Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 10:23 - ಕನ್ನಡ ಸತ್ಯವೇದವು C.L. Bible (BSI)

23 ಅವರು ತಟ್ಟನೆ ಹೋಗಿ ಅವನನ್ನು ಹಿಡಿದುಕೊಂಡು ಬಂದು ಜನರ ಮಧ್ಯೆ ನಿಲ್ಲಿಸಿದರು. ಎಲ್ಲ ಜನರ ಗುಂಪಿನಲ್ಲಿ ಅವನ ಹೆಗಲೂ ತಲೆಯೂ ಕಾಣುವಷ್ಟು ಬಹು ಎತ್ತರದ ವ್ಯಕ್ತಿ ಅವನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಅವರು ತಟ್ಟನೆ ಹೋಗಿ ಅವನನ್ನು ಹಿಡಿದುಕೊಂಡು ಬಂದು ಜನರ ಮಧ್ಯದಲ್ಲಿ ನಿಲ್ಲಿಸಿದರು. ಗುಂಪಿನಲ್ಲಿದ್ದ ಎಲ್ಲಾ ಜನರಿಗಿಂತ ಅವನ ಹೆಗಲೂ ತಲೆಯೂ ಕಾಣುವಷ್ಟು ಎತ್ತರವಾದ ಪುರುಷನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಅವರು ತಟ್ಟನೆ ಹೋಗಿ ಅವನನ್ನು ಹಿಡಿದುಕೊಂಡು ಬಂದು ಜನರ ಮಧ್ಯದಲ್ಲಿ ನಿಲ್ಲಿಸಿದರು. ಎಲ್ಲಾ ಜನರ ಗುಂಪಿನಲ್ಲಿ ಅವನ ಹೆಗಲೂ ತಲೆಯೂ ಕಾಣುವಷ್ಟು ಉನ್ನತಪುರುಷನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಜನರು ಓಡಿಹೋಗಿ, ಸರಕುಗಳ ಹಿಂದೆ ಅಡಗಿಕೊಂಡಿದ್ದ ಸೌಲನನ್ನು ಹಿಡಿದುಕೊಂಡು ಬಂದರು. ಸೌಲನು ಜನರ ಮಧ್ಯದಲ್ಲಿ ನಿಂತುಕೊಂಡನು. ಸೌಲನು ಇತರ ಜನರಿಗಿಂತ ಎತ್ತರವಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಆಗ ಅವರು ಓಡಿಹೋಗಿ ಅಲ್ಲಿಂದ ಅವನನ್ನು ಕರೆತಂದರು. ಅವನು ಜನರ ಮಧ್ಯದಲ್ಲಿ ನಿಲ್ಲುವಾಗ ಅವನು ತನ್ನ ಭುಜದಿಂದ ಎಲ್ಲಾ ಜನರಿಗಿಂತ ಎತ್ತರವಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 10:23
5 ತಿಳಿವುಗಳ ಹೋಲಿಕೆ  

ಇವನಿಗೆ ಸೌಲನೆಂಬ ಒಬ್ಬ ಮಗನಿದ್ದನು. ಈ ಸೌಲನು ಉತ್ತಮನೂ ಇಸ್ರಯೇಲರಲ್ಲೆಲ್ಲ ಅತಿಸುಂದರನೂ ಆಗಿದ್ದನು; ಜನರ ಗುಂಪಿನಲ್ಲಿ ಅವನ ಹೆಗಲೂ ತಲೆಯೂ ಕಾಣುವಷ್ಟು ಎತ್ತರ ಆಗಿದ್ದನು.


ಫಿಲಿಷ್ಟಿಯರ ಪಾಳೆಯದಿಂದ ಮಹಾ ಪರಾಕ್ರಮಿಯೊಬ್ಬನು ಹೊರಬಂದನು. ಅವನು ಗತ್ ಊರಿನವನು. ಅವನ ಹೆಸರು ಗೊಲ್ಯಾತ್. ಅವನ ಎತ್ತರ ಸುಮಾರು ಮೂರು ಮೀಟರ್.


ಆದರೆ ಸರ್ವೇಶ್ವರಸ್ವಾಮಿ ಸಮುವೇಲನಿಗೆ, “ನೀನು ಅವನ ಚೆಲುವಿಕೆಯನ್ನಾಗಲಿ ಎತ್ತರವನ್ನಾಗಲಿ ನೋಡಬೇಡ; ನಾನು ಅವನನ್ನು ತಳ್ಳಿಬಿಟ್ಟಿದ್ದೇನೆ. ಸರ್ವೇಶ್ವರ ಮನುಷ್ಯರಂತೆ ಬಹಿರಂಗದ ತೋರಿಕೆಯನ್ನು ನೋಡುವುದಿಲ್ಲ; ಅಂತರಂಗವನ್ನೇ ವೀಕ್ಷಿಸುತ್ತಾನೆ,” ಎಂದರು.


ಅದಲ್ಲದೆ, ಜೀವವೃಕ್ಷಕ್ಕೆ ಹೋಗುವ ದಾರಿಯನ್ನು ಕಾಯುವುದಕ್ಕಾಗಿ ಆ ವನದ ಪೂರ್ವದಿಕ್ಕಿನಲ್ಲೆ ‘ಕೆರೂಬಿ’ಯರನ್ನೂ ಪ್ರಜ್ವಲಿಸುತ್ತಾ ಎಲ್ಲ ಕಡೆ ಸುತ್ತುವ ಕತ್ತಿಯನ್ನೂ ಇರಿಸಿದರು.


ಬೆನ್ಯಾಮೀನ ಕುಲದಲ್ಲಿ ಕೀಷನೆಂಬ ಒಬ್ಬ ಐಶ್ವರ್ಯವಂತನಿದ್ದನು. ಇವನು ಚೆರೋರನ ಮಗನೂ ಬೆಕೋರತನ ಮೊಮ್ಮಗನೂ ಆಫೀಹನ ಮರಿಮಗನೂ ಆದ ಅಬೀಯೇಲನ ಮಗ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು