗೆ ಚೀಟು ಬಿದ್ದಿತು. ಆದರೆ ಅವನನ್ನು ಹುಡುಕುವಾಗ, ಅವನು ಸಿಕ್ಕಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 10:21
7 ತಿಳಿವುಗಳ ಹೋಲಿಕೆ  

ತಮಗೆ ಅರಸನು ಬೇಕೆಂದು ಕೇಳಿಕೊಂಡಾಗ ದೇವರು ಬೆನ್ಯಾಮೀನ ಗೋತ್ರದ ಕೀಷನ ಮಗ ಸೌಲನನ್ನು ನೇಮಿಸಿದರು. ಇವನು ನಾಲ್ವತ್ತು ವರ್ಷ ಆಳಿದನು.


ಹೀಗೆ ಸಮುವೇಲನು ಇಸ್ರಯೇಲರ ಎಲ್ಲಾ ಕುಲಗಳನ್ನು ಸಮೀಪಕ್ಕೆ ಕರೆದಾಗ ಬೆನ್ಯಾಮೀನ್ ಕುಲಕ್ಕೆ ಚೀಟು ಬಿದ್ದಿತು.


ಅವರು, “ಆ ವ್ಯಕ್ತಿ ಇಲ್ಲಿಗೆ ಬರುವನೋ?” ಎಂದು ಸರ್ವೇಶ್ವರನನ್ನು ವಿಚಾರಿಸಿದಾಗ, “ಬಂದಿದ್ದಾನೆ; ಇಗೋ, ಸರಕು ಸಾಮಾನುಗಳ ನಡುವೆ ಅಡಗಿಕೊಂಡಿದ್ದಾನೆ,” ಎಂದು ಉತ್ತರ ಬಂದಿತು.


ಅವನು ಬೆನ್ಯಾಮೀನ್ಯರಿಗೂ ಇದೇ ಪ್ರಕಾರ ಹೇಳಿದನು. ತರುವಾಯ ಅವನು, ಇಸ್ರಯೇಲರು ಹಾಗು ಬೆನ್ಯಾಮೀನ್ಯರು ಎಲ್ಲರು ಒಪ್ಪಿ ಹೇಳಿದ ಮಾತುಗಳನ್ನು ದಾವೀದನಿಗೆ ತಿಳಿಸುವುದಕ್ಕಾಗಿ ಹೆಬ್ರೋನಿಗೆ ಹೊರಟನು.


ಆಗ ನಾವಿಕರು: “ನಮಗೆ ಸಂಭವಿಸಿರುವ ಈ ದುರಂತಕ್ಕೆ ಕಾರಣ ಯಾರಿರಬಹುದು? ಬನ್ನಿ, ಚೀಟುಹಾಕಿ ನೋಡೋಣ” ಎಂದು ತಮ್ಮ ತಮ್ಮಲ್ಲೇ ಮಾತನಾಡಿಕೊಂಡರು. ಹಾಗೆ ಮಾಡಿದಾಗ ಚೀಟು ಯೋನನ ಹೆಸರಿಗೆ ಬಂತು.


ಇವನಿಗೆ ಸೌಲನೆಂಬ ಒಬ್ಬ ಮಗನಿದ್ದನು. ಈ ಸೌಲನು ಉತ್ತಮನೂ ಇಸ್ರಯೇಲರಲ್ಲೆಲ್ಲ ಅತಿಸುಂದರನೂ ಆಗಿದ್ದನು; ಜನರ ಗುಂಪಿನಲ್ಲಿ ಅವನ ಹೆಗಲೂ ತಲೆಯೂ ಕಾಣುವಷ್ಟು ಎತ್ತರ ಆಗಿದ್ದನು.


ಚೀಟುಹಾಕುವುದರಿಂದ ವ್ಯಾಜ್ಯಗಳ ಶಮನ; ಜಟ್ಟಿಗಳ ನಡುವೆ ಕಾಳಗದ ವಿರಾಮ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು