Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 10:9 - ಕನ್ನಡ ಸತ್ಯವೇದವು C.L. Bible (BSI)

9 ಸೌಲನು ಸಮುವೇಲನನ್ನು ಬಿಟ್ಟು ಹೊರಟ ಕೂಡಲೆ ದೇವರು ಅವನಿಗೆ ನೂತನ ಚೈತನ್ಯವನ್ನು ಕೊಟ್ಟರು. ಅದೇ ದಿನದಲ್ಲಿ ಆ ಎಲ್ಲ ಘಟನೆಗಳು ಸಂಭವಿಸಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಸೌಲನು ಸಮುವೇಲನನ್ನು ಬಿಟ್ಟು ಹೊರಟ ಕೂಡಲೆ ದೇವರು ಅವನಿಗೆ ನೂತನ ಹೃದಯವನ್ನು ಕೊಟ್ಟನು. ಅದೇ ದಿನದಲ್ಲಿ ಆ ಎಲ್ಲಾ ಗುರುತುಗಳು ಸಂಭವಿಸಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಸೌಲನು ಸಮುವೇಲನನ್ನು ಬಿಟ್ಟು ಹೊರಟ ಕೂಡಲೆ ದೇವರು ಅವನಿಗೆ ನೂತನ ಹೃದಯವನ್ನು ಕೊಟ್ಟನು. ಅದೇ ದಿನದಲ್ಲಿ ಆ ಎಲ್ಲಾ ಗುರುತುಗಳು ಸಂಭವಿಸಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಸೌಲನು ಸಮುವೇಲನನ್ನು ಬಿಟ್ಟುಹೊರಡಲು ತಿರುಗಿದಂತೆಯೇ ದೇವರು ಸಹ ಸೌಲನ ಜೀವಿತವನ್ನು ಮಾರ್ಪಾಟು ಮಾಡಿದನು. ಅಂದು ಆ ಸಂಗತಿಗಳೆಲ್ಲಾ ಸಂಭವಿಸಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಅವನು ಸಮುಯೇಲನನ್ನು ಬಿಟ್ಟುಹೋಗಲು ಹಿಂದಿರುಗಿದಾಗ, ದೇವರು ಅವನಿಗೆ ಹೊಸ ಹೃದಯವನ್ನು ಕೊಟ್ಟರು. ಆ ಸಮಸ್ತ ಗುರುತುಗಳು ಆ ದಿವಸದಲ್ಲಿ ಅವನಿಗೆ ಸಂಭವಿಸಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 10:9
9 ತಿಳಿವುಗಳ ಹೋಲಿಕೆ  

ಆಗ ಅವರ ಮೇಲೆ ಬೀಳುವುದಕ್ಕೆ ನಿನಗೆ ಧೈರ್ಯ ಬರುವುದು,” ಎಂದರು. ಗಿದ್ಯೋನನು ಅದರಂತೆಯೇ ತನ್ನ ಸೇವಕನಾದ ಪುರನ ಸಂಗಡ ಶತ್ರು ಸೈನಿಕರ ಪಾಳೆಯದ ಕಡೇ ಭಾಗಕ್ಕೆ ಹೋದನು.


ಅನಂತರ ಸರ್ವೇಶ್ವರನ ದೂತನು ತನ್ನ ಕೈಕೋಲನ್ನು ಚಾಚಿ ಅದರ ತುದಿಯನ್ನು ಆ ರೊಟ್ಟಿಗಳಿಗೂ ಮಾಂಸಕ್ಕೂ ಮುಟ್ಟಿಸಲು ಬಂಡೆಯಿಂದ ಬೆಂಕಿಯೆದ್ದು ಅವೆರಡನ್ನೂ ದಹಿಸಿಬಿಟ್ಟಿತು. ಸರ್ವೇಶ್ವರನ ದೂತನು ಅದೃಶ್ಯನಾದನು.


ಅವರು ಪಟ್ಟಣಕ್ಕೆ ಹೋಗಿ, ಯೇಸು ತಮಗೆ ಹೇಳಿದ ಪ್ರಕಾರ ಎಲ್ಲಾ ವ್ಯವಸ್ಥಿತವಾಗಿರುವುದನ್ನು ಕಂಡು, ಪಾಸ್ಕಭೋಜನವನ್ನು ತಯಾರಿಸಿದರು.


ನನ್ನ ಹೃನ್ಮನಗಳಿಗೆ ಸರಿಯಾದುದನ್ನೇ ಮಾಡುವ ಒಬ್ಬ ಶ್ರದ್ಧೆಯುಳ್ಳ ಯಾಜಕನನ್ನು ಎಬ್ಬಿಸುವೆನು. ಅವನು ನನ್ನ ಅಭಿಷಿಕ್ತನ ಬಳಿಯಲ್ಲಿ ಸದಾಕಾಲ ಸೇವೆಮಾಡುವನು.


ಸಮುವೇಲನು ಎಣ್ಣೆಯ ಕೊಂಬನ್ನು ತೆಗೆದುಕೊಂಡು ಅವನನ್ನು ಅವನ ಸಹೋದರರ ಮಧ್ಯದಲ್ಲಿ ಅಭಿಷೇಕಿಸಿದನು. ಕೂಡಲೆ ಸರ್ವೇಶ್ವರನ ಆತ್ಮವು ದಾವೀದನ ಮೇಲೆ ಬಂದು ನೆಲೆಗೊಂಡಿತು. ಅನಂತರ ಸಮುವೇಲನು ರಾಮಾಕ್ಕೆ ಹೊರಟುಹೋದನು.


ನಾನು ನಿಮಗೆ ಹೊಸ ಮನಸ್ಸನ್ನು ಕೊಟ್ಟು, ನಿಮ್ಮಲ್ಲಿ ನನ್ನ ಸ್ವಭಾವವನ್ನು ಹುಟ್ಟಿಸುವೆನು. ಕಲ್ಲಾದ ಹೃದಯವನ್ನು ನಿಮ್ಮೊಳಗಿಂದ ತೆಗೆದು, ಮೃದುವಾದ ಹೃದಯವನ್ನು ನಿಮಗೆ ದಯಪಾಲಿಸುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು