Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 12:13 - ಕನ್ನಡ ಸತ್ಯವೇದವು C.L. Bible (BSI)

13 “ಇಗೋ, ನೀವು ಅಪೇಕ್ಷಿಸಿ ಆರಿಸಿಕೊಂಡ ಅರಸ ಇವನೇ; ಸರ್ವೇಶ್ವರ ಇವನನ್ನು ನಿಮ್ಮ ಮೇಲೆ ಅರಸನನ್ನಾಗಿ ನೇಮಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಇಗೋ, ನೀವು ಅಪೇಕ್ಷಿಸಿ ಆರಿಸಿಕೊಂಡ ಅರಸನು ಇವನೇ; ಯೆಹೋವನು ಇವನನ್ನು ನಿಮ್ಮ ಮೇಲೆ ಅರಸನನ್ನಾಗಿ ನೇಮಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಇಗೋ, ನೀವು ಅಪೇಕ್ಷಿಸಿ ಆರಿಸಿಕೊಂಡ ಅರಸನು ಇವನೇ; ಯೆಹೋವನು ಇವನನ್ನು ನಿಮ್ಮ ಮೇಲೆ ಅರಸನನ್ನಾಗಿ ನೇವಿುಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಇಗೋ, ನೀವು ಆಸೆಪಟ್ಟು ಆರಿಸಿದ ರಾಜನು ಇಲ್ಲಿರುವನು. ಯೆಹೋವನು ಈ ರಾಜನನ್ನು ನಿಮಗೆ ನೇಮಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಈಗ ನೀವು ಆರಿಸಿಕೊಂಡು ಅಪೇಕ್ಷಿಸಿದ ಅರಸನು ಇಲ್ಲಿ ಇದ್ದಾನೆ. ಯೆಹೋವ ದೇವರು ನಿಮ್ಮ ಮೇಲೆ ಅವನನ್ನು ಅರಸನನ್ನಾಗಿ ನೇಮಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 12:13
9 ತಿಳಿವುಗಳ ಹೋಲಿಕೆ  

ಇಷ್ಟವಿಲ್ಲದೆ ಸಿಟ್ಟಿನಿಂದ ನಿನಗೆ ರಾಜನನ್ನು ಕೊಟ್ಟೆ. ಈಗ ಕಡುಕೋಪದಿಂದ ಆ ರಾಜರನ್ನು ತೆಗೆದುಬಿಡುತ್ತೇನೆ.


ಆಗ ಸಮುವೇಲನು ಜನರೆಲ್ಲರಿಗೆ, “ನೋಡಿ, ಸರ್ವೇಶ್ವರನಿಂದ ಆಯ್ಕೆಯಾದವನು ಇವನೇ; ಸರ್ವಜನರಲ್ಲಿ ಇವನಿಗೆ ಸಮಾನರು ಇಲ್ಲವೇ ಇಲ್ಲ,” ಎಂದನು. ಜನರೆಲ್ಲರೂ, “ಅರಸನಿಗೆ ಜಯವಾಗಲಿ!” ಎಂದು ಘೋಷಿಸಿದರು.


“ತಾವಂತೂ ಮುದುಕರಾದಿರಿ; ನಿಮ್ಮ ಮಕ್ಕಳು ನಿಮ್ಮ ಮಾರ್ಗದಲ್ಲಿ ನಡೆಯುವುದಿಲ್ಲ. ಆದುದರಿಂದ ಬೇರೆ ಎಲ್ಲ ಜನಾಂಗಗಳಿಗಿರುವಂತೆ ನಮಗೂ ಒಬ್ಬ ಅರಸನನ್ನು ನೇಮಿಸಿ; ಅವನೇ ನಮ್ಮ ನ್ಯಾಯಸ್ಥಾಪಕನಾಗಿರಲಿ,” ಎಂದರು.


ತಮಗೆ ಅರಸನು ಬೇಕೆಂದು ಕೇಳಿಕೊಂಡಾಗ ದೇವರು ಬೆನ್ಯಾಮೀನ ಗೋತ್ರದ ಕೀಷನ ಮಗ ಸೌಲನನ್ನು ನೇಮಿಸಿದರು. ಇವನು ನಾಲ್ವತ್ತು ವರ್ಷ ಆಳಿದನು.


ಅವರೆಲ್ಲರು ಅಲ್ಲಿಗೆ ಹೋಗಿ ಸರ್ವೇಶ್ವರನ ಸನ್ನಿಧಿಯಲ್ಲಿ ಸೌಲನ ಅರಸುತನವನ್ನು ಘೋಷಿಸಿ ಸ್ಥಿರಪಡಿಸಿದರು. ಸರ್ವೇಶ್ವರನಿಗೆ ಶಾಂತಿಸಮಾಧಾನದ ಬಲಿಗಳನ್ನು ಸಮರ್ಪಿಸಿದರು. ಸೌಲನೊಡನೆ ಸೇರಿ ಬಹಳವಾಗಿ ಆನಂದಿಸಿದರು.


ಮೂರು ದಿವಸಗಳ ಹಿಂದೆ ತಪ್ಪಿಸಿಕೊಂಡ ನಿನ್ನ ಕತ್ತೆಗಳಿಗಾಗಿ ಚಿಂತೆ ಮಾಡಬೇಡ; ಅವು ಈಗಾಗಲೇ ಸಿಕ್ಕಿವೆ. ಮತ್ತು ಇಸ್ರಯೇಲರ ಆಶೋತ್ತರವೆಲ್ಲ ನಿನಗೂ ನಿನ್ನ ಕುಟುಂಬದವರಿಗೂ ಸಲ್ಲುವವಲ್ಲವೇ?” ಎಂದನು.


ನಾನು ಸರ್ವೇಶ್ವರನಿಗೆ ಮೊರೆಯಿಡುತ್ತೇನೆ; ಈಗ ಗೋದಿಯ ಸುಗ್ಗಿಕಾಲವಾಗಿದ್ದರೂ ಗುಡುಗನ್ನೂ ಮಳೆಯನ್ನೂ ಕಳುಹಿಸುವುದರ ಮೂಲಕ ನೀವು ಅರಸನನ್ನು ಕೇಳಿಕೊಂಡದ್ದು ತಮ್ಮ ದೃಷ್ಟಿಯಲ್ಲಿ ಎಷ್ಟೋ ಕೆಟ್ಟದ್ದಾಗಿದೆ ಎಂಬುದನ್ನು ಅವರು ತೋರಿಸಿಕೊಡುವರು,” ಎಂದು ಅವರಿಗೆ ಹೇಳಿದನು.


ಸಮುವೇಲನನ್ನು, “ನಮಗೊಬ್ಬ ಅರಸನು ಬೇಕೆಂದು ನಾವು ಬೇಡಿಕೊಂಡದ್ದರಿಂದ ನಮ್ಮ ಪಾಪಗಳಿಗೆ ಮತ್ತೊಂದು ಪಾಪ ಕೂಡಿತು; ಆದುದರಿಂದ ನಿಮ್ಮ ಸೇವಕರಾದ ನಾವು ಸಾಯದಂತೆ ನಿಮ್ಮ ದೇವರಾದ ಸರ್ವೇಶ್ವರನನ್ನು ಬೇಡಿಕೊಳ್ಳಿ,” ಎಂದು ಸಮುವೇಲನನ್ನು ವಿಜ್ಞಾಪಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು