Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 12:21 - ಕನ್ನಡ ಸತ್ಯವೇದವು C.L. Bible (BSI)

21 ದೇವರಲ್ಲದವುಗಳನ್ನು ಹಿಂಬಾಲಿಸಬೇಡಿ; ಅವುಗಳಿಂದ ನಿಮಗೆ ಲಾಭವಿಲ್ಲ; ರಕ್ಷಣೆಯೂ ಸಿಕ್ಕುವುದಿಲ್ಲ. ಅವು ವ್ಯರ್ಥವಾದವುಗಳೇ ಸರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ದೇವರಿಗೆ ಇಷ್ಟವಿಲ್ಲದ ವಿಷಯಗಳನ್ನು ಹಿಂಬಾಲಿಸಬೇಡಿರಿ; ಅವುಗಳಿಂದ ನಿಮಗೆ ಲಾಭವೂ, ರಕ್ಷಣೆಯೂ ಸಿಕ್ಕುವುದಿಲ್ಲ. ಅವು ವ್ಯರ್ಥವಾದವುಗಳೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ದೇವರಲ್ಲದವುಗಳನ್ನು ಹಿಂಬಾಲಿಸಬೇಡಿರಿ; ಅವುಗಳಿಂದ ನಿಮಗೆ ಲಾಭವೂ ರಕ್ಷಣೆಯೂ ಸಿಕ್ಕುವದಿಲ್ಲ. ಅವು ವ್ಯರ್ಥವಾದವುಗಳೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ವಿಗ್ರಹಗಳು ಕೇವಲ ಪ್ರತಿಮೆಗಳಷ್ಟೇ. ಅವು ನಿಮಗೆ ಸಹಾಯ ಮಾಡಲಾರವು. ಆದ್ದರಿಂದ ಅವುಗಳನ್ನು ಪೂಜಿಸಬೇಡಿ. ವಿಗ್ರಹಗಳು ನಿಮಗೆ ಸಹಾಯ ಮಾಡಲಾರವು ಮತ್ತು ರಕ್ಷಿಸಲಾರವು. ಅವುಗಳಿಂದ ಪ್ರಯೋಜನವೇನೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ವ್ಯರ್ಥವಾದ ವಸ್ತುಗಳ ಹಿಂದೆ ಹೋಗಬೇಡಿರಿ. ಅವು ನಿಮಗೆ ಒಳ್ಳೆಯದನ್ನು ಮಾಡಲಾರದವುಗಳೂ ನಿಮ್ಮನ್ನು ಬಿಡಿಸಲಾರದವುಗಳೂ ಆಗಿವೆ. ಏಕೆಂದರೆ ಅವು ವ್ಯರ್ಥವಾದವುಗಳಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 12:21
21 ತಿಳಿವುಗಳ ಹೋಲಿಕೆ  

ಕೆತ್ತನೆಯ ವಿಗ್ರಹದಿಂದ ಪ್ರಯೋಜನ ಏನು? ಅದು ಕೇವಲ ಮಾನವನ ಕೃತಿ, ಸುಳ್ಳು ಕಣಿಗಾಗಿ ಇಟ್ಟುಕೊಂಡ ಎರಕದ ಗೊಂಬೆ. ಅದನ್ನು ನಿರ್ಮಿಸಿದಾತನಿಗೆ ಅದು ಯಾವ ಅಭಯವನ್ನು ತಾನೇ ತಂದೀತು? ಅದು ಬಾಯ್ದೆರೆಯಲಾಗದ ಮೂಕ ಬೊಂಬೆಯಷ್ಟೆ.


“ಹೇ ಸರ್ವೇಶ್ವರಾ, ನನ್ನ ಶಕ್ತಿಯೇ, ನನ್ನ ಕೋಟೆಯೇ, ಆಪತ್ತು ಕಾಲದಲ್ಲಿ ನನ್ನ ಆಶ್ರಯವೇ, ಜಗದ ಕಟ್ಟಕಡೆಯಿಂದ ಜನಾಂಗಗಳು ನಿಮ್ಮ ಸಮ್ಮುಖಕ್ಕೆ ಬರುವುವು. ‘ನಮ್ಮ ಪೂರ್ವಜರು ಪಾರಂಪರ್ಯವಾಗಿ ಪಡೆದವುಗಳು ನಿಶ್ಚಯವಾಗಿ ಅಬದ್ಧವಾದವುಗಳು, ಮಾಯರೂಪವಾದವುಗಳು ಹಾಗು ನಿಷ್ಪ್ರಯೋಜನವಾದವುಗಳು.


ಅವು ವ್ಯರ್ಥವಾದುವುಗಳು, ಹಾಸ್ಯಾಸ್ಪದವಾದುವುಗಳು ದಂಡನೆಯ ಕಾಲದಲ್ಲಿ ಅಳಿದುಹೋಗುವಂಥವುಗಳು.


ಅನ್ಯಜನಾಂಗಗಳ ಶೂನ್ಯದೇವತೆಗಳಲ್ಲಿ ಮಳೆಸುರಿಸಬಲ್ಲವರುಂಟೆ? ಆಕಾಶವು ತಾನಾಗಿ ಹದಮಳೆಯನ್ನು ಬರಮಾಡಬಲ್ಲುದೆ? ನಮ್ಮ ದೇವರಾದ ಸರ್ವೇಶ್ವರಾ, ವೃಷ್ಟಿದಾತರು ನೀವೇ ನಾವು ನಿರೀಕ್ಷಿಸುತ್ತಿರುವುದು ನಿಮ್ಮನ್ನೇ ಹೌದು, ಇವುಗಳನ್ನೆಲ್ಲ ನಡೆಸುವವರು ನೀವೇ.


ಆದರೆ ನೀವು ಎಚ್ಚರಿಕೆಯಿಂದಿರಬೇಕು; ಮರುಳುಗೊಂಡು ಸರ್ವೇಶ್ವರ ಹೇಳಿದ ಮಾರ್ಗವನ್ನು ಬಿಟ್ಟು, ಇತರ ದೇವರುಗಳನ್ನು ಅವಲಂಬಿಸಿ, ಪೂಜಿಸಿದರೆ,


ವಿಗ್ರಹಗಳಿಗೆ ನೈವೇದ್ಯಮಾಡಿದ ಪದಾರ್ಥಗಳನ್ನು ತಿನ್ನುವ ಬಗ್ಗೆ ನನ್ನ ಅಭಿಪ್ರಾಯ ಹೀಗಿದೆ: ವಿಗ್ರಹಗಳಿಗೆ ನಿಜವಾದ ಅಸ್ತಿತ್ವವಿಲ್ಲ. ದೇವರು ಒಬ್ಬರೇ ಹೊರತು ಬೇರೆ ದೇವರಿಲ್ಲ. ಇದು ನಮಗೆ ತಿಳಿದ ವಿಷಯ.


ನಿರರ್ಥಕ ವಿಗ್ರಹಗಳನಾರಾಧಿಪ ಜನರು ತೊರೆದಿಹರು ಹಾರ್ದಿಕ ಭಕ್ತಿಯನು


“ನನ್ನ ಜನರು ಇಬ್ಬಗೆಯ ಅಪರಾಧಗಳನ್ನು ಎಸಗಿದ್ದಾರೆ; ಜೀವಜಲದ ಬುಗ್ಗೆಯಾದ ನನ್ನನ್ನೇ ತೊರೆದುಬಿಟ್ಟಿದ್ದಾರೆ! ತೊಟ್ಟಿಗಳನ್ನು, ನೀರುನಿಲ್ಲದ ಬಿರುಕು ತೊಟ್ಟಿಗಳನ್ನು ತಮಗಾಗಿ ಕೊರೆದುಕೊಂಡಿದ್ದಾರೆ!”


ಅದನ್ನು ಮೆರವಣಿಗೆ ಮಾಡುತ್ತಾರೆ ಹೊತ್ತು ಹೆಗಲಮೇಲೆ ಪ್ರತಿಷ್ಠಾಪನೆ ಮಾಡುತ್ತಾರೆ ಇಟ್ಟು ಪೀಠದ ಮೇಲೆ. ಕೂಗಿಕೊಂಡರೂ ಜರುಗದದು ಅಲ್ಲಿಂದ ಉತ್ತರಿಸಿ ಬಿಡಿಸದು ಯಾರನ್ನು ಕಷ್ಟದಿಂದ.


“ಅಳಿದುಳಿದ ಅನ್ಯಜನರೇ, ನೆರೆದು ಬನ್ನಿ, ಒಟ್ಟಿಗೆ ನನ್ನ ಬಳಿಗೆ ಬನ್ನಿ. ತಮ್ಮ ಮರದ ಬೊಂಬೆಯನು ಹೊತ್ತು ತಿರುಗುವವರು ರಕ್ಷಿಸಲಾಗದ ದೇವತೆಗೆ ಮೊರೆಯಿಡುವ ಬುದ್ಧಿಹೀನರು.


ಕೇವಲ ಪಶುಪ್ರಾಯರು, ಮಂದಮತಿಗಳು, ಅವರೆಲ್ಲರು ಬೊಂಬೆ ಪೂಜೆಯಿಂದ ಬರುವ ಜ್ಞಾನ ಮರದಂತೆ ಮೊದ್ದು.


“ನಿಮ್ಮ ಪಿತೃಗಳು ನನ್ನಲ್ಲಿ ಯಾವ ಕೊರತೆಯನ್ನು ಕಂಡು ನನ್ನಿಂದ ದೂರವಾದರು? ಅವರು ವ್ಯರ್ಥಾಚಾರಗಳನ್ನು ಅನುಸರಿಸುತ್ತಾ ತಾವೇ ವ್ಯರ್ಥವಾಗಿಬಿಟ್ಟರು !


ನಿಶ್ಚಯವಾಗಿ ಆ ದೇವತೆಗಳೆಲ್ಲ ಕ್ಷುದ್ರರೇ‍ ಅವರ ಕಾರ್ಯಗಳೆಲ್ಲ ಶೂನ್ಯವೇ ಆ ಎರಕದ ಬೊಂಬೆಗಳೆಲ್ಲಾ ಬರಿ ಗಾಳಿಯೆ !


‘ರೇಗಿಸಿದರೆನ್ನನು ದೇವರಲ್ಲದವುಗಳ ಮೂಲಕ, ಸಿಟ್ಟೇರಿಸಿದರು ಅಚೇತ ವಿಗ್ರಹಗಳ ಮೂಲಕ. ನಾನವರಲಿ ಅಸೂಯೆ ಹುಟ್ಟಿಸುವೆನು ಜನಾಂಗವಲ್ಲದವರ ಮುಖಾಂತರ, ನಾನವರನು ಸಿಟ್ಟಿಗೆಬ್ಬಿಸುವೆನು ಸಭ್ಯರಲ್ಲದಾ ಜನರ ಮುಖಾಂತರ.


“ಮಹಾಜನರೇ, ನೀವು ಮಾಡುತ್ತಿರುವುದೇನು? ನಾವು ನಿಮ್ಮಂತೆ ಕೇವಲ ನರಮಾನವರು. ನಾವು ಬಂದಿರುವುದು ನಿಮಗೆ ಶುಭಸಂದೇಶವನ್ನು ಸಾರುವುದಕ್ಕೆ; ನೀವು ಈ ನಿರರ್ಥಕ ಕಾರ್ಯವನ್ನು ಬಿಟ್ಟುಬಿಡಬೇಕು; ಭೂಮ್ಯಾಕಾಶವನ್ನೂ ಸಮುದ್ರ ಸರೋವರವನ್ನೂ ಮತ್ತು ಅವುಗಳಲ್ಲಿರುವ ಸಮಸ್ತ ಸೃಷ್ಟಿಯನ್ನೂ ಉಂಟುಮಾಡಿದ ಜೀವಂತ ದೇವರ ಭಕ್ತರಾಗಬೇಕು.


ಆದರೆ ನೀವು ಅವರನ್ನು ಬಿಟ್ಟು, ಅವರ ಮಾತನ್ನು ಕೇಳಲೊಲ್ಲದೆ, ಮೋಸಹೋಗಿ,


ಸರ್ವೇಶ್ವರ ತಮ್ಮ ಪೂರ್ವಜರಿಗೆ ಕೊಟ್ಟ ವಿಧಿನಿಬಂಧನೆಗಳನ್ನೂ ತಮಗೆ ಹೇಳಿಸಿದ ಬುದ್ಧಿವಾಕ್ಯಗಳನ್ನೂ ತಿರಸ್ಕರಿಸಿ, ಮಿಥ್ಯಾದೇವತೆಗಳನ್ನು ಪೂಜಿಸಿ ನಿಸ್ಸಾರ್ಥಕರಾದರು. ಸುತ್ತಣ ಜನಾಂಗಗಳನ್ನು ಅನುಸರಿಸಬಾರದೆಂದು ಸರ್ವೇಶ್ವರ ಆಜ್ಞಾಪಿಸಿದ್ದರೂ ಕೇಳದೆ ಆ ಜನಾಂಗಗಳನ್ನೇ ಅನುಸರಿಸಿದರು.


ನಾನಾದರೋ ಹಾಡಿ ಹೊಗಳುವೆ ನಿನ್ನನು ನಿನಗರ್ಪಿಸುವೆ ಸಮರ್ಪಕ ಬಲಿಯನು ಬಿಡದೆ ಸಲ್ಲಿಸುವೆ ಹೊತ್ತ ಹರಕೆಯನು ಹೊಂದುವೆ ಸ್ವಾಮಿಯಿಂದಲೆ ರಕ್ಷಣೆಯನು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು