Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 10:8 - ಕನ್ನಡ ಸತ್ಯವೇದವು C.L. Bible (BSI)

8 ನೀನು ಮುಂದಾಗಿ ಗಿಲ್ಗಾಲಿಗೆ ಹೋಗು; ಏಳು ದಿವಸಗಳಾದ ನಂತರ ನಾನು ದಹನಬಲಿಗಳನ್ನೂ ಶಾಂತಿಸಮಾಧಾನಬಲಿಗಳನ್ನೂ ಸಮರ್ಪಿಸುವುದಕ್ಕಾಗಿ ಅಲ್ಲಿಗೆ ಬಂದು ನೀನು ಮಾಡಬೇಕಾದುದನ್ನು ನಿನಗೆ ತಿಳಿಸುವೆನು; ಅಲ್ಲಿಯವರೆಗೆ ಕಾದುಕೊಂಡಿರು,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ನೀನು ಮುಂದಾಗಿ ಗಿಲ್ಗಾಲಿಗೆ ಹೋಗು; ಏಳು ದಿನಗಳಾದ ನಂತರ ನಾನು ಸರ್ವಾಂಗಹೋಮಗಳನ್ನೂ ಸಮಾಧಾನಯಜ್ಞಗಳನ್ನೂ ಸಮರ್ಪಿಸುವುದಕ್ಕೋಸ್ಕರ ಅಲ್ಲಿಗೆ ಬಂದು ನೀನು ಮಾಡಬೇಕಾದದ್ದನ್ನು ನಿನಗೆ ತಿಳಿಸುವೆನು; ಅಲ್ಲಿಯ ವರೆಗೆ ಕಾದುಕೊಂಡಿರು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ನೀನು ಮುಂದಾಗಿ ಗಿಲ್ಗಾಲಿಗೆ ಹೋಗು; ಏಳು ದಿವಸಗಳಾದನಂತರ ನಾನು ಸರ್ವಾಂಗಹೋಮಗಳನ್ನೂ ಸಮಾಧಾನಯಜ್ಞಗಳನ್ನೂ ಸಮರ್ಪಿಸುವದಕ್ಕೋಸ್ಕರ ಅಲ್ಲಿಗೆ ಬಂದು ನೀನು ಮಾಡಬೇಕಾದದ್ದನ್ನು ನಿನಗೆ ತಿಳಿಸುವೆನು; ಅಲ್ಲಿಯವರೆಗೆ ಕಾದುಕೊಂಡಿರು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 “ನನಗಿಂತ ಮೊದಲು ನೀನು ಗಿಲ್ಗಾಲಿಗೆ ಹೋಗು. ನಾನು ನಿನ್ನನ್ನು ಅಲ್ಲಿ ಭೇಟಿಯಾಗುತ್ತೇನೆ. ನಾನು ಅಲ್ಲಿ ಸರ್ವಾಂಗಹೋಮಗಳನ್ನು ಮತ್ತು ಸಮಾಧಾನಯಜ್ಞಗಳನ್ನು ಅರ್ಪಿಸುತ್ತೇನೆ. ಆದರೆ ನೀನು ಏಳು ದಿನಗಳವರೆಗೆ ಕಾಯಲೇಬೇಕು. ಅನಂತರ ನಾನು ನಿನ್ನ ಬಳಿಗೆ ಬಂದು ನೀನು ಮಾಡಬೇಕಾದದ್ದನ್ನು ತಿಳಿಸುತ್ತೇನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 “ಆದರೆ ನೀನು ನನಗೆ ಮುಂದಾಗಿ ಗಿಲ್ಗಾಲಿಗೆ ಇಳಿದು ಹೋಗಬೇಕು. ನಾನು ದಹನಬಲಿಗಳನ್ನೂ, ಸಮಾಧಾನದ ಬಲಿಗಳನ್ನೂ ಅರ್ಪಿಸುವುದಕ್ಕಾಗಿ ನಿನ್ನ ಬಳಿಗೆ ಬರುವೆನು. ನೀನು ಮಾಡಬೇಕಾದದ್ದನ್ನು ನಾನು ನಿನಗೆ ತಿಳಿಸುವವರೆಗೂ ನೀನು ಅಲ್ಲಿ ಏಳು ದಿವಸ ಕಾದುಕೊಳ್ಳಬೇಕು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 10:8
7 ತಿಳಿವುಗಳ ಹೋಲಿಕೆ  

ಸೌಲನು ಫಿಲಿಷ್ಟಿಯರ ದಂಡುಪ್ರದೇಶವನ್ನು ನಾಶಮಾಡಿದ್ದರಿಂದ, ತಾವು ಅವರ ದ್ವೇಷಕ್ಕೆ ಗುರಿಯಾದೆವೆಂದು ಇಸ್ರಯೇಲರು ತಿಳಿದು, ಗಿಲ್ಗಾಲಿಗೆ ಬಂದು ಸೌಲನನ್ನು ಕೂಡಿಕೊಂಡರು.


ಆದರೆ ಸಮುವೇಲನು ಅವನಿಗೆ: “ನಿನ್ನ ಕತ್ತಿ ಪುತ್ರಶೋಕವನ್ನುಂಟುಮಾಡಿತು ಅನೇಕ ಸ್ತ್ರೀಯರಿಗೆ; ನಿನ್ನ ತಾಯಿ ಸವಿಯಲಿ ಆ ಶೋಕವನು ಎಲ್ಲರಿಗೂ ಹೆಚ್ಚಿಗೆ’ ಎಂದು ಹೇಳಿ ಅಗಾಗನನ್ನು ಗಿಲ್ಗಾಲಿನಲಿ ಸರ್ವೇಶ್ವರನ ಸನ್ನಿಧಿಯಲ್ಲೇ ಕಡಿದುಹಾಕಿದನು.


ಶಾಂತಿಸಮಾಧಾನಕ್ಕಾಗಿ ಅರ್ಪಿಸುವ ಆ ಬಲಿ ಪ್ರಾಣಿಯ ಕೊಬ್ಬನ್ನು ಸರ್ವೇಶ್ವರನಿಗೆ ಹೋಮವಾಗಿ ಸಮರ್ಪಿಸಬೇಕು.


ಜನರು ಮೊದಲನೇ ತಿಂಗಳಿನ ಹತ್ತನೆಯ ದಿನ ಜೋರ್ಡನನ್ನು ದಾಟಿ ಜೆರಿಕೋವಿನ ಪೂರ್ವಗಡಿಯಲ್ಲಿರುವ ಗಿಲ್ಗಾಲೆಂಬಲ್ಲಿಗೆ ಬಂದು ತಂಗಿದರು.


ಬೆನ್ಯಾಮೀನ್ ಕುಲದ ಗೇರನ ಮಗನೂ ಬಹುರೀಮಿನವನೂ ಆದ ಶಿಮ್ಮಿಯು ತವಕದಿಂದ ಬಂದು ಅರಸನಾದ ದಾವೀದನನ್ನು ಸ್ವಾಗತಿಸುವುದಕ್ಕೆ ಯೆಹೂದ ಕುಲದವರನ್ನು ಕೂಡಿಕೊಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು