Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 11:9 - ಕನ್ನಡ ಸತ್ಯವೇದವು C.L. Bible (BSI)

9 ಬಂದಿದ್ದ ದೂತರಿಗೆ, “ನಾಳೆ ಮಧ್ಯಾಹ್ನದೊಳಗೆ ನಿಮಗೆ ಸಹಾಯ ಸಿಕ್ಕುವುದೆಂದು ಯಾಬೇಷ್ ಗಿಲ್ಯಾದಿನವರಿಗೆ ತಿಳಿಸಿರಿ,” ಎಂದು ಹೇಳಿ ಅವರನ್ನು ಕಳುಹಿಸಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಅವರು ಬಂದಿದ್ದ ದೂತರಿಗೆ, “ನಾಳೆ ಮಧ್ಯಾಹ್ನದಲ್ಲಿ ನಿಮಗೆ ಸಹಾಯ ಸಿಕ್ಕುವುದೆಂದು ಯಾಬೇಷ್ ಗಿಲ್ಯಾದಿನವರಿಗೆ ತಿಳಿಸಿರಿ” ಎಂದು ಹೇಳಿ ಅವರನ್ನು ಕಳುಹಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಇವರು ಬಂದಿದ್ದ ದೂತರಿಗೆ - ನಾಳೆ ಮಧ್ಯಾಹ್ನದಲ್ಲಿ ನಿಮಗೆ ಸಹಾಯಸಿಕ್ಕುವದೆಂದು ಯಾಬೇಷ್ ಗಿಲ್ಯಾದಿನವರಿಗೆ ತಿಳಿಸಿರಿ ಎಂದು ಹೇಳಿ ಅವರನ್ನು ಕಳುಹಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಸೌಲನು ಮತ್ತು ಅವನ ಸೈನಿಕರು ಯಾಬೇಷಿನ ಸಂದೇಶಕರಿಗೆ, “ಗಿಲ್ಯಾದಿನ ಯಾಬೇಷ್ ಜನರಿಗೆ ನಾಳೆ ನಡುಮಧ್ಯಾಹ್ನದೊಳಗೆ ನಿಮ್ಮನ್ನು ರಕ್ಷಿಸುತ್ತೇವೆಂದು ತಿಳಿಸಿ” ಎಂಬುದಾಗಿ ಹೇಳಿದರು. ಯಾಬೇಷಿನ ಜನರಿಗೆ ಸೌಲನ ಸಂದೇಶವನ್ನು ಸಂದೇಶಕರು ತಿಳಿಸಿದರು. ಯಾಬೇಷಿನ ಜನರು ಹರ್ಷಿತರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಆಗ ಅವರು ಬಂದ ದೂತರಿಗೆ, “ನೀವು ಗಿಲ್ಯಾದಿನಲ್ಲಿರುವ ಯಾಬೇಷಿನ ಜನರಿಗೆ, ‘ನಾಳೆ ಬಿಸಿಲೇರಿದಾಗ ನಿಮಗೆ ಸಹಾಯ ಉಂಟಾಗುವುದು,’ ಎಂದು ಹೇಳಿರಿ,” ಎಂದರು. ಹಾಗೆಯೇ ದೂತರು ಬಂದು ಯಾಬೇಷಿನ ಜನರಿಗೆ ಅದನ್ನು ತಿಳಿಸಿದಾಗ, ಅವರು ಸಂತೋಷಪಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 11:9
7 ತಿಳಿವುಗಳ ಹೋಲಿಕೆ  

ಬಿಡಿಸಿ ರಕ್ಷಿಸಿದನೆನ್ನಾ ಶತ್ರುಗಳಿಂದ I ನನಗಿಂತ ಪುಷ್ಟ, ಬಲಿಷ್ಟ ಹಗೆಗಳಿಂದ II


ಮಿಚ್ಫೆಯಲ್ಲಿ ಸರ್ವೇಶ್ವರನ ಮುಂದೆ ಸಭೆ ಸೇರಿದ್ದಾಗ ಅದಕ್ಕೆ ಬಾರದಿದ್ದ ಇಸ್ರಯೇಲರು ಯಾರಾದರೂ ಇದ್ದಾರೋ ಎಂದು ವಿಚಾರಿಸುವಲ್ಲಿ, ಯಾಬೇಷ್ ಗಿಲ್ಯಾದಿನಿಂದ ಒಬ್ಬನೂ ಬರಲಿಲ್ಲವೆಂದು ಗೊತ್ತಾಯಿತು.


ಅವರನ್ನು ಬೆಜೆಕಿನಲ್ಲಿ ಕ್ರಮಪಡಿಸಿ ಲೆಕ್ಕಿಸಿದಾಗ ಇಸ್ರಯೇಲರಲ್ಲಿ ಮೂರು ಲಕ್ಷ ಸೈನಿಕರೂ ಯೆಹೂದ್ಯರಲ್ಲಿ ಮೂವತ್ತು ಸಾವಿರ ಸೈನಿಕರೂ ಇದ್ದರು.


ದೂತರು ಹೋಗಿ ಈ ವರ್ತಮಾನವನ್ನು ತಿಳಿಸಲು ಯಾಬೇಷಿನವರು ಸಂತೋಷಭರಿತರಾದರು. ಅಮ್ಮೋನಿಯರಿಗೆ, “ನಾವು ನಾಳೆ ನಿಮ್ಮ ಬಳಿಗೆ ಬರುವೆವು; ನಿಮ್ಮ ಇಚ್ಛೆಯ ಪ್ರಕಾರ ಮಾಡಬಹುದು,” ಎಂದು ಹೇಳಿದರು.


ಫಿಲಿಷ್ಟಿಯರು ಸೌಲನಿಗೆ ಏನೇನು ಮಾಡಿದರೆಂಬ ವರದಿ ಯಾಬಿಷ್ ಗಿಲ್ಯಾದಿನವರಿಗೆ ಮುಟ್ಟಿತು.


ಆಗ ಅವನು ಅವರ ಬಳಿಗೆ ದೂತರನ್ನು ಕಳುಹಿಸಿ, “ನೀವು ರಾಜನಿಷ್ಠೆಯಿಂದ ನಿಮ್ಮ ಒಡೆಯ ಸೌಲನ ಶವವನ್ನು ಸಮಾಧಿಮಾಡಿದ್ದಕ್ಕಾಗಿ ಸರ್ವೇಶ್ವರನ ಆಶೀರ್ವಾದ ನಿಮಗೆ ಲಭಿಸಲಿ!


ಅವರಲ್ಲಿ ಅತೀ ಶೂರರಾದವರು ಹೋಗಿ ಸೌಲನ ಮತ್ತು ಅವನ ಮಕ್ಕಳ ಶವಗಳನ್ನು ತೆಗೆದುಕೊಂಡು ಯಾಬೇಷಿಗೆ ಬಂದರು. ಅಲ್ಲಿ ಅವುಗಳನ್ನು ಏಲಾ ಮರದ ಕೆಳಗೆ ಸಮಾಧಿಮಾಡಿ ಏಳು ದಿನ ಉಪವಾಸ ಆಚರಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು