Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 12:17 - ಕನ್ನಡ ಸತ್ಯವೇದವು C.L. Bible (BSI)

17 ನಾನು ಸರ್ವೇಶ್ವರನಿಗೆ ಮೊರೆಯಿಡುತ್ತೇನೆ; ಈಗ ಗೋದಿಯ ಸುಗ್ಗಿಕಾಲವಾಗಿದ್ದರೂ ಗುಡುಗನ್ನೂ ಮಳೆಯನ್ನೂ ಕಳುಹಿಸುವುದರ ಮೂಲಕ ನೀವು ಅರಸನನ್ನು ಕೇಳಿಕೊಂಡದ್ದು ತಮ್ಮ ದೃಷ್ಟಿಯಲ್ಲಿ ಎಷ್ಟೋ ಕೆಟ್ಟದ್ದಾಗಿದೆ ಎಂಬುದನ್ನು ಅವರು ತೋರಿಸಿಕೊಡುವರು,” ಎಂದು ಅವರಿಗೆ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ನಾನು ಯೆಹೋವನಿಗೆ ಮೊರೆಯಿಡುವೆನು; ಈಗ ಗೋದಿಯ ಸುಗ್ಗಿಯಿದ್ದರೂ ಆತನು ಗುಡುಗನ್ನೂ, ಮಳೆಯನ್ನೂ ಕಳುಹಿಸುವುದರ ಮೂಲಕ ನೀವು ಅರಸನನ್ನು ಕೇಳಿಕೊಂಡದ್ದು ತನ್ನ ದೃಷ್ಟಿಯಲ್ಲಿ ತಪ್ಪು ಎಂಬುದನ್ನು ತೋರಿಸಿಕೊಡುವನು” ಎಂದು ಅವರಿಗೆ ಹೇಳಿ ಯೆಹೋವನಿಗೆ ಮೊರೆಯಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ನಾನು ಯೆಹೋವನಿಗೆ ಮೊರೆಯಿಡುವೆನು; ಈಗ ಗೋದಿಯ ಸುಗ್ಗಿಯಿದ್ದರೂ ಆತನು ಗುಡುಗನ್ನೂ ಮಳೆಯನ್ನೂ ಕಳುಹಿಸುವದರ ಮೂಲಕ ನೀವು ಅರಸನನ್ನು ಕೇಳಿಕೊಂಡದ್ದು ತನ್ನ ದೃಷ್ಟಿಯಲ್ಲಿ ಎಷ್ಟೋ ಕೆಟ್ಟದ್ದಾಗಿದೆ ಎಂಬದನ್ನು ತೋರಿಸಿಕೊಡುವನು ಎಂದು ಅವರಿಗೆ ಹೇಳಿ ಯೆಹೋವನಿಗೆ ಮೊರೆಯಿಡಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಈಗ ಗೋಧಿಯ ಸುಗ್ಗಿಕಾಲ. ನಾನು ಯೆಹೋವನಲ್ಲಿ ಪ್ರಾರ್ಥಿಸುತ್ತೇನೆ. ಆತನು ಗುಡುಗನ್ನು ಮತ್ತು ಮಳೆಯನ್ನು ಕಳುಹಿಸಲೆಂದು ನಾನು ಪ್ರಾರ್ಥಿಸುತ್ತೇನೆ. ರಾಜನು ಬೇಕೆಂದು ನೀವು ಕೇಳಿದ್ದು ಯೆಹೋವನಿಗೆ ವಿರುದ್ಧವಾಗಿ ನೀವು ಮಾಡಿದ ಎಂತಹ ಕೆಟ್ಟಕಾರ್ಯವಾಗಿದೆ ಎಂಬದನ್ನು ನಿಮಗೇ ತಿಳಿಯುತ್ತದೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಈ ದಿನ ಗೋಧಿಯ ಸುಗ್ಗಿ ಅಲ್ಲವೋ? ನೀವು ನಿಮಗೆ ಒಬ್ಬ ಅರಸನನ್ನು ಕೇಳಿದ್ದರಿಂದ, ಯೆಹೋವ ದೇವರ ದೃಷ್ಟಿಗೆ ನೀವು ಮಾಡಿದ ನಿಮ್ಮ ಕೆಟ್ಟತನವು ಹೆಚ್ಚಾಗಿದೆ ಎಂದು ತಿಳಿದುಕೊಂಡು ನೋಡುವ ಹಾಗೆ, ನಾನು ಯೆಹೋವ ದೇವರಿಗೆ ಮೊರೆಯಿಡುವೆನು. ಆಗ ಅವರು ಗುಡುಗನ್ನೂ, ಮಳೆಯನ್ನೂ ಕಳುಹಿಸುವರು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 12:17
13 ತಿಳಿವುಗಳ ಹೋಲಿಕೆ  

ಸರ್ವೇಶ್ವರ ಅವನಿಗೆ, “ಜನರು ಹೇಳಿದಂತೆಯೇ ಮಾಡು; ಅವರು ನಿನ್ನನ್ನಲ್ಲ, ನನ್ನನ್ನು ತಿರಸ್ಕರಿಸಿದ್ದಾರೆ. ನನ್ನ ಆಳ್ವಿಕೆ ಬೇಡವೆನ್ನುತ್ತಾರೆ.


ಬೇಸಿಗೆಯಲ್ಲಿ ಮಂಜು ಬೀಳುತ್ತದೆಯೇ? ಸುಗ್ಗಿಯಲ್ಲಿ ಮಳೆ ಬರುತ್ತದೆಯೇ? ಹಾಗೆಯೆ ಬುದ್ಧಿಹೀನನಿಗೆ ತೋರುವ ಮಾನಮರ್ಯಾದೆ.


ಸರ್ವೇಶ್ವರ ಸ್ವಾಮಿ ನನಗೆ ಹೀಗೆಂದರು : “ಮೋಶೆ ಮತ್ತು ಸಮುವೇಲನು ನನ್ನ ಮುಂದೆ ನಿಂತು ವಿಜ್ಞಾಪಿಸಿದರೂ ನಾನು ಈ ಜನರ ಬಗ್ಗೆ ನನ್ನ ಮನಸ್ಸನ್ನು ಬದಲಾಯಿಸೆನು. ಇವರನ್ನು ನನ್ನ ಸಮ್ಮುಖದಿಂದ ತಳ್ಳಿಬಿಡು; ತೊಲಗಿಹೋಗಲಿ!


ಪ್ರಭುವಿನ ಯಾಜಕರು, ಮೋಶೆ ಮತ್ತು ಆರೋನನು I ಸಮುವೇಲನು ಸಹ ಆತನ ಶರಣರಲಿ ಒಬ್ಬನು I ಪ್ರಾರ್ಥಿಸಲು ಇವರು, ಪ್ರಭುವು ಸದುತ್ತರಿಸಿದನು II


ಸರ್ವೇಶ್ವರ ಅಮೋರಿಯರನ್ನು ಇಸ್ರಯೇಲರಿಗೆ ವಶಪಡಿಸಿದ ದಿನದಂದು ಯೆಹೋಶುವನು ಸರ್ವೇಶ್ವರನಲ್ಲಿ ಒಂದು ವಿಜ್ಞಾಪನೆ ಮಾಡಿ ಇಸ್ರಯೇಲರ ಕಣ್ಮುಂದೆಯೇ, “ಸೂರ್ಯನೇ, ನೀ ನಿಲ್ಲು ಗಿಬ್ಯೋನಿನಲ್ಲೇ; ಚಂದ್ರನೇ, ನೀ ನಿಲ್ಲು ಅಯ್ಯಾಲೋನ್ ಕಣಿವೆಯಲ್ಲೇ” ಎಂದು ಆಜ್ಞಾಪಿಸಿದನು.


ಸಮುವೇಲನು ಪುನಃ ಅವರಿಗೆ, “ಇಸ್ರಯೇಲರೆಲ್ಲರೂ ಮಿಚ್ಪೆಯಲ್ಲಿ ಕೂಡಿಬರಲಿ; ನಾನು ನಿಮಗೋಸ್ಕರ ಸರ್ವೇಶ್ವರನನ್ನು ಪ್ರಾರ್ಥಿಸುವೆನು,” ಎಂದನು.


‘ನ್ಯಾಯಸ್ಥಾಪನೆಗಾಗಿ ನಮಗೊಬ್ಬ ಅರಸನನ್ನು ನೇಮಿಸಿಕೊಡಿ’ ಎಂಬ ಮಾತಿಗೆ ಸಮುವೇಲನು ದುಃಖಪಟ್ಟನು. ಸರ್ವೇಶ್ವರನನ್ನು ಪ್ರಾರ್ಥಿಸಿದನು.


“ಇಗೋ, ನೀವು ಅಪೇಕ್ಷಿಸಿ ಆರಿಸಿಕೊಂಡ ಅರಸ ಇವನೇ; ಸರ್ವೇಶ್ವರ ಇವನನ್ನು ನಿಮ್ಮ ಮೇಲೆ ಅರಸನನ್ನಾಗಿ ನೇಮಿಸಿದ್ದಾರೆ.


ಸಮುವೇಲನನ್ನು, “ನಮಗೊಬ್ಬ ಅರಸನು ಬೇಕೆಂದು ನಾವು ಬೇಡಿಕೊಂಡದ್ದರಿಂದ ನಮ್ಮ ಪಾಪಗಳಿಗೆ ಮತ್ತೊಂದು ಪಾಪ ಕೂಡಿತು; ಆದುದರಿಂದ ನಿಮ್ಮ ಸೇವಕರಾದ ನಾವು ಸಾಯದಂತೆ ನಿಮ್ಮ ದೇವರಾದ ಸರ್ವೇಶ್ವರನನ್ನು ಬೇಡಿಕೊಳ್ಳಿ,” ಎಂದು ಸಮುವೇಲನನ್ನು ವಿಜ್ಞಾಪಿಸಿದರು.


ಮರುದಿನ ಮೋಶೆ ಜನರಿಗೆ, “ನೀವು ಮಹಾಪಾಪವನ್ನು ಮಾಡಿದಿರಿ. ಆದರೂ ನಾನು ಬೆಟ್ಟಹತ್ತಿ ಸರ್ವೇಶ್ವರನ ಸನ್ನಿಧಿಗೆ ಹೋಗುವೆನು. ಬಹುಶಃ ನೀವು ಮಾಡಿದ ಪಾಪಕೃತ್ಯಕ್ಕೆ ಕ್ಷಮಾಪಣೆ ನನ್ನ ಮುಖಾಂತರ ದೊರಕೀತು,” ಎಂದು ಹೇಳಿದನು.


ಚದರಿಹೋಗುವರು ಸರ್ವೇಶ್ವರನ ವಿರೋಧಿಗಳು ಆಗಸದಿಂದಾತ ಅವರ ವಿರುದ್ಧ ಗರ್ಜಿಸಲು! ನ್ಯಾಯ ತೀರಿಸುವನಾತ ಜಗದ ಕಟ್ಟಕಡೆಯವರೆಗೆ ಶಕ್ತಿಸಾಮರ್ಥ್ಯವನೀವನು ತಾ ನೇಮಿಸಿದರಸನಿಗೆ ಏರಿಸುವನು ತನ್ನಭಿಷಿಕ್ತನ ಒಲುಮೆಯನು ಉನ್ನತಿಗೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು