Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 10:3 - ಕನ್ನಡ ಸತ್ಯವೇದವು C.L. Bible (BSI)

3 ನೀನು ಅಲ್ಲಿಂದ ಮುಂದೆ ನಡೆದು ತಾಬೋರಿನ ಹತ್ತಿರವಿರುವ ಏಲೋನ್ ವೃಕ್ಷದ ಬಳಿಗೆ ಬಂದಾಗ ದೇವದರ್ಶನಕ್ಕಾಗಿ ಬೇತೇಲಿಗೆ ಹೋಗುವ ಮೂವರು ಜನರು ನಿನಗೆದುರಾಗುವರು. ಅವರಲ್ಲೊಬ್ಬನು ಮೂರು ಹೋತಮರಿಗಳನ್ನೂ ಮತ್ತೊಬ್ಬನು ಮೂರು ರೊಟ್ಟಿಗಳನ್ನೂ ಇನ್ನೊಬ್ಬನು ದ್ರಾಕ್ಷಾರಸದ ಒಂದು ಬುದ್ದಲಿಯನ್ನೂ ಹೊತ್ತುಕೊಂಡು ಇರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ನೀನು ಅಲ್ಲಿಂದ ಮುಂದೆ ನಡೆದು ತಾಬೋರಿನ ಹತ್ತಿರವಿರುವ ಏಲೋನ್‌ ವೃಕ್ಷದ ಬಳಿಗೆ ಬಂದಾಗ ದೇವದರ್ಶನಕ್ಕಾಗಿ ಬೇತೇಲಿಗೆ ಹೋಗುವ ಮೂವರು ಜನರು ನಿನ್ನನ್ನು ಎದುರುಗೊಳ್ಳುವರು. ಅವರಲ್ಲೊಬ್ಬನು ಮೂರು ಹೋತಮರಿಗಳನ್ನೂ, ಮತ್ತೊಬ್ಬನು ಮೂರು ರೊಟ್ಟಿಗಳನ್ನೂ, ಇನ್ನೊಬ್ಬನು ದ್ರಾಕ್ಷಾರಸದ ಒಂದು ಬುದ್ದಲಿಯನ್ನೂ ಹೊತ್ತುಕೊಂಡಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ನೀನು ಅಲ್ಲಿಂದ ಮುಂದೆ ನಡೆದು ತಾಬೋರಿನ ಹತ್ತಿರವಿರುವ ಏಲೋನ್ ವೃಕ್ಷದ ಬಳಿಗೆ ಬಂದಾಗ ದೇವದರ್ಶನಕ್ಕಾಗಿ ಬೇತೇಲಿಗೆ ಹೋಗುವ ಮೂವರು ಜನರು ನಿನಗೆದುರಾಗುವರು. ಅವರಲ್ಲೊಬ್ಬನು ಮೂರು ಹೋತಮರಿಗಳನ್ನೂ ಮತ್ತೊಬ್ಬನು ಮೂರು ರೊಟ್ಟಿಗಳನ್ನೂ ಇನ್ನೊಬ್ಬನು ದ್ರಾಕ್ಷಾರಸದ ಒಂದು ಬುದ್ದಲಿಯನ್ನೂ ಹೊತ್ತುಕೊಂಡಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಸಮುವೇಲನು, “ನೀನು ಅಲ್ಲಿಂದ ಮುಂದೆ ಹೋಗುತ್ತಾ ತಾಬೋರಿನ ಹತ್ತಿರವಿರುವ ಒಂದು ದೊಡ್ಡ ಓಕ್ ವೃಕ್ಷದ ಬಳಿಗೆ ಬರುವೆ. ಅಲ್ಲಿ ನಿನ್ನನ್ನು ಮೂರು ಜನರು ಭೇಟಿಯಾಗುತ್ತಾರೆ. ಆ ಮೂರು ಜನರು ದೇವರ ಆರಾಧನೆಗಾಗಿ ಬೇತೇಲಿಗೆ ಹೋಗುತ್ತಿರುತ್ತಾರೆ. ಮೊದಲನೆಯವನು ಮೂರು ಮರಿ ಹೋತಗಳನ್ನೂ ಎರಡನೆಯವನು ಮೂರು ರೊಟ್ಟಿಗಳನ್ನೂ ಮೂರನೆಯವನು ಒಂದು ಸೀಸೆ ದ್ರಾಕ್ಷಾರಸವನ್ನೂ ತೆಗೆದುಕೊಂಡು ಹೋಗುತ್ತಿರುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 “ನೀನು ಆ ಸ್ಥಳವನ್ನು ಬಿಟ್ಟು, ಆ ಕಡೆ ದಾಟಿ, ತಾಬೋರಿನ ಹತ್ತಿರವಿರುವ ಅಲ್ಲೋನ್ ವೃಕ್ಷದ ಬಳಿಗೆ ಬರುವಾಗ ಒಬ್ಬನು ಮೂರು ಮೇಕೆಯ ಮರಿಗಳನ್ನೂ, ಮತ್ತೊಬ್ಬನು ಮೂರು ರೊಟ್ಟಿಗಳನ್ನೂ, ಇನ್ನೊಬ್ಬನು ದ್ರಾಕ್ಷಾರಸವಿರುವ ಒಂದು ಬುದ್ದಲಿಯನ್ನೂ ಹೊತ್ತುಕೊಂಡು ದೇವರ ಬಳಿಗೆ ಬೇತೇಲಿಗೆ ಹೋಗುವ ಮೂವರನ್ನು ಕಾಣುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 10:3
22 ತಿಳಿವುಗಳ ಹೋಲಿಕೆ  

ಕಷ್ಟಕಾಲದಲ್ಲಿ ನನ್ನ ವಿಜ್ಞಾಪನೆಯನ್ನು ಆಲಿಸಿ, ನಾನು ಹೋದ ಕಡೆಯೆಲ್ಲ ನನ್ನೊಂದಿಗಿದ್ದ ದೇವರಿಗೆ ಅಲ್ಲೊಂದು ಬಲಿಪೀಠವನ್ನು ಕಟ್ಟಿಸುತ್ತೇನೆ,” ಎಂದು ಹೇಳಿದನು.


ದೇವರು ಯಕೋಬನಿಗೆ, “ನೀನು ಈ ಸ್ಥಳವನ್ನು ಬಿಟ್ಟು ಬೇತೇಲಿಗೆ ಹೋಗಿ ಅಲ್ಲೇ ವಾಸಮಾಡು. ನೀನು ನಿನ್ನ ಅಣ್ಣ ಏಸಾವನ ಬಳಿಯಿಂದ ಓಡಿಹೋಗುವಾಗ ನಿನಗಲ್ಲಿ ದರ್ಶನ ಇತ್ತ ದೇವರು ನಾನೇ. ನನಗೊಂದು ಬಲಿಪೀಠವನ್ನು ಅಲ್ಲಿ ಕಟ್ಟಿಸು,” ಎಂದು ಹೇಳಿದರು.


ನಾನು ಸ್ಮಾರಕಸ್ತಂಭವಾಗಿ ನೆಟ್ಟಿರುವ ಈ ಕಲ್ಲು ದೇವರ ಮನೆಯಾಗುವುದು; ಅದು ಮಾತ್ರವಲ್ಲ, ನೀವು ನನಗೆ ಕೊಡುವ ಎಲ್ಲ ಆಸ್ತಿಪಾಸ್ತಿಯಲ್ಲಿ ಹತ್ತರಲ್ಲಿ ಒಂದು ಪಾಲನ್ನು ನಿಮಗೆ ಸಮರ್ಪಿಸುತ್ತೇನೆಂದು ಮಾತುಕೊಡುತ್ತೇನೆ.”


‘ಲೂಜ್’ ಎಂದು ಹೆಸರು ಪಡೆದಿದ್ದ ಆ ಊರಿಗೆ ‘ಬೇತೇಲ್’ ಎಂದು ನಾಮಕರಣ ಮಾಡಿದನು.


ಉತ್ತರ ದಕ್ಷಿಣಗಳನುಂಟು ಮಾಡಿದವನು ನೀನು I ಸ್ತುತಿಸುತ್ತವೆ ತಾಬೋರ್ ಹೆರ್‍ಮೊನ್ ನಿನ್ನ ನಾಮವನು II


ಬಳಿಕ ಗಿದ್ಯೋನನು ಜೆಬಹ ಮತ್ತು ಚಲ್ಮುನ್ನ ಎಂಬವರನ್ನು, “ನೀವು ತಾಬೋರದಲ್ಲಿ ಕೊಂದು ಹಾಕಿದ ವ್ಯಕ್ತಿಗಳು ಹೇಗಿದ್ದರು?” ಎಂದು ಕೇಳಿದಾಗ ಅವರು ಅವನಿಗೆ, “ನಿನ್ನ ಹಾಗೆಯೇ ಇದ್ದರು; ಎಲ್ಲರೂ ರೂಪದಲ್ಲಿ ರಾಜಪುತ್ರರಂತಿದ್ದರು,” ಎಂದು ಉತ್ತರಕೊಟ್ಟರು.


ಅಬೀನೋವಮನ ಮಗ ಬಾರಾಕನು ತಾಬೋರ್ ಬೆಟ್ಟವನ್ನೇರಿ ಬಂದಿದ್ದಾನೆಂಬ ವರ್ತಮಾನ ಸೀಸೆರನಿಗೆ ಮುಟ್ಟಿದಾಗ


ಆಕೆ ನಫ್ತಾಲಿ ದೇಶದ ಕೆದೆಷ್ ಊರಿನಲ್ಲಿದ್ದ ಅಬೀನೋವಮನ ಮಗ ಬಾರಾಕನನ್ನು ಬರಹೇಳಿ ಅವನಿಗೆ, “ನಿಶ್ಚಯವಾಗಿ ಇಸ್ರಯೇಲರ ದೇವರಾದ ಸರ್ವೇಶ್ವರ ನಿನಗೆ ಆಜ್ಞಾಪಿಸಿದ್ದಾರೆ: ‘ನೀನೆದ್ದು ನಫ್ತಾಲಿ ಮತ್ತು ಜೆಬುಲೂನ್ ಕುಲಗಳಿಂದ ಹತ್ತು ಸಾವಿರ ಜನರನ್ನು ಕೂಡಿಸಿಕೊಂಡು ತಾಬೋರ್ ಬೆಟ್ಟಕ್ಕೆ ಹೋಗು;


ತಾಬೋರ್, ಶಹಚೀಮಾ, ಬೇತ್ ಷೆಮೆಷ್ ಎಂಬ ಊರುಗಳೂ ಅದರ ಮೇರೆಯೊಳಗಿದ್ದವು. ಈ ಮೇರೆಯು ಜೋರ್ಡನ್ ನದಿಯ ತೀರದಲ್ಲಿ ಮುಗಿಯುತ್ತದೆ.


ಅದೇ ಸಾರೀದಿನಿಂದ ಅದು ಪೂರ್ವದಿಕ್ಕಿನಲ್ಲಿ ಕಿಸ್ಲೋತ್ ತಾಬೋರಿನ ಎಲ್ಲೆಗೆ ಹತ್ತಿ ದಾಬೆರತಿಗೆ ಹೋಗುತ್ತದೆ. ಅಲ್ಲಿಂದ ಏರುತ್ತಾ ಯಾಫೀಯಕ್ಕೆ ಹೋಗುತ್ತದೆ.


ಅದರ ಸಮೇತ ಎಣ್ಣೆಬೆರೆತ ಎರಡು ಕಿಲೋಗ್ರಾಂ ಹಿಟ್ಟನ್ನು ಧಾನ್ಯನೈವೇದ್ಯವಾಗಿ ಅರ್ಪಿಸಬೇಕು. ಸರ್ವೇಶ್ವರನಿಗೆ ಪ್ರಿಯವಾದ ಸುವಾಸನೆಯುಂಟುಮಾಡುವುದಕ್ಕೆ ಅದನ್ನು ಬೆಂಕಿಯಲ್ಲಿ ಹೋಮಮಾಡಬೇಕು. ಅದರೊಂದಿಗೆ ಸಮರ್ಪಿಸಬೇಕಾದ ಪಾನದ್ರವ್ಯ ಒಂದು ಲೀಟರ್ ದ್ರಾಕ್ಷಾರಸ.


ಅದೂ ಅಲ್ಲದೆ ಹುಳಿರೊಟ್ಟಿಗಳನ್ನು ಕೂಡ ಸಮರ್ಪಿಸಬೇಕು.


ಸಮರ್ಪಿಸುವಂಥದ್ದು ಆಡಾಗಿದ್ದರೆ ಅರ್ಪಿಸುವವನು ಅದನ್ನು ಸರ್ವೇಶ್ವರನ ಸನ್ನಿಧಿಗೆ ತೆಗೆದುಕೊಂಡು ಬರಬೇಕು.


“ಶಾಂತಿಸಮಾಧಾನಕ್ಕಾಗಿ ಸರ್ವೇಶ್ವರನಿಗೆ ಸಮರ್ಪಿಸುವ ಬಲಿಪ್ರಾಣಿ ಕುರಿ ಅಥವಾ ಆಡು ಆಗಿದ್ದರೆ, ಅದು ಗಂಡಾಗಿರಲಿ ಅಥವಾ ಹೆಣ್ಣಾಗಿರಲಿ, ಕಳಂಕರಹಿತವಾಗಿರಬೇಕು.


“ಒಬ್ಬನು ಆಡನ್ನಾಗಲಿ, ಕುರಿಯನ್ನಾಗಲಿ ದಹನಬಲಿದಾನ ಮಾಡಬೇಕೆಂದಿದ್ದರೆ ಅಂಥವನು ಕಳಂಕರಹಿತವಾದ ಗಂಡನ್ನು ತರಲಿ.


ಅವರು ನಿನ್ನ ಕ್ಷೇಮಸಮಾಚಾರವನ್ನು ವಿಚಾರಿಸಿ ಎರಡು ರೊಟ್ಟಿಗಳನ್ನು ಕೊಡುವರು; ನೀನು ಅವುಗಳನ್ನು ತೆಗೆದುಕೊಳ್ಳಬೇಕು.


ಸರ್ವೇಶ್ವರನ ಈ ವಾಕ್ಯಾನುಸಾರ ನನ್ನ ಚಿಕ್ಕಪ್ಪನ ಮಗ ಹನಮೇಲನು ಕಾರಾಗೃಹದ ಅಂಗಳದಲ್ಲಿ ಇದ್ದ ನನ್ನ ಬಳಿಗೆ ಬಂದು, ‘ಬೆನ್ಯಾಮೀನ್ ನಾಡಿನ ಅನಾತೋತಿನಲ್ಲಿರುವ ನನ್ನ ಹೊಲವನ್ನು ದಯಮಾಡಿ ಕೊಂಡುಕೋ. ಅದಕ್ಕೆ ನೀನೆ ಬಾಧ್ಯನು, ನಿನಗಾಗಿಯೇ ಕೊಂಡುಕೊ’ ಎಂದು ಕೇಳಿಕೊಂಡನು. ಕೂಡಲೆ ಇದು ಸರ್ವೇಶ್ವರನ ನುಡಿ ಎಂದು ನನಗೆ ಗೊತ್ತಾಯಿತು.


ಇಸ್ರಯೇಲರು ಬೇತೇಲಿಗೆ ಹೋಗಿ, ಬೆನ್ಯಾಮೀನ್ಯರ ಮೇಲೆ ಯುದ್ಧಕ್ಕೆ ನಮ್ಮಲ್ಲಿ ಮೊದಲು ಯಾರು ಹೋಗಬೇಕು ಎಂದು ದೇವರಾದ ಸರ್ವೇಶ್ವರನನ್ನು ಕೇಳಲು ಅವರು, “ಮೊದಲು ಯೆಹೂದಕುಲದವರು ಹೋಗಲಿ,” ಎಂದು ಹೇಳಿದರು.


(ಇಸ್ರಯೇಲರು ಹೋಗಿ ಸರ್ವೇಶ್ವರನ ಮುಂದೆ ದುಃಖಿಸುತ್ತಾ, “ನಾವು ನಮ್ಮ ಬಂಧುಗಳಾದ ಬೆನ್ಯಾಮೀನ್ಯರೊಡನೆ ಯುದ್ಧಮಾಡಬೇಕೆ?” ಎಂದು ಕೇಳಲು ಅವರು, “ಹೋಗಿ ಯುದ್ಧಮಾಡಿ,” ಎಂದರು.


ಆ ಕಾಲದಲ್ಲಿ ಸರ್ವೇಶ್ಬರನ ಒಡಂಬಡಿಕೆಯ ಮಂಜೂಷವು ಆ ಊರೊಳಗೆ ಇತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು