Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 10:7 - ಕನ್ನಡ ಸತ್ಯವೇದವು C.L. Bible (BSI)

7 ಈ ಗುರುತುಗಳೆಲ್ಲ ಸಂಭವಿಸಿದಾಗ ನಿನಗೆ ಅನುಕೂಲವಿದ್ದ ಹಾಗೆ ವರ್ತಿಸು, ದೇವರು ನಿನ್ನೊಂದಿಗೆ ಇದ್ದಾರೆ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಈ ಗುರುತುಗಳೆಲ್ಲಾ ಸಂಭವಿಸಿದಾಗ ನಿನಗೆ ಅನುಕೂಲವಿದ್ದ ಹಾಗೆ ಮಾಡು; ದೇವರು ನಿನ್ನ ಸಂಗಡ ಇದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಈ ಗುರುತುಗಳೆಲ್ಲಾ ಸಂಭವಿಸಿದಾಗ ನಿನಗೆ ಅನುಕೂಲವಿದ್ದದ್ದನ್ನು ನಡಿಸು; ದೇವರು ನಿನ್ನ ಸಂಗಡ ಇದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಈ ಕಾರ್ಯಗಳು ಸಂಭವಿಸಿದ ಮೇಲೆ, ನೀನು ನಿನ್ನ ನಿರ್ಧಾರದಂತೆ ಮಾಡು. ಯಾಕೆಂದರೆ ದೇವರು ನಿನ್ನೊಂದಿಗಿರುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಈ ಗುರುತುಗಳೆಲ್ಲಾ ನಿನಗೆ ಸಂಭವಿಸಿದಾಗ, ದೇವರು ನಿನ್ನ ಸಂಗಡ ಇರುವುದರಿಂದ ನೀನು ಆ ವೇಳೆಯಲ್ಲಿ ನಿನಗೆ ಕೈಗೂಡಿದ ಹಾಗೆ ಮಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 10:7
20 ತಿಳಿವುಗಳ ಹೋಲಿಕೆ  

ಸರ್ವೇಶ್ವರನ ದೂತನು ಗಿದ್ಯೋನನಿಗೆ ಪ್ರತ್ಯಕ್ಷನಾಗಿ ಅವನಿಗೆ, “ಪರಾಕ್ರಮಶಾಲಿಯೇ, ಸರ್ವೇಶ್ವರ ನಿನ್ನೊಡನೆ ಇದ್ದಾರೆ” ಎಂದನು.


ಇಗೋ, ನಿಮಗೊಂದು ಸೂಚನೆ - ಆ ಶಿಶುವನ್ನು ಬಟ್ಟೆಯಲ್ಲಿ ಸುತ್ತಿ ಗೋದಲಿಯೊಂದರಲ್ಲಿ ಮಲಗಿಸಿರುವುದನ್ನು ಕಾಣುವಿರಿ,” ಎಂದನು.


ನಿನ್ನ ಜೀವಮಾನವಿಡೀ ಯಾರೊಬ್ಬನು ನಿನ್ನನ್ನು ಎದುರಿಸಿ ನಿಲ್ಲನು. ನಾನು ಮೋಶೆಯ ಸಂಗಡ ಇದ್ದ ಹಾಗೆ ನಿನ್ನ ಸಂಗಡವೂ ಇರುವೆನು. ನಿನ್ನನ್ನು ಕೈಬಿಡುವುದಿಲ್ಲ, ನಿನ್ನನ್ನು ತೊರೆದುಬಿಡುವುದಿಲ್ಲ.


ಹಣದಾಶೆಗೆ ಬಲಿಯಾಗಬೇಡಿ. ನಿಮಗೆ ಇರುವುದರಲ್ಲಿಯೇ ತೃಪ್ತರಾಗಿರಿ. “ಎಂದೆಂದಿಗೂ ನಾನು ನಿನ್ನ ಕೈಬಿಡಲಾರೆ; ತ್ಯಜಿಸಲಾರೆ,” ಎಂದು ದೇವರೇ ಹೇಳಿದ್ದಾರೆ.


ಆಗಲಿ, ಸರ್ವೇಶ್ವರ ನಿಮಗೊಂದು ಗುರುತನ್ನು ಕೊಡುವರು. ಇಗೋ, ಕನ್ಯೆಯೊಬ್ಬಳು ಗರ್ಭತಳೆದು ಪುತ್ರನೊಬ್ಬನನ್ನು ಪ್ರಸವಿಸುವಳು. ಇಮ್ಮಾನುವೇಲ್ ಎಂದು ಆತನಿಗೆ ಹೆಸರಿಡುವಳು.


ಆಗ ಸರ್ವೇಶ್ವರ ಅವನಿಗೆ, “ಆ ಜನರು ನಿನ್ನನ್ನು ನಂಬದೆ ಮೊದಲನೆಯ ಸೂಚಕಕಾರ್ಯವನ್ನು ಅರ್ಥಮಾಡಿಕೊಳ್ಳದೆ ಹೋದರೂ ಎರಡನೆಯದನ್ನು ಅರ್ಥಮಾಡಿಕೊಂಡು ನಂಬುವರು.


ನಾನು ನಿಮಗೆ ಆಜ್ಞಾಪಿಸಿದ ಸಕಲವನ್ನೂ ಅನುಸರಿಸುವಂತೆ ಅವರಿಗೆ ಬೋಧಿಸಿರಿ. ಇಗೋ, ಲೋಕಾಂತ್ಯದವರೆಗೂ ಸದಾ ನಾನು ನಿಮ್ಮೊಡನೆ ಇರುತ್ತೇನೆ,” ಎಂದರು


ನಿನ್ನ ಕೈಗೆ ಸಿಕ್ಕಿದ ಕೆಲಸವನ್ನೆಲ್ಲ ಪೂರ್ಣಶಕ್ತಿಯಿಂದ ಮಾಡು. ಏಕೆಂದರೆ ನೀನು ಹೋಗಲಿಕ್ಕಿರುವ ಪಾತಾಳದಲ್ಲಿ ಯಾವ ಕೆಲಸವೂ ಯೋಜನೆಯೂ ತಿಳುವಳಿಕೆಯೂ ಜ್ಞಾನವೂ ಇರುವುದಿಲ್ಲ.


ಸೂರ್ಯನು ಉದಯಿಸುತ್ತಲೇ ಎದ್ದು ಪಟ್ಟಣದ ಮೇಲೆ ಬೀಳು; ಅವನೂ ಅವನ ಜೊತೆಯಲ್ಲಿರುವವರೂ ನಿನಗೆ ವಿರೋಧವಾಗಿ ಹೊರಟು ಬಂದಾಗ ನಿನಗೆ ಅನುಕೂಲ ತೋರಿದ ಹಾಗೆ ಮಾಡು,” ಎಂದು ಹೇಳಿಸಿದನು.


“ನೀವು ಶತ್ರುಗಳ ವಿರುದ್ಧ ಯುದ್ಧಕ್ಕೆ ಹೊರಟಾಗ ಅವರ ಕಡೆ ಕುದುರೆಗಳು, ರಥಗಳು ಹಾಗು ನಿಮಗಿಂತ ಹೆಚ್ಚಾದ ಕಾಲ್ಬಲವು ಇರುವುದನ್ನು ಕಂಡರೆ, ಹೆದರಬೇಡಿ. ಏಕೆಂದರೆ ಈಜಿಪ್ಟ್ ದೇಶದಿಂದ ನಿಮ್ಮನ್ನು ಬಿಡಿಸಿದ ನಿಮ್ಮ ದೇವರಾದ ಸರ್ವೇಶ್ವರ ನಿಮ್ಮೊಂದಿಗೆ ಇದ್ದಾರೆ.


ಹುಡುಗನ ಸಂಗಡ ದೇವರಿದ್ದರು.


ಯೇಸು ಮಾಡಿದ ಈ ಸೂಚಕಕಾರ್ಯಗಳನ್ನು ಕಂಡ ಜನರು, “ಲೋಕಕ್ಕೆ ಬರಬೇಕಾಗಿದ್ದ ಪ್ರವಾದಿ ನಿಜವಾಗಿಯೂ ಇವರೇ,” ಎಂದು ಹೇಳತೊಡಗಿದ್ದರು.


“ಇಮ್ಮಾನುವೇಲ್” ಎಂದರೆ, “ದೇವರು ನಮ್ಮೊಡನೆ ಇದ್ದಾರೆ” ಎಂದು ಅರ್ಥ.


ಇದೆಲ್ಲಾ ನೆರವೇರುವುದು ಎಂಬುದಕ್ಕೆ ಗುರುತಾಗಿ ನಿನ್ನ ಮಕ್ಕಳಾದ ಹೊಫ್ನಿ ಹಾಗು ಫೀನೆಹಾಸ್ ಒಂದೇ ದಿನದಲ್ಲಿ ಸಾಯುವರು.


ನಾನು ನಿನಗೆ ಆಜ್ಞಾಪಿಸಿದಂತೆ ಸ್ಥಿರಚಿತ್ತನಾಗಿರು, ಧೈರ್ಯದಿಂದಿರು, ಅಂಜಬೇಡ, ಕಳವಳಗೊಳ್ಳಬೇಡ. ನೀನು ಹೋಗುವ ಎಡೆಗಳಲ್ಲೆಲ್ಲ ನಿನ್ನ ದೇವರೂ ಸರ್ವೇಶ್ವರನೂ ಆದ ನಾನು ನಿನ್ನ ಸಂಗಡ ಇರುತ್ತೇನೆ,” ಎಂದು ಹೇಳಿದರು.


ಸಮುವೇಲನು ದೊಡ್ಡವನಾಗುತ್ತಾ ಬಂದನು. ಸರ್ವೇಶ್ವರ ಅವನೊಡನೆ ಇದ್ದರು. ಆದುದರಿಂದಲೆ ಅವನು ಪ್ರವಾದನೆ ಮಾಡಿದವುಗಳಲ್ಲಿ ಒಂದೂ ತಪ್ಪಿಹೋಗಲಿಲ್ಲ.


ನನ್ನ ತಂದೆ ನಿನಗೆ ಕೇಡುಮಾಡಲು ಮನಸ್ಸುಮಾಡಿದ್ದಾರೆಂದು ಗೊತ್ತಾದರೆ, ಅದನ್ನೂ ನಿನಗೆ ತಿಳಿಸಿ ನೀನು ತಪ್ಪಿಸಿಕೊಂಡು ಸುರಕ್ಷಿತನಾಗುವ ಹಾಗೆ ನಿನ್ನನ್ನು ಕಳುಹಿಸಿಬಿಡುವೆನು. ಹಾಗೆ ಮಾಡದಿದ್ದರೆ, ಸರ್ವೇಶ್ವರ ನನಗೆ ಏನು ಬೇಕಾದರೂ ಮಾಡಲಿ. ಅವರು ನನ್ನ ತಂದೆಯೊಂದಿಗೆ ಇದ್ದಹಾಗೆ ನಿನ್ನೊಂದಿಗೂ ಇರಲಿ.


ಅದಕ್ಕೆ ನಾತಾನನು ಸಮ್ಮತಿಸಿ, “ನಿಮಗೆ ಮನಸ್ಸಿದ್ದಂತೆ ಮಾಡಿ; ಸರ್ವೇಶ್ವರ ನಿಮ್ಮೊಡನೆ ಇದ್ದಾರೆ,” ಎಂದನು.


ನನ್ನ ಆಸ್ತಿ ಅಪಾರವೆಂದು ಕೊಚ್ಚಿಕೊಂಡಿದ್ದರೆ ನಾನೇ ಸಂಪಾದಿಸಿದ ಸಂಪತ್ತೆಂದು ಹೆಚ್ಚಳಪಟ್ಟಿದ್ದರೆ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು