1 ಸಮುಯೇಲ 11:7 - ಕನ್ನಡ ಸತ್ಯವೇದವು C.L. Bible (BSI)7 ಒಂದು ಜೋಡಿ ಎತ್ತುಗಳನ್ನು ತೆಗೆದುಕೊಂಡು ತುಂಡುತುಂಡು ಮಾಡಿ, ಆ ತುಂಡುಗಳನ್ನು ದೂತರ ಮುಖಾಂತರ ಇಸ್ರಯೇಲರ ಎಲ್ಲ ಪ್ರಾಂತ್ಯಗಳಿಗೆ ಕಳುಹಿಸಿದನು. “ಯಾರು ಸೌಲ ಹಾಗು ಸಮುವೇಲರನ್ನು ಹಿಂಬಾಲಿಸುವುದಿಲ್ಲವೋ ಅವರ ಎತ್ತುಗಳನ್ನು ಹೀಗೆಯೇ ಕಡಿಯಲಾಗುವುದು,” ಎಂದು ಹೇಳಿಸಿದನು. ಸರ್ವೇಶ್ವರನ ಭಯಭಕ್ತಿಯಿಂದ ಪ್ರೇರಿತರಾದ ಜನರೆಲ್ಲರೂ ಏಕಮನಸ್ಸಿನಿಂದ ಕೂಡಿಬಂದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಆ ತುಂಡುಗಳನ್ನು ದೂತರ ಮುಖಾಂತರ ಇಸ್ರಾಯೇಲರ ಎಲ್ಲಾ ಪ್ರಾಂತ್ಯಗಳಿಗೆ ಕಳುಹಿಸಿ, “ಯಾರು ಸೌಲ, ಸಮುವೇಲರನ್ನು ಹಿಂಬಾಲಿಸುವುದಿಲ್ಲವೋ ಅವರ ಎತ್ತುಗಳು ಹೀಗೆಯೇ ಕಡಿಯಲ್ಪಡುವವು” ಎಂದು ಹೇಳಿ ಕಳುಹಿಸಿದನು. ಯೆಹೋವನಿಗೆ ಭಯಪಟ್ಟು ಜನರೆಲ್ಲರೂ ಏಕಮನಸ್ಸಿನಿಂದ ಬೆಜೆಕಿನಲ್ಲಿ ಕೂಡಿಬಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಒಂದು ಜೋಡಿ ಎತ್ತುಗಳನ್ನು ತೆಗೆದುಕೊಂಡು ತುಂಡು ತುಂಡು ಮಾಡಿ ಆ ತುಂಡುಗಳನ್ನು ದೂತರ ಮುಖಾಂತರ ಇಸ್ರಾಯೇಲ್ಯರ ಎಲ್ಲಾ ಪ್ರಾಂತಗಳಿಗೆ ಕಳುಹಿಸಿ - ಯಾರು ಸೌಲ ಸಮುವೇಲರನ್ನು ಹಿಂಬಾಲಿಸುವದಿಲ್ಲವೋ ಅವರ ಎತ್ತುಗಳು ಹೀಗೆಯೇ ಕಡಿಯಲ್ಪಡುವವು ಎಂದು ಹೇಳಿಸಿದನು. ಯೆಹೋವನ ಭಯಪ್ರೇರಿತರಾಗಿ ಜನರೆಲ್ಲರೂ ಏಕಮನಸ್ಸಿನಿಂದ ಕೂಡಿ ಬಂದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಸೌಲನು ಒಂದು ಜೊತೆ ಹಸುಗಳನ್ನು ತೆಗೆದುಕೊಂಡು ಅವುಗಳನ್ನು ತುಂಡುತುಂಡಾಗಿ ಕತ್ತರಿಸಿ ಆ ತುಂಡುಗಳನ್ನು ಸಂದೇಶಕರಿಗೆ ಕೊಟ್ಟನು. “ಇಸ್ರೇಲಿನ ನಾಡಿನಲ್ಲೆಲ್ಲಾ ಈ ತುಂಡುಗಳನ್ನು ತೆಗೆದುಕೊಂಡು ಹೋಗಿ ಅವರಿಗೆ, ‘ಸೌಲನನ್ನೂ ಮತ್ತು ಸಮುವೇಲನನ್ನೂ ಹಿಂಬಾಲಿಸಿರಿ, ಸೌಲನನ್ನು ಮತ್ತು ಸಮುವೇಲನನ್ನು ಯಾರು ಹಿಂಬಾಲಿಸುವುದಿಲ್ಲವೋ, ಯಾರು ಅವರಿಗೆ ಸಹಾಯ ಮಾಡುವುದಿಲ್ಲವೋ ಅಂತಹವರ ಹಸುಗಳಿಗೂ ಇದೇ ಗತಿಯಾಗುತ್ತದೆ’ ಎಂದು ತಿಳಿಸಿರಿ” ಎಂದನು. ಯೆಹೋವನ ಮೇಲೆ ಜನರಲ್ಲಿ ಹೆಚ್ಚು ಭಯವುಂಟಾಯಿತು. ಅವರೆಲ್ಲಾ ಒಂದೇ ಮನಸ್ಸಿನಿಂದ ಒಟ್ಟಾಗಿ ಸೇರಿ ಬಂದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಅವುಗಳನ್ನು ತುಂಡುತುಂಡಾಗಿ ಕತ್ತರಿಸಿ, ದೂತರ ಕೈಯಿಂದ ಇಸ್ರಾಯೇಲಿನ ಮೇರೆಗಳಿಗೆಲ್ಲಾ ಕಳುಹಿಸಿ, “ಯಾರು ಸೌಲ ಮತ್ತು ಸಮುಯೇಲರನ್ನು ಹಿಂಬಾಲಿಸುವುದಿಲ್ಲವೋ ಅವರ ಎತ್ತುಗಳಿಗೆ ಈ ಪ್ರಕಾರ ಮಾಡಲಾಗುವುದು,” ಎಂದು ಹೇಳಿದನು. ಯೆಹೋವ ದೇವರಿಂದ ಉಂಟಾದ ಭಯ ಜನರ ಮೇಲೆ ಬಿದ್ದದ್ದರಿಂದ, ಅವರು ಒಬ್ಬ ಮನುಷ್ಯನಂತೆ ಹೊರಟು ಬಂದರು. ಅಧ್ಯಾಯವನ್ನು ನೋಡಿ |