Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 12:12 - ಕನ್ನಡ ಸತ್ಯವೇದವು C.L. Bible (BSI)

12 ಅಮ್ಮೋನಿಯರ ಅರಸನಾದ ನಾಹಾಷನು ನಿಮ್ಮ ಮೇಲೆ ಯುದ್ಧಕ್ಕೆ ಬರುತ್ತಾನೆಂದು ನಿಮಗೆ ಗೊತ್ತಾಗಲು, ನಿಮ್ಮ ದೇವರಾದ ಸರ್ವೆಶ್ವರ ನಿಮ್ಮ ಅರಸನಾಗಿದ್ದರೂ ನೀವು, ‘ನಮಗೊಬ್ಬ ಅರಸನನ್ನು ನೇಮಿಸು’ ಎಂದು ನನ್ನನ್ನು ಬೇಡಿಕೊಂಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಅಮ್ಮೋನಿಯರ ಅರಸನಾದ ನಾಹಾಷನು ನಿಮ್ಮ ಮೇಲೆ ಯುದ್ಧಕ್ಕೆ ಬರುತ್ತಾನೆಂದು ನಿಮಗೆ ಗೊತ್ತಾಗಲು, ನಿಮ್ಮ ದೇವರಾದ ಯೆಹೋವನು ನಿಮ್ಮ ಅರಸನಾಗಿದ್ದರೂ ನೀವು, ‘ನಮಗೊಬ್ಬ ಅರಸನನ್ನು ನೇಮಿಸು’ ಎಂದು ನನ್ನನ್ನು ಬೇಡಿಕೊಂಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಅಮ್ಮೋನಿಯರ ಅರಸನಾದ ನಾಹಾಷನು ನಿಮ್ಮ ಮೇಲೆ ಯುದ್ಧಕ್ಕೆ ಬರುತ್ತಾನೆಂದು ನಿಮಗೆ ಗೊತ್ತಾಗಲು ನಿಮ್ಮ ದೇವರಾದ ಯೆಹೋವನು ನಿಮ್ಮ ಅರಸನಾಗಿದ್ದರೂ ನೀವು - ನಮಗೊಬ್ಬ ಅರಸನನ್ನು ನೇವಿುಸೆಂದು ನನ್ನನ್ನು ಬೇಡಿಕೊಂಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಆದರೆ ಅಮ್ಮೋನಿಯರ ರಾಜನಾದ ನಾಹಾಷನು ನಿಮ್ಮ ವಿರುದ್ಧ ಹೋರಾಡಲು ಬರುತ್ತಿರುವುದನ್ನು ಕಂಡು ನೀವು, ‘ನಮ್ಮನ್ನಾಳಲು ನಮಗೆ ಒಬ್ಬ ರಾಜ ಬೇಕು’ ಎಂದು ಕೇಳಿದಿರಿ. ನಿಮ್ಮ ದೇವರಾದ ಯೆಹೋವನು ನಿಮ್ಮ ರಾಜನಾಗಿದ್ದರೂ ನೀವು ಹೀಗೆ ಕೇಳಿದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 “ಆದರೆ ಅಮ್ಮೋನ್ಯರ ಅರಸನಾದ ನಾಹಾಷನು ನಿಮಗೆ ವಿರೋಧವಾಗಿ ಯುದ್ಧಮಾಡಲು ಬರುವುದನ್ನು ಕಂಡಾಗ, ನಿಮ್ಮ ದೇವರಾದ ಯೆಹೋವ ದೇವರೇ ನಿಮಗೆ ಅರಸರಾಗಿದ್ದರು. ಆಗ ನೀವು, ‘ನಮಗೆ ಹಾಗೆ ಬೇಡ, ಒಬ್ಬ ಅರಸನು ನಮ್ಮನ್ನು ಆಳಬೇಕು,’ ಎಂದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 12:12
15 ತಿಳಿವುಗಳ ಹೋಲಿಕೆ  

ಅವನು ಅವರಿಗೆ, “ನಾನಾಗಲಿ, ನನ್ನ ಮಗನಾಗಲಿ ನಿಮ್ಮನ್ನು ಆಳುವುದಿಲ್ಲ; ಸರ್ವೇಶ್ವರನೇ ನಿಮ್ಮ ಅರಸ.


ನೀವಾದರೋ, ನಿಮ್ಮನ್ನು ಕಷ್ಟಸಂಕಟಗಳಿಂದ ಬಿಡಿಸಿದ ನಿಮ್ಮ ದೇವರಾದ ನನ್ನನ್ನು ತಿರಸ್ಕರಿಸಿ ಈಗ ನಮಗೊಬ್ಬ ಅರಸನನ್ನು ನೇಮಿಸೆಂದು ಕೇಳುತ್ತೀರಿ. ಆದುದರಿಂದ ನೀವು ನಿಮ್ಮ ನಿಮ್ಮ ಕುಲ ಹಾಗು ಗೋತ್ರಗಳ ಅನುಸಾರ ಸರ್ವೇಶ್ವರನ ಸನ್ನಿಧಿಯಲ್ಲಿ ಹಾಜರಾಗಿರಿ,” ಎಂದು ಅಪ್ಪಣೆ ಮಾಡಿದನು.


‘ನನಗೆ ರಾಜನು ಬೇಕು, ರಾಜಾಧಿಕಾರಿಗಳು ಬೇಕು’ ಎಂದು ಹೇಳಿಕೊಂಡಿದ್ದಿಯಲ್ಲಾ; ನಿನ್ನನ್ನು ರಕ್ಷಿಸಬಲ್ಲ ರಾಜನೆಲ್ಲಿ? ನಿನ್ನನ್ನು ಕಾಪಾಡಬಲ್ಲ ನಗರಪಾಲಕರೆಲ್ಲಿ?


ಸರ್ವೇಶ್ವರ ಸ್ವಾಮಿಯೇ ನಮ್ಮ ನ್ಯಾಯಾಧಿಪತಿ, ಸರ್ವೇಶ್ವರ ಸ್ವಾಮಿಯೇ ನಮಗೆ ಶಾಸನದಾಯಕ, ಸರ್ವೇಶ್ವರ ಸ್ವಾಮಿಯೇ ನಮ್ಮ ರಾಜ. ಅವರೇ ನಮ್ಮ ಉದ್ಧಾರಕ.


ಆದಿಯಿಂದ ದೇವಾ, ನೀನೇ ನನಗೆ ಅರಸನು I ಸಾಧಿಸುತ್ತಿರುವೆ ಜಗದೊಳುದ್ಧಾರವನು II


ಇವರು ತಂದೆಯ ಮಾರ್ಗದಲ್ಲಿ ನಡೆಯದೆ ದ್ರವ್ಯಾಶೆಯಿಂದ ಲಂಚ ತೆಗೆದುಕೊಂಡು ನ್ಯಾಯವಿರುದ್ಧವಾದ ತೀರ್ಪು ಮಾಡುತ್ತಿದ್ದರು.


ಆದರೆ ನೀವು ಈಗ ನನ್ನ ತಂದೆಯ ಮನೆಗೆ ವಿರೋಧವಾಗಿ ನಿಂತು ಅವನ ಎಪ್ಪತ್ತು ಮಂದಿ ಮಕ್ಕಳನ್ನು ಒಂದೇ ಬಂಡೆಯ ಮೇಲೆ ವಧಿಸಿದ ಅವನ ದಾಸಿಯ ಮಗನಾದ ಅಬೀಮೆಲೆಕನನ್ನು ನಿಮ್ಮ ಬಂಧುವೆಂದು ಹೇಳಿ ಶೆಕೆಮಿನ ಅರಸನನ್ನಾಗಿ ಮಾಡಿಕೊಂಡಿದ್ದೀರಿ.


ಈ ಯಕೋಬ್ಯರಲ್ಲಿಲ್ಲ ಆಪತ್ತಿನ ಸೂಚನೆ ಈ ಇಸ್ರಯೇಲರಲ್ಲಿಲ್ಲ ವಿಪತ್ತಿನ ಸಾಧ್ಯತೆ ಸರ್ವೇಶ್ವರನೇ ಇಹನು ಅವರ ಸಂಗಡ ದೇವರಾಗಿ ಜಯಘೋಷ ಕೇಳಿಸುತ್ತಿದೆ ಅವರ ಅರಸನಿಗಾಗಿ!


ನಿನಗೂ ನಿನ್ನ ಸಂತತಿಗೂ ನಾನು ದೇವರಾಗಿರುತ್ತೇನೆ. ಈ ನನ್ನ ಒಡಂಬಡಿಕೆಯನ್ನು ನಿನಗೋಸ್ಕರವೂ ನಿನ್ನ ಸಂತತಿಗೋಸ್ಕರವೂ ತಲತಲಾಂತರದವರೆಗೂ ಚಿರಒಡಂಬಡಿಕೆಯಾಗಿ ಸ್ಥಿರಪಡಿಸುತ್ತೇನೆ.


ಇದಲ್ಲದೆ, ಅಮ್ಮೋನ್, ಮೋವಾಬ್, ಎದೋಮ್ ಮೊದಲಾದ ನಾಡುಗಳಲ್ಲಿ ಚದರಿಹೋಗಿದ್ದ ಯೆಹೂದ್ಯರೆಲ್ಲರು, ಬಾಬಿಲೋನಿನ ಅರಸನು ಯೆಹೂದ್ಯರಲ್ಲಿ ಕೆಲವರನ್ನು ಉಳಿಸಿ, ಅವರಿಗೆ ಅಹೀಕಾಮನ ಮಗನೂ ಶಾಫಾನನ ಮೊಮ್ಮಗನೂ ಆದ ಗೆದಲ್ಯನನ್ನು ರಾಜ್ಯಪಾಲನನ್ನಾಗಿ ನೇಮಿಸಿದ್ದಾನೆಂಬ ಸುದ್ದಿಯನ್ನು ಕೇಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು