Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 11:3 - ಕನ್ನಡ ಸತ್ಯವೇದವು C.L. Bible (BSI)

3 ಆಗ ಯಾಬೇಷಿನ ಹಿರಿಯರು ಅವನಿಗೆ, “ಏಳು ದಿವಸಗಳವರೆಗೆ ಸಮಯ ಕೊಡು; ಅಷ್ಟರೊಳಗೆ ನಾವು ಇಸ್ರಯೇಲರ ಪ್ರಾಂತ್ಯಗಳಿಗೆ ದೂತರನ್ನು ಕಳುಹಿಸುತ್ತೇವೆ. ನಮ್ಮನ್ನು ಯಾರೂ ರಕ್ಷಿಸದಿದ್ದರೆ ನಾವು ನಿನ್ನ ಬಳಿಗೆ ಬಂದು ಶರಣಾಗುತ್ತೇವೆ,” ಎಂದು ವಿನಂತಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಆಗ ಯಾಬೇಷಿನ ಹಿರಿಯರು ಅವನಿಗೆ, “ಏಳು ದಿನಗಳವರೆಗೆ ಸಮಯ ಕೊಡು; ಅಷ್ಟರೊಳಗೆ ನಾವು ಇಸ್ರಾಯೇಲರ ಎಲ್ಲಾ ಪ್ರಾಂತ್ಯಗಳಿಗೆ ದೂತರನ್ನು ಕಳುಹಿಸುತ್ತೇವೆ. ನಮ್ಮನ್ನು ಯಾರೂ ರಕ್ಷಿಸದಿದ್ದರೆ, ನಾವು ನಿನ್ನ ಬಳಿಗೆ ಹೊರಟು ಬಂದು ನಿನಗೆ ಅಧೀನರಾಗುತ್ತೇವೆ” ಎಂದು ತಿಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಆಗ ಯಾಬೇಷಿನ ಹಿರಿಯರು ಅವನಿಗೆ - ಏಳು ದಿವಸಗಳವರೆಗೆ ತಡೆ; ಅಷ್ಟರೊಳಗೆ ನಾವು ಇಸ್ರಾಯೇಲ್ಯರ ಎಲ್ಲಾ ಪ್ರಾಂತ್ಯಗಳಿಗೆ ದೂತರನ್ನು ಕಳುಹಿಸುತ್ತೇವೆ. ನಮ್ಮನ್ನು ಯಾರೂ ರಕ್ಷಿಸದಿದ್ದರೆ ನಾವು ನಿನ್ನ ಬಳಿಗೆ ಹೊರಟುಬರುವೆವು ಎಂದು ತಿಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಯಾಬೇಷಿನ ಹಿರಿಯರು ನಾಹಾಷನಿಗೆ, “ನಮಗೆ ಏಳು ದಿನಗಳವರೆಗೆ ಸಮಯ ಕೊಡು. ನಾವು ಇಸ್ರೇಲಿನ ಎಲ್ಲಾ ಕಡೆಗೆ ದೂತರನ್ನು ಕಳುಹಿಸುತ್ತೇವೆ. ನಮ್ಮನ್ನು ರಕ್ಷಿಸಲು ಯಾರೂ ಬರದಿದ್ದರೆ ನಾವೆಲ್ಲ ನಿನ್ನ ಬಳಿಗೆ ಬರುತ್ತೇವೆ ಹಾಗೂ ನಿನಗೆ ಅಧೀನರಾಗುತ್ತೇವೆ” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಅದಕ್ಕೆ ಯಾಬೇಷಿನ ಹಿರಿಯರು ಅವನಿಗೆ, “ನಾವು ಇಸ್ರಾಯೇಲಿನ ಸಮಸ್ತ ಮೇರೆಗಳಿಗೆ ದೂತರನ್ನು ಕಳುಹಿಸುವ ಹಾಗೆ ನಮಗೆ ಏಳು ದಿವಸಗಳ ಅವಕಾಶವನ್ನು ಕೊಡು. ನಮ್ಮನ್ನು ರಕ್ಷಿಸುವವರು ಯಾರೂ ಇಲ್ಲದೆ ಹೋದರೆ, ಆಗ ನಾವು ನಿನ್ನ ಬಳಿಗೆ ಹೊರಟು ಬರುವೆವು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 11:3
3 ತಿಳಿವುಗಳ ಹೋಲಿಕೆ  

ಆದುದರಿಂದ ಇಸ್ರಯೇಲರ ಹಿರಿಯರೆಲ್ಲರೂ ಕೂಡಿ ರಾಮಾದಲ್ಲಿದ್ದ ಸಮುವೇಲನ ಬಳಿಗೆ ಬಂದು,


ದೂತರು ಹೋಗಿ ಈ ವರ್ತಮಾನವನ್ನು ತಿಳಿಸಲು ಯಾಬೇಷಿನವರು ಸಂತೋಷಭರಿತರಾದರು. ಅಮ್ಮೋನಿಯರಿಗೆ, “ನಾವು ನಾಳೆ ನಿಮ್ಮ ಬಳಿಗೆ ಬರುವೆವು; ನಿಮ್ಮ ಇಚ್ಛೆಯ ಪ್ರಕಾರ ಮಾಡಬಹುದು,” ಎಂದು ಹೇಳಿದರು.


ಅಸ್ಸೀರಿಯದ ಅರಸನಾದ ನನ್ನ ಒಡೆಯನ ಮಾತನ್ನು ಕೇಳಿ; ಆತನೊಡನೆ ಒಪ್ಪಂದ ಮಾಡಿಕೊಂಡು ಆತನ ಆಶ್ರಯವನ್ನು ಸೇರಿರಿ. ಆಗ ನಿಮ್ಮಲ್ಲಿ ಪ್ರತಿಯೊಬ್ಬನು ತನ್ನ ತನ್ನ ಅಂಜೂರಮರದ ಹಾಗೂ ದ್ರಾಕ್ಷಾಲತೆಯ ಹಣ್ಣುಗಳನ್ನು ತಿನ್ನುವನು; ತನ್ನ ಬಾವಿಯ ನೀರನ್ನು ಕುಡಿಯುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು