1 ಸಮುಯೇಲ 12:22 - ಕನ್ನಡ ಸತ್ಯವೇದವು C.L. Bible (BSI)22 ಸರ್ವೇಶ್ವರನ ದಯೆ ನಿಮ್ಮನ್ನು ಸ್ವಕೀಯ ಜನರನ್ನಾಗಿ ಆರಿಸಿಕೊಂಡ ಮೇಲೆ, ಅವರು ತಮ್ಮ ಮಹೋನ್ನತ ನಾಮದ ನಿಮಿತ್ತ, ನಿಮ್ಮನ್ನು ಖಂಡಿತವಾಗಿ ಕೈಬಿಡುವುದಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಯೆಹೋವನು ದಯದಿಂದ ನಿಮ್ಮನ್ನು ಸ್ವಕೀಯಜನವನ್ನಾಗಿ ಆರಿಸಿಕೊಂಡ ಮೇಲೆ ಆತನು ತನ್ನ ಮಹೋನ್ನತ ನಾಮದ ನಿಮಿತ್ತ ನಿಮ್ಮನ್ನು ಕೈಬಿಡುವುದೇ ಇಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಯೆಹೋವನು ದಯದಿಂದ ನಿಮ್ಮನ್ನು ಸ್ವಕೀಯಜನವನ್ನಾಗಿ ಆರಿಸಿಕೊಂಡ ಮೇಲೆ ಆತನು ತನ್ನ ಮಹೋನ್ನತ ನಾಮದ ನಿವಿುತ್ತವಾಗಿ ನಿಮ್ಮನ್ನು ಕೈಬಿಡುವದೇ ಇಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 “ಆದರೆ ಯೆಹೋವನು ತನ್ನ ಜನರನ್ನು ಕೈಬಿಡುವುದಿಲ್ಲ. ಯೆಹೋವನು ನಿಮ್ಮನ್ನು ತನ್ನ ಸ್ವಂತ ಜನರನ್ನಾಗಿ ಮಾಡಿಕೊಳ್ಳಲು ಇಷ್ಟಪಟ್ಟನು. ಆದ್ದರಿಂದ ಆತನು ತನ್ನ ಮಹಾ ಹೆಸರಿನ ನಿಮಿತ್ತವಾಗಿ ನಿಮ್ಮನ್ನು ತ್ಯಜಿಸುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ಏಕೆಂದರೆ ಯೆಹೋವ ದೇವರು ತಮ್ಮ ಮಹತ್ತಾದ ಹೆಸರಿಗೋಸ್ಕರ ತಮ್ಮ ಜನರನ್ನು ಕೈಬಿಡುವುದಿಲ್ಲ. ನಿಮ್ಮನ್ನು ತಮ್ಮ ಜನರಾಗಿ ಮಾಡಿಕೊಳ್ಳಲು ಇಚ್ಛೈಸಿದ್ದಾರಲ್ಲಾ? ಅಧ್ಯಾಯವನ್ನು ನೋಡಿ |
ಈಜಿಪ್ಟಿನವರು ತಮ್ಮ ವಿಷಯದಲ್ಲಿ, ‘ಸರ್ವೇಶ್ವರನು ಕೇಡುಮಾಡಬೇಕೆಂಬ ಉದ್ದೇಶದಿಂದಲೇ ಇಸ್ರಯೇಲರನ್ನು ಇಲ್ಲಿಂದ ಕರೆದುಕೊಂಡು ಹೋದದ್ದು; ಅವರನ್ನು ಬೆಟ್ಟಗುಡ್ಡಗಳಲ್ಲಿ ಸಾಯಿಸಿ ಇಳೆಯಲ್ಲಿ ಉಳಿಯದಂತೆ ನಿರ್ಮೂಲ ಮಾಡಬೇಕೆಂದೇ ಅವರನ್ನು ಕರೆದುಕೊಂಡು ಹೋದದ್ದು ಎಂದು ಆಡಿಕೊಳ್ಳುವುದಕ್ಕೆ ಎಡೆಮಾಡಿಕೊಳ್ಳಬೇಕೆ? ತಾವು ಕೋಪಾಗ್ನಿಯನ್ನು ಬಿಟ್ಟು ತಮ್ಮ ಪ್ರಜೆಗೆ ಕೇಡುಮಾಡಬೇಕೆಂಬ ಮನಸ್ಸನ್ನು ಮಾರ್ಪಡಿಸಿಕೊಳ್ಳಿ.