Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 12:19 - ಕನ್ನಡ ಸತ್ಯವೇದವು C.L. Bible (BSI)

19 ಸಮುವೇಲನನ್ನು, “ನಮಗೊಬ್ಬ ಅರಸನು ಬೇಕೆಂದು ನಾವು ಬೇಡಿಕೊಂಡದ್ದರಿಂದ ನಮ್ಮ ಪಾಪಗಳಿಗೆ ಮತ್ತೊಂದು ಪಾಪ ಕೂಡಿತು; ಆದುದರಿಂದ ನಿಮ್ಮ ಸೇವಕರಾದ ನಾವು ಸಾಯದಂತೆ ನಿಮ್ಮ ದೇವರಾದ ಸರ್ವೇಶ್ವರನನ್ನು ಬೇಡಿಕೊಳ್ಳಿ,” ಎಂದು ಸಮುವೇಲನನ್ನು ವಿಜ್ಞಾಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಸಮುವೇಲನನ್ನು, “ನಮಗೊಬ್ಬ ಅರಸನು ಬೇಕೆಂದು ನಾವು ಬೇಡಿಕೊಂಡದ್ದರಿಂದ ನಮ್ಮ ಪಾಪಗಳಿಗೆ ಮತ್ತೊಂದು ಪಾಪ ಸೇರಿಕೊಂಡಿತು; ಆದ್ದರಿಂದ ನಿನ್ನ ಸೇವಕರಾದ ನಾವು ಸಾಯದಂತೆ ನಿನ್ನ ದೇವರಾದ ಯೆಹೋವನನ್ನು ಬೇಡಿಕೋ” ಎಂದು ವಿಜ್ಞಾಪಿಸಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ನಮಗೊಬ್ಬ ಅರಸನು ಬೇಕೆಂದು ನಾವು ಬೇಡಿಕೊಂಡದರಿಂದ ನಮ್ಮ ಪಾಪಗಳಿಗೆ ಮತ್ತೊಂದು ಪಾಪವು ಕೂಡಿತು; ಆದದರಿಂದ ನಿನ್ನ ಸೇವಕರಾದ ನಾವು ಸಾಯದಂತೆ ನಿನ್ನ ದೇವರಾದ ಯೆಹೋವನನ್ನು ಬೇಡಿಕೋ ಎಂದು ವಿಜ್ಞಾಪಿಸಲು ಅವನು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಜನರೆಲ್ಲಾ ಸಮುವೇಲನಿಗೆ, “ನಿನ್ನ ಸೇವಕರಾದ ನಮಗಾಗಿ, ನಿನ್ನ ದೇವರಾದ ಯೆಹೋವನಲ್ಲಿ ಪ್ರಾರ್ಥಿಸು. ನಮ್ಮನ್ನು ಸಾಯಲು ಬಿಡಬೇಡ. ನಾವು ಅನೇಕ ಸಲ ಪಾಪಗಳನ್ನು ಮಾಡಿದ್ದೇವೆ. ಈಗ ನಾವು ರಾಜನನ್ನು ಕೇಳಿಕೊಂಡಿದ್ದು ನಮ್ಮ ಪಾಪಗಳೊಂದಿಗೆ ಮತ್ತೊಂದು ಪಾಪವನ್ನು ಮಾಡಿದಂತಾಯಿತು” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಜನರೆಲ್ಲರು ಸಮುಯೇಲನಿಗೆ, “ನಾವು ಸಾಯದ ಹಾಗೆ ನಿನ್ನ ದೇವರಾದ ಯೆಹೋವ ದೇವರಿಗೆ ನಿನ್ನ ಸೇವಕರಿಗೋಸ್ಕರ ಪ್ರಾರ್ಥನೆ ಮಾಡು. ಏಕೆಂದರೆ ನಮಗೆ ಒಬ್ಬ ಅರಸನು ಬೇಕೆಂದು ಕೇಳಿ, ನಮ್ಮ ಸಮಸ್ತ ಪಾಪಗಳಿಗೆ ಕೆಟ್ಟದ್ದನ್ನು ಕೂಡಿಸಿದ್ದೇವೆ,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 12:19
24 ತಿಳಿವುಗಳ ಹೋಲಿಕೆ  

ಈ ಭಯಂಕರವಾದ ಗುಡುಗು ಮತ್ತು ಆನೆಕಲ್ಲು ಮಳೆ ಇನ್ನು ಸಾಕೇ ಸಾಕು. ಇವುಗಳನ್ನು ನಿಲ್ಲಿಸುವಂತೆ ಸರ್ವೇಶ್ವರನನ್ನು ಪ್ರಾರ್ಥಿಸಿರಿ. ಈ ದೇಶವನ್ನು ಬಿಟ್ಟು ಹೋಗುವುದಕ್ಕೆ ನಿಮಗೆ ಅಪ್ಪಣೆಕೊಡುತ್ತೇನೆ. ಇನ್ನು ನಿಮ್ಮನ್ನು ತಡೆಯುವುದಿಲ್ಲ,” ಎಂದು ಹೇಳಿದನು.


ಮಾರಕವಲ್ಲದ ಪಾಪವೊಂದನ್ನು ಸಹೋದರನು ಮಾಡುವುದನ್ನು ಯಾರಾದರೂ ಕಂಡರೆ, ಆ ಸಹೋದರನಿಗಾಗಿ ದೇವರಲ್ಲಿ ಬೇಡಿಕೊಳ್ಳಿರಿ. ದೇವರು ಆ ಸಹೋದರನಿಗೆ ಸಜ್ಜೀವವನ್ನು ಅನುಗ್ರಹಿಸುವರು. ಮಾರಕವಲ್ಲದ ಪಾಪವನ್ನು ಕುರಿತೇ ಈ ಮಾತನ್ನು ಹೇಳುತ್ತಿದ್ದೇನೆ. ಮಾರಕವಾದ ಪಾಪವೂ ಉಂಟು. ಅದರ ವಿಷಯವಾಗಿ ಬೇಡಿಕೊಳ್ಳಬೇಕೆಂದು ನಾನು ಹೇಳುತ್ತಿಲ್ಲ.


ನಾನಾದರೋ ನಿಮ್ಮ ಪರವಾಗಿ ಸರ್ವೇಶ್ವರನನ್ನು ಪ್ರಾರ್ಥಿಸುತ್ತೇನೆ; ಅವರ ನೀತಿಯುತ ಉತ್ತಮ ಮಾರ್ಗವನ್ನು ನಿಮಗೆ ತೋರಿಸಿಕೊಡುವುದನ್ನು ಬಿಡುವುದಿಲ್ಲ; ಬಿಟ್ಟರೆ ದೇವರ ದೃಷ್ಟಿಯಲ್ಲಿ ನಾನೂ ಪಾಪಿಯಾಗುತ್ತೇನೆ.


ಈ ಒಂದು ಸಾರಿ ನನ್ನನ್ನು ಕ್ಷಮಿಸಬೇಕು. ನಿಮ್ಮ ದೇವರಾದ ಸರ್ವೇಶ್ವರ ಈ ಮಾರಕ ವಿಪತ್ತನ್ನು ನನ್ನಿಂದ ತೊಲಗಿಸುವಂತೆ ಆತನನ್ನು ಪ್ರಾರ್ಥಿಸಬೇಕು,” ಎಂದು ವಿನಂತಿಸಿದನು.


ಆಗ ವಿಶ್ವಾಸಭರಿತ ಪ್ರಾರ್ಥನೆ ರೋಗಿಯನ್ನು ಗುಣಪಡಿಸುತ್ತದೆ. ಹಾಸಿಗೆ ಹಿಡಿದ ರೋಗಿಯನ್ನು ಪ್ರಭು ಎಬ್ಬಿಸುತ್ತಾರೆ; ಅವನು ಪಾಪಮಾಡಿದವನಾಗಿದ್ದರೆ ಕ್ಷಮೆಯನ್ನು ಪಡೆಯುತ್ತಾನೆ.


ಆಗ ಸಿಮೋನನು, “ನೀವು ಹೇಳಿದ ಯಾವ ಕೇಡೂ ನನಗೆ ತಗಲದಂತೆ ನನಗಾಗಿ ನೀವೇ ಪ್ರಭುವಿನಲ್ಲಿ ಪ್ರಾರ್ಥನೆಮಾಡಿ,” ಎಂದು ಬೇಡಿಕೊಂಡನು.


ಆದುದರಿಂದ ಯಾಜಕರೇ, ದೇವರ ದಯೆ ನಿಮಗೆ ದೊರಕುವಂತೆ ಅವರನ್ನು ಒಲಿಸಿಕೊಳ್ಳಿರಿ. ಇಂಥ ಕಾಣಿಕೆ ನಿಮ್ಮ ಕೈಯಲ್ಲಿದ್ದರೆ ಯಾರಿಗಾದರು ದೇವರು ನಿಮ್ಮ ಕೋರಿಕೆಯನ್ನು ಈಡೇರಿಸುವುದುಂಟೋ? ಇದು ಸೇನಾಧೀಶ್ವರ ಸರ್ವೇಶ್ವರಸ್ವಾಮಿಯ ನುಡಿ:


ಸರ್ವೇಶ್ವರ ಸ್ವಾಮಿ ನನಗೆ ಹೀಗೆಂದರು : “ಮೋಶೆ ಮತ್ತು ಸಮುವೇಲನು ನನ್ನ ಮುಂದೆ ನಿಂತು ವಿಜ್ಞಾಪಿಸಿದರೂ ನಾನು ಈ ಜನರ ಬಗ್ಗೆ ನನ್ನ ಮನಸ್ಸನ್ನು ಬದಲಾಯಿಸೆನು. ಇವರನ್ನು ನನ್ನ ಸಮ್ಮುಖದಿಂದ ತಳ್ಳಿಬಿಡು; ತೊಲಗಿಹೋಗಲಿ!


ನಿನ್ನಾಶ್ರಯ ಕೋರಿದರು, ಸರ್ವೇಶ್ವರಾ, ಜನ ಇಕ್ಕಟ್ಟಿಗೆ ಸಿಕ್ಕಿದಾಗ ಪ್ರಾರ್ಥನೆ ಗೈದರವರು ನಿನ್ನ ಶಿಕ್ಷೆಗೆ ಗುರಿಯಾದಾಗ.


ಆದುದರಿಂದ ನೀವು ಏಳು ಹೋರಿಗಳನ್ನೂ ಏಳು ಟಗರುಗಳನ್ನೂ ತೆಗೆದುಕೊಂಡು ನನ್ನ ದಾಸ ಯೋಬನ ಬಳಿಗೆ ಬನ್ನಿರಿ; ನಿಮ್ಮ ದೋಷಪರಿಹಾರಕ್ಕಾಗಿ ದಹನಬಲಿಯನ್ನು ಅರ್ಪಿಸಿರಿ. ನನ್ನ ದಾಸ ಯೋಬ ನಿಮ್ಮ ಪರವಾಗಿ ಪ್ರಾರ್ಥನೆ ಮಾಡುವನು; ನಾನು ಅವನ ವಿಜ್ಞಾಪನೆಯನ್ನು ಆಲಿಸಿ ನಿಮ್ಮ ನಿಮ್ಮ ಮೂರ್ಖತನಕ್ಕೆ ತಕ್ಕ ದಂಡನೆಯನ್ನು ವಿಧಿಸುವುದಿಲ್ಲ. ನನ್ನ ದಾಸ ಯೋಬನು ನನ್ನ ವಿಷಯದಲ್ಲಿ ಸತ್ಯವನ್ನು ನುಡಿದಂತೆ ನೀವು ನುಡಿಯಲಿಲ್ಲ,” ಎಂದರು.


ಅವರು ಸಮುವೇಲನಿಗೆ, “ನಮ್ಮ ದೇವರಾದ ಸರ್ವೇಶ್ವರ ನಮ್ಮನ್ನು ಫಿಲಿಷ್ಟಿಯರ ಕೈಯಿಂದ ತಪ್ಪಿಸಿ ರಕ್ಷಿಸುವ ಹಾಗೆ ನೀವು ನಮಗೋಸ್ಕರ ಪ್ರಾರ್ಥನೆಮಾಡಿ, ಸುಮ್ಮನಿರಬೇಡಿ,” ಎಂದರು.


ಸಮುವೇಲನು ಪುನಃ ಅವರಿಗೆ, “ಇಸ್ರಯೇಲರೆಲ್ಲರೂ ಮಿಚ್ಪೆಯಲ್ಲಿ ಕೂಡಿಬರಲಿ; ನಾನು ನಿಮಗೋಸ್ಕರ ಸರ್ವೇಶ್ವರನನ್ನು ಪ್ರಾರ್ಥಿಸುವೆನು,” ಎಂದನು.


ಈಗ ಆ ಮನುಷ್ಯನ ಹೆಂಡತಿಯನ್ನು ಮರಳಿ ಅವನಿಗೆ ಒಪ್ಪಿಸಿಬಿಡು. ಅವನೊಬ್ಬ ಪ್ರವಾದಿ. ನಿನ್ನ ಪರವಾಗಿ ನನ್ನನ್ನು ಪ್ರಾರ್ಥಿಸುವನು, ನೀನು ಬದುಕುವೆ. ಆಕೆಯನ್ನು ಒಪ್ಪಿಸಲು ನಿರಾಕರಿಸಿದೆಯಾದರೆ ನೀನೂ ನಿನ್ನವರೆಲ್ಲರೂ ಸತ್ತೇ ಸಾಯುವಿರೆಂದು ತಿಳಿದುಕೊ,” ಎಂದು ಕನಸಿನಲ್ಲಿ ಹೇಳಿದರು.


ಆಗ ಜನರು ಮೋಶೆಯ ಬಳಿಗೆ ಬಂದು, “ನಾವು ನಿಮಗೂ ಸರ್ವೇಶ್ವರನಿಗೂ ವಿರುದ್ಧ ಮಾತಾಡಿ ದೋಷಿಗಳಾದೆವು. ಈ ಸರ್ಪಗಳು ನಮ್ಮನ್ನು ಬಿಟ್ಟು ತೊಲಗುವಂತೆ ಸರ್ವೇಶ್ವರನನ್ನು ಪ್ರಾರ್ಥಿಸಿ,” ಎಂದು ಬೇಡಿಕೊಂಡರು.


“ಇಗೋ, ನೀವು ಅಪೇಕ್ಷಿಸಿ ಆರಿಸಿಕೊಂಡ ಅರಸ ಇವನೇ; ಸರ್ವೇಶ್ವರ ಇವನನ್ನು ನಿಮ್ಮ ಮೇಲೆ ಅರಸನನ್ನಾಗಿ ನೇಮಿಸಿದ್ದಾರೆ.


ನಾನು ಸರ್ವೇಶ್ವರನಿಗೆ ಮೊರೆಯಿಡುತ್ತೇನೆ; ಈಗ ಗೋದಿಯ ಸುಗ್ಗಿಕಾಲವಾಗಿದ್ದರೂ ಗುಡುಗನ್ನೂ ಮಳೆಯನ್ನೂ ಕಳುಹಿಸುವುದರ ಮೂಲಕ ನೀವು ಅರಸನನ್ನು ಕೇಳಿಕೊಂಡದ್ದು ತಮ್ಮ ದೃಷ್ಟಿಯಲ್ಲಿ ಎಷ್ಟೋ ಕೆಟ್ಟದ್ದಾಗಿದೆ ಎಂಬುದನ್ನು ಅವರು ತೋರಿಸಿಕೊಡುವರು,” ಎಂದು ಅವರಿಗೆ ಹೇಳಿದನು.


ಆಗ ಸಮುವೇಲನು, “ಭಯಪಡಬೇಡಿ; ಇಷ್ಟು ಪಾಪಮಾಡಿದ ನೀವು ಇನ್ನು ಮುಂದೆ ಆದರೂ ಅದನ್ನು ಬಿಟ್ಟು, ಸರ್ವೇಶ್ವರನನ್ನು ಹೊಂದಿಕೊಂಡು ಪೂರ್ಣಮನಸ್ಸಿನಿಂದ ಅವರೊಬ್ಬರನ್ನೇ ಪೂಜಿಸಿರಿ.


ಜನರ ಶಿಕ್ಷಣಕ್ಕೆ, ಧರೆಯ ಹಿತಕೆ ತಮ್ಮ ಪ್ರೀತಿಯನ್ನು ತೋರುವುದಕೆ ಇದೆಲ್ಲ ಆಗುವಂತೆ ಮಾಡುತ್ತಾನೆ.


ಅವರು ನಿಜವಾದ ಪ್ರವಾದಿಗಳಾಗಿದ್ದರೆ, ಸರ್ವೇಶ್ವರನ ವಾಕ್ಯ ಅವರಲ್ಲಿ ನೆಲೆಸಿದ್ದರೆ, ದೇವಾಲಯದಲ್ಲೂ ಜುದೇಯದ ಅರಸನ ಮನೆಯಲ್ಲೂ ಜೆರುಸಲೇಮಿನಲ್ಲೂ ಇನ್ನು ಉಳಿದಿರುವ ಉಪಕರಣಗಳು ಬಾಬಿಲೋನಿಗೆ ಹೋಗದಂತೆ ಸರ್ವಶಕ್ತ ಸರ್ವೇಶ್ವರನಿಗೆ ವಿಜ್ಞಾಪನೆಮಾಡಿ ಬೇಡಿಕೊಳ್ಳಲಿ.”


“ದಯಮಾಡಿ ನಮ್ಮ ಬಿನ್ನಹವನ್ನು ಆಲಿಸಬೇಕು.


ಮರುದಿನ ಮೋಶೆ ಜನರಿಗೆ, “ನೀವು ಮಹಾಪಾಪವನ್ನು ಮಾಡಿದಿರಿ. ಆದರೂ ನಾನು ಬೆಟ್ಟಹತ್ತಿ ಸರ್ವೇಶ್ವರನ ಸನ್ನಿಧಿಗೆ ಹೋಗುವೆನು. ಬಹುಶಃ ನೀವು ಮಾಡಿದ ಪಾಪಕೃತ್ಯಕ್ಕೆ ಕ್ಷಮಾಪಣೆ ನನ್ನ ಮುಖಾಂತರ ದೊರಕೀತು,” ಎಂದು ಹೇಳಿದನು.


‘ನ್ಯಾಯಸ್ಥಾಪನೆಗಾಗಿ ನಮಗೊಬ್ಬ ಅರಸನನ್ನು ನೇಮಿಸಿಕೊಡಿ’ ಎಂಬ ಮಾತಿಗೆ ಸಮುವೇಲನು ದುಃಖಪಟ್ಟನು. ಸರ್ವೇಶ್ವರನನ್ನು ಪ್ರಾರ್ಥಿಸಿದನು.


ಹೀಗಿರುವಲ್ಲಿ ಅರಸ ಚಿದ್ಕೀಯನು ಶೆಲೆಮ್ಯನ ಮಗ ಯೆಹೂಕಲನನ್ನು ಮತ್ತು ಯಾಜಕ ಮಾಸೇಯನ ಮಗ ಚೆಫನ್ಯನನ್ನು ಯೆರೆಮೀಯನ ಬಳಿಗೆ ಕಳಿಸಿ, “ನಮಗಾಗಿ ನಮ್ಮ ದೇವರಾದ ಸರ್ವೇಶ್ವರನನ್ನು ಪ್ರಾರ್ಥಿಸು” ಎಂದು ವಿನಂತಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು