1 ಸಮುಯೇಲ 10:24 - ಕನ್ನಡ ಸತ್ಯವೇದವು C.L. Bible (BSI)24 ಆಗ ಸಮುವೇಲನು ಜನರೆಲ್ಲರಿಗೆ, “ನೋಡಿ, ಸರ್ವೇಶ್ವರನಿಂದ ಆಯ್ಕೆಯಾದವನು ಇವನೇ; ಸರ್ವಜನರಲ್ಲಿ ಇವನಿಗೆ ಸಮಾನರು ಇಲ್ಲವೇ ಇಲ್ಲ,” ಎಂದನು. ಜನರೆಲ್ಲರೂ, “ಅರಸನಿಗೆ ಜಯವಾಗಲಿ!” ಎಂದು ಘೋಷಿಸಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ಆಗ ಸಮುವೇಲನು ಎಲ್ಲಾ ಜನರಿಗೆ, “ನೋಡಿದಿರಾ, ಯೆಹೋವನಿಂದ ಆರಿಸಲ್ಪಟ್ಟವನು ಇವನೇ; ಸರ್ವಜನರಲ್ಲಿ ಇವನಿಗೆ ಸಮಾನರು ಇಲ್ಲವೇ ಇಲ್ಲ” ಎನ್ನಲು ಜನರೆಲ್ಲರೂ, “ಅರಸನು ಚಿರಂಜೀವಿಯಾಗಿರಲಿ” ಎಂದು ಘೋಷಣೆಗಳನ್ನು ಕೂಗಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ಆಗ ಸಮುವೇಲನು ಎಲ್ಲಾ ಜನರಿಗೆ - ನೋಡಿದಿರಾ, ಯೆಹೋವನಿಂದ ಆರಿಸಲ್ಪಟ್ಟವನು ಇವನೇ; ಸರ್ವಜನರಲ್ಲಿ ಇವನಿಗೆ ಸಮಾನರು ಇಲ್ಲವೇ ಇಲ್ಲ ಎನ್ನಲು ಜನರೆಲ್ಲರೂ - ಅರಸನು ಚಿರಂಜೀವಿಯಾಗಿರಲಿ ಎಂದು ಆರ್ಭಟಿಸಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24 ಸಮುವೇಲನು ಜನರೆಲ್ಲರಿಗೆ, “ಯೆಹೋವನು ಆರಿಸಿಕೊಂಡಿರುವ ಮನುಷ್ಯನನ್ನು ನೋಡಿದಿರಾ! ಸರ್ವಜನರಲ್ಲಿಯೂ ಸೌಲನಂತಹ ಮನುಷ್ಯನು ಇನ್ನೊಬ್ಬನಿಲ್ಲ!” ಎಂದು ಹೇಳಿದನು. ಆಗ ಜನರೆಲ್ಲ, “ರಾಜನು ಚಿರಂಜೀವಿಯಾಗಿರಲಿ” ಎಂದು ಆರ್ಭಟಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 ಆಗ ಸಮುಯೇಲನು, “ಯೆಹೋವ ದೇವರು ಆಯ್ದುಕೊಂಡವನನ್ನು ನೋಡಿರಿ, ಸಮಸ್ತ ಜನರಿಗೆ ಎಲ್ಲಾ ಜನರಲ್ಲಿ ಇವನಿಗೆ ಸಮಾನವಾದವನು ಯಾವನೂ ಇಲ್ಲವಲ್ಲ,” ಎಂದನು. ಜನರೆಲ್ಲರು ಆರ್ಭಟಿಸಿ, “ಅರಸ ಬಾಳಲಿ,” ಎಂದರು. ಅಧ್ಯಾಯವನ್ನು ನೋಡಿ |