Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 12:15 - ಕನ್ನಡ ಸತ್ಯವೇದವು C.L. Bible (BSI)

15 ಆದರೆ ನೀವು ಸರ್ವೆಶ್ವರನ ಮಾತನ್ನು ಕೇಳದೆ, ಅವರ ಆಜ್ಞೆಗಳನ್ನು ಕೈಕೊಳ್ಳದೆ ನಡೆದರೆ, ಅವರ ಹಸ್ತ ನಿಮ್ಮ ಹಿರಿಯರಿಗೆ ವಿರೋಧವಾಗಿದ್ದಂತೆ ನಿಮಗೂ ವಿರೋಧವಾಗಿಯೇ ಇರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ನೀವು ಯೆಹೋವನ ಮಾತನ್ನು ಕೇಳದೆಯೂ, ಆತನ ಆಜ್ಞೆಗಳನ್ನು ಕೈಕೊಳ್ಳದೆಯೂ ಹೋದರೆ, ಆತನ ಹಸ್ತವು ನಿಮ್ಮ ಹಿರಿಯರಿಗೆ ವಿರೋಧವಾಗಿದ್ದಂತೆ ನಿಮಗೂ ವಿರೋಧವಾಗಿಯೇ ಇರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ನೀವು ಯೆಹೋವನ ಮಾತನ್ನು ಕೇಳದೆಯೂ ಆತನ ಆಜ್ಞೆಗಳನ್ನು ಕೈಕೊಳ್ಳದೆಯೂ ಹೋದರೆ ಆತನ ಹಸ್ತವು ನಿಮ್ಮ ಹಿರಿಯರಿಗೆ ವಿರೋಧವಾಗಿದ್ದಂತೆ ನಿಮಗೂ ವಿರೋಧವಾಗಿಯೇ ಇರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಆದರೆ ನೀವು ಯೆಹೋವನಿಗೆ ವಿಧೇಯರಾಗಿ ನಡೆಯದಿದ್ದರೆ ಮತ್ತು ಆತನ ಆಜ್ಞೆಗಳನ್ನು ವಿರೋಧಿಸಿದರೆ, ಆತನು ನಿಮ್ಮ ಪೂರ್ವಿಕರಿಗೆ ವಿರೋಧವಾಗಿದ್ದಂತೆ ನಿಮಗೂ ವಿರೋಧವಾಗಿಯೇ ಇರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ನೀವು ಯೆಹೋವ ದೇವರ ಮಾತಿಗೆ ವಿಧೇಯರಾಗದಿದ್ದರೆ, ಯೆಹೋವ ದೇವರ ಆಜ್ಞೆಗೆ ವಿರೋಧವಾಗಿ ತಿರುಗಿಬಿದ್ದರೆ, ಯೆಹೋವ ದೇವರ ಹಸ್ತವು ನಿಮ್ಮ ಪಿತೃಗಳಿಗೆ ವಿರೋಧವಾಗಿದ್ದಂತೆಯೇ ನಿಮಗೂ ವಿರೋಧವಾಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 12:15
12 ತಿಳಿವುಗಳ ಹೋಲಿಕೆ  

ನೀವು ಅವರನ್ನು ಬಿಟ್ಟು ಅನ್ಯದೇವತೆಗಳಿಗೆ ಸೇವೆಸಲ್ಲಿಸಿದರೆ ನಿಮಗೆ ವಿಮುಖರಾಗಿ, ಒಳಿತಿಗೆ ಬದಲಾಗಿ ಕೇಡನ್ನೇ ಬರಮಾಡಿ ನಿಮ್ಮನ್ನು ನಾಶಮಾಡಿಬಿಡುವರು,” ಎಂದನು.


ಇದಕ್ಕೊಪ್ಪದೆ ಪ್ರತಿಭಟಿಸಿದ್ದೇ ಆದರೆ, ಸಾವಿಗೆ ತುತ್ತಾಗುವಿರಿ. ಸ್ವಾಮಿಯಾದ ನಾನೇ ಇದನ್ನು ನುಡಿದಿದ್ದೇನೆ.”


ದುರ್ಜನರಿಗೆ ಧಿಕ್ಕಾರ! ಅವರ ಕೃತ್ಯಗಳಿಗೆ ಕಹಿಫಲ ದೊರಕುತ್ತದೆ.


ಅವರು ತಮ್ಮ ದೇವರಾದ ಸರ್ವೇಶ್ವರನನ್ನು ಮರೆತುಬಿಟ್ಟರು. ಆಗ ಅವರನ್ನು ಹಾಚೋರಿನ ಸೇನಾಪತಿಯಾದ ಸೀಸೆರನಿಗೂ ಫಿಲಿಷ್ಟಿಯರಿಗೂ ಮೋವಾಬ್ ರಾಜನಿಗೂ ಮಾರಿಬಿಡಲಾಯಿತು. ಇವರು ದಂಡೆತ್ತಿ ಬಂದು ಅವರೊಡನೆ ಯುದ್ಧಮಾಡಿದರು.


ಮಂಜೂಷವು ಅಲ್ಲಿ ಹೋದ ಮೇಲೆ ಸರ್ವೇಶ್ವರನ ಹಸ್ತ ಆ ಊರಿನವರಿಗೂ ಬಾಧಕವಾದುದರಿಂದ ಅಲ್ಲಿ ದೊಡ್ಡ ಗದ್ದಲ ಎದ್ದಿತು. ಸರ್ವೇಶ್ವರ ಆ ಊರಿನ ಚಿಕ್ಕವರಲ್ಲೂ ದೊಡ್ಡವರಲ್ಲೂ ಗಡ್ಡೆಗಳನ್ನು ಬರಮಾಡಿದರು.


“ಸರ್ವೇಶ್ವರನು ನ್ಯಾಯಸ್ವರೂಪಿ, ನಾನಾದರೊ ಆತನ ಆಜ್ಞೆ ಮೀರಿದ ದ್ರೋಹಿ. ಜನಾಂಗಗಳೇ, ನೀವೆಲ್ಲರು ಕಿವಿಗೊಡಿ, ನನ್ನ ಸಂಕಟ ನೋಡಿ ! ನನ್ನ ಯುವಕ ಯುವತಿಯರು, ಇಗೋ, ಸೆರೆಹೋಗಿರುವರು ನೋಡಿ.


ಏಕೆಂದರೆ ನೀವು ಹಟಮಾರಿಗಳು, ಆಜ್ಞೆಗೆ ಒಳಗಾಗದವರೆಂಬುದು ನನಗೆ ತಿಳಿದೇ ಇದೆ. ನಾನು ಇನ್ನೂ ಜೀವದಿಂದಿರುವಾಗಲೇ ನೀವು ಸರ್ವೇಶ್ವರನಿಗೆ ವಿರುದ್ಧ ಪ್ರತಿಭಟಿಸಿದ್ದೀರಿ; ನಾನು ಹೋದ ತರುವಾಯ ನೀವು ಪ್ರತಿಭಟಿಸುವುದು ಮತ್ತಷ್ಟು ನಿಶ್ಚಯ.


ಮೊದಲೇ ಆಣೆಯಿಟ್ಟು ಹೇಳಿದಂತೆ ಅವರು ಎಲ್ಲಿಗೆ ಹೋದರೂ ಸರ್ವೇಶ್ವರನ ಕೈ ಅವರಿಗೆ ವಿರೋಧವಾಗಿಯೇ ಇತ್ತು. ಅವರಿಗೆ ಬಹಳ ದುಃಖ ಉಂಟಾಯಿತು.


ಅವನು ಆಸನನ್ನು ಭೇಟಿಯಾಗಲು ಬಂದು, ಅವನಿಗೆ, “ಆಸ ರಾಜನೇ, ಎಲ್ಲಾ ಯೆಹೂದ ಹಾಗೂ ಬೆನ್ಯಾಮೀನ್ ಕುಲಗಳವರೇ, ಕಿವಿಗೊಡಿ; ನೀವು ಸರ್ವೇಶ್ವರನನ್ನು ಹೊಂದಿಕೊಂಡಿರುವ ತನಕ ಅವರೂ ನಿಮ್ಮೊಂದಿಗಿರುವರು; ನೀವು ಅವರನ್ನು ಅರಸಿದರೆ ನಿಮಗೆ ಸಿಕ್ಕುವರು. ಅವರನ್ನು ಬಿಟ್ಟರೆ ಅವರೂ ನಿಮ್ಮನ್ನು ಬಿಟ್ಟುಬಿಡುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು